ಶ್ರೀನಿವಾಸಪುರದ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಸ್ಲಿಂ ಸರ್ಕಾರಿ ನೌಕರರ ಸಂಘದ ವತಿಯಿಂದ ಶನಿವಾರ ಲೇಖನ ಸಮಗ್ರಿ ವಿತರಿಸಲಾಯಿತು.

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

 

ಶ್ರೀನಿವಾಸಪುರದ ಉರ್ದು ಹಿರಿಯ ಪ್ರಾಥಮಿಕ ಶಾಲೆಯ ವಿದ್ಯಾರ್ಥಿಗಳಿಗೆ ಮುಸ್ಲಿಂ ಸರ್ಕಾರಿ ನೌಕರರ ಸಂಘದ ವತಿಯಿಂದ ಶನಿವಾರ ಲೇಖನ ಸಮಗ್ರಿ ವಿತರಿಸಲಾಯಿತು.

ಶ್ರೀನಿವಾಸಪುರ: ಮುಸ್ಲಿಂ ಸಮುದಾಯದ ಪೋಷಕರು ತಮ್ಮ ಮಕ್ಕಳ ಆರೋಗ್ಯ ಹಾಗೂ ಶೈಕ್ಷಣಿಕ ಅಭಿವೃದ್ಧಿಗೆ ಹೆಚ್ಚಿನ ಗಮನ ನೀಡಬೇಕು. ಮಕ್ಕಳನ್ನು ತಪ್ಪದೆ ಶಾಲೆಗೆ ಕಳುಹಿಸಬೇಕು. ಯಾವುದೇ ಕಾರಣಕ್ಕೂ ಶಾಲೆ ಬಿಡಲಿಸಿ ಕೆಲಸಕ್ಕೆ ಹಚ್ಚಬಾರದು ಎಂದು ನಿಕಟಪೂರ್ವ ಕ್ಷೇತ್ರ ಶಿಕ್ಷಣಾಧಿಕಾರಿ ಶಂಷುನ್ನೀಸಾ ಹೇಳಿದರು.

  ಪಟ್ಟಣದ ಸರ್ಕಾರಿ ಉರ್ದು ಹಿರಿಯ ಪ್ರಾಥಮಿಕ ಶಾಲೆಯಲ್ಲಿ ತಾಲ್ಲೂಕು ಮುಸ್ಲಿಂ ಸರ್ಕಾರಿ ನೌಕರರ ಸಂಘದ ವತಿಯಿಂದ ಶನಿವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಲೇಖನ ಸಾಮಗ್ರಿ ವಿತರಿಸಿ ಮಾತನಾಡಿ, ಮುಸ್ಲಿಂ ಸಮುದಾಯದಲ್ಲಿ ಬಡತನ ಹೆಚ್ಚಾಗಿರುವುದರಿಂದ, ಪೋಷಕರು ತಮ್ಮ ಮಕ್ಕಳನ್ನು ಸಣ್ಣ ವಸ್ಸಿನಿಂದಲೇ ಸಣ್ಣ ಪುಟ್ಟ ವ್ಯಾಪಾರ ಅಥವಾ ಕೆಲಸಗಳಲ್ಲಿ ತೊಡಗಿಸುವುದ ಸಾಮಾನ್ಯ. ಇದರಿಂದಲೇ ಅವರ ವಿದ್ಯಾಭ್ಯಾಸ ಮೊಟಕುಗೊಳ್ಳುತ್ತಿದೆ. ಅದಕ್ಕೆ ಅವಕಾಶ ನೀಡಬಾರದು ಎಂದು ಹೇಳಿದರು.

  ಮಕ್ಕಳಿಗೆ ಆಸ್ತಿ ಮಾಡಲು ಹೋಗುವುದು ಸಾಮಾನ್ಯ. ಆದರೆ ಮಕ್ಕಳಿಗೆ ಗುಣಾತ್ಮಕ ಶಿಕ್ಷಣ ಕೊಡಿಸಿದರೆ ಪೋಷಕರಿಗೆ ದೊಡ್ಡ ಆಸ್ತಿಯಾಗುತ್ತಾರೆ ಎಂಬುದನ್ನು ಮರೆಯಬಾರದು. ಬದಲಾದ ಪರಿಸ್ಥಿತಿಯಲ್ಲಿ ಪ್ರತಿಯೊಬ್ಬರೂ ಶಿಕ್ಷಣದಿಂದ ಬದುಕು ಕಟ್ಟಿಕೊಳ್ಳಲು ಪ್ರಯತ್ನಿಸಬೇಕು. ಸರ್ಕಾರಿ ಶಾಲೆಗೆ ಮಕ್ಕಳನ್ನು ಸೇರಿಸುವುದರ ಮೂಲಕ ಸರ್ಕಾರದ ಸೌಲಭ್ಯ ಪಡೆದುಕೊಳ್ಳಬೇಕು ಎಂದು ಹೇಳಿದರು.

  ಈ ಸಂದರ್ಭದಲ್ಲಿ ನಿಕಟಪೂರ್ವ ಬಿಇಒ ಶಂಷುನ್ನೀಸಾ ಅವರನ್ನು ಸನ್ಮಾನಿಸಲಾಯಿತು.

  ತಾಲ್ಲೂಕು ಅಕ್ಷರ ದಾಸೋಹ ಯೋಜನೆಯ ಸಹಾಯಕ ನಿರ್ದೇಶಕಿ ಸುಲೋಚನ, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್‌, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ಷ ಗೋವಿಂದರೆಡ್ಡಿ, ಜಿಲ್ಲಾ ಸರ್ಕಾರಿ ನೌಕರರ ಸಂಘದ ಸದಸ್ಯ ಬೈರೇಗೌಡ, ಮಕಖಂಡರಾದ ತಿಪ್ಪನ್ನ, ಕೆ.ಸಿ.ಶ್ರೀನಿವಾಸಪ್ಪ, ವಾಜಿದ್‌, ಸಾದಿತ್‌, ಅಕ್ಮಲ್‌, ಮಹಮದಾಲಿ, ಜಿ.ವಿ.ಚಂದ್ರಪ್ಪ, ಸಲೀಂ, ಸಿರಾಜ್‌ ಇದ್ದರು.