JANANUDI.COM NETWORK
ಉಡುಪಿ: ಕೋವಿಡ್ -19 ಸಾಂಕ್ರಾಮಿಕ ರೋಗದ ಹರಡುವಿಕೆಯನ್ನು ನಿಯಂತ್ರಿಸುವ ನಿಟ್ಟಿನಲ್ಲಿ ಸರ್ಕಾರವು ಜಿಲ್ಲೆಯಲ್ಲಿ ಪಾಸಿಟಿವಿಟಿ ರೇಟ್ ಹೆಚ್ಚಿರುವ ಕಾರಣ, ಶುಕ್ರವಾರ ೯ ಗಂಟೆಯಿಂದ 13.09..2021 ಬೆಲಿಗ್ಗೆಯ ತನಕ ಅಂದರೆ ಎರಡು ವೀಕೆಂಡಳಿಗೆ ಕರ್ಫ್ಯೂ ಆದೇಶ ಹೊರಡಿಸಲಾಗಿದೆ.
ಸರಕಾರದ ಆದೇಶ ಹಾಗೂ ಜಿಲ್ಲೆಯ ಪ್ರಸ್ತುತ ವಿದ್ಯಮಾನಗಳನ್ನು ಪರಿಗಣಿಸಿ, ಸಾರ್ವಜನಿಕರ ಆರೋಗ್ಯದ ಹಿತ ದೃಷ್ಟಿಯಿಂದ ಉಡುಪಿ ಜಿಲ್ಲಾಧಿಕಾರಿ ಕೂರ್ಮಾ ರಾವ್ ಸಿ.ಆರ್.ಪಿ.ಸಿ. ಸೆಕ್ಷನ್ 144(3) ರಲ್ಲಿ ಪ್ರದತ್ತವಾದ ಅಧಿಕಾರವನ್ನು ಚಲಾಯಿಸಿ ಮುಂದಿನ ಆದೇಶದವರಗೆ ಈ ಕೆಳಗಿನಂತೆ ಪರಿಷ್ಕೃತ ಆದೇಶ ಹೊರಡಿಸಿದ್ದಾರೆ.
ಪ್ರತಿ ಶುಕ್ರವಾರ ರಾತ್ರಿ 9.00 ಗಂಟೆಯಿಂದ ಪ್ರತಿ ಸೋಮವಾರ ಬೆಳಿಗ್ಗೆ 5.00 ಗಂಟೆಯವರೆಗೆ ವಾರಾಂತ್ಯದ ಕರ್ಫ್ಯೂ ಜಾರಿಯಲ್ಲಿರುತ್ತದೆ. ಅಗತ್ಯ ಮತ್ತು ತುರ್ತು ಚಟುವಟಿಕೆಗಳಿಗೆ ಹೊರತುಪಡಿಸಿ ಜನರ ಓಡಾಟಗಳನ್ನು ಕಡ್ಡಾಯವಾಗಿ ನಿಷೇಧಿಸಲಾಗಿದೆ.
ವಾರಾಂತ್ಯದ ಕರ್ಫ್ಯೂ ಗೆ ಮಾರ್ಗಸೂಚಿಗಳು ಹೀಗಿವೆ
- ಎಲ್ಲಾ ರಾಜ್ಯ ಮತ್ತು ಕೇಂದ್ರ ಸರ್ಕಾರದ ಕಚೇರಿಗಳು ಮತ್ತು ಅವುಗಳ ಸ್ವಾಯತ್ತ ಸಂಸ್ಥೆಗಳು, ನಿಗಮಗಳು, ಇತ್ಯಾದಿ, ತುರ್ತು, ಅಗತ್ಯ ಸೇವೆಗಳು ಮತ್ತು COVID 19 ಕಂಟೈನ್ಮೆಂಟ್ ಮತ್ತು ಮ್ಯಾನೇಜ್ಮೆಂಟ್ ಕರ್ತವ್ಯಗಳು ಸಂಪೂರ್ಣವಾಗಿ ಕಾರ್ಯನಿರ್ವಹಿಸುತ್ತವೆ ಮತ್ತು ಇಂತಹ ಸಂಸ್ಧೆಗಳಲ್ಲಿ ಕಾರ್ಯನಿರ್ವಹಿಸುವ ಅಧಿಕಾರಿಗಳು / ಸಿಬ್ಬಂದಿಗಳಿಗೆ ಮುಕ್ತ ಸಂಚಾರಕ್ಕೆ ಅವಕಾಶವಿರುತ್ತದೆ.
