ವರದಿ ಶಬ್ಬೀರ್ ಅಹಮ್ಮದ್ ಶ್ರೀನಿವಾಸಪುರ
ಸ್ವಚ್ಛತೆ ಕಾಪಾಡಿಕೊಳ್ಳವ ಮೂಲಕ ಪ್ರತಿಯೊಬ್ಬರೂ ಆರೋಗ್ಯದ ಬಗ್ಗೆ ಕಾಳಜಿ ವಹಿಸಿ – ಸಿ ಎಸ್ ವೆಂಕಟೇಶ್
ಕೋಲಾರ: ಪ್ರತಿಯೊಬ್ಬರೂ ವೈಯಕ್ತಿಕ ಸ್ವಚ್ಛತೆ ಕಾಪಾಡಿಕೊಳ್ಳುವ ಮೂಲಕ ಆರೋಗ್ಯದ ಬಗ್ಗೆ ಕಾಳಜಿ ವಹಿಸಬೇಕೆಂದು ಜಿಲ್ಲಾ ಪಂಚಾಯಿತಿ ಅಧ್ಯಕ್ಷರಾದ ಸಿ ಎಸ್ ವೆಂಕಟೇಶ್ ಅವರು ತಿಳಿಸಿದರು.
ಇಂದು ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಹಾಗೂ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಹಾಗೂ ರಾಷ್ಟ್ರೀಯ ಆರೋಗ್ಯ ಅಭಿಯಾನದ ಸಹಯೋಗದಲ್ಲಿ ಮುಳಬಾಗಿಲು ತಾಲ್ಲೂಕಿನ ತಾಯಲೂರು ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಹಮ್ಮಿಕೊಂಡಿದ್ದ ಆರೋಗ್ಯ ಮೇಳವನ್ನು ಉದ್ಘಾಟಿಸಿ ಅವರು ಮಾತನಾಡಿದರು.
ಗ್ರಾಮೀಣ ಪ್ರದೇಶದ ವೃದ್ಧರಿಗೆ, ಮಹಿಳೆಯರಿಗೆ ಅನುಕೂಲವಾಗಬೇಕೆಂಬ ಉದ್ದೇಶದಿಂದ ಅರೋಗ್ಯ ಶಿಬಿರಗಳನ್ನು ಹೋಬಳಿಯ ಮಟ್ಟದಲ್ಲಿ ಇಲಾಖೆಯ ವತಿಯಿಂದ ಹಮ್ಮಿಕೊಳ್ಳಲಾಗಿದೆ. ಅರೋಗ್ಯ ಶಿಬಿರಗಳನ್ನು ನಾಗರಿಕರು ಸದುಪಯೋಗ ಪಡೆದುಕೊಳ್ಳಬೇಕು. ಇತ್ತೀಚೆಗೆ ಸುದ್ದಿಯಲ್ಲಿರುವ ಕೊರೋನ ಸೊಂಕಿನ ಬಗ್ಗೆ ಸಾರ್ವಜನಿಕರು ಆತಂಕ ಹೊಂದಿದ್ದು, ಆದರೆ ಜಿಲ್ಲೆಯ ಜನರು ಯಾವುದೇ ಭಯ ಪಡುವ ಅಗತ್ಯವಿಲ್ಲ ಹೀಗಾಗಲೇ ಜಿಲ್ಲಾ ಆಸ್ಪತ್ರೆಯಲ್ಲಿ 5 ಹಾಸಿಗೆಗಳನ್ನು ಇಂತಹ ತುರ್ತು ಕಾಯಿಲೆಗಳಿಗೆ ಕಾಯ್ದಿರಿಸಲಾಗಿದೆ ಎಂದು ತಿಳಿಸಿದರು.
ತಾಯಲೂರು ಪ್ರಾಥಮಿಕ ಆರೋಗ್ಯ ಕೇಂದ್ರವನ್ನು ಮೇಲ್ದರ್ಜೆಗೆ ಏರಿಸಲು ಸಚಿವರಿಗೆ ಶಿಫಾರಸ್ಸು ಮಾಡುತ್ತೇವೆ. ಶಾಲಾ ಕಟ್ಟಡ ಶಿಥಿಲಗೊಂಡ ಬಗ್ಗೆ ಸರ್ಕಾರದ ಗಮನಕ್ಕೆ ತಂದು ಸಮಸ್ಯೆ ಪರಿಹಾರಕ್ಕೆ ಕ್ರಮ ಕೈಗೊಳ್ಳಲಾಗುವುದು. ಆರೋಗ್ಯ ಕೇಂದ್ರದಲ್ಲಿ ವೈದ್ಯರ ಕೊರತೆ ನೀಗಿಸಲು ನಾಳೆ ಯಿಂದಲೇ ಒಬ್ಬ ವೈದ್ಯರನ್ನು ನಿಯೋಜಿಸಲಾಗುವುದು ಎಂದ ಅವರು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಅಧಿಕಾರಿಗಳಾದ ವಿಜಯ ಕುಮಾರ್ ರವರ ಕಾರ್ಯವೈಖರಿಗೆ ಮೆಚ್ಚುಗೆ ವ್ಯಕ್ತಪಡಿಸಿದರು.
