ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭವನ್ನು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಉದ್ಘಾಟಿಸಿದರು.
ಶ್ರೀನಿವಾಸಪುರ: ನಾಗರಿಕರ ಆರೋಗ್ಯ ರಕ್ಷಣೆಯಲ್ಲಿ ಪೌರ ಕಾರ್ಮಿಕರ ಸೇವೆ ದೊಡ್ಡದು ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು.
ಪಟ್ಟಣದ ಪುರಸಭಾ ಕಚೇರಿ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ ಪೌರಕಾರ್ಮಿಕರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ಪೌರ ಕಾರ್ಮಿಕರು ತಮ್ಮ ಆರೋಗ್ಯದ ಬಗ್ಗೆಯೂ ಹೆಚ್ಚಿನ ಕಾಳಜಿ ವಹಿಸಬೇಕು. ಸ್ವಚ್ಛತಾ
ಕಾರ್ಯ ಕೈಗೊಳ್ಳುವಾಗ ತಪ್ಪದೆ ಸುರಕ್ಷತಾ ಕವಚ ಧರಿಸಬೇಕು. ಸೋಂಕು ತಗಲದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
ಪೌರ ಕಾರ್ಮಿಕರು ದುಶ್ಚಟಗಳಿಂದ ದೂರವಿರಬೇಕು. ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು. ಪೌರ ಕಾರ್ಮಿಕರ ಮಕ್ಕಳು ಮುಂದೆ ಪೌರ ಕಾರ್ಮಿಕರಾಗದೆ, ಉನ್ನತ ಹುದ್ದೆ ಅಲಂಕರಿಸುವಂತಾಗಬೇಕು. ಶ್ರಮ ಜೀವನ ಬದುಕು ಹಸನಾಗಬೇಕು ಎಂದು ಹೇಳಿದರು.
ಪುರಸಭೆ ಸದಸ್ಯ ಬಿ.ವೆಂಕಟರೆಡ್ಡಿ ಸಮಾರಂಬದ ಅಧ್ಯಕ್ಷತೆ ವಹಿಸಿ ಮಾತನಾಡಿ, ಕೆಲಸದಲ್ಲಿ ಮೇಲು ಕೀಳು ಭಾವನೆ ಕೂಡದು. ಎಲ್ಲ ಕೆಲಸಗಳಿಗೂ ತನ್ನದೇ ಆದ ಗೌರವವಿದೆ. ಪೌರ ಕಾರ್ಮಿಕರು ಕೀಳರಿಮೆ ಬಿಟ್ಟು ಹೆಮ್ಮೆಯಿಂದ ತಮ್ಮ ನಿಗದಿತ ಕೆಲಸ ಕಾರ್ಯ ನಿರ್ವಹಿಸಬೇಕು. ಸಾರ್ವಜನಿಕರ ಆರೋಗ್ಯ ರಕ್ಷಿಸುವ ಪೌರ ಕಾರ್ಮಿಕರು ತಮ್ಮ ಆರೋಗ್ಯ ಹಾಗೂ ಕುಟುಂಬದ ಯೋಗ ಕ್ಷೇಮಕ್ಕೆ ಆದ್ಯತೆ ನೀಡಬೇಕು ಎಂದು ಹೇಳಿದರು.
ಈ ಸಂದರ್ಭದಲ್ಲಿ ಪೌರ ಕಾರ್ಮಿಕರ ದಿನಾಚರಣೆ ಪ್ರಯುಕ್ತ ಪೌರ ಕಾರ್ಮಿಕರಿಗೆ ಏರ್ಪಡಿಸಲಾಗಿದ್ದ ವಿವಿಧ ಸ್ಪರ್ಧೆಗಲ್ಲಿ ವಿಜೇತರಾಗಿದ್ದ ಪೌರ ಕಾರ್ಮಿಕರಿಗೆ ಬಹುಮಾನ ವಿತರಣೆ ಮಾಡಲಾಯಿತು.
ಪುರಸಭೆ ಆರೋಗ್ಯ ನಿರೀಕ್ಷಕರಾದ ಕೆ.ಜಿ.ರಮೇಶ್, ಪೃಥ್ವಿರಾಜ್, ಪರಿಸರ ಅಭಿಯಂತರ ಡಿ.ಶೇಖರ್ ರೆಡ್ಡಿ, ಎಂಜಿನಿಯರ್ ಶ್ರೀನಿವಾಸ್, ಸದಸ್ಯರಾದ ವಿ.ಮುನಿರಾಜು, ಕೆ.ಅನೀಸ್ ಅಹ್ಮದ್, ಎಂಎನ್ಆರ್ ನಾಗರಾಜ್, ಸರ್ದಾರ್, ಅನಂದ್, ನಾಗೇಶ್, ಶಂಕರ್, ಪ್ರಸಾದ್, ಶಾರದ, ವನಜಾಕ್ಷಿ, ಅಕ್ರಮ್ ಪಾಷ, ಪಟ್ಟಣ ಪೌರ ಕಾರ್ಮಿಕರ ಸಂಘದ ಅಧ್ಯಕ್ಷ ರಾಮಚಂದ್ರಪ್ಪ, ಉಪಾಧ್ಯಕ್ಷ ಬಾಲಕೃಷ್ಣ ಇದ್ದರು.