ಶ್ರೀನಿವಾಸಪುರ:ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಿ

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

 

 

ಶ್ರೀನಿವಾಸಪುರ:ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಿ 

 

ಶ್ರೀನಿವಾಸಪುರ, ಸರ್ಕಾರದಿಂದ ಬರುವ ಸೌಲಭ್ಯಗಳನ್ನು ಉಪಯೋಗಿಸಿಕೊಂಡು ಆರ್ಥಿಕ ಸ್ವಾವಲಂಬಿಗಳಾಗಿ ತಮ್ಮ ಜೀವನದ ಗುಣಮಟ್ಟವನ್ನು ಅಭಿವೃದ್ಧಿಪಡಿಕೊಳ್ಳಬೇಕೆಂದು ರಾಯಲ್ಪಾಡು ಕ್ಷೇತ್ರದ ಜಿಲ್ಲಾ ಪಂಚಾಯಿತಿ ಸದಸ್ಯ ಮ್ಯಾಕಲ ನಾರಾಯಣಸ್ವಾಮಿ ತಿಳಿಸಿದರು.
ಪಟ್ಟಣದ ಕೈಗಾರಿಕೆ ಮತ್ತು ವಾಣಿಜ್ಯ ಇಲಾಖೆ, ಕೈಗಾರಿಕಾ ವಿಸ್ತರಣಾ ಅಧಿಕಾರಿಗಳ ಕಛೇರಿ ಆವರಣದಲ್ಲಿ ವಿಶೇಷ ಘಟಕ ಯೋಜನೆ ಮತ್ತು ಕರಕುಶಲ ಕಸಬುದಾರರಿಗೆ ಇಲಾಖೆಯಿಂದ ಬರುವ ಹೋಲಿಗೆಯಂತ್ರಗಳು, ಗಾರೇ, ಮರಕೆಲಸ, ಅಕ್ಕಸಾಲಿಗ, ದೋಬಿ, ಸವಿತ ಸಮಾಜಬಂಧುಗಳಿಗೆ ಉಪಯೋಗವಾಗುವ ಕುಲವೃತ್ತಿ ಸಲಕರಣೆಗಳನ್ನು ವಿತರಿಸಿ ಮಾತಾನಾಡಿದ ನಾರಾಯಣಸ್ವಾಮಿ ಸರ್ಕಾರದಿಂದ ಬರುವ ಇಂತಹ ಸೌಲಭ್ಯಗಳನ್ನು ಸಾರ್ವಜನಿಕರು ಮತ್ತು ವೃತ್ತಿಪರ ಕೆಲಸಮಾಡುವವರು ವಿಶೇಷವಾಗಿ ಮಹಿಳೆಯರು ಇವುಗಳನ್ನು ಸದ್ಬಳಕೆ ಮಾಡಿಕೊಂಡು ಆರ್ಥಿಕ ಶಕ್ತಿವಂತರಾಗಿ ಸಮಾಜದ ಮುಖ್ಯವಾಹಿನಿಗೆ ಬರಬೇಕೆಂದು ತಿಳಿಸಿದರು.
ಇದೇ ಸಮಯದಲ್ಲಿ ಸುಮಾರು 30 ಮಂದಿ ಫಲಾನುಭವಿಗಳಿಗೆ ಸಲಕರಣೆಗಳನ್ನು ವಿತರಿಸಿದರು. ಇದೇ ಸಂಧರ್ಭದಲ್ಲಿ ತಾಲ್ಲೂಕು ಪಂಚಾಯ್ತಿ ಅಧ್ಯಕ್ಷ ನರೇಶ್, ತಾಲ್ಲೂಕು ಪಂಚಾಯ್ತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥ್ ಕೈಗಾರಿಕಾ ಮತ್ತು ವಾಣಿಜ್ಯ ಇಲಾಖೆಯ ವಿಸ್ತಿರಣಾ ಅಧಿಕಾರಿ ಲಕ್ಷ್ಮೀಕಾಂತ ಮುಖಂಡರಾದ ಮುರಳಿ, ಕೂರಿಗೇಪಲ್ಲಿ ವಿಶ್ವನಾಥರೆಡ್ಡಿ ತಮಸ್ ಇನ್ನೂ ಮುಂತಾದವರು ಹಾಜರಿದ್ದರು.