ಶ್ರೀನಿವಾಸಪುರ: ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ

ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪು

ಶ್ರೀನಿವಾಸಪುರ: ಇಲ್ಲಿನ ತಾಲ್ಲೂಕು ಕಚೇರಿ ಎದುರು ಮಂಗಳವಾರ ರಾಜ್ಯ ಆರೋಗ್ಯ ಹಾಗೂ ಕುಟುಂಬ ಕಲ್ಯಾಣ, ವೈದ್ಯಕೀಯ ಶಿಕ್ಷಣ, ಗುತ್ತಿಗೆ ಹಾಗೂ ಹೊರ ಗುತ್ತಿಗೆ ನೌಕರ ಸಂಘದ ಸದಸ್ಯರು ತಮ್ಮ ಬೇಡಿಕೆಗಳನ್ನು ಈಡೇರಿಸುವಂತೆ ಸರ್ಕಾರವನ್ನು ಆಗ್ರಹಿಸಿ ಪ್ರತಿಭಟನೆ ನಡೆಸಿದರು.
ಸಂಘದ ತಾಲ್ಲೂಕು ಘಟಕದ ಅಧ್ಯಕ್ಷ ವಿ.ಶಿವಕುಮಾರ್‌ ಮಾತನಾಡಿ ಕೋವಿಡ್‌ –19 ಸಂಕಷ್ಟದ ನಡುವೆ ಈ ಸಂಘಟನೆಯ ನೌಕರರು ಜೀವದ ಮೇಲೆ ಹಂಗು ತೊರೆದು ರೋಗಿಗಳ ಸೇವೆಯಲ್ಲಿ ತೊಡಗಿದ್ದಾರೆ. ಸೋಂಕು ತಡೆಯಲು ಪೂರಕವಾಗಿ ಶ್ರಮಿಸುತ್ತಿದ್ದಾರೆ. ಆದರೂ ಸರ್ಕಾರ ಇವರ ನ್ಯಾಯಯುತ ಬೇಡಿಕೆಗಳ ಬಗ್ಗೆ ಗಮನ ಹರಿಸುತ್ತಿಲ್ಲ ಎಂದು ಹೇಳಿದರು.
ಪ್ರತಿಭಟನೆ ಸಂದರ್ಭದಲ್ಲಿ ತಾಲ್ಲೂಕು ಕಚೇರಿ ಎದುರು ಉದ್ಯಾನದಲ್ಲಿನ ಡಾ. ಬಿ.ಆರ್‌.ಅಂಬೇಡ್ಕರ್‌ ಅವರ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ತಮ್ಮ ಬೇಡಿಕೆಗಳನ್ನು ಒಳಗೊಂಡ ಮನವಿ ಪತ್ರವನ್ನು ತಹಶೀಲ್ದಾರ್‌ಗೆ ನೀಡಿಲಾಯಿತು.
ಮುಖಂಡರಾದ ಡಾ. ಎಂ.ಉಮಾಶಂಕರ್‌, ತೇಜಸ್‌, ಹರೀಶ್‌, ಕವಿತಾ, ಶಂಕರಪ್ಪ, ನಾಗರಾಜ್‌, ಕೃಷ್ಣವೇಣಿ, ಪದ್ಮ, ನೇತ್ರಾವತಿ, ಸೈಯದ್‌ ಮಹಮದ್‌ ಪಾಷ, ಹರಿಪ್ರಸಾದ್‌, ಅಶೋಕ್‌ ಇದ್ದರು.