ಶ್ರೀನಿವಾಸಪುರ ಆರೋಗ್ಯಯುತ ಸಮಾಜ ನಿರ್ಮಿಸುವಲ್ಲಿ ಆಶಾ ಕಾರ್ಯಕರ್ತರ ಪಾತ್ರ ಶಾಘನೀಯವಾಗಿದೆ :ತಹಸೀಲ್ದಾರ್ ಎಸ್.ಎಂ. ಶ್ರೀನಿವಾಸ್

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

 

 

ಶ್ರೀನಿವಾಸಪುರ ಆರೋಗ್ಯಯುತ ಸಮಾಜ ನಿರ್ಮಿಸುವಲ್ಲಿ ಆಶಾ ಕಾರ್ಯಕರ್ತರ ಪಾತ್ರ ಶಾಘನೀಯವಾಗಿದೆ :ತಹಸೀಲ್ದಾರ್ ಎಸ್.ಎಂ. ಶ್ರೀನಿವಾಸ್ 

 

 

 

 

ಶ್ರೀನಿವಾಸಪುರ: ಆರೋಗ್ಯಯುತ ಸಮಾಜ ನಿರ್ಮಿಸುವಲ್ಲಿ ಆಶಾ ಕಾರ್ಯಕರ್ತರ ಪಾತ್ರ ಶಾಘನೀಯವಾಗಿದೆ ಎಂದು ತಹಸೀಲ್ದಾರ್ ಎಸ್.ಎಂ. ಶ್ರೀನಿವಾಸ್ ತಿಳಿಸಿದರು.
ಪಟ್ಟಣದ ಸರ್ಕಾರಿ ನೌಕರರ ಭವನದ ಬಳಿ ತಾಲ್ಲೂಕಿನಸುಮಾರು 180 ಆಶಾ ಕಾರ್ಯಕರ್ತರಿಗೆ ಜಿಲ್ಲಾ ಭಾರತೀಯ ರೆಡ್ ಕ್ರಾಸ್ ಸಂಸ್ಥೆವತಿಯಿಂದ ಆಹಾರ ಕಿಟ್ಟನ್ನು ವಿತರಿಸಿ ಮಾತನಾಡಿದ ಎಸ್‍ಎಂ. ಶ್ರೀನಿವಾಸ್, ಸಮಾಜದ ಜವಾಬ್ದಾರಿಯಲ್ಲಿ ತಮ್ಮನ್ನು ತಾವು ತೊಡಗಿಸಿಕೊಂಡು ನಿರಂತರವಾಗಿ ಸೇವೆಯನ್ನು ಮಾಡುತ್ತಿರುವುದು ಶ್ಲಾಘನೀಯವಾಗಿದೆ, ನಿಮ್ಮ ಜವಾಬ್ದಾರಿಯು ಅತ್ಯ ಅಮೂಲ್ಯವಾದುದು. ಆಶಾ ಕಾರ್ಯಕರ್ತರು ಸಾಮಾಜಿಕ ಅಂತರದಿಂದ ಅಂತರವನ್ನು ಕಾಪಾಡಿಕೊಂಡು ಪ್ರತಿ ಮನೆಗೆ ಭೇಟಿ ನೀಡಿ ಅಲ್ಲಿನ ಆರೋಗ್ಯ ವಿಚಾರದಲ್ಲಿ ಸಮಾಲೋಚನೆ ನಡೆಸಿದ್ದೀರಿ. ಇಂತಹ ನಿಮ್ಮ ಸೇವೆಯನ್ನು ಮುಕ್ತ ಕಂಠದಿಂದ ಅಭಿನಂದಿಸುವುದು ನಮ್ಮೆಲ್ಲರ ಜವಾಬ್ದಾರಿ ಹಾಗೂ ಕರ್ತವ್ಯ ಎಂದರು.
ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿ ಮಾತನಾಡಿದ ಭಾರತೀಯ ರೆಡ್ ಕ್ರಾಸ್ ಸಂಸ್ಥೆಯ ಕೋಲಾರ ಜಿಲ್ಲಾ ಛೇರ್‍ಮೆನ್ ಎನ್ ಗೋಪಾಲಕೃಷ್ಣ ಮಾತನಾಡಿ, ಭಾರತೀಯ ರೆಡ್ ಕ್ರಾಸ್ ಸಂಸ್ಥೆ ನೀಡಿರುವ ಜವಾಬ್ದಾರಿಯನ್ನು ಅತ್ಯಂತ ಪ್ರಾಮಾಣಿಕವಾಗಿ ಜನ ಸಾಮಾನ್ಯರ ಕೈಸೇರುವಲ್ಲಿ ಶ್ರಮಿಸುತ್ತಿದ್ದು, ಜಿಲ್ಲೆಯಾಧ್ಯಂತ ಆಶಾ ಕಾರ್ಯಕರ್ತರಿಗೆ ನೆರವು ನೀಡುತ್ತಿದ್ದೇವೆ ಎಂದು ತಿಳಿಸಿದರು. ಆಶಾ ಕಾರ್ಯಕರ್ತರು ತಮ್ಮ ಆರೋಗ್ಯ ಕಡೆ ಚಿಂತಿಸದೆ ನಿರಂತರವಾಗಿ ಕೆಲಸ ಮಾಡುತ್ತಿರುವುದು ನಿಜಕ್ಕೂ ಅಭಿನಂದನಾರ್ಹರು. ಇವರ ಸೇವೆಗೆ ಸಮಾಜದ ಪ್ರತಿಯೊಬ್ಬರೂ ಗೌರವವನ್ನು ನೀಡಬೇಕು ಎಂದರು.
ಇದೆ ಸಂದರ್ಭದಲ್ಲಿ ಸಿ.ಪಿ.ಐ. ರಾಘವೆಂದ್ರ ಪ್ರಾಕಾಶ್, ರೆಡ್ ಕ್ರಾಸ್ ಸಂಸ್ಥೆಯ ಡೆಪ್ಯೂಟಿ ಛೇರ್‍ಮೆನ್ ಆರ್. ಶ್ರೀನಿವಾಸನ್, ಕಾರ್ಯದರ್ಶಿ ಎ.ಟಿ. ಸೋಮಶೇಕರ್, ಕೋಶಾಧ್ಯಕ್ಷ ಜಿ. ಶ್ರೀನಿವಾಸ್, ಖಜಾನ್ಸಿ ನಾಗಶೇಕರ್, ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಬಂಗವಾದಿ ನಾಗರಾಜ್, ಕೆ.ಕೆ. ಮಂಜುನಾಥ್ ಮುಂತಾದವರು ಹಾಜರಿದ್ದರು.