ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕುಂದು ಕೊರತೆ ವಿಚಾರಣಾ ಸಭೆಯಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಎಂ.ಎಸ್‌..ಪವನ್‌ ಕುಮಾರ್ ಮಾತನಾಡಿದರು. 

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರದಲ್ಲಿ ಏರ್ಪಡಿಸಿದ್ದ ತಾಲ್ಲೂಕು ಮಟ್ಟದ ಕುಂದು ಕೊರತೆ ವಿಚಾರಣಾ ಸಭೆಯಲ್ಲಿ ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಎಂ.ಎಸ್‌..ಪವನ್‌ ಕುಮಾರ್ ಮಾತನಾಡಿದರು. 

ಶ್ರೀನಿವಾಸಪುರ: ಅಧಿಕಾರಿಗಳು ಸಾರ್ವಜನಿಕರ ಕುಂದು ಕೊರತೆ ನಿವಾರಣೆಗೆ ಆದ್ಯತೆ ನೀಡಬೇಕು. ಸರ್ಕಾರದ ಸೌಲಭ್ಯಗಳು ಫಲಾನುಭವಿಗಳಿಗೆ ಸಿಗುವಂತೆ ಎಚ್ಚರ ವಹಿಸಬೇಕು ಎಂದು ಲೋಕಾಯುಕ್ತ ಇನ್ಸ್‌ಪೆಕ್ಟರ್‌ ಎಂ.ಎಸ್‌.ಪವನ್‌ ಕುಮಾರ್‌ ಹೇಳಿದರು.

  ಪಟ್ಟಣದ ತಾಲ್ಲೂಕು ಪಂಚಾಯಿತಿ ಸಭಾಂಗಣದಲ್ಲಿ ಏರ್ಪಡಿಸಿದ್ದ ಕುಂದು ಕೊರತೆ ವಿಚಾರಣಾ ಸಭೆಯಲ್ಲಿ ಮಾನಾಡಿ, ದಲಿತರ ಮೇಲೆ ದೌರ್ಜನ್ಯ ವಿಷಯಕ್ಕೆ ಸಂಬಂಧಿಸಿದಂತೆ ಕಂದಾಯ, ಪೊಲೀಸ್‌ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಅಧಿಕಾರಿಗಳು  ಸಮಯಕ್ಕೆ ಸರಿಯಾಗಿ ಸಭೆ ನಡೆಸಬೇಕು. ಸಂಬಂಧಪಟ್ಟವರೊಂದಿಗೆ ಚರ್ಚಿಸಬೇಕು ಎಂದು ಹೇಳಿದರು.

  ಸಾರ್ವಜನಿಕರು ತಮ್ಮ ಕೆಲಸಗಳನ್ನು ಮಾಡಿಸಿಕೊಳ್ಳಲು ಅಧಿಕಾರಿಗಳಿಗೆ ನೀಡಬಾರದು. ಲಂಚ ನೀಡುವು ಹಾಗೂ ಪಡೆಯುವುದು ಅಪರಾಧ. ಯಾವುದೇ ಅಧಿಕಾರಿ ಲಂಚಕ್ಕೆ ಬೇಡಿಕೆ ಇಟ್ಟಲ್ಲಿ ಎಸಿಬಿಗೆ ದೂರು ಕೊಡಿ ಎಂದು ಸಲಹೆ ಮಾಡಿದರು.

  ಸಭೆಯಲ್ಲಿ ಭಾಗವಹಿಸಿದ್ದ ದಲಿತ ಮುಖಂಡರು ದಲಿತರ ಮೇಲೆ ದೌರ್ಜನ್ಯ ಪ್ರಕರಣಗಳ ಬಗ್ಗೆ ಚರ್ಚಿಸಲು  ಅಧಿಕಾರಿಗಳು ನಿಯಮಾನುಸಾರ ಸಭೆ ನಡೆಸಬೇಕು ಎಂದು ಆಗ್ರಹಿಸಿದರು.

  ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್‌.ಆನಂದ್‌, ಶಿರಸ್ತೇದಾರ್‌ ನಾರಾಯಣಸ್ವಾಮಿ, ತಾಲ್ಲೂಕು ಸಮಾಜ ಕಲ್ಯಾಣ ಇಲಾಖೆ ಸಹಾಯಕ ನಿರ್ದೇಶಕ ರಾಜಣ್ಣ, , ಲೋಕೋಪಯೋಗಿ ಇಲಾಖೆ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಶ್ರೀನಿವಾಸಮೂರ್ತಿ, ಜಿಲ್ಲಾ ಪಂಚಾಯಿತಿ ತಾಂತ್ರಿಕ ಉಪ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್‌ ಅಪ್ಪಿರೆಡ್ಡಿ, ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಮತ್ತಿತರರು ಇದ್ದರು.