ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಗಾಂಧಿ ಜಯಂತಿ ಸಮಾರಂಭದಲ್ಲಿ ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಗಾಂಧೀಜಿ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ ಬುಧವಾರ ಏರ್ಪಡಿಸಿದ್ದ ಗಾಂಧಿ ಜಯಂತಿ ಸಮಾರಂಭದಲ್ಲಿ ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಗಾಂಧೀಜಿ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿದರು.
ಶ್ರೀನಿವಾಸಪುರ: ಸತ್ಯ, ಅಹಿಂಸೆ ಹಾಗೂ ಪ್ರಾಮಾಣಿಕತೆಗೆ ಗಾಂಧೀಜಿ ಇನ್ನೊಂದು ಹೆಸರಾಗಿದ್ದಾರೆ ಎಂದು ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಹೇಳಿದರು.
  ಪಟ್ಟಣದ ತಾಲ್ಲೂಕು ಕಚೇರಿ ಸಭಾಂಗಣದಲ್ಲಿ, ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಬುಧವಾರ ಏರ್ಪಡಿಸಿದ್ದ ಗಾಂಧಿ ಜಯಂತಿ ಸಮಾರಂಭದಲ್ಲಿ ಗಾಂಧೀಜಿ ಅವರ ಭಾವ ಚಿತ್ರಕ್ಕೆ ಮಾಲಾರ್ಪಣೆ ಮಾಡಿ ಮಾತನಾಡಿದರು..
  ಗಾಂಧೀಜಿ ಒಬ್ಬ ವ್ಯಕ್ತಿಯಾಗಿರಲಿಲ್ಲ. ದೊಡ್ಡ ಶಕ್ತಿಯಾಗಿದ್ದರು. ಅವರ ಮಾತಿಗೆ ಜನರು ಮನ್ನಣೆ ನೀಡಿದ್ದರು. ಆದ್ದರಿಂದಲೆ ಆ ಶಾಂತಿ ದೂತ ಜಗತ್ತಿನ ಜನರ ಹೃದಯದಲ್ಲಿ ನೆಲೆಸಿದ್ದಾರೆ. ಅವರ ವಿಚಾರ ಧಾರೆ ಇಂದಿಗೂ ಪ್ರಸ್ತುತವಾಗಿದೆ. ಅದರಲ್ಲಿ ಜಗದ ಒಳಿತು ಅಡಗಿದೆ ಎಂದು ಹೇಳಿದರು.
  ಶಿರಸ್ತೇದಾರ್‌ ನಾರಾಯಣಸ್ವಾಮಿ, ಕಂದಾಯ ನಿರೀಕ್ಷಕರಾದ ಬಿ.ವಿ.ಮುನಿರೆಡ್ಡಿ, ಗುರುಪ್ರಸಾದ್‌, ಶ್ರೀನಿವಾಸಯ್ಯ, ಕಚೇರಿ ಸಿಬ್ಬಂದಿ ಹಾಗೂ ಸಾರ್ವಜನಿಕರು ಇದ್ದರು.
  ಮಾಲಾರ್ಪಣೆ: ಈ ಸಂದರ್ಭದಲ್ಲಿ ಮಿನಿ ವಿಧಾನ ಸೌಧದ ಎದುರು ಅಂಬೇಡ್ಕರ್‌ ಉದ್ಯಾನದಲ್ಲಿನ ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ತಹಶೀಲ್ದಾರ್‌ ಬಿ.ಎಸ್‌.ರಾಜೀವ್‌ ಮಾಲಾರ್ಪಣೆ ಮಾಡಿದರು. ವಿವಿಧ ಸಂಘಟನೆಗಳ ಮುಖಂಡರು, ವಿವಿಧ ಇಲಾಖೆಗಳ ಅಧಿಕಾರಿಗಳು ಹಾಗೂ ಸಾರ್ವಜನಿಕರು ಇದ್ದರು.