ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರ, ಅಡ್ಡಿ ಆತಂಕಗಳನ್ನು ಎದುರಿಸಿ, ಸಾಲ ಸೌಲಭ್ಯ ಕಲ್ಪಿಸಲಾಗುತ್ತಿದೆ. ಯಾವುದೇ ಕಾರಣಕ್ಕೂ ಬಡವರ ಪರ ಕೆಲಸ ಮಾಡುವುದನ್ನು ನಿಲ್ಲಿಸುವುದಿಲ್ಲ : ಶಾಸಕ ಕೆ.ಆರ್.ರಮೇಶ್ ಕುಮಾರ್.
ತಾಲ್ಲೂಕಿನ ಸೋಮಯಾಜಲಹಳ್ಳಿ ಗ್ರಾಮದಲ್ಲಿ ಡಿಸಿಸಿ ಬ್ಯಾಂಕ್ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಸಾಲ ವಿತರಣಾ ಸಮಾರಂಭದಲ್ಲಿ 180 ಸ್ತ್ರೀ ಶಕ್ತಿ ಸಂಘಗಳಿಗೆ ರೂ.7 ಕೋಟಿ ಸಾಲ ವಿತರಿಸಿ ಮಾತನಾಡಿ, ಬಡ ಮಹಿಳೆಯರು ಖಾಸಗಿ ಲೇವಾದೇವಿ ಮಾಡುವ ವ್ಯಕ್ತಿಗಳ ಕಿರುಕುಳದಿಂದ ಮುಕ್ತರಾಗಿ, ಸ್ವಾವಲಂಬಿ ಜೀವನ ನಡೆಸಲು ಸಾಧ್ಯವಾಗುವಂತೆ ಬಡ್ಡಿ ರಹಿತ ಸಾಲ ನೀಡಲಾಗುತ್ತಿದೆ. ಸೌಲಭ್ಯ ಸದುಪಯೋಗ ಪಡಿಸಿಕೊಂಡು ಆರ್ಥಿವಾಗಿ ಮುಂದೆ ಬರಬೇಕು ಎಂದು ಹೇಳಿದರು.
ಸಾಲ ಮರುಪಾವತಿ ಮಾಡಿದವರಿಗೆ ಮತ್ತೆ ಸಾಲ ನೀಡಲಾಗುತ್ತದೆ. ಸರ್ಕಾರ ಬದಲಾದ ಪರಿಣಾಮವಾಗಿ ನವೀಕರಣ ತಡವಾಗುತ್ತಿದೆ. ಇದರಿಂದ ತಾತ್ಕಾಲಿಕವಾಗಿ ಮರುಸಾಲ ನೀಡಲು ತಡವಾಗುತ್ತಿದೆ. ಸಾಲ ಪಡೆದುಕೊಂಡವರು ನಿಗದಿತ ಸಮಯಕ್ಕೆ ಸರಿಯಾಗಿ ಮರುಪಾವತಿ ಮಾಡಬೇಕು. ಡಿಸಿಸಿ ಬ್ಯಾಂಕ್‌ನಲ್ಲಿಯೇ ವ್ಯವಹಾರ ಮಾಡಿದಲ್ಲಿ ಹೆಚ್ಚು ಅನುಕೂಲವಾಗುತ್ತದೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ಗೋವಿಂದಸ್ವಾಮಿ, ಮಾಜಿ ಅಧ್ಯಕ್ಷೆ ನಾಗರತ್ನಮ್ಮ ಮಂಜುನಾಥರೆಡ್ಡಿ, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಗ್ರಾಮ ಪಂಚಾಯಿತಿ ಉಪಾಧ್ಯಕ್ಷ ರೋಣೂರು ಚಂದ್ರಶೇಖರ್ ಮಾತನಾಡಿದರು.
ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ರಾಯಲ್ಪಾಡು ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷ ಸಂಜಯ್ ರೆಡ್ಡಿ, ಎಪಿಎಂಸಿ ಅಧ್ಯಕ್ಷ ಎನ್.ರಾಜೇಂದ್ರಪ್ರಸಾದ್, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಕೆ.ಕೆ.ಮಂಜುನಾಥರೆಡ್ಡಿ, ಮುಖಂಡರಾದ ಬೈರಪ್ಪಲ್ಲಿ ವೆಂಕಟರೆಡ್ಡಿ, ಸೀತಾರಾಮರೆಡ್ಡಿ ಇದ್ದರು.