ಶ್ರೀನಿವಾಸಪುರ: ಹಾಲು ಉತ್ಪಾದಕರು ಕಡ್ಡಾಯವಾಗಿ ರಾಸು ವಿಮೆ ಮಾಡಿಸಬೇಕು : ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌

ವರದಿ : ಶಬ್ಬೀರ್ ಅಹ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಹಾಲು ಉತ್ಪಾದಕರು  ಕಡ್ಡಾಯವಾಗಿ ರಾಸು ವಿಮೆ ಮಾಡಿಸಬೇಕು ಎಂದು ಕೋಚಿಮುಲ್‌ ನಿರ್ದೇಶಕ ಎನ್‌.ಹನುಮೇಶ್‌ ಹೇಳಿದರು.
  ಪಟ್ಟಣದ ಕೋಚಿಮುಲ್‌ ಕ್ಯಾಂಪ್‌ ಕಚೇರಿ ಸಭಾಂಗಣದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ, ಆಕಸ್ಮಿಕವಾಗಿ ಹಸು ಮರಣಹೊಂದಿದ್ದ ಹಾಲು ಉತ್ಪಾದಕರಿಗೆ  ವಿಮಾ ಹಣದ ಚೆಕ್‌ ವಿತರಿಸಿ ಮಾತನಾಡಿ, ವಿವಿಧ ಕಾರಣಗಳಿಂದ ಹಸು ಮರಣ ಹೊಂದಿದ್ದ ಹಾಲು ಉತ್ಪಾದಕರಿಗೆ ರೂ.6 ಲಕ್ಷ ವಿಮಾ ಹಣ ವಿತರಿಸಲಾಗಿದೆ ಎಂದು ಹೇಳಿದರು.    ಪ್ರಸಕ್ತ ಸಾಲಿನ ಮಾರ್ಚ್‌ನಿಂದ ಜುಲೈ ವರೆಗೆ ಸರ್ಕಾರದಿಂದ ಬರಬೇಕಾಗಿದ್ದ ಹಾಲಿನ ಪ್ರೋತ್ಸಾಹ ಧನವನ್ನು ಹಾಲು ಉತ್ಪಾದಕರ ಬ್ಯಾಂಕ್‌ ಖಾತೆಗೆ ಜಮಾ ಮಾಡಲಾಗಿದೆ. ಹಾಲು ಉತ್ಪಾದಕರು ಉತ್ತಮ ಗುಣಮಟ್ಟದ ಹಾಲು ಉತ್ಪಾದನೆ ಮಾಡಲು ಪೂರಕವಾದ ಕ್ರಮಗಳನ್ನು ಕೈಗೊಳ್ಳಬೇಕು. ಪಶು ಆಹಾರ ಹಾಗೂ ಆರೋಗ್ಯಕ್ಕೆ ಹೆಚ್ಚಿನ ಆದ್ಯತೆ ನೀಡಬೇಕು ಎಂದು ಹೇಳಿದರು.  ಶಿಬಿರ ಕಚೇರಿಯ ಉಪ ವ್ಯವಸ್ಥಾಪಕ ಡಾ. ಎ.ಎನ್.ಶ್ರೀಕಾಂತ್‌, ಸಹಾಯಕ ವ್ಯವಸ್ಥಾಪಕ ಕೆ.ಎಸ್‌.ನರಸಿಂಹಯ್ಯ, ವಿಸ್ತರಣಾಧಿಕಾರಿಗಳಾದ ಪಿ.ಕೆ.ನರಸಿಂಹರಾಜು, ಎನ್‌.ದೇವರಾಜ್‌, ಎನ್‌.ಗಣೇಶ್‌, ಎಸ್‌.ವಿನಾಯಕ, ಎ.ಎನ್‌.ಶ್ರೀನಿವಾಸ್‌ ಇದ್ದರು.