ಸಂತ ಮೇರಿಸ್ ಪ.ಪೂ.ಕಾಲೇಜು ದ್ವೀತಿಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.97.80 ಫಲಿತಾಂಶ ಪಡೆದು ಉತ್ತಮ ಸಾಧನೆ

ಸಂತ ಮೇರಿಸ್ ಪ.ಪೂ.ಕಾಲೇಜು ದ್ವೀತಿಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಶೇ.97.80 ಫಲಿತಾಂಶ ಪಡೆದು ಉತ್ತಮ ಸಾಧನೆ

 


ಕುಂದಾಪುರ, ಎ.16: 2018 – 2019 ಸಾಲಿನ ದ್ವೀತಿಯ ಪಿ.ಯು.ಸಿ. ವಾರ್ಷಿಕ ಪರೀಕ್ಷೆಯಲ್ಲಿ ಸಂತ ಮೇರಿಸ್ ಪದವಿ ಪೂರ್ವ ಕಾಲೇಜಿಗೆ ಶೇ.97.80 ಫಲಿತಾಂಶ ಪಡೆದು ಉತ್ತಮ ಸಾಧನೆ ಗೈಯ್ದಿದೆ. ಈ ಕಾಲೇಜಿನಿಂದ ಒಟ್ಟು 91 ವಿದ್ಯಾರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇದರಲ್ಲಿ 23 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. 55 ವಿದ್ಯಾರ್ಥಿಗಳು ಪ್ರಥಮ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.
ಕು. ದಿವ್ಯಾ ನತಾಷ ಡಿಮೆಲ್ಲೊ ವಿಜ್ಞಾನ ವಿಭಾಗದಲ್ಲಿ 585 ಅಂಕದೊಂದಿಗೆ ಕಾಲೇಜಿನಲ್ಲಿ ಪ್ರಥಮ ಸ್ಥಾನ ಗಿಟ್ಟಿಸಿಕೊಂಡಿದ್ದಾಳೆ. ವಿಜ್ಞಾನ ವಿಭಾಗದ 8 ವಿದ್ಯಾರ್ಥಿಗಳು ಹಾಗೂ ವಾಣಿಜ್ಯ ವಿಭಾದಲ್ಲಿ 15 ವಿದ್ಯಾರ್ಥಿಗಳು ವಿಶಿಷ್ಟ ಶ್ರೇಣಿಯಲ್ಲಿ ತೇರ್ಗಡೆ ಹೊಂದಿದ್ದಾರೆಂದು ಕಾಲೇಜಿನ ಪ್ರಾಂಶುಪಾಲರಾದ ವಂ|ಫಾ| ಪ್ರವೀಣ್ ಅಮ್ರತ್ ಮಾರ್ಟಿಸ್ ಅಧಿಕ್ರತವಾಗಿ ತಿಳಿಸಿದ್ದಾರೆ. ಸಂತ ಮೇರಿಸ್ ವಿದ್ಯಾ ಸಂಸ್ಥೆಯ ಜಂಟಿ ಕಾರ್ಯದರ್ಶಿ ಕುಂದಾಪುರ ರೋಜರಿ ಮಾತಾ ಇಗರ್ಜಿಯ ಪ್ರಧಾನ ಧರ್ಮಗುರು ಅ|ವಂ|ಫಾ ಸ್ಟ್ಯಾನಿ ತಾವ್ರೊ ಎಲ್ಲರನ್ನು ಅಭಿನಂದಿಸಿದ್ದಾರೆ.

 

ವಿಶಿಷ್ಟ ಶ್ರೇಣಿಯ ಸಾಧಕರು