ವರದಿ: ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ: ಕೃಷಿ ಕ್ಷೇತ್ರದ ಅಭಿವೃದ್ಧಿಯಲ್ಲಿ ಮಹಿಳೆಯರ ಪಾತ್ರ ಹಿರಿದು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಹೇಳಿದರು.
ಪಟ್ಟಣದ ಸರ್ಕಾರಿ ನೌಕರರ ಭವನದ ಸಭಾಂಗಣದಲ್ಲಿ ನನ್ನ ಗ್ರಾಮ ನನ್ನ ಜನ ಟ್ರಸ್ಟ್ ವತಿಯಿಂದ ಶನಿವಾರ ಏರ್ಪಡಿಸಿದ್ದ ಮಹಿಳಾ ರೈತ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿ, ದೇಶಕ್ಕೆ ಅನ್ನ ಕೊಡುವ ರೈತ ಸಮುದಾಯ ಸಮಾಜದ ಎಲ್ಲ ವರ್ಗದ ಜನರ ಗೌರವಕ್ಕೆ ಪಾತ್ರವಾಗಿದೆ ಎಂದು ಹೇಳಿದರು.
ರೈತ ಮಹಿಳೆಯರು ಶ್ರದ್ಧೆಯಿಂದ ದುಡಿಯುವುದರ ಜತೆಗೆ, ಮಕ್ಕಳಿಗೆ ಉತ್ತಮ ಶಿಕ್ಷಣ ಕೊಡಿಸಬೇಕು ಎಂದು ಹೇಳಿದರು.
ಉಪ ತಹಶೀಲ್ದಾರ್ ಮಲ್ಲೇಶ್, ನನ್ನ ಗ್ರಾಮ ನನ್ನ ಜನ ಟ್ರಸ್ಟ್ ಅಧ್ಯಕ್ಷ ಕೃಷ್ಣಾರೆಡ್ಡಿ, ಶಶಿರಾಜ್, ರಮಾದೇವಿ, ಅನಿತಾ, ಶೋಭಾ, ನಾಗರತ್ನ, ಮುನಿರತ್ನ, ಲಕ್ಷ್ಮಿದೇವಮ್ಮ ಇದ್ದರು.