ತಾಲ್ಲೂಕಿನ ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ಬಂದರೆ ವಿಳಂಬ ಮಾಡದೆ ಸಮಸ್ಯೆಯ ನಿವಾರಣೆಗೆ ಕ್ರಮ ಕೈಗೊಳ್ಳಬೇಕು ಎಂದು ಮುಳಬಾಗಿಲು ತಾಲ್ಲೂಕು ಕಾರ್ಯನಿರ್ವಾಹಕ ಅಧಿಕಾರಿ ಬಾಬು ಅವರಿಗೆ ಸೂಚಿಸಿದರು. ಮಾರ್ಚ್ 07 ರಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯಲ್ಲಿ ಉದ್ಯೋಗ ಮೇಳ ಅಯೋಜಿಸಿದ್ದು ಇದರ ಸದುಪಯೋಗವನ್ನು ಪಡೆದುಕೊಳ್ಳಬೇಕು ಎಂದು ತಿಳಿಸಿದರು.
ಜಿಲ್ಲೆಯ ಯಾವುದೇ ಗ್ರಾಮದಲ್ಲಿ ಸಮಸ್ಯೆ ಇದ್ದರೂ ಜಿಲ್ಲಾಡಳಿತ, ಜಿಲ್ಲಾ ಪಂಚಾಯಿತಿ ಹಾಗೂ ತಾಲ್ಲೂಕು ಪಂಚಾಯಿತಿಯು ಸದಾ ಕಾಲ ಸಾರ್ವಜನಿಕರ ಶ್ರೇಯೋಭಿವೃದ್ಧಿಗೆ ಶ್ರಮಿಸುತ್ತಿದೆ ಎಂದು ತಿಳಿಸಿದರು.
ಮುಳಬಾಗಿಲು ತಾಲ್ಲೂಕು ಪಂಚಾಯಿತಿ ಅಧ್ಯಕ್ಷರಾದ ಎ ವಿ ಶ್ರೀನಿವಾಸ್ ಅವರು ಮಾತನಾಡಿ, ಆರೋಗ್ಯ ಶಿಬಿರವನ್ನು ನಾಗರಿಕರು ಸಮರ್ಪಕವಾಗಿ ಸದ್ಬಳಕೆ ಮಾಡಿಕೊಳ್ಳಬೇಕು. ಗ್ರಾಮಗಳು ಸ್ವಚ್ಛತೆಯಿಂದ ಇದ್ದರೆ ಆರೋಗ್ಯವು ಸರಿಯಾಗಿ ಇರುತ್ತದೆ. ಆರೋಗ್ಯ ಶಿಬಿರಗಳನ್ನು ಮುಂದಿನ ದಿನಗಳಲ್ಲಿ ತಾಲ್ಲೂಕಿನ ಪ್ರತಿ ಗ್ರಾಮದಲ್ಲಿ ಆಯೋಜಿಸಬೇಕು ಇದರ ಬಗ್ಗೆ ಜಿಲ್ಲಾ ಉಸ್ತುವಾರಿ ಸಚಿವರೊಂದಿಗೆ ಚರ್ಚಿಸುತ್ತೇನೆ ಎಂದು ತಿಳಿಸಿದರು.
ಜಿಲ್ಲಾ ಪಂಚಾಯತಿ ಸದಸ್ಯರಾದ ಅರವಿಂದ್ ಅವರು ಮಾತನಾಡಿ, ಆರೋಗ್ಯದ ಬಗ್ಗೆ ಅರಿವು ಮೂಡಿಸುವ ಉದ್ದೇಶದಿಂದ ಸರ್ಕಾರದ ವತಿಯಿಂದ ಈ ಆರೋಗ್ಯ ಶಿಬಿರಗಳು ನಡೆಯುತ್ತಿವೆ. ಯುವಕರು ಹೆಚ್ಚಿನ ರೀತಿಯಲ್ಲಿ ದುಚ್ಚಟಗಳಿಗೆ ಬಲಿಯಾಗುತ್ತಿದ್ದಾರೆ ಹಾಗಾಗಿ ಪೆÇೀಷಕರು ತಮ್ಮ ಮಕ್ಕಳ ಬಗ್ಗೆ ಗಮನಹರಿಸಬೇಕು. ವ್ಯಾಯಾಮ, ದೈಹಿಕ ಕಸರತ್ತುಗಳನ್ನು ಮಾಡುವ ಮೂಲಕ ಯುವಕರು ಆರೋಗ್ಯವನ್ನು ಕಾಪಾಡಿಕೊಳ್ಳುಬೇಕು. ಗಡಿ ಭಾಗದಲ್ಲಿ ಹಾಗೂ ಕುಗ್ರಾಮಗಳಲ್ಲಿ ಇನ್ನೂ ಹೆಚ್ಚಿನ ರೀತಿಯಲ್ಲಿ ಅರೋಗ್ಯ ಮೇಳವನ್ನು ಆಯೋಜಿಸಬೇಕೆಂದು ಆರೋಗ್ಯ ಇಲಾಖೆಗೆ ಮನವಿ ಮಾಡಿದರು.
ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆ ಅಧಿಕಾರಿಗಳಾದ ವಿಜಯ್ ಕುಮಾರ್ ಅವರು ಮಾತನಾಡಿ, 3 ವರ್ಷಗಳ ನಂತರ ಪುನ: ಅರೋಗ್ಯ ಮೇಳವನ್ನು ಆಯೋಜಿಸಲಾಗಿದೆ, ಈ ಶಿಬಿರದಲ್ಲಿ ನುರಿತ ತಜ್ಞರಿಂದ ಅರೋಗ್ಯ ತಪಾಸಣೆಯನ್ನು ನಡೆಸಲಾಗುತ್ತಿದೆ. ಮಹಿಳೆಯರ ಮಕ್ಕಳ ಸಮಸ್ಯೆಗಳಿಗೆ ಸಂಬಂಧಿಸಿದ ವೈದ್ಯರು ಭಾಗವಹಿಸಿದ್ದಾರೆ ಎಂದು ಮಾಹಿತಿ ನೀಡಿದರು. ಈ ಅರೋಗ್ಯ ಶಿಬಿರದಲ್ಲಿ ಔಷಧಿಗಳನ್ನು ನೀಡಲಾಗುತ್ತಿದ್ದು ಹೆಚ್ಚಿನ ಚಿಕಿತ್ಸೆಗಾಗಿ ತಾಲ್ಲೂಕು ಅಥವಾ ಜಿಲ್ಲಾ ಆಸ್ಪತ್ರೆಯಲ್ಲಿ ತಪಾಸಣೆ ಮಾಡಿಕೊಳ್ಳಬೇಕೆಂದು ಸಾರ್ವಜನಿಕರಲ್ಲಿ ಮನವಿ ಮಾಡಿದರು. ಸೇವಾ ಸಿಂಧು ಕೇಂದ್ರ ಮೂಲಕ ಆಯುμÁ್ಮನ್ ಭಾರತ್ ಕಾರ್ಡ್‍ಗಳನ್ನು ಸ್ಥಳದಲ್ಲಿಯೇ ನೀಡಲಾಗುತ್ತಿದೆ ಎಂದು ತಿಳಿಸಿದರು.
ಆರೋಗ್ಯ ಶಿಬಿರದಲ್ಲಿ ಇಲಾಖೆಯಿಂದ ವಿವಿಧ ರೋಗಗಳು ಹರಡುವ ಬಗ್ಗೆ ವಿಶೇಷವಾದ ಭಿತ್ತಿ ಪತ್ರಗಳ ಮೂಲಕ ಸಾರ್ವಜನಿಕರಿಗೆ ಮಾಹಿತಿ ನೀಡಿದರು. ಪೆÇೀಷಣ್ ಅಭಿಯಾನದ ಮೂಲಕ ಸ್ಟಾಲ್‍ನ್ನು ಸ್ಥಾಪಿಸಿ ನಾಗರಿಕರಿಗೆ ಪೌಷ್ಟಿಕ ಆಹಾರದ ಬಗ್ಗೆ ಮಾಹಿತಿ ನೀಡಿದರು.
ಇದೇ ಸಂದರ್ಭದಲ್ಲಿ ಮುಳಬಾಗಿಲು ತಾಲ್ಲೂಕು ಪಂಚಾಯಿತಿ ಉಪಾಧ್ಯಕ್ಷರಾದ ಲಕ್ಷ್ಮೀನಾರಾಯಣ, ಗ್ರಾಮ ಪಂಚಾಯಿತಿ ಅಧ್ಯಕ್ಷೆ ಪದ್ಮಮ್ಮ ನಾಗಾರಾಜು, ತಾಲ್ಲೂಕು ಪಂಚಾಯತಿ ಕಾರ್ಯನಿರ್ವಹಣಾಧಿಕಾರಿಗಳಾದ ಬಾಬು, ಮುಖಂಡರಾದ ರಮೇಶ್, ಶಂಕರ್, ಅಮರೇಶ್, ಅಪ್ಪಿ, ಸುಬ್ರಮಣಿ, ಹಾಗೂ ಆರೋಗ್ಯ ಇಲಾಖೆ ಸಿಬ್ಬಂದಿ, ಅಶಾ ಕಾರ್ಯಕರ್ತರು ಸೇರಿದಂತೆ ಸಾರ್ವಜನಿಕರು ಉಪಸ್ಥಿತರಿದ್ದರು.