ಶ್ರೀನಿವಾಸಪುರ: ಸರ್ಕಾರ ಪಟ್ಟಣದ ಅಭಿವೃದ್ಧಿಗೆ ರೂ.15 ಕೋಟಿ ಮಂಜೂರು ಮಾಡಿ ವಾಪಸ್ ಪಡೆದ ಹಣವನ್ನು ಮತ್ತೆ ಮಂಜೂರೂ ಮಾಡಿ ; ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್

ವರದಿ: ಶಬ್ಬೀರ್ ಅಹಮ್ಮದ್, ಶ್ರೀನಿವಾಸಪುರ

ಶ್ರೀನಿವಾಸಪುರ: ಸರ್ಕಾರ ಪಟ್ಟಣದ ಅಭಿವೃದ್ಧಿಗೆ ರೂ.15 ಕೋಟಿ ಮಂಜೂರು ಮಾಡಿ ನಂತರ ವಾಪಸ್ ಪಡೆದಿರುವ ಹಣವನ್ನು ಮತ್ತೆ ಮಂಜೂರೂ ಮಾಡಿಸಬೇಕು ಎಂದು ಪುರಸಭಾಧ್ಯಕ್ಷೆ ಎಂ.ಎನ್.ಲಲಿತಾ ಶ್ರೀನಿವಾಸ್ ಉಪ ಮುಖ್ಯ ಮಂತ್ರಿ ಡಾ. ಅಶ್ವತ್ಥನಾರಾಯಣ್ ಅವರನ್ನು ಆಗ್ರಹಿಸಿದರು.
ಮಂಗಳವಾರ ಪಟ್ಟಣಕ್ಕೆ ಭೇಟಿ ನೀಡಿದ್ದ ಉಪ ಮುಖ್ಯ ಮಂತ್ರಿ ಡಾ.ಅಶ್ವತ್ಥನಾರಾಯಣ್ ಅವರನ್ನು ಭೇಟಿ ಮಾಡಿ ಮನವಿ ಪತ್ರ ನೀಡಿದ ಬಳಿಕ ಮಾತನಾಡಿ, ಪಟ್ಟಣದಲ್ಲಿ ಕುಡಿಯುವ ನೀರಿನ ಸಮಸ್ಯೆ ಇದೆ. ಹೊಸ ಬಡಾವಣೆಗಳನ್ನು ಅಭಿವೃದ್ಧಿಪಡಿಸಬೇಕಾಗಿದೆ. ಆದರೆ ಆರ್ಥಿಕ ಸ್ಥಿತಿ ಹದಗೆಟ್ಟಿದೆ. ಹಾಗಾಗಿ ಸರ್ಕಾರ ಹಿಂಪಡೆದಿರುವ ರೂ.15 ಕೋಟಿ ಸರ್ಕಾರದಿಮದ ಮಂಜೂರು ಮಾಡಿಸಬೇಕು ಎಂದು ಒತ್ತಾಯಿಸಿದರು.
ಪುರಸಭೆ ಉಪಾಧ್ಯಕ್ಷೆ ಆಯಿಷಾ ನಯಾಜ್, ಮುಖ್ಯಾಧಿಕಾರಿ ಡಿ.ಶೇಖರ್ ರೆಡ್ಡಿ, ಆರೋಗ್ಯ ನಿರೀಕ್ಷಕ ಪೃಥ್ವಿರಾಜ್, ಮುಖಂಡರಾದ ಸಿ.ರವಿ, ಕೆ.ಶ್ರೀನಿವಾಸ್ ಇದ್ದರು.