ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಡಾ. ಬಿ.ಆರ್. ಅಬೇಡ್ಕರ್ ಅವರ ಆಶಯ ಪಾಲನೆ ಇಂದಿನ ಅಗತ್ಯವಾಗಿದೆ ಎಂದು ಮಾಜಿ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.

ಪಟ್ಟಣದ ಅಂಬೇಡ್ಕರ್ ಉದ್ಯಾನದಲ್ಲಿ ಮಂಗಳವಾರ ಅಂಬೇಡ್ಕರ್ ಜಯಂತಿ ಪ್ರಯುಕ್ತ ಡಾ. ಬಿ.ಆರ್.ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿ, ಅಂಬೇಡ್ಕರ್ ಅವರು ದೇಶ ಕಂಡ ಮಹಾನ್ ಮೇಧಾವಿ. ಅವರ ಕ್ರಿಯಾಶೀಲತೆ ಹಾಗೂ ಸಾಮಾಜಿಕ ಬದ್ಧತೆಯಿಂದಾಗಿ, ಸರ್ವ ಜನಾಂಗದ ಅಭಿವೃದ್ಧಿಗೆ ಪೂರಕವಾದ ಸಂವಿಧಾನ ನೀಡಲು ಸಾಧ್ಯವಾಯಿತು ಎಂದು ಹೇಳಿದರು.
ಪ್ರತಿಯೊಬ್ಬರೂ ಸಂವಿಧಾನವನ್ನು ಸ್ವೀಕರಿಸಿ ಪಾಲಿಸಬೇಕು. ಸಂವಿಧಾನ ನಮ್ಮ ಬದುಕನ್ನು ಹಸನಾಗಿಸುವ ಸಾಧನ. ಭಾರತೀಯರ ಜೀನವ ಧರ್ಮದ ಸಂಕೇತವೂ ಆಗಿದೆ. ಸಂವಿಧಾನದ ಆಶಯದಂತೆ ನಡೆದುಕೊಳ್ಳುವುದು ಪ್ರತಿಯೊಬ್ಬ ಭಾರತೀಯನ ಹೊಣೆ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ, ಪುರಸಭಾ ಸದಸ್ಯರಾದ ಬಿ.ವೆಂಕಟರೆಡ್ಡಿ, ರಾಜು, ನಾಗರಾಜ್, ತಾಲ್ಲೂಕು ಪಂಚಾಯಿತಿ ಸದಸ್ಯರಾದ ಆರ್.ಜಿ.ನರಸಿಂಹಯ್ಯ, ಮಂಜುನಾಥರೆಡ್ಡಿ, ಮುಖಂಡರಾದ ಪೂಲ ಶಿವಾರೆಡ್ಡಿ, ಕೆ.ಶಿವಪ್ಪ, ರವಿ.ಸಂತೋಷ್, ಕೊರ್ನಹಳ್ಳಿ ಆಂಜಿ, ಹೊಗಳಗೆರೆ ಆಂಜಿ ಇದ್ದರು.