ಶ್ರೀನಿವಾಸಪುರ: ವಿದ್ಯಾರ್ಥಿಗಳು ಸಾಧನೆಯ ಹಾದಿಯಲ್ಲಿ ಸಾಗಬೇಕು. ಶಿಕ್ಷಣದಿಂದ ಬದುಕು ಕಂಡುಕೊಳ್ಳಬೇಕು: ಕ್ಷೇತ್ರ ಶಿಕ್ಷಣಾಧಿಕಾರಿ ಉಮಾದೇವಿ

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಪಟ್ಟಣದ ಸರ್ಕಾರಿ ನೌಕರರ ಭವನದಲ್ಲಿ ಕರ್ನಾಟಕ ರಾಜ್ಯ ಎಸ್ಸಿ, ಎಸ್‌ಟಿ ಪ್ರಾಥಮಿಕ ಹಾಗೂ ಮಾಧ್ಯಮಿಕ ಶಾಲಾ ಶಿಕ್ಷಕರ ಕ್ಷೇಮಾಭಿವೃದ್ಧಿ ಸಂಘದ ವತಿಯಿಂದ ಎಸ್ಸೆಸ್ಸೆಲ್ಸಿ ಹಾಗೂ ಪಿಯುಸಿ ಪರೀಕ್ಷೆಯಲ್ಲಿ ಹೆಚ್ಚು ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ಶನಿವಾರ ಏರ್ಪಡಿಸಿದ್ದ ಸನ್ಮಾನ ಮಾರಂಭ ಉದ್ಘಾಟಿಸಿ ಮಾತನಾಡಿ, ಪೋಷಕರು ತಮ್ಮ ಮಕ್ಕಳ ವಿದ್ಯಾಭ್ಯಾಸಕ್ಕೆ ಹೆಚ್ಚಿನ ಗಮನ ನೀಡಬೇಕು ಎಂದು ಹೇಳಿದರು.    ಪೊಲೀಸ್‌ ಸರ್ಕಲ್‌ ಇನ್ಸ್‌ಪೆಕ್ಟರ್‌ ರಾಘವೇಂದ್ರ ಪ್ರಕಾಶ್‌ ಮಾತನಾಡಿ, ವಿದ್ಯಾರ್ಥಿಗಳು ಜೀವನದಲ್ಲಿ ಶಿಸ್ತು ಮುಖ್ಯ ಪಾತ್ರ ವಹಿಸುತ್ತದೆ. ಶಿಸ್ತುಬದ್ಧ ಜೀವನದಿಂದ ಮಾತ್ರ ಶಾಧನೆ ಸಾಧ್ಯವಾಗುತ್ತದೆ. ವಿದ್ಯಾರ್ಥಿಗಳು ತಮ್ಮದೇ ಆದ ಸಾಧನೆಯ ಮೂಲಕ ಹೆತ್ತವರಿಗೆ ಸಂತೋಷ ಹಾಗೂ ಹೆಸರು ತಂದುಕೊಡಬೇಕು ಎಂದು ಹೇಳಿದರು.  ತಾಲ್ಲೂಕು ಪಂಚಾಯಿತಿ ಅಧ್ಯಕ್ಷ ಎಸ್‌.ಆನಂದ್‌, ಡಾ. ದಿವಾಕರ್‌, ಸಂಘದ ಜಿಲ್ಲಾಧ್ಯಕ್ಷ ರಾಮಾಂಜಿ, ತಾಲ್ಲೂಕು ಘಟಕದ ಅಧ್ಯಕ್ಷ  ಹನುಮಪ್ಪ, ಬಿಆರ್‌ಸಿ ಸಂಯೋಜಕಿ ವಸಂತ ಸಮರಂಭದಲ್ಲಿ ಮಾತನಾಡಿದರು. ತೋಟಗಾರಿಕಾ ಇಲಾಖೆಯಿಂದ ವಿದ್ಯಾರ್ಥಿಗಳಿಗೆ ಗಿಡಗಳನ್ನು ವಿತರಿಸಲಾಯಿತು.  ಈ ಸಂದರ್ಭದಲ್ಲಿ ಎಸ್ಸಿ, ಎಸ್‌ಟಿ ಸಮುದಾಯಕ್ಕೆ ಸೇರಿದ 30 ಪ್ರತಿಭಾವಂತ ವಿದ್ಯಾರ್ಥಿಗಳನ್ನು ಸನ್ಮಾನಿಸಲಾಯಿತು.   ಉಪನ್ಯಾಸಕ ಜಿ.ಕೆ.ನಾರಾಯಣಸ್ವಾಮಿ, ತೋಟಗಾರಿಕೆ ಇಲಾಖೆಯ ಸಹಾಯಕ ನಿರ್ದೇಶಕ ಶ್ರೀನಿವಾಸ್‌, ಶಿವಕುಮಾರ್‌, ಶಿಕ್ಷಕರಾದ ಕೆ.ಎನ್‌.ರಾಮಚಂದ್ರ, ಆದಿಲಕ್ಷ್ಮಮ್ಮ, ಮುರಳಿಬಾಬು, ಜಿ.ಎಂ.ಶ್ರೀನಿವಾಸಲು ಇದ್ದರು.