JANANUDI.COM NETWORK

ಬೆಂಗಳೂರು; ಕರ್ನಾಟಕ ಸರ್ಕಾರವು 1,727 ಪ್ರೌಢಶಾಲಾ ಶಿಕ್ಷಕರ ಹುದ್ದೆಗಳ ಭರ್ತಿಗೆ ತನ್ನ ಅನುಮತಿಯನ್ನು ನೀಡಿದೆ. ಸದರಿ ಪ್ರಕ್ರಿಯೆಯು ತುರ್ತು ಆಗಿರುವದರಿಂದ, ಆದ್ಯತೆ ಮೇರೆಗೆ ಕ್ರಮ ಜರುಗಿಸಬೇಕು ಎಂದು ಜಿಲ್ಲೆಯ ಉಪ ನಿರ್ದೇಶಕರು ಅವರಿಗೆ ಪತ್ರದಲ್ಲಿ ಸೂಚನೆ ನೀಡಲಾಗಿದೆ.
ಸಹಶಿಕ್ಷಕರು, ದೈಹಿಕ ಶಿಕ್ಷಕರು ಸೇರಿದಂತೆ ಒಟ್ಟು 1,727 ಪ್ರೌಢಶಾಲಾ ಶಿಕ್ಷಕರ ಹುದ್ದೆ ಭರ್ತಿ ಮಾಡಲು ಸರ್ಕಾರ ಒಪ್ಪಿಗೆ ನೀಡಿದೆ. ಈ ಕುರಿತು ಮಾಹಿತಿಯ ಕುರಿತು ಪತ್ರ ಬರೆಯಲಾಗಿದೆ. ಸಂಬಂಧಿಸಿದ ಜಿಲ್ಲೆಗಳ ಉಪ ನಿರ್ದೇಶಕರು, ಇವರು ನೇಮಕಾತಿ ಪ್ರಾಧಿಕಾರಿಗಳಾಗಿದ್ದು, ವಿಭಾಗೀಯ ಸಹ ನಿರ್ದೇಶಕರು ಕೂಡ ಆಯ್ಕೆ ಪ್ರಾಧಿಕಾರಿಗಳಾಗಿರುತ್ತಾರೆ.
ಸಾರ್ವಜನಿಕ ಶಿಕ್ಷಣ ಇಲಾಖೆ ಇದನ್ನು ಅತೀ ತುರ್ತು ಎಂದು ತಿಳಿಸಿ ಈ ಕುರಿತು ಆದೇಶ ನೀಡಿದೆ. ಸರ್ಕಾರಿ ಪ್ರೌಢಶಾಲೆಗಳು, ಶಾಲೆಗಳಲ್ಲಿ ಖಾಲಿ ಇರುವ ಸಹ ಶಿಕ್ಷಕರು ಮತ್ತು ದೈಹಿಕ ಶಿಕ್ಷಣ ಶಿಕ್ಷಕರ ಒಟ್ಟು 1727 ಹುದ್ದೆಗಳಿಗೆ ನೇಮಕ ಮಾಡಿಕೊಳ್ಳಲು ಒಪ್ಪಿಗೆ ಸಿಕ್ಕಿದತಾಂಗಿದೆ.