ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಶ್ರೀನಿವಾಸಪುರ ಮೂಲ ಸೌಕರ್ಯಕ್ಕೆ ಆಧ್ಯತೆ:ಎರಡು ಹಾಗೂ ಮೂರನೇ ವಾರ್ಡ್ನಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲನೆ
ಶ್ರೀನಿವಾಸಪುರದ ಎರಡು ಹಾಗೂ ಮೂರನೇ ವಾರ್ಡ್ನಲ್ಲಿ ಪುರಸಭೆಯ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಭೇಟಿ ನೀಡಿ ಪರಿಶೀಲಿಸಿದರು.
ಶ್ರೀನಿವಾಸಪುರ: ಪಟ್ಟಣದ ನಾಗರಿಕರಿಗೆ ಮೂಲ ಸೌಕರ್ಯ ಒದಗಿಸಲು ಆದ್ಯತೆ ನೀಡಲಾಗಿದೆ. ಕುಡಿಯುವ ನೀರು ಪೂರೈಕೆ, ರಸ್ತೆಗಳ ನಿರ್ಮಾಣ ಹಾಗೂ ಸ್ವಚ್ಛತೆಗೆ ಹೆಚ್ಚು ಗಮನ ನೀಡಲಾಗಿದೆ ಎಂದು ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್ ಹೇಳಿದರು.
ಪಟ್ಟಣದ ಎರಡು ಹಾಗೂ ಮೂರನೇ ವಾರ್ಡ್ಗೆ ಶುಕ್ರವಾರ ಬೆಳಿಗ್ಗೆ ಭೇಟಿ ನೀಡಿ ಪರಿಶೀಲಿಸಿದ ನಂತರ, ನಾಗರಿಕರ ಕುಂದು ಕೊರತೆ ವಿಚಾರಿಸಿ ಮಾತನಾಡಿದರು.
ಪಟ್ಟಣದಲ್ಲಿ ಪರಿಸರ ಮಾಲಿನ್ಯ ತಡೆಯಲು ಪ್ರತಿಯೊಬ್ಬರೂ ಮುಂದಾಗಬೇಕು. ಯಾವುದೇ ಕಾರಣಕ್ಕೂ ಸ್ವಚ್ಛತೆಗೆ ಕುಂದು ತರುವ ಚಟುವಟಿಕೆ ಕೈಗೊಳ್ಳಬಾರದು. ಪ್ಲಾಸ್ಟಿಕ್ ಬಳಕೆಗೆ ಕಡಿವಾಣ ಹಾಕಬೇಕು ಎಂದು ಹೇಳಿದರು.
ಪುರಸಭೆಯ ಸ್ವಚ್ಛತಾ ಸಿಬ್ಬಂದಿ ಬಂದಾಗ ಮನೆ ಕಸವನ್ನು ವಿಂಗಡಿಸಿ ಕೊಡಬೇಕು. ಸಾಧ್ಯವಾದರೆ ಹಸಿ ಕಸದಿಂದ ಸಾವಯವ ಗೊಬ್ಬರ ತಯಾರಿಸಿಕೊಳ್ಳಬೇಕು. ಕಸದಿಂದ ರಸ ತೆಗೆಯುವ ಕೌಶಲ ಬೆಳೆಸಿಕೊಳ್ಳಬೇಕು. ಪಟ್ಟಣದ ಜನ ವಸತಿ ಪ್ರದೇಶದಲ್ಲಿ ಖಾಲಿ ನಿವೇಶನ ಹೊಂದಿರುವವರು, ನಿವೇಶಗಳಲ್ಲಿ ಬೆಳೆದು ನಿಂತಿರುವ ಕಳೆ ಗಿಡಗಳನ್ನು ಕಿತ್ತುಹಾಕಬೆಕು. ಆ ಮೂಲಕ ಸೊಳ್ಳೆ ನಿಯಂತ್ರಣಕ್ಕೆ ನೆರವಾಗಬೇಕು ಎಂದು ಹೇಳಿದರು.
ಪುರಸಭಾ ಸದಸ್ಯರಾದ ಬಿ.ವೆಂಕಟರೆಡ್ಡಿ, ಕೆ.ಜಯಲಕ್ಷ್ಮಿ ಸತ್ಯನಾರಾಯಣ, ಮಾಜಿ ಸದಸ್ಯ ಸತ್ಯನಾರಾಯಣ ಇದ್ದರು.