ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರ: ಮಕ್ಕಳಲ್ಲಿ ಶಿಸ್ತು ಮೂಡಿಸುಲ್ಲಿ ಹಾಗೂ ಸ್ವಚ್ಛತೆ ಪಾಲಿಸುವಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಪಾತ್ರ ಹಿರಿದು : ವಿಧಾನ ಪರಿಷತ್ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ
ಪಟ್ಟಣದ ಶ್ರೀನಿವಾಸ ಕಲ್ಯಾಣ ಮಂಟಪದಲ್ಲಿ ಶನಿವಾರ ಏರ್ಪಡಿಸಿದ್ದ ಜಿಲ್ಲಾ ದೈಹಿಕ ಶಿಕ್ಷಣ ಶಿಕ್ಷಕರ ಶೈಕ್ಷಣಿಕ ಸಮ್ಮೇಳನದ ಉದ್ಘಾಟನಾ ಸಮಾರಂಭದಲ್ಲಿ ಮಾತನಾಡಿ, ವಿದ್ಯಾರ್ಥಿಗಳಲ್ಲಿ ದೈಹಿಕ ಹಾಗೂ ಮಾನಸಿಕ ಆರೋಗ್ಯ ಸರಿಯಿದ್ದಾಗ ಮಾತ್ರ ಕಲಿಕೆ ವ್ಯವಸ್ಥಿತವಾಗಿ ನಡೆಯುತ್ತದೆ. ದೈಹಿಕ ಶಿಕ್ಷಣ ಶಿಕ್ಷಕರು ಮಕ್ಕಳ ಮನೋ ವಿಕಾಸಕ್ಕೆ ಸಾಣೆ ಹಿಡಿಯಬೇಕು ಎಂದು ಹೇಳಿದರು.
ಶಾಸಕ ಕೆ.ಆರ್.ರಮೇಶ್ ಕುಮಾರ್, ವಿಧಾನ ಪರಿಷತ್ ಸದಸ್ಯ ಡಾ. ವೈ.ಎ.ನಾರಾಯಣಸ್ವಾಮಿ ಶಿಕ್ಷಕರಿಗೆ ಶುಭ ಹಾರೈಸಿದರು.
ಈ ಸಂದರ್ಭದಲ್ಲಿ ನಿವೃತ್ತ ದೈಹಿಕ ಶಿಕ್ಷಣ ಶಿಕ್ಷಕರು, ರಾಷ್ಟ್ರ ಮಟ್ಟದಲ್ಲಿ ಭಾಗವಹಿಸಿದ್ದ ಕ್ರೀಡಾಪಟುಗಳು, ತರಬೆತಿದಾರರು, ವೃತ್ತಿಯಲ್ಲಿ ವಿಶೇಷ ಸಾಧನೆ ಮಾಡಿದ ದೈಹಿಕ ಶಿಕ್ಷಣ ಶಿಕ್ಷಕರು, ಗಣ್ಯರು ಹಾಗೂ ದಾನಿಗಳನ್ನು ಸನ್ಮಾನಿಸಲಾಯಿತು.
ವಿಚಾರ ಗೋಷ್ಠಿಯಲ್ಲಿ ದೈಹಿಕ ಶಿಕ್ಷಣ ಶಿಕ್ಷಕರ ಸಮಸ್ಯೆಗಳು, ವೃತ್ತಿ ನೈಪುಣ್ಯತೆ ಹಾಗೂ ನೂತನ ಶೈಕ್ಷಣಿಕ ಪ್ರಯೋಗಗಳ ಬಗ್ಗೆ ವಿಚಾರ ಗೋಷ್ಠಿಯಲ್ಲಿ ಚರ್ಚಿಸಲಾಯಿತು.
ದೈಹಿಕ ಶಿಕ್ಷಣ ಶಿಕ್ಷಕರ ಸಂಘದ ರಾಜ್ಯ ಘಟಕದ ಅಧ್ಯಕ್ಷ ಇ.ಶ್ರೀನಿವಾಸಗೌಡ, ಪಿಎಲ್ಡಿ ಬ್ಯಾಂಕ್ ಅಧ್ಯಕ್ ದಿಂಬಾಲ ಅಶೋಕ್, ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್, ಡಿಪಿಇಒ ಮಂಜುನಾಥ್, ಇಒ ಅಶೋಕ್, ತಾಲ್ಲೂಕು ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಎಂ.ನಾಗರಾಜ್, ನಿರ್ದೇಶಕ ಎಂ.ಬೈರೇಗೌಡ, ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಅಧ್ಯಕ್ ಜಿ.ಎನ್.ಗೋವಿಂದರೆಡ್ಡಿ, ಮುಖಂಡರಾದ ಕೆ.ಕೆ.ಮಂಜು, ಜಿ.ಆರ್.ಭಾಸ್ಕರ್, ಕೆ.ಎನ್.ರಾಮಚಂದ್ರ, ಎಸ್.ನಾರಾಯಣಸ್ವಾಮಿ, ವೆಂಕಟಸ್ವಾಮಿ, ಎಚ್.ಆಂಜಪ್ಪ, ಎಚ್.ಆರ್.ರಮೇಶ್ ರೆಡ್ಡಿ, ಆರ್.ಕೃಷ್ಣಯ್ಯ, ಕೆ.ವಿ.ನಾರಾಯಣಸ್ವಾಮಿ ಇದ್ದರು.