ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಕಸಬಾ ಹೋಬಳಿಯ ಗುಮ್ಮರೆಡ್ಡಿಪುರ ಗ್ರಾಮದಲ್ಲಿ ಜಿಲ್ಲಾ ವಾಲ್ಮೀಕಿ ನಾಯಕ ಸ್ವಾಭಿಮಾನಿ ಜಿಲ್ಲಾ ಅಧ್ಯಕ್ಷ ಹರೀಶ್ ನಾಯ್ಕ್ ನೇತೃತ್ವದಲ್ಲಿ ಪ್ರತಿ ವರ್ಷದಂತೆ ಈ ವರ್ಷ ಸಹ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಿ ಗ್ರಾಮದ ಪ್ರಮುಖ ಬೀದಿಗಳಲ್ಲಿ ವಾಲ್ಮೀಕಿ ಮಹರ್ಷಿ ಭಾವ ಚಿತ್ರವಿರುವ ಪಲ್ಲಕ್ಕಿಯೊಂದಿಗೆ ಮೆರವಣಿಗೆ ಮಾಡಿ ಪೂಜಾ ಕಾರ್ಯಕ್ರಮಗಳನ್ನು ನೆರವೇರಿಸಲಾಯಿತು.
ಕಾರ್ಯಕ್ರಮದಲ್ಲಿ ಅತಿಥಿಗಳಾಗಿ ಪಿಎಸ್.ಐ. ನಾರಾಯಣಪ್ಪ, ವಾಲ್ಮೀಕಿ ಸಮಾಜದ ಮುಖಂಡರಾದ ರಮೇಶ್ ನಾಯ್ಕ್, ಆಂಜನೇಯಪ್ಪ, ಶ್ರೀನಿವಾಸ್, ರಾಧಾ ಕೃಷ್ಣ, ಗೋಪಾಲ್, ಅಶ್ವಥ್ ನಾಯ್ಕ್, ವೆಂಕಟರವಣ ನಾಯ್ಕ್,, ಮುನಿಶಾಮಿ ನಾಯ್ಕ್, ಆಂಜಿ ಮತ್ತಿತರರು ಹಾಜರಿದ್ದರು.