- 24/7 ಸಮಯಾವಧಿಯಲ್ಲಿ ಕಾರ್ಯಚರಿಸುವ ತುರ್ತು ಮತ್ತು ಅಗತ್ಯ ಸೇವೆಗಳನ್ನು ಪೂರೈಸುವ ಎಲ್ಲಾ ಕೈಗಾರಿಕೆಗಳು / ಕಂಪನಿಗಳು / ಸಂಸ್ಥೆಗಳು ಕಾರ್ಯಾನಿರ್ವಹಿಸಲು ಅನುಮತಿ ನೀಡಲಾಗಿದೆ. ಅಂತಹ ಸಂಸ್ಥೆಗಳ ನೌಕರರು ಆಯಾ ಸಂಘ/ ಸಂಸ್ಥೆ ನೀಡುವ ಗುರುತಿನ ಚೀಟಿಯೊಂದಿಗೆ ಸಂಚಾರಿಸಬಹುದಾಗಿದೆ. (ಸಾಧ್ಯವಾದಷ್ಟು ಮಟ್ಟಿಗೆ, ನೌಕರರನ್ನು ಮನೆಯಿಂದ ಕೆಲಸ ಮಾಡಲು ಪ್ರೋತ್ಸಾಹಿಸಬೇಕೆಂದು ಕೋರಲಾಗಿದೆ)
- ದೂರವಾಣಿ ಹಾಗೂ ಅಂತರ್ಜಾಲ ಸೇವೆಯನ್ನು ಪೂರೈಸುವ ನೌಕರರು ಹಾಗೂ ವಾಹನಗಳನ್ನು ಸಂಬಂಧಿಸಿದ ಸಂಸ್ಧೆಯಿಂದ ಪಡೆದಿರುವ ಸೂಕ್ತ ಗುರುತಿನ ಚೀಟಿಯೊಂದಿಗೆ ಸಂಚಾರಿಸಬಹುದು. ಮಾಹಿತಿ ತಂತ್ರಜ್ಜಾನ ಮತ್ತು ಮಾಹಿತಿ ತಂತ್ರಜ್ಜಾನ ಆಧಾರಿತ ಕಂಪನಿ / ಸಂಸ್ದೆ ( IT and ITES companies /organization) ಗಳಲ್ಲಿ ಕಾರ್ಯ ನಿರ್ವಹಿಸುವ ಅವಶ್ಯಕ ಸಿಬ್ಬಂದಿ ಹಾಗೂ ಕಾರ್ಮಿಕರನ್ನು ಮಾತ್ರ ಬಳಸಿಕೊಂಡು ಕಾರ್ಯನಿರ್ವಹಿಸುವುದು .ಅವರನ್ನು ಹೊರತು ಪಡಿಸಿ ಇತರೆ ಸಿಬ್ಬಂದಿ ಹಾಗೂ ಕೆಲಸಗಾರರು ಮನೆಗಳಲ್ಲಿಯೇ ಕೆಲಸ ನಿರ್ವಹಿಸುವುದು (work from home).
