ಸರಕಾರಿ ಪ್ರೌಢಶಾಲೆ ಬಸ್ರೂರು – ವಿದ್ಯಾರ್ಥಿಗಳಿಗೆ ಸೈಕಲ್ ಹಾಗೂ ಸ್ಯಾಂಡಲ್ ವಿತರಣೆ
ಕುಂದಾಪುರ : ಇಲ್ಲಿನ ಬಸ್ರೂರು ಸರ್ಕಾರಿ ಪ್ರೌಢಶಾಲೆಯಲ್ಲಿ ಜಿಲ್ಲಾ ಪಂಚಾಯತ್ ಸದಸ್ಯೆ ಲಕ್ಷ್ಮೀ ಮಂಜು ಬಿಲ್ಲವ ವಿದ್ಯಾರ್ಥಿಗಳಿಗೆ ಸೈಕಲ್ ಹಾಗೂ ಸ್ಯಾಂಡಲ್ ವಿತರಿಸಿದರು. ಶಾಲಾ ಮುಖ್ಯೋಪಾಧ್ಯಾಯಿನಿ ಜ್ಯೋತಿ ವಿದ್ಯಾರ್ಥಿಗಳಿಗೆ ರಸ್ತೆ ಸುರಕ್ಷತೆ ಬಗ್ಗೆ ಮಾಹಿತಿ ನೀಡಿದರು.. ಕಾರ್ಯಕ್ರಮದಲ್ಲಿ ತಾಲ್ಲೂಕು ಪಂಚಾಯತ್ ಉಪಾಧ್ಯಕ್ಷ ಕಿಶನ್ ಹೆಗ್ಡೆ, ಎಸ್.ಡಿ.ಎಮ್.ಸಿ. ಸದಸ್ಯರು, ಪೋಷಕರು ಹಾಗೂ ಶಿಕ್ಷಕ ಬಳಗ ಉಪಸ್ಥಿತರಿದ್ದರು.