ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ: ನಾಗರಿಕರು ತಮ್ಮ ದಿನ ನಿತ್ಯದ ವ್ಯವಹಾರದಲ್ಲಿ ಕನ್ನಡ ಭಾಷೆ ಬಳಸುವುದರ ಮೂಲಕ, ಬಾಷಾ ಬೆಳವಣಿಗೆಗೆ ಸಹಕರಿಸಬೇಕು ಎಂದು ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್ ಹೇಳಿದರು. ಪಟ್ಟಣದ ರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ಭಾನುವಾರ ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ವತಿಯಿಂದ ಏರ್ಪಡಿಸಿದ್ದ ಕನ್ನಡ ರಾಜ್ಯೋತ್ಸವ ಸಮಾರಂಭದಲ್ಲಿ ಧ್ವಜಾರೋಹಣ ನೆರವೇರಿಸಿ ಮಾತನಾಡಿ, ದೇಶದಲ್ಲಿ ಕನ್ನಡ ಭಾಷೆಗೆ ತನ್ನದೇ ಅಧ ಹಿರಿಮೆ ಇದೆ. ಹೆಚ್ಚಿನ ಸಂಖ್ಯೆಯ ಜ್ಞಾನಪೀಠ ಪ್ರಶಸ್ತಿಗಳು ಕನ್ನಡ ಸಾಹಿತ್ಯಕ್ಕೆ ಬಂದಿರುವುದು ಬಾಷೆಯ ಉತ್ಕೃಷ್ಟತೆಯ ಸಂಕೇತವಾಗಿದೆ ಎಂದು ಅಭಿಪ್ರಾಯಪಟ್ಟರು. ಕೊರೊನಾ ಸಂಕಷ್ಟದ ನಡುವೆ ರಾಜ್ಯೋತ್ಸವವನ್ನು ಸರಳವಾಗಿ ಆಚರಿಸಲಾಗುತ್ತಿದೆ. ಆದರೆ ಕನ್ನಡದ ಹಿರಿಮೆ ಗರಿಮೆಗೆ ಯಾವುದೇ ಕುಂದು ಬಂದಿಲ್ಲ. ಎಲ್ಲರೂ ಕನ್ನಡ ಸಾಹಿತ್ಯ ಓದುವ ಹವ್ಯಾಸ ರೂಢಿಸಿಕೊಳ್ಳಬೇಕು. ಸಾಹಿತ್ಯದ ವಿವಿಧ ಪ್ರಕಾರಗಳ ಸಾರವನ್ನು ಆಸ್ವಾದಿಸಬೇಕು ಎಂದು ಹೇಳಿದರು. ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್ ಕರ್ನಾಟಕದ ಏಕೀಕರಣದ ಬಗ್ಗೆ ವಿವಿರವಾಗಿ ಮಾತನಾಡಿದರು. ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಬಾಬು ಇದ್ದರು.