ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ

ಶ್ರೀನಿವಾಸಪುರ: ಹಾಲು ಉತ್ಪಾದಕರು ಗುಣಮಟ್ಟದ ಹಾಲು ಉತ್ಪಾದನೆ ಮಾಡುವುದರ ಮೂಲಕ ಹೆಚ್ಚಿನ ಆರ್ಥಿಕ ಲಾಭ ಪಡೆಯಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು. ತಾಲ್ಲೂಕಿನ ಲಕ್ಷ್ಮೀಪುರ ಗ್ರಾಮದಲ್ಲಿ ಶುಕ್ರವಾರ ಏರ್ಪಡಿಸಿದ್ದ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಕಟ್ಟಡ ಉದ್ಘಾಟಿಸಿ ಮಾತನಾಡಿ, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘ ಬಿಎಂಸಿ ಕೇಂದ್ರವಾಗಿದ್ದು, ಪ್ರತಿ ದಿನ 2500 ಲೀಟರ್ ಹಾಲು ಶೇಖರಣೆ ಮಾಡುತ್ತಿದೆ ಎಂದು ಹೇಳಿದರು. ಕೋಚಿಮುಲ್ ಉಪ ಕಚೇರಿಯ ಉಪ ವ್ಯವಸ್ಥಾಪಕ ಡಾ. ವಿ.ಎನ್.ಶ್ರೀಕಾಂತ್ ಮಾತನಾಡಿ, ಹಾಲು ಉತ್ಪಾದಕರ ಸಹಕಾರ ಸಂಘಗಳು, ಹಾಲು ಉತ್ಪಾದಕರ ಹಿತ ರಕ್ಷಣೆಗೆ ಪೂರಕವಾಗಿ ಕಾರ್ಯನಿರ್ವಹಿಸಬೇಕು ಎಂದು ಹೇಳಿದರು. ಪಶು ವೈದ್ಯಾಧಿಕಾರಿ ಡಾ. ವಿನೇಶ್ ಮಾತನಾಡಿ, ಕೆಚ್ಚಲು ಬಾವು ಹಾಗೂ ಕಾಲು ಬಾಯಿ ಜ್ವರ ಬರದಂತೆ ಮುನ್ನೆಚ್ಚರಿಕೆ ವಹಿಸಬೇಕು. ಮೂಢನಂಬಿಕೆ ಬಿಟ್ಟು ಹಸುಗಳಿಗೆ ರೋಗ ನಿರೋಧಕ ಲಸಿಕೆ ಕೊಡಿಸಬೇಕು ಎಂದು ಹೇಳಿದರು. ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಜಿ.ತಿಮ್ಮಯ್ಯ, ಸಹಾಯಕ ವ್ಯವಸ್ಥಾಪಕ ಕೆ.ಎಸ್.ನರಸಿಂಹಯ್ಯ, ವಿಸ್ತರಣಾಧಿಕಾರಿಗಳಾದ ಎಂ.ಜಿ.ಶ್ರೀನಿವಾಸ್, ಎನ್.ದೇವರಾಜ್, ವೆಂಕಟರವಣಪ್ಪ ಇದ್ದರು.