ಶ್ರೀನಿವಾಸಪುರದ ಸರ್ಕಾರಿ ಮಾದರಿ ಕರ್ನಾಟಕ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಮಂಗಳವಾರ ಬಿಇಒ ಉಮಾದೇವಿ ಉದ್ಘಾಟಿಸಿದರು.

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರದ ಸರ್ಕಾರಿ ಮಾದರಿ ಕರ್ನಾಟಕ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಮಂಗಳವಾರ ಬಿಇಒ ಉಮಾದೇವಿ ಉದ್ಘಾಟಿಸಿದರು.
ಶ್ರೀನಿವಾಸಪುರ: ವಿದ್ಯಾರ್ಥಿಗಳು ಶಾಲಾ ಶೌಚಾಲಯವನ್ನು ಬಳಸಿಕೊಳ್ಳಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ ಹೇಳಿದರು.
  ಪಟ್ಟಣದ ಸರ್ಕಾರಿ ಮಾದರಿ ಕರ್ನಾಟಕ ಉನ್ನತೀಕೃತ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಪುರಸಭೆ ವತಿಯಿಂದ ರೂ.10.70 ಲಕ್ಷ ವೆಚ್ಚದಲ್ಲಿ ನೂತನವಾಗಿ ನಿರ್ಮಿಸಿರುವ ಶೌಚಾಲಯಗಳನ್ನು ಮಂಗಳವಾರ ಉದ್ಘಾಟಿಸಿ ಮಾತನಾಡಿ, ಮಕ್ಕಳು ಶಾಲಾ ಶೌಚಾಲಯ ಬಳಸಿಕೊಳ್ಳುವಂತೆ ಶಿಕ್ಷಕರು ಸೂಚಿಸಬೇಕು. ಶೌಚಾಲಯ ಬಳಕೆಯಿಂದ ಆಗುವ ಪ್ರಯೋಜನದ ಬಗ್ಗೆ ತಿಳುವಳಿಕೆ ನೀಡಬೇಕು ಎಂದು ಹೇಳಿದರು.
  ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್‌ ಕುಮಾರ್‌ ಮಾತನಾಡಿ, ಪುರಸಭೆಗೆ ಸ್ವಚ್ಛತೆ ಕುರಿತು ಕಾಳಜಿ ಇದೆ. ಆದ್ದರಿಂದಲೇ ಶಾಲೆಗೆ ಶೌಚಾಲಯ ನಿರ್ಮಿಸಿಕೊಡಲಾಗಿದೆ. ಮಕ್ಕಳು ವೈಯಕ್ತಿಕ ಸ್ವಚ್ಛತೆ ಕಡೆ ಹೆಚ್ಚು ಗಮನ ನೀಡಬೇಕು. ಶೌಚಾಲಯ ಬಳಿಸಿದ ಬಳಿಕ ನೀರು ಹಾಕುವುದನ್ನು ಮರೆಯಬಾರದು. ಕೆಟ್ಟ ವಾಸನೆ ಬರದಂತೆ ಎಚ್ಚರ ವಹಿಸಬೇಕು ಎಂದು ಹೇಳಿದರು.
  ಈ ಸಂದರ್ಭದಲ್ಲಿ ಚಿತ್ರ ರಚನಾ ಸ್ಪರ್ಧೆಯಲ್ಲಿ ವಿಜೇತರಾಗಿದ್ದ 9ವಿದ್ಯಾರ್ಥಿಗಳಿಗೆ ಬಹುಮಾನ ಹಾಗೂ ಪ್ರಮಾಣ ಪತ್ರ ವಿತರಿಸಲಾಯಿತು.
  ಬೆಸ್ಕಾಂ ಜೂನಿಯರ್ ಎಂಜಿನಿಯರ್ ನಾಗರತ್ನಮ್ಮ, ತಾಲ್ಲೂಕು ಆರೋಗ್ಯಾಧಿಕಾರಿ ಡಾ. ಶ್ರೀನಿವಾಸ್‌, ಕೆ.ವಿ.ಸಿ ರೆಡ್ಡಿ, ಪುರಸಭೆ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್‌, ಕಿರಿಯ ಎಂಜಿನಿಯರ್‌ ಶ್ರೀನಿವಾಸ್‌, ಮುಖ್ಯ ಶಿಕ್ಷಕ ಬೈರೇಗೌಡ ಇದ್ದರು.