ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲು ಕರೆ

ವರದಿ: ಶಬ್ಬಿರ್ ಅಹ್ಮದ್,ಶ್ರೀನಿವಾಸಪುರ

 

 

ಸರ್ಕಾರಿ ನೌಕರರು ಕ್ರೀಡಾಕೂಟದಲ್ಲಿ ಭಾಗವಹಿಸಲು ಕರೆ

 

 

ಕೋಲಾರ ಡಿ.10 : ಜಿಲ್ಲಾ ಸರ್ಕಾರಿ ನೌಕರರ ಕ್ರೀಡಾಕೂಟವು ನಗರದ ವಿಶ್ವೇಶ್ವರಯ್ಯ ಕ್ರೀಡಾಂಗಣದಲ್ಲಿ ಡಿಸೆಂಬರ್ 20 ಮತ್ತು 21 ರಂದು ನಡೆಯಲಿದ್ದು, ಕ್ರೀಡಾ ಸ್ಪರ್ಧೆಗಳಲ್ಲಿ ಸ್ಪರ್ಧಾ ಮನೋಭಾವದಿಂದ ಸರ್ಕಾರಿ ನೌಕರರು ಭಾಗವಹಿಸಬೇಕು ಎಂದು ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಕೆ.ಬಿ. ಅಶೋಕ್ ತಿಳಿಸಿದರು.
ನೌಕರರ ಭವನದಲ್ಲಿಂದು ನಡೆದ ಸಭೆಯಲ್ಲಿ ಅರಣ್ಯ ಇಲಾಖೆಯ ಕಾರ್ಯಕಾರಿ ಸಮಿತಿ ಸದಸ್ಯರಾದ ಬಿ. ಮಂಜುನಾಥ್ ರವರನ್ನು ಜಿಲ್ಲಾ ಉಪಾಧ್ಯಕ್ಷರನ್ನಾಗಿ ನೇಮಕ ಪತ್ರ ನೀಡಿ ಅವರು ಮಾತನಾಡಿದರು.
ಕ್ರೀಡಾ ಕೂಟದಲ್ಲಿ ಭಾಗವಹಿಸಲಿರುವ ಕ್ರೀಡಾಪಟುಗಳು ಇಲಾಖೆಯ ಮುಖ್ಯಸ್ಥರಿಂದ ಅಧಿಕೃತ ಗುರುತಿನ ಚೀಟಿ ಸಲ್ಲಿಸಿ ಭಾಗವಹಿಸಬೇಕು. ಜಿಲ್ಲೆಯ ಎಲ್ಲಾ ಇಲಾಖೆಗಳ ಸರ್ಕಾರಿ ನೌಕರರು ಭಾಗವಹಿಸುವ ಮೂಲಕ ಕ್ರೀಡಾಕೂಟವನ್ನು ಯಶಸ್ವಿಗೊಳಿಸುವಂತೆ ಅವರು ಮನವಿ ಮಾಡಿದರು.
ಸರ್ಕಾರಿ ನೌಕರರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರು ಸಂಘದ ಸಭೆಗಳಲ್ಲಿ ಕಡ್ಡಾಯವಾಗಿ ಭಾಗವಹಿಸಿ ಸಲಹೆ ಸೂಚನೆ ನೀಡಬೇಕು. ಸಂಘದ ಇತಿಮಿತಿಯಲ್ಲಿ ಕಾರ್ಯನಿರ್ವಹಿಸುವಂತಾಗಬೇಕು. ಸಂಘ ವಿರೋಧಿ ಚಟುವಟಿಕೆಗಳಲ್ಲಿ ತೊಡಗಿದರೆ ಕ್ರಮ ಜರುಗಿಸಲಾಗುವುದು ಎಂದು ಎಚ್ಚರಿಸಿದರು.
ಈ ಸಭೆಯಲ್ಲಿ ಗೌರವಾಧ್ಯಕ್ಷ ಆರ್. ಅನಿಲ್ ಕುಮಾರ್, ಉಪಾಧ್ಯಕ್ಷರುಗಳಾದ ಎಸ್.ನಂದೀಶ್ ಕುಮಾರ್, ಜಿ. ಶ್ರೀನಿವಾಸ್, ಕಾರ್ಯದರ್ಶಿ ವಿ. ಮುರಳಿಮೋಹನ್, ಆಂತರಿಕ ಲೆಕ್ಕಪರಿಶೋಧಕ ಅನಿಲ್, ಕಾರ್ಯಕಾರಿ ಸಮಿತಿ ಸದಸ್ಯ ಬಿ.ಆನಂದ್, ಶಿಕ್ಷಕರ ಸಂಘದ ತಾಲ್ಲೂಕು ಕಾರ್ಯದರ್ಶಿ ಸಿ.ನಾರಾಯಣಸ್ವಾಮಿ ಮತ್ತಿತರರು ಉಪಸ್ಥಿತರಿದ್ದರು.