ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರಿಂದ ಸರ್ಕಾರದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ
ಶ್ರೀನಿವಾಸಪುರ: ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ಮುಖಂಡರು ಸರ್ಕಾರದ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ಮಾಡಿರುವುದನ್ನು ವಿರೋಧಿಸಿ ಪ್ರತಿಭಟನೆ ನಡೆಸಿದರು.
ಸಂಘದ ರಾಜ್ಯ ಘಟಕದ ಉಪಾಧ್ಯಕ್ಷ ಎಚ್.ಕೆ.ನಾರಾಯಣಗೌಡ ಪ್ರತಿಭಟನೆ ನಿರತ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿ, ಸರ್ಕಾರ ಭೂ ಸುಧಾರಣಾ ಕಾಯ್ದೆಗೆ ತಿದ್ದುಪಡಿ ತರುವುದರ ಮೂಲಕ ಕೃಷಿಕರಲ್ಲದವರು ಕೃಷಿ ಭೂಮಿ ಖರೀದಿಸಲು ಅವಕಾಶ ಮಾಡಿಕೊಟ್ಟಿರುವುದು ರೈತ ವಿರೋಧಿ ನಿಲುವಾಗಿದೆ. ತಿದ್ದುಪಡಿ ಮಸೂದೆ ರೈತರ ಹಿತಾಸಕ್ತಿಗೆ ಮಾರಕವಾಗಿರುವುದರಿಂದ ತಕ್ಷಣ ಹಿಂದಕ್ಕೆ ಪಡೆಯಬೇಕು ಎಂದು ಆಗ್ರಹಿಸಿದರು.
ಈ ಸಂದರ್ಭದಲ್ಲಿ ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಉಪ ತಹಶೀಲ್ದಾರ್ ಮಲ್ಲೇಶ್ ಅವರಿಗೆ ನೀಡಲಾಯಿತು.
ಮುಖಂಡರಾದ ಬಂಗವಾದಿ ನಾಗರಾಜ್, ಆಂಜಪ್ಪ, ಸಹದೇವಣ್ಣ, ಶೇಕ್ ಷಫಿ ಉಲ್ಲಾ, ಲೋಕೇಶ್ ಇದ್ದರು.