ಶ್ರೀನಿವಾಸಪುರ ತಾಲ್ಲೂಕಿನ ಉನಿಕಿಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಶಾಸಕ ಕೆ.ಆರ್.ರಮೇಶ್ ಕುಮಾರ್ ಮಾತನಾಡಿದರು.
ಶ್ರೀನಿವಾಸಪುರ: ಅಧಿಕಾರಿಗಳು ಗ್ರಾಮಾಭಿವೃದ್ಧಿ ಕಾಮಗಾರಿಗಳನ್ನು ಪಾರದರ್ಶಕವಾಗಿ ನಿರ್ವಹಿಸಬೇಕು ಎಂದು ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ತಾಲ್ಲೂಕಿನ ಉನಿಕಿಲಿ ಗ್ರಾಮದಲ್ಲಿ ಏರ್ಪಡಿಸಿದ್ದ ಗ್ರಾಮ ಸಭೆಯಲ್ಲಿ ಮಾತನಾಡಿ, ಗ್ರಾಮದ ಅಭಿವೃದ್ಧಿಗೆ ಪೂರಕವಾದ ಎಲ್ಲ ಕ್ರಮ ಕೈಗೊಳ್ಳಲಾಗುವುದು. ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಲಾಗುವುದು. ಎಂದು ಹೇಳಿದರು.
ಗ್ರಾಮದಲ್ಲಿ ರೂ.10 ಲಕ್ಷ ವೆಚ್ಚದಲ್ಲಿ ಅಂಗನವಾಡಿ ಕಟ್ಟಡ ನಿರ್ಮಿಸಲಾಗುವುದು. ಮನೆ ಇಲ್ಲದವರಿಗೆ 86 ಮನೆಗಳನ್ನು ನಿರ್ಮಿಸಿಕೊಡಲಾಗುವುದು. ಸರ್ಕಾರಿ ಹಿರಿಯ ಪ್ರಾಥಮಿಕ ಶಾಲಾ ಕಟ್ಟಡ ನಿರ್ಮಾಣ ಮಾಡಲಾಗುವುದು. ಗ್ರಾಮಸ್ಥರ ಬೇಡಿಕೆಯಂತೆ ಸ್ಮಶಾನಕ್ಕೆ ಜಾಗ ನೀಡಲಾಗುವುದು. ಅಧಿಕಾರಿಗಳು ಸೂಕ್ತವಾದ ಸ್ಥಳವನ್ನು ಗುರುತಿಸುತ್ತಾರೆ ಗ್ರಾಮಸ್ಥರಿಗೆ ಒಪ್ಪಿಗೆಯಾದರೆ ಆ ಸ್ಥಳವನ್ನೇ ಸ್ಮಶಾನಕ್ಕೆ ನಿಗದಿಪಡಿಸಲಾಗುವುದು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಕೆ.ಎಂ.ನರೇಶ್, ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪಿಎಲ್‌ಡಿ ಬ್ಯಾಂಕ್ ಅಧ್ಯಕ್ಷ ದಿಂಬಾಲ ಅಶೋಕ್, ಎಪಿಎಂಸಿ ಅಧ್ಯಕ್ಷ ಎನ್.ರಾಜೇಂದ್ರ ಪ್ರಸಾದ್, ಪುರಸಭಾ ಸದಸ್ಯರಾದ ಕೆ ಅನೀಸ್ ಅಹ್ಮದ್, ಎನ್.ಎನ್.ಆರ್.ನಾಗರಾಜ್, ವಿ.ಮುನಿರಾಜು, ಮಖಂಡರಾದ ಶ್ರೀನಿವಾಸ್, ವೆಂಕಟೇಶ್, ನರಸಿಂಹಯ್ಯ, ತಿಪ್ಪಾರೆಡ್ಡಿ, ವೆಂಕಟೇಶರೆಡ್ಡಿ, ನಾರಾಯಣಸ್ವಾಮಿ, ಪೂಜಪ್ಪ, ರಾಮಪ್ಪ, ವೆಂಕಟರೆಡ್ಡಿ ಇದ್ದರು.
ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