ವರದಿ ಶಬ್ಬೀರ್ ಅಹಮದ್ ಶ್ರೀನಿವಾಸಪುರ
ಶ್ರೀನಿವಾಸಪುರದಲ್ಲಿ ಪೌರ ಕಾರ್ಮಿಕರಿಗೆ ಏರ್ಪಡಿಸಿದ್ದ ಉಚಿತ ಆರೊಗ್ಯ ತಪಾಣಾ ಶಿಬಿರ ಉದ್ಘಾಟಿಸಿ ಪುರಸಭೆ ಮುಖ್ಯಾಧಿಕಾರಿ ವಿ. ಮೋಹನ್ ಕುಮಾರ್ ಮಾತನಾಡಿದರು.
ಶ್ರೀನಿವಾಸಪುರ: ಪಟ್ಟಣದ ನಾಗರಿಕರ ಆರೋಗ್ಯ ರಕ್ಷಣೆಗೆ ಶ್ರಮಿಸುವ ಪೌರ ಕಾರ್ಮಿಕರು ತಮ್ಮ ಆರೋಗ್ಯದ ಕಡೆ ಅಗತ್ಯ ಗಮನ ನೀಡಬೇಕು. ಕುಟುಂಬದ ಸದಸ್ಯರ ಆರೋಗ್ಯದ ಬಗ್ಗೆಯೂ ಹೆಚ್ಚಿನ ನಿಗಾ ವಹಿಸಬೇಕು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು.
ಪಟ್ಟಣದ ಪುರಸಭೆ ಕಾರ್ಯಾಲಯದಲ್ಲಿ ಸ್ಥಳೀಯ ಸರ್ಕಾರಿ ಆಸ್ಪತ್ರೆ ಹಾಗೂ ಬೆಂಗಳೂರಿನ ವೈದೇಹಿ ಆಸ್ಪತ್ರೆ ಸಂಯುಕ್ತ ಆಶ್ರಯದಲ್ಲಿ ಪೌರ ಕಾರ್ಮಿಕರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಏರ್ಪಡಿಸಿದ್ದ ಉಚಿತ ಆರೋಗ್ಯ ತಪಾಸಣಾ ಶಿಬಿರ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರಿಗೆ ಪ್ರತಿ ಮೂರು ತಿಂಗಳಿಗೊಮ್ಮೆ ಆರೋಗ್ಯ ಶಿಬರ ಏರ್ಪಡಿಸಿ ಆರೋಗ್ಯ ತಪಾಸಣೆ ನಡೆಸಲಾಗುವುದು. ಪ್ರತಿಯೊಬ್ಬರೂ ಅದರ ಸದುಪಯೋಗ ಪಡಿಸಿಕೊಳ್ಳಬೇಕು ಎಂದು ಹೇಳಿದರು.
ಬದಲಾದ ಪರಿಸ್ಥಿತಿಯಲ್ಲಿ ಪೌರ ಕಾರ್ಮಿಕರ ಸೇವೆ ಹೆಚ್ಚಿನ ಮಹತ್ವ ಪಡೆದುಕೊಂಡಿದೆ. ಹಾಗೆಯೇ ಅವರ ಆರೋಗ್ಯ ಕೆಡದಂತೆ ನೊಡಿಕೊಳ್ಳಬೇಕಾದ ಅನಿವಾರ್ಯ ಪರಿಸ್ಥಿತಿ ನಿರ್ಮಾಣವಾಗಿದೆ. ಆದ್ದರಿಂದಲೇ ಪೌರ ಕಾರ್ಮಿಕರಿಗೆ ಪುರಸಭೆ ವತಿಯಿಂದ ಸುರಕ್ಷಾ ಕವಚ ಒದಗಿಸಲಾಗಿದೆ. ಕೈಗವಸು, ಶಿರಸ್ತ್ರಾಣದಂತ ಸಲಕರಣೆಗಳನ್ನು ಪೂರೈಸುವುದರ ಮೂಲಕ ಅವರ ಆರೋಗ್ಯ ರಕ್ಷಣೆಗೆ ಪೂರಕವಾದ ಕ್ರಮ ಕೈಗೊಳ್ಳಲಾಗಿದೆ ಎಂದು ಹೇಳಿದರು.
ಶಿಬಿರದಲ್ಲಿ 300ಕ್ಕೂ ಹೆಚ್ಚು ಮಂದಿಗೆ ಆರೊಗ್ಯ ತಪಾಸಣೆ ನಡೆಸಿ, ಅಗತ್ಯವಾದ ಔಷಧಗಳನ್ನು ಉಚಿತವಾಗಿ ವಿತರಿಸಲಾಯಿತು.
ಪುರಸಭೆ ಆರೋಗ್ಯ ನಿರೀಕ್ಷಕರಾದ ಕೆ.ಜಿ.ರಮೇಶ್, ಪೃಥ್ವಿರಾಜ್, ಪರಿಸರ ಅಭಿಯಂತರ ಶೇಖರ್ ರೆಡ್ಡಿ, ಪಿಎಒ ರಾಜೇಶ್ವರಿ, ಎಂಜಿಯಿಯರ್ ಶ್ರೀನಿವಾಸ್, ನಾಗೇಶ್ ಇದ್ದರು.