ಶ್ರೀನಿವಾಸಪುರ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ 100 ಹಾಸಿಗೆ ಸಾಮಥ್ರ್ಯದ ಕೊರೊನಾ ಚಿಕಿತ್ಸಾ ಕೇಂದ್ರ ತೆರೆಯಲಾಗುವುದು

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಹೊರವಲಯದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಯಲ್ಲಿ 100 ಹಾಸಿಗೆ ಸಾಮಥ್ರ್ಯದ ಕೊರೊನಾ ಚಿಕಿತ್ಸಾ ಕೇಂದ್ರ ತೆರೆಯಲಾಗುವುದು ಎಂದು ಉಪ ವಿಭಾಗಾಧಿಕಾರಿ ವಿ.ಸೋಮಶೇಖರ್ ಹೇಳಿದರು.
ತಾಲ್ಲೂಕಿನ ಚಲ್ದಿಗಾನಹಳ್ಳಿ ಗ್ರಾಮದ ಹೊರವಲಯದಲ್ಲಿನ ಕಿತ್ತೂರು ರಾಣಿ ಚೆನ್ನಮ್ಮ ಶಾಲೆಗೆ ಶನಿವಾರ ಅಧಿಕಾರಿಗಳೊಂದಿಗೆ ಭೇಟಿ ನೀಡಿ ಪರಿಶೀಲಿಸಿದ ಬಳಿಕ ಮಾತನಾಡಿ, ಜಿಲ್ಲೆಯಲ್ಲಿ ದಿನದಿಂದ ದಿನಕ್ಕೆ ಕೊರೊನಾ ಪ್ರಕರಣಗಳು ಹೆಚ್ಚುತ್ತಿದ್ದು, ಚಿಕಿತ್ಸಾ ಕೇಂದ್ರಗಳ ಮೇಲೆ ಹೆಚ್ಚಿನ ಒತ್ತಡ ಉಂಟಾಗಿದೆ. ಆದ್ದರಿಂದ ಹೆಚ್ಚಿನ ಸಂಖ್ಯೆಯ ರೋಗಿಗಳಿಗೆ ಚಿಕಿತ್ಸಾ ಸೌಲಭ್ಯ ಕಲ್ಪಿಸುವ ಉದ್ದೇಶದಿಂದ ನಿಗದಿತ ಸ್ಥಳಗಳಲ್ಲಿ ಹೊಸ ಕೊರೊನಾ ಚಿಕಿತ್ಸಾ ಕೇಂದ್ರಗಳನ್ನು ತೆರೆಯಲಾಗುತ್ತಿದೆ ಎಂದು ಹೇಳಿದರು.
ತಹಶೀಲ್ದಾರ್ ಎಸ್.ಎಂ.ಶ್ರೀನಿವಾಸ್, ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಎಸ್.ಆನಂದ್, ಕಂದಾಯ ನಿರೀಕ್ಷಕರಾದ ಬಿ.ವಿ.ಮುನಿರೆಡ್ಡಿ, ಗುರುರಾಜರಾವ್ ಇದ್ದರು
.