- ರೋಗಿಗಳು ಮತ್ತು ಅವರ ಪರಿಚಾರಕರು / ತುರ್ತು ಅಗತ್ಯವಿರುವ ವ್ಯಕ್ತಿಗಳು, ವ್ಯಾಕ್ಸಿನೇಷನ್ ತೆಗೆದುಕೊಳ್ಳಲು ಉದ್ದೇಶಿಸಿರುವ ಅರ್ಹರು ಕನಿಷ್ಠ ದಾಖಲೆಗಳೊಂದಿಗೆ ಸಂಚರಿಸಲು ಅನುಮತಿ ಇದೆ
- ಆಹಾರ, ದಿನಸಿ, ಹಣ್ಣುಗಳು ಮತ್ತು ತರಕಾರಿಗಳು, ಮಾಂಸ ಮತ್ತು ಮೀನು, ಮತ್ತು ಪ್ರಾಣಿಗಳ ಮೇವನ್ನು ವ್ಯಾಪಾರ ಮಾಡುವ ಅಂಗಡಿಗಳಿಗೆ ಬೆಳಿಗ್ಗೆ 5.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶ ಇದೆ. ಬೀದಿಬದಿ ವ್ಯಾಪಾರಸ್ಥರು ಬೆಳಿಗ್ಗೆ 5.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ವ್ಯಾಪರ ಮಾಡಬಹುದಾಗಿದೆ. ಸಾರ್ವಜನಿಕ ವಿತರಣಾ ವ್ಯವಸ್ಥೆ(PDS)ಯ ಅಂಗಡಿಗಳಿಗೆ ಅವಕಾಶವಿದೆ ಬೆಳಿಗ್ಗೆ 5.00 ರಿಂದ ಅಪರಾಹ್ನ 2.00 ಗಂಟೆಯವರೆಗೆ ಕಾರ್ಯನಿರ್ವಹಿಸಲು ಅವಕಾಶವಿರುತ್ತದೆ.. ಸ್ವತಂತ್ರ ಮದ್ಯದಂಗಡಿಗಳು ಮತ್ತು ಮಳಿಗೆಗಳಲ್ಲಿ ಬೆಳಿಗ್ಗೆ 5.00 ರಿಂದ ಅಪರಾಹ್ನ 2.00 ರವರೆಗೆ ಪಾರ್ಸೆಲ್ ಕೊಂಡುಹೋಗಲು ಮಾತ್ರ ಅನುಮತಿಸಲಾಗಿದೆ.. ಜನರು ಮನೆಯಿಂದ ಹೊರಕ್ಕೆ ಸಂಚರಿಸುವುದನ್ನು ಕಡಿಮೆ ಮಾಡಲು COVID 19 ನಿರ್ವಹಣೆಗಾಗಿರುವ ರಾಷ್ಟ್ರೀಯ ನಿರ್ದೇಶನಗಳಿಗೆ ಬದ್ಧರಾಗಿ 24×7ಹೋಮ್ ಡೆಲಿವರಿ ಸೇವೆಗಳನ್ನು ನೀಡಲು ಪ್ರೋತ್ಸಾಹಿಸುವುದು.
- ಪೂಜಾ ಸ್ಥಳಗಳಾದ ದೇವಾಲಯ, ಚರ್ಚ್, ಮಸೀದಿ, ಇತರ ಧಾರ್ಮಿಕ ಸ್ಥಗಳಗನ್ನು ತೆರೆಯಲು ಅನುಮತಿಸಲಾಗಿದೆ. ಕೋವಿಡ್ ನಿಯಮಗಳನ್ನು ಪಾಲಿಸ್, ಮತ್ತು ಸಂಬಂಧ ಪಟ್ಟ ಇಲಾಖೆಯಿಂದ ಹೊರಡಿಸಲ್ಪಟ್ಟ ಎಸ್.ಒ.ಪಿ. ಯನ್ನು ಕಟ್ಟುನಿಟ್ಟಾಗಿ ಪಾಲಿಸುವ ಶರತ್ತುಗಳೊಂದಿಗೆ ಪೂಜಾ ಸ್ಥಳಗಳಲ್ಲಿ ಸಂಬಂಧಿಸಿದ ಚಟುವಟಿಕೆಗಳನ್ನು ನಡೆಸಲು ಅನುಮತಿಸಲಾಗಿದೆ. ಆದರೆ ಜಾತ್ರೆಗಳು ದೇವಾಲಯದ ಉತ್ಸವಗಳು /ಹಬ್ಬಗಳು, ಮೆರವಣಿಗೆಗಳು ಮತ್ತು ಒಟ್ಟುಗೂಡುವದನ್ನು ನಿರ್ಬಂಧಿಸಲಾಗಿದೆ, ಡೈರಿ ಮತ್ತು ಹಾಲಿನ ಭೂತಗಳು ಬೆಳಿಗೆ 5.00 ರಿಂದ ರಾತ್ರಿ 8.00 ಗಂಟೆಯವರೆಗೆ ಕಾರ್ಯಚರಿಸಲು ಅನುಮತಿಸಿದೆ.
