ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಗುರುವಾರ ಧರಣಿ

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಪಟ್ಟಣದ ತಾಲ್ಲೂಕು ಕಚೇರಿ ಎದುರು ವಿವಿಧ ಕಾರ್ಮಿಕ ಸಂಘಟನೆಗಳ ಸದಸ್ಯರು ತಮ್ಮ ಬೇಡಿಕೆ ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಗುರುವಾರ ಧರಣಿ ನಡೆಸಿದರು. ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
  ಕರ್ನಾಟಕ ಪ್ರಾಂತ ರೈತ ಸಂಘದ ಜಿಲ್ಲಾ ಘಟಕದ ಅಧ್ಯಕ್ಷ ಪಿ.ಆರ್‌.ಸೂರ್ಯನಾರಾಯಣ ಧರಣಿ ನಿರತ ಕಾರ್ಮಿಕರನ್ನು ಉದ್ದೇಶಿಸಿ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರಗಳು ರೈತರು, ಕಾರ್ಮಿಕರು ಮತ್ತು ದಲಿತರಿಗೆ ಸಂಬಂಧಿಸಿದ ಕಾಯ್ದೆಗಳನ್ನು ಸುಗ್ರೀವಾಜ್ಞೆ ಮೂಲಕ ಜಾರಿಗೆ ತರುತ್ತಿರುವುದು ಪ್ರಜಾಪ್ರಭುತ್ವ ವಿರೋಧಿ ನಿಲುವಾಗಿದೆ ಎಂದು ಹೇಳಿದರು.  ಕರ್ನಾಟಕ ಪ್ರಾಂತ ರೈತ ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ಪಾತಕೋಟ ನವೀನ್‌ ಕುಮಾರ್‌ ಮಾತನಾಡಿ, ಕೇಂದ್ರ ಹಾಗೂ ರಾಜ್ಯ ಸರ್ಕಾರದ ಜನ ವಿರೋಧಿ ನೀತಿಗಳ ವಿರುದ್ಧ ಸಮಾಜದ ಎಲ್ಲ ವರ್ಗದ ಜನರೂ ಸಾಂಘಿಕ ಪ್ರತಿಭಟನೆ ನಡೆಸಬೇಕು. ರೈತ ಹಾಗೂ ಕಾರ್ಮಿಕ ವಿರೋಧಿ ಕಾಯ್ದೆಗಳು ಜಾರಿಗೆ ತರುವುದನ್ನು ತಡೆಯಬೇಕು ಎಂದು ಹೇಳಿದರು.  ನಿರಂತರವಾಗಿ ಪ್ರತಿಭಟನೆ ಮಾಡದ ಹೊರತು ಸರ್ಕಾರಗಳು ಗಮನ ಹರಿಸುವುದಿಲ್ಲ. ಸರ್ಕಾರಗಳ ಕಣ್ಣು ತೆರೆಸುವ ಕಾರ್ಯದಲ್ಲಿ ಪ್ರತಿಯೊಬ್ಬರೂ ಕೈ ಜೋಡಿಸಬೇಕು  ಎಂದು ಹೇಳಿದರು.  ಅಂಗನವಾಡಿ, ಗ್ರಾಮ ಪಂಚಾಯಿತಿ, ಅಕ್ಷರ ದಾಸೋಹ, ಕಟ್ಟಡ, ಹಮಾಲಿ ಮತ್ತಿತರ ಸಂಘ ಸಂಸ್ಥೆಗಳ ನೌಕರರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು. ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ಉಪ ತಹಶೀಲ್ದಾರ್‌ಗೆ ನೀಡಲಾಯಿತು.