JANANUDI.COM NETWORK

ಕೋಟ: ಕರ್ನಾಟಕ ರಾಜ್ಯ ಗ್ರಾಮಲೆಕ್ಕಾಧಿಕಾರಿಗಳ ಸಂಘ ದಾವಣಗೆರೆ ಇದರ ರಾಜ್ಯ ಸಂಘದ ಉಪಾಧ್ಯಕ್ಷರಾಗಿ ಕುಂದಾಪುರ ತಾಲೂಕು ಬಸ್ರೂರಿನ ರಾಜ್ಯ ಪ್ರಶಸ್ತಿ ಪುರಸ್ಕøತ ನಿವೃತ್ತ ಮುಖ್ಯ ಶಿಕ್ಷಕ ಎಂ.ವೀರಣ್ಣ ಶೆಟ್ಟಿ ಅವರ ಪುತ್ರ ಭರತ್ ವಿ.ಶೆಟ್ಟಿ ಆಯ್ಕೆಯಾಗಿದ್ದಾರೆ. ಇವರು ಉಡುಪಿ ಜಿಲ್ಲಾ ಗ್ರಾಮ ಲೆಕ್ಕಿಗ ಸಂಘದ ಅಧ್ಯಕ್ಷರಾಗಿದ್ದು, ಪ್ರಸ್ತುತ ಕುಂದಾಪುರ ತಾಲೂಕು ಪ್ರಭಾರ ರಾಜಸ್ವ ನಿರೀಕ್ಷಕರಾಗಿ ಸೇವೆ ಸಲ್ಲಿಸುತ್ತಿದ್ದಾರೆ.