Holy Redeemer English Medium School Parent Teacher Association Annual Meeting was held on 11th March. Fr Alwyn Serrao, Principal of St Anthony’s Degree College, Naravi was the Chief guest. He gave a comprehensive information about the New Education Policy. Correspondant Fr Joseph Cardoza presided. Mrs Shanthi Pereira, PTA Secretary presented the report. Headmaster Fr Clifford Pinto explained the school plan and activities. PTA Vice President Mr Bonaventure Pinto, Members and Parents were present. Teachers Mrs Anitha welcomed, Ms. Vinitha Moras thanked and Mrs Renita Lasrado compered the program. All other staff cooperated and organised the meeting.
Month: March 2023
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರದ ಮೂಡ್ಲಕಟ್ಟೆ ