ಶ್ರೀನಿವಾಸಪುರ: ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕವಾಗಿದೆ : ತಾಲ್ಲೂಕು ಕುರುಬರ ಅಧ್ಯಕ್ಷ ಎಂ.ವೇಮಣ್ಣ

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಜಾತಿಯ ಹೆಸರಲ್ಲಿ ನಡೆಯುವ ಶೋಷಣೆ ಸಮಾಜ ಹಿತಕ್ಕೆ ಮಾರಕವಾಗಿದೆ. ಸಮಾಜದ ಎಲ್ಲರನ್ನೂ ಸಮಾನವಾಗಿ ಕಾಣುವ ಮನೋಭಾವ ಬೆಳೆಯಬೇಕು ಎಂದು ತಾಲ್ಲೂಕು ಕುರುಬರ ಅಧ್ಯಕ್ಷ ಎಂ.ವೇಮಣ್ಣ ಹೇಳಿದರು.
  ಪಟ್ಟಣದ ಕನಕ ಸಮುದಾಯ ಭವನದಲ್ಲಿ ತಾಲ್ಲೂಕು ಕುರುಬರ ಸಂಘದ ವತಿಯಿಂದ ಗುರುವಾರ ಏರ್ಪಡಿಸಿದ್ದ ಕನಕದಾಸರ ಜಯಂತಿ ಸಂಮಾರಂಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ಸಮುದಾಯದ ವಿದ್ಯಾರ್ಥಿಗಳನ್ನು ಸನ್ಮಾನಿಸಿ ಮಾತನಾಡಿ, ಕುರುಬ ಸಮುದಾಯ ಶೈಕ್ಷಣಿಕವಾಗಿ ಹಿಂದುಳಿದಿದೆ. ಈ ಸಮುದಾಯದ ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.  ನಂದಗೋಕುಲ ಆಶ್ರಮದ ಸುಧೀರ ಚೈತನ್ಯ ಸ್ಮಾಮೀಜಿ ಮಾತನಾಡಿ, ವಿದ್ಯಾರ್ಥಿಗಳು ಕನಕದಾಸರ ಸಾಹಿತ್ಯ ಕೃತಿಗಳನ್ನು ಓದಬೇಕು. ಆ ಕೃತಿಗಳ ಬೆಳಕಲ್ಲಿ ಬದುಕು ಕಟ್ಟಿಕೊಳ್ಳಬೇಕು ಎಂದು ಹೇಳಿದರು.  ಈ ಸಂದರ್ಭದಲ್ಲಿ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ್ದ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು. ವಿದ್ಯಾರ್ಥಿಗಳಿಂದ ಕನಕದಾಸರ ಕೀರ್ತನೆಗಳ ಗಾಯನ ಕಾರ್ಯಕ್ರಮ ಏರ್ಪಿಡಿಸಲಾಗಿತ್ತು. ಸಂಘದ ತಾಲ್ಲೂಕು ಘಟಕದ ಕಾರ್ಯದರ್ಶಿ ಕೆ.ವಿ ಮಂಜುನಾಥ್, ಮುಖಂಡರಾದ ಎಂ.ಮೂರ್ತಿ, ವಾಸುದೇವ್‌ ಇದ್ದರು.