ವೈಜ್ಞಾನಿಕವಾಗಿ ಕೆರೆಗಳಿಗೆ ಹರಿಸುತ್ತಿರುವ ಕೆಸಿ ವ್ಯಾಲಿ ನೀರು ಈ ಭಾಗದ ಜನರಿಗೆ ಶಾಪವಾಗಿ ಪರಿಣಮಿಸುತ್ತಿದೆ : ಜಿ.ಕೆ.ವೆಂಕಟಶಿವಾರೆಡ್ಡಿ

ವರದಿ: ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಅವೈಜ್ಞಾನಿಕವಾಗಿ ಕೆರೆಗಳಿಗೆ ಹರಿಸುತ್ತಿರುವ ಕೆಸಿ ವ್ಯಾಲಿ ನೀರು ಈ ಭಾಗದ ಜನರಿಗೆ ಶಾಪವಾಗಿ ಪರಿಣಮಿಸುತ್ತಿದೆ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅಭಿಪ್ರಾಯಪಟ್ಟರು.
ಪಟ್ಟಣದ ಜೆಡಿಎಸ್ ಕಚೇರಿ ಸಭಾಂಗಣದಲ್ಲಿ ಶನಿವಾರ ಏರ್ಪಡಿಸಿದ್ದ ಪತ್ರಿಕಾ ಗೋಷ್ಠಿಯಲ್ಲಿ ಮಾತನಾಡಿ, ಕೆಸಿ ವ್ಯಾಲಿ ನೀರನ್ನು ಕೆರೆಗಳಿಗೆ ಹರಿಸುವ ಮುನ್ನ ಮೂರನೇ ಹಂತದಲ್ಲಿ ಶುದ್ಧೀಕರಿಸಬೇಕು ಎಂದು ಆಗ್ರಹಿಸಿದರು.
ಡಿಸಿಸಿ ಬ್ಯಾಂಕ್ ನೀಡುತ್ತಿರುವ ಬಡ್ಡಿ ರಹಿತ ಸಾಲ ಕೇಂದ್ರ ಸರ್ಕಾರದ ಕೊಡುಗೆ. ಸಾಲ ನೀಡಿಕೆಗೆ ಯಾರ ವಿರೋಧ ಇಲ್ಲ. ಆದರೆ ಶಾಸಕ ರಮೇಶ್ ಕುಮಾರ್ ಅವರು ಆ ಹಣವನ್ನು ತಮ್ಮ ಮನೆಯಿಂದ ತಂದು ಕೊಟ್ಟಂತೆ ಪ್ರಚಾರ ಪಡೆಯುತ್ತಿದ್ದಾರೆ. ಕ್ಷೇತ್ರದ ಅಭಿವೃದ್ಧ ಶೂನ್ಯವಾಗಿದೆ. ಡಿಸಿಸಿ ಬ್ಯಾಂಕ್ ಅಧ್ಯಕ್ಷ ಬ್ಯಾಲಹಳ್ಳಿ ಗೋವಿಂದಗೌಡ ಅವರ ಮೇಲೆ ಒತ್ತಡ ಹೇರಿ ಸಾಲ ಕೊಡಿಸುತ್ತಿದ್ದಾರೆ ಎಂದು ಆಪಾದಿಸಿದರು.
ಪಟ್ಟಣದಲ್ಲಿ ಈಚೆಗೆ ಏರ್ಪಡಿಸಿದ್ದ ಜನತಾ ಜಲಧಾರೆ ಕಾರ್ಯಕ್ರಮದಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಅವರ ಪುತ್ತ ಐಪಿಎಲ್ ಬೆಟ್ಟಿಂಗ್‍ನಲ್ಲಿ ಹಣ ಕಳೆದುಕೊಂಡಿದ್ದಾರೆ ಎಂದು ಮಾಜಿ ಮುಖ್ಯ ಮಂತ್ರಿ ಎಚ್.ಡಿ.ಕುಮಾರಸ್ವಾಮಿ ಹೇಳಿಲ್ಲ. ಶಾಸಕರು ವಿಧಾನಸಭೆಯಲ್ಲಿ ಬೆಟ್ಟಿಂಗ್ ಬಗ್ಗೆ ಭಾಷಣ ಮಾಡುತ್ತಾರೆ ಎಂದು ಹೇಳಿದಾಗ, ಸಭಿಕರು ಬೆಟ್ಟಿಂಗ್ ಕುರಿತು ಕೂಗಿ ಹೇಳಿದರು ಎಂದು ಸ್ಪಸ್ಟಪಡಿಸಿದರು.
‘ನಾನು ಶಾಸಕನಾಗಿದ್ದ ಕಾಲದಲ್ಲಿ ಮಾಡಲಾಗಿರುವ ಅಭಿವೃದ್ಧಿ ಬಿಟ್ಟರೆ, ತಾಲ್ಲೂಕಿನಲ್ಲಿ ಗಣನೀಯ ಅಭಿವೃದ್ಧಿ ಸಾಧ್ಯವಾಗಿಲ್ಲ. ಕನಿಷ್ಠ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಠ ಪಂಗಡದ ಜನರಿಗೆ ಕೃಷಿ ಕೊಳವೆ ಬಾವಿ ನಿರ್ಮಿಸಿ ಕೊಟ್ಟಿಲ್ಲ. ಸತ್ಯವನ್ನು ಹೇಳಲು ಹೆದರಬೇಕಾಗಿಲ್ಲ. ಕ್ಷೇತ್ರದಲ್ಲಿ ನನಗೂ ಜನ ಬೆಂಬಲ ಇದೆ. ಎಂಬುದನ್ನು ಮರೆಯಬಾರದು ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯರಾದ ತೂಪಲ್ಲಿ ಆರ್.ನಾರಾಯಣಸ್ವಾಮಿ, ಜಿ.ರಾಜಣ್ಣ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥರೆಡ್ಡಿ, ಮುಖಂಡರಾದ ಏಜಾಜ್ ಅಹ್ಮದ್, ಪೂಲ ಶಿವಾರೆಡ್ಡಿ, ರವಿ, ಶ್ರೀನಿವಾಸ್, ವೇಣುಗೋಪಾಲ್, ಮನು ಇದ್ದರು.