ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ: ಆಜ್ಞೇಯ ಪದವೀಧರ ಕ್ಷೇತ್ರದ ಮತದಾರರು ಬಿಜೆಪಿ ಅಭ್ಯರ್ಥಿಯನ್ನು ಬೆಂಬಲಿಸಬೇಕು. ಮುಖ್ಯ ಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಕೈ ಬಲಪಡಿಸಬೇಕು ಎಂದು ಜಿಲ್ಲಾ ಬಿಜೆಪಿ ಘಟಕದ ಅಧ್ಯಕ್ಷ ಡಾ. ಕೆ.ಎನ್.ವೇಣುಗೋಪಾಲ್ ಮನವಿ ಮಾಡಿದರು.
ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ಬಿಜೆಪಿ ಅಭ್ಯರ್ಥಿ ಚಿದಾನಂದ ಎಂ.ಗೌಡ ಅವರ ಪರವಾಗಿ ಶುಕ್ರವಾರ ಏರ್ಪಡಿಸಿದ್ದ ಚುನಾವಣಾ ಪ್ರಚಾರ ಸಭೆಯಲ್ಲಿ ಮಾತನಾಡಿದರು. ರಾಜ್ಯ ಬಿಜೆಪಿ ಕಾರ್ಯದರ್ಶಿ ಕೇಶವ ಪ್ರಸಾದ್, ಜಿಲ್ಲಾ ಬಿಜೆಪಿ ಪ್ರಭಾರಿ ಪದ್ಮ ಶಿವಶಂಕರ್ ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಸಾಧನೆ ಬಗ್ಗೆ ಮಾತನಾಡಿದರು. ಬಿಜೆಪಿ ಅಭ್ಯರ್ಥಿ ಗೆಲುವಿಗೆ ಶ್ರಮಿಸಲು ಬಿಜೆಪಿ ಕಾರ್ಯಕರ್ತರಿಗೆ ಕರೆ ನೀಡಿದರು. ತಾಲ್ಲೂಕು ಬಿಜೆಪಿ ಅಧ್ಯಕ್ಷ ಅಶೋಕ್ ರೆಡ್ಡಿ, ಉಪಾಧ್ಯಕ್ಷ ಶಿವಶಂಕರೇಗೌಡ, ಅಭ್ಯರ್ಥಿ ಚಿದಾನಂದ ಎಂ.ಗೌಡ, ಮುಖಂಡರಾದ ಜಯರಾಮರೆಡ್ಡಿ, ನಾಗರಾಜ್, ರಮೇಶ್ ಇದ್ದರು.