ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ
ಶ್ರೀನಿವಾಸಪುರ: ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯ ಸದುಪಯೋಗ ಪಡಿಸಿಕೊಂಡು ಉತ್ತಮ ಫಲಿತಾಂಶ ಪಡೆದುಕೊಳ್ಳಬೇಕು : ಪುರಸಭೆ ಮುಖ್ಯಾಧಿಕಾರಿ ವಿ.ಮೋಹನ್ ಕುಮಾರ್

ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ಶುಕ್ರವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಶೈಕ್ಷಣಿಕ ಸಹಾಯ ಧನದ ಚೆಕ್ ವಿತರಿಸಿ ಮಾತನಾಡಿ, ಪುರಸಭೆ ವತಿಯಿಂದ 91 ವಿದ್ಯಾರ್ಥಿಗಳಿಗೆ ರೂ.6.42 ಲಕ್ಷ ಸಹಾಯ ಧನ ವಿತರಿಸಲಾಗಿದೆ. ಫಲಾನುಭವಿಗಳನ್ನು ಪಾರದರ್ಶಕವಾಗಿ ಆಯ್ಕೆ ಮಾಡಲಾಗಿದೆ. ಪ್ರತಿಭಾನ್ವಿತ ವಿದ್ಯಾರ್ಥಿಗಳನ್ನು ಶೈಕ್ಷಣಿಕವಾಗಿ ಪ್ರೋತ್ಸಾಹಿಸುವ ದೃಷ್ಟಿಯಿಂದ ಈ ನೆರವು ನೀಡಲಾಗಿದೆ ಎಂದು ಹೇಳಿದರು.
ಪುರಸಭೆಯ ಶೇ.5ರ ಯೋಜನೆಯಡಿ ಅಂಗವಿಕಲರಿಗೆ 4 ತ್ರಿಚಕ್ರ ಮೋಟಾರ್ ಸೈಕಲ್‌ಗಳನ್ನು ವಿತರಿಸಲಾಗಿದೆ. ಫಲಾನುಭವಿಗಳು ಅವುಗಳನ್ನು ಪರಿಣಾಮಕಾರಿಯಾಗಿ ಬಳಸಿಕೊಳ್ಳಬೇಕು. ಕೋಳರಿಮೆ ಬಿಟ್ಟು ಸಮಾಜದ ಮುಖ್ಯ ವಾಹಿನಿಗೆ ಬರಬೇಕು ಎಂದು ಹೇಳಿದರು.
ಪುರಸಭಾ ಸದಸ್ಯರಾದ ಬಿ.ವೆಂಕಟರೆಡ್ಡಿ, ಸರ್ದಾರ್, ಪರಿಸರ ಅಭಿಯಂತರ ಶೇಖರ್ ರೆಡ್ಡಿ, ಸಮುದಾಯ ಸಂಘಟನಾ ಅಧಿಕಾರಿ ಕೆ.ಎನ್.ರಾಜೇಶ್ವರಿ, ಕೋಲಾರ ನಗರ ಸಭೆಯ ಸಮುದಾಯ ಸಂಘಟನಾಧಿಕಾರಿ ಶಿವಪ್ರಕಾಶ್ ಇದ್ದರು.