- ರೆಸ್ಟೋರೆಂಟ್ ಗಳಲ್ಲಿ ಮತ್ತು ತಿನಿಸುಕೇಂದ್ರಗಳಲ್ಲಿ , ಆಹಾರಗಳನ್ನು ತೆಗೆದುಕೊಂಡು ಹೋಗಲು ಮತ್ತು ಹೋಮ್ ಡೆಲಿವರಿಗಳನ್ನು ಮಾತ್ರ ಅನುಮತಿಸಲಾಗಿದೆ.
- ಬಸ್ , ರೈಲುಗಳು ಮತ್ತು ವಿಮಾನ ಪ್ರಯಾಣವನ್ನು ಅನುಮತಿಸಲಾಗಿದೆ. ವಿಮಾನ ನಿಲ್ದಾಣಕ್ಕೆ, ರೈಲ್ವೆ ನಿಲ್ದಾಣಕ್ಕೆ , ಬಸ್ ನಿಲ್ದಾಣಕ್ಕೆ ಹಾಗೂ ವಿಮಾನ ನಿಲ್ದಾಣಗಳಿಂದ, , ರೈಲ್ವೆ ನಿಲ್ದಾಣಗಳಿಂದ , ಬಸ್ ನಿಲ್ದಾಣಗಳಿಂದ ಹೊರಡುವ ಸಾರ್ವಜನಿಕ ಸಾರಿಗೆ ವಾಹನಗಳು, ಖಾಸಗಿ ವಾಹನಗಳು ಮತ್ತು ಟ್ಯಾಕ್ಸಿಗಳ ಓಡಾಟವನ್ನು ಅನುಮತಿಸಿದೆ. ಪ್ರಯಾಣ ಮಾಡುವ ಸಂಧರ್ಭದಲ್ಲಿ ಪ್ರಯಾಣಿಕರು ಸೂಕ್ತ ಪ್ರಯಾಣದ ದಾಖಲೆಗಳು / ಟಿಕೆಟುಗಳನ್ನು ಸಲ್ಲಿಸುವುದು ಕಡ್ಡಾಯವಾಗಿದೆ ಮತ್ತು ಕೋವಿಡ್ 19 ಗೆ ಸಂಬಂಧಿಸಿದ ಮಾರ್ಗಸೂಚಿಗಳನ್ನು ಪಾಲಿಸುವ ಷರತ್ತುಗಳೊಂದಿಗೆ ಸಂಚಾರಕ್ಕೆ ಅನುಮತಿಸಲಾಗಿದೆ.
- ಕೋವಿಡ್-19 ಪ್ರಮಾಣಿತ ಕಾರ್ಯವಿಧಾನವನ್ನು (SOP) ಅನುಸರಿಸುವ ಷರತ್ತುಗಳೊಂದಿಗೆ ಮದುವೆ/ ಕೌಟುಂಬಿಕ ಶುಭ ಸಮಾರಂಭಗಳಿಗೆ ಸರ್ಕಾರದ ಹಿಂದಿನ ಮಾರ್ಗಸೂಚಿಯಂತೆ ಈ ಕೆಳಗೆ ನಿಗದಿಪಡಿಸಿದ ಷರತ್ತಿಗೊಳಪಟ್ಟು ಸಭಾಂಗಣದ ಸಾಮರ್ಥ್ಯದ ಶೇ 50 ರಷ್ಠು ಮತ್ತು ಗರೀಷ್ಠ 400 ಜನರಿಗೆ ಮೀರದಂತೆ ನಡೆಸಲು ಅನುಮತಿಸಲಾಗಿದೆ.
• ಮದುವೆ/ ಕೌಟುಂಬಿಕ ಶುಭ ಸಮಾರಂಭಗಳನ್ನು ಆಯೋಜಿಸುವವರು ಆಮಂತ್ರಣ ಪತ್ರ ಅಥವಾ ಇತರ ಯಾವುದೇ ಸಂಬಂಧಿತ ದಾಖಲೆಗಳೊಂದಿಗೆ ಸಹಿ ಮಾಡಿದ ಅರ್ಜಿಯನ್ನು ಸಂಬಂಧಪಟ್ಟ ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.
• ಅರ್ಜಿಯ ಸ್ವೀಕೃತಿಯ ಮೇರೆಗೆ, ತಹಶೀಲ್ದಾರರು ಪ್ರತಿ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ರಮಕ್ಕೆ 400 ಪಾಸ್ಗಳನ್ನು ನೀಡಬೇಕು
• ಪಾಸ್ ಹೊಂದಿರುವ ಜನರಿಗೆ ಮಾತ್ರ ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗಲು ಅವಕಾಶವಿರುತ್ತದೆ ಮತ್ತು ಪಾಸ್ ಅನ್ನು ವರ್ಗಾಯಿಸಲು ಅವಕಾಶವಿರುವುದಿಲ್ಲ.
• ಮದುವೆ/ ಕೌಟುಂಬಿಕ ಶುಭ ಸಮಾರಂಭ ಕಾರ್ಯಕ್ಕೆ ಹಾಜರಾಗುವ ಜನರು ಕೋವಿಡ್ ಸಮುಚಿತ ವರ್ತನೆಯನ್ನು (COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವುದು ಮತ್ತು ಅವರ ಪಾಸ್ಗಳನ್ನು ಅಧಿಕೃತ ಪರಿಶೀಲನಾ ಅಧಿಕಾರಿಗಳಿಗೆ ತೋರಿಸುವುದು. - ಶವಸಂಸ್ಕಾರ / ಅಂತ್ಯಕ್ರಿಯೆಗಳನ್ನು ಗರಿಷ್ಠ 20 ಜನರೊಂದಿಗೆ ಕೋವಿಡ್ ಸಮುಚಿತ ವರ್ತನೆಯನ್ನು(COVID APPROPRIATE BEHAVIOUR –CAB) ಕಟ್ಟುನಿಟ್ಟಾಗಿ ಪಾಲಿಸುವ ಷರತ್ತಿಗೊಳಪಟ್ಟು ನಿರ್ವಹಿಸಲು ಅನುಮತಿಸಿದೆ.
11.ವಾರಾಂತ್ಯದ ಕರ್ಫ್ಯೂ ಅವಧಿಯಲ್ಲಿ ವಿಧ್ಯಾರ್ಥಿಗಳಿಗೆ ಆರೋಗ್ಯ ಮತ್ತು ಕುಂಟುಂಬ ಕಲ್ಯಾಣ ಇಲಾಖೆ ನೀಡಿರುವ ಚಾಲ್ತಿಯಲಿರುವ ಕೋವಿಡ್-19 ಮಾರ್ಗಸೂಚಿಗಳನ್ನು ಅನುಸರಿಸಿ ಪರೀಕ್ಷೆಗಳಿಗೆ ಹಾಜರಾಗಲು ಅನುಮತಿ ನೀಡಲಾಗಿದೆ. ಪರೀಕ್ಷೆ ಪ್ರಮಾಣ ಪತ್ರವನ್ನು ಅಧಿಕೃತವಾಗಿ ವಿಧ್ಯಾರ್ಥಿಗಳ ಪ್ರಯಾಣಕ್ಕೆ ಪಾಸ್ ಎಂದು ಪರಿಗಣಿಸುವುದು.
ಮೇಲಿನ ಆದೇಶಗಳನ್ನು ಪಾಲಿಸದೇ ಇದ್ದವರ ಮೇಲೆ ಪೋಲಿಸ್ ಠಾಣೆಗಳಲ್ಲಿ ಕ್ರಿಮಿನಲ್ ಪ್ರಕರಣಗಳನ್ನು, Disaster Management Act 2005 , Karnataka Epidemic Diseases act 2020 ಮತ್ತು IPC ಸೆಕ್ಷನ್ 188 ಪ್ರಕಾರ ನಿಯಮಾನುಸಾರ ಕಠಿಣ ಕ್ರಮಕೈಗೊಳ್ಳಲಾಗುವುದು. ಈ ಆದೇಶವು ಸರಕಾರದಿಂದ ನಡೆಸಲ್ಪಡುವ ಯಾವುದೇ ಕಾರ್ಯಕ್ರಮ, ಸಭೆಗಳಿಗೆ ಅನ್ವಯಿಸುವುದಿಲ್ಲ ಎಂದು ಡಿಸಿ ಆದೇಶಿಸಿದ್ದಾರೆ.