ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ
ಶ್ರೀನಿವಾಸಪುರ: ಹಾಲು ಒಕ್ಕೂಟದ ವ್ಯಾಪ್ತಿಯ ಹಾಲು ಉತ್ಪಾದಕರ ಸಹಕಾರ ಸಂಘಗಳಿಗೆ ಹಾಕುವುದರ ಮೂಲಕ ವಿವಿಧ ಸೌಲಭ್ಯಗಳನ್ನು ಪಡೆದುಕೊಳ್ಳಬೇಕು ಎಂದು ಕೋಚಿಮುಲ್ ನಿರ್ದೇಶಕ ಎನ್.ಹನುಮೇಶ್ ಹೇಳಿದರು.
ತಾಲ್ಲೂಕಿನ ಮರಿಪಲ್ಲಿ ಗ್ರಾಮದಲ್ಲಿ ಹಾಲು ಉತ್ಪಾದಕರ ಸಹಕಾರ ಸಂಘದ ನೂತನ ಸಹಕಾರ ಸಂಘವನ್ನು ಉದ್ಘಾಟಿಸಿ ಮಾತನಾಡಿ, ಕೆಲವು ಹಾಲು ಉತ್ಪಾದಕರು ತಾವು ಉತ್ಪಾದಿಸಿದ ಹಾಲನ್ನು ಖಾಸಗಿ ಡೇರಿಗಳಿಗೆ ಹಾಕುವುದುದರ ಮೂಲಕ ಸೌಲಭ್ಯಗಳಿಂದ ವಂಚಿತರಾಗುತ್ತಿದ್ದಾರೆ. ಸಹಕಾರ ಸಂಘದ ಆಡಳಿತ ಮಂಡಳಿ ಸದಸ್ಯರು ಹಾಗೂ ಸಿಬ್ಬಂದಿ ಹಾಲು ಉತ್ಪಾದಕರಿಗೆ ಸರಿಯಾದ ಮಾರ್ಗದರ್ಶನ ಮಾಡಬೇಕು ಎಂದು ಹೇಳಿದರು. ಕ್ಯಾಂಪ್ಕಚೇರಿಯ ಉಪ ವ್ಯವಸ್ಥಾಪಕ ಡಾ.ವಿ.ಎನ್.ಶ್ರೀಕಾಂತ್ ಮಾತನಾಡಿದರು. ಶಿಬಿರ ಕಚೇರಿ ಸಹಾಯಕ ವ್ಯವಸ್ಥಾಪಕ ಕೆ.ಎಸ್.ನರಸಿಂಹಯ್ಯ, ವಿಸ್ತರಣಾಧಿಕಾರಿ ಎಂ.ಜಿ.ಶ್ರೀನಿವಾಸ್, ಸ್ಥಳೀಯ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಸುಬ್ಬರಾಯಪ್ಪ ಇದ್ದರು.