ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ
ಪಟ್ಟಣದ ಕೊರೊನಾ ಸೋಂಕಿತ ಪ್ರದೇಶ ಬೋವಿ ಕಾಲೊನಿಗೆ ಬುಧವಾರ ರಾತ್ರಿ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಸರ್ಕಾರ ಈಗ ಕ್ವರಂಟೈನ್ ಅವಧಿಯನ್ನು 7 ದಿನಗಳಿಗೆ ಇಳಿಸಿದೆ. ರೋಗ ಲಕ್ಷಣ ಕಂಡುಬರದಿದ್ದಲ್ಲಿ 7 ದಿನಗಳ ಬಳಿಕ ಮನೆಗೆ ಕಳುಹಿಸಲಾಗುವುದು. ಮನೆಯಲ್ಲಿ 7 ದಿನ ಕ್ವಾರಂಟೈನ್‌ನಲ್ಲಿ ಇರಬೇಕಾಗುತ್ತದೆ ಎಂದು ಹೇಳಿದರು. ಸೋಂಕಿತ ಪ್ರದೇಶದಲ್ಲಿ ಬಿಎಲ್‌ಒ ಮತ್ತು ಆಶಾ ಕಾರ್ಯಕರ್ತರಿಗೆ ವ್ಯವಸ್ಥೆಯ ಜವಾಬ್ದಾರಿ ವಹಿಸಲಾಗಿದೆ. ಅವರು ಸೋಂಕು ಹರಡದಂತೆ ಅಗತ್ಯವಾದ ಕ್ರಮ ಕೈಗೊಳ್ಳುವಂತೆ ಸೂಚಿಸಲಾಗಿದೆ. ಕಟೈನ್‌ಮೆಂಟ್ ಪ್ರದೇಶ ನಿಗದಿಪಡಿಸುವುದನ್ನು ಜಿಲ್ಲಾಧಿಕಾರಿಗಳ ವಿವೇಚನೆಗೆ ಬಿಡಲಾಗಿದೆ. ವಾರ್ಡ್ ಮಟ್ಟದ ಅಧಿಕಾರಿಗಳು ಸೋಂಕಿತ ಪ್ರದೇಶಗಳ ಮೇಲುಸ್ತವಾರಿ ವಹಿಸುತ್ತಾರೆ ಎಂದು ಹೇಳಿದರು. ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಹೊರ ವಲಯದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ವಸತಿ ಶಾಲೆಯಲ್ಲಿ ಮಾಡಲಾಗಿರುವ ಕ್ವಾರಂಟೈನ್ ಕೇಂದ್ರ ಉತ್ತಮ ಪರಿಸರದಲ್ಲಿದ್ದು, ಕ್ವಾರಂಟೈನ್‌ನಲ್ಲಿರುವ ವ್ಯಕ್ತಿಗಳಿಗೆ ಉತ್ತಮ ಗುನಮಟ್ಟದ ಆಹಾರ, ಬಿಸಿ ನೀರು ಮತ್ತಿತರ ಸೌಲಭ್ಯ ಕೊಡುವಂತೆ ಸೂಚಿಸಲಾಗಿದೆ. ಮುಖ್ಯವಾಗಿ ಅಲ್ಲಿನ ಸಿಬ್ಬಂದಿ ಒಳ್ಳೆ ಕೆಲಸ ಮಾಡುವಂತೆ ಪ್ರೋತ್ಸಾಹಿಸಬೇಕಾಗಿದೆ ಎಂದು ಹೇಳಿದರು. ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ಉಪ ತಹಶೀಲ್ದಾರ್ ಮಲ್ಲೇಶ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಪುರಸಭಾ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್, ಹಿರಿಯ ಕಂದಾಯ ನಿರೀಕ್ಷಕ ಬಿ.ವಿ.ಮುನಿರೆಡ್ಡಿ, ಪುರಸಭೆ ಆರೋಗ್ಯ ನಿರೀಕ್ಷಕ ಕೆ.ಜಿ.ರಮೇಶ್, ಪರಿಸರ ಅಭಿಯಂತರ ಶೇಖರ್ ರೆಡ್ಡಿ, ತಾಲ್ಲೂಕು ವೈದ್ಯಾಧಿಕಾರಿ ಡಾ. ಶ್ರೀನಿವಾಸ್, ಗುರುರಾಜರಾವ್, ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ನಾರಾಯಣಪ್ಪ ಇದ್ದರು.