ಶ್ರೀನಿವಾಸಪುರದ ಶಿರಿಡಿ ಸಾಯಿ ಬಾಬಾ ದೇವಾಲಯದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಮಹಿಳೆಯರು ವಿಶೇಷ ಪೂಜೆ ನೆರವೇರಿಸಿದರು.

ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರದ ಶಿರಿಡಿ ಸಾಯಿ ಬಾಬಾ ದೇವಾಲಯದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಮಹಿಳೆಯರು ವಿಶೇಷ ಪೂಜೆ ನೆರವೇರಿಸಿದರು.
ಗುರು ಪೂರ್ಣಿಮೆ ಪ್ರಯುಕ್ತ ಬಾಬಾ ವಿಗ್ರಹಕ್ಕೆ ವಿಶೇಷ ಅಲಂಕಾರ ಮಾಡಲಾಗಿತ್ತು.
ಬಾಬಾ ದೇಗುಲದಲ್ಲಿ ಗುರುಪೂರ್ಣಿಮೆ ಆಚರಣೆ
ಶ್ರೀನಿವಾಸಪುರ: ಪಟ್ಟಣದ ಶಿರಿಡಿ ಸಾಯಿ ಬಾಬಾ ದೇವಾಲಯದಲ್ಲಿ ಗುರುಪೂರ್ಣಿಮೆ ಪ್ರಯುಕ್ತ ಹಲವಾರು ಧಾರ್ಮಿಕ ಹಾಗೂ ಸಾಂಸ್ಕೃತಿಕ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
  ಬಾಬಾ ವಿಗ್ರಹಕ್ಕೆ ಕ್ಷೀರಾಭಿಷೇಕ ಮಾಡಲಾಯಿತು. ವಿಶೇಷ ಅಲಂಕಾರ ಹಾಗೂ ವಿಶೇಷ ಪೂಜೆ ನೆರವೇರಿಸಲಾಯಿತು. ಬಾಬಾ ವಿಗ್ರಹಕ್ಕೆ ತೊಟ್ಟಿಲು ಹಾಗೂ ಉಯ್ಯಾಲೆ ಸೇವೆ ಮಾಡಲಾಯಿತು.
  ಈ ಸಂದರ್ಭದಲ್ಲಿ ವಿಶೇಷ ಸತ್ಯನಾರಾಯಣಸ್ವಾಮಿ ಪೂಜೆ ಹಮ್ಮಿಕೊಳ್ಳಲಾಗಿತ್ತು. ನೂರಾರು ಭಕ್ತರು ಈ ಪೂಜಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಭಗವಂತ ಸೇವೆ ಮಾಡಿದರು. ಮಹಿಳೆಯರು ದೀಪೋತ್ಸವ ನೆರವೇರಿಸಿದರು. ಭಕ್ತಾದಿಗಳಿಂದ ಬಾಬಾ ದರ್ಶನ ಪಡೆದ ಭಕ್ತರಿಗೆ ಪ್ರಸಾದ ವಿತರಣೆ ಮಾಡಲಾಯಿತು.
   ಪಟ್ಟಣ ಹಾಗೂ ತಾಲ್ಲೂಕಿನ ಬೇರೆ ಬೇರೆ ಗ್ರಾಮಗಳಿಂದ ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದ ನಾಗರಿಕರು ಸರತಿ ಸಾಲಿನಲ್ಲಿ ನಿಂತು ಬಾಬಾ ದರ್ಶನ ಪಡೆದರು. ದೇವಾಲಯಕ್ಕೆ ಬರುವ ಭಕ್ತರಿಗೆ ಕುಡಿಯುವ ನೀರು ಹಾಗೂ ಊಟದ ವ್ಯವಸ್ಥೆ ಮಾಡಲಾಗಿತ್ತು.