

ಕುಂದಾಪುರ, ಮಾ.1 : ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್.ಎಮ್.ಎಮ್ , ವಿ.ಕೆ. ಆರ್ ಆಂಗ್ಲ ಮಾಧ್ಯಮ ಶಾಲೆಗಳ 6ನೇ ತರಗತಿ ವಿದ್ಯಾರ್ಥಿನಿ ಅವನಿ ಶೆಟ್ಟಿಗಾರ್ ಫೆ.27 ರಂದು ಕರ್ನಾಟಕ ಬಾಲವಿಕಾಸ ಅಕಾಡೆಮಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಉಡುಪಿ ಜಿಲ್ಲೆ ವತಿಯಿಂದ ಆಯೋಜಿಸಲಾದ 2023-24 ನೇ ಸಾಲಿನ ಉಡುಪಿ ಜಿಲ್ಲಾ ಮಟ್ಟ್ದ ಮಕ್ಕಳ ಹಬ್ಬ ಕಾರ್ಯಕ್ರಮದಲ್ಲಿ ಭಾಗವಹಿಸಿ ಚಿತ್ರಕಲೆ ಸ್ಪರ್ಧೆಯಲ್ಲಿ ಪ್ರಥಮ ಸ್ಥಾನವನ್ನು ಪಡೆದಿರುತ್ತಾರೆ.
ವಿಜೇತ ವಿದ್ಯಾರ್ಥಿನಿಯನ್ನು ಸಂಸ್ಥೆಯ ಪ್ರಾಂಶುಪಾಲರಾದ ಡಾ.ಚಿಂತನಾ ರಾಜೇಶ್ ಹಾಗೂ ವಿವಿಧ ವಿಭಾಗಗಳ ಮುಖ್ಯಸ್ಥರು ಅಭಿನಂದಿಸಿದರು. ಈಕೆ ಕೋಟೇಶ್ವರದ ಅಶೋಕ್ ಜಿ ಶೆಟ್ಟಿಗಾರ್ ಮತ್ತು ಸರಿತಾ ದಂಪತಿಯವರ ಪುತ್ರಿ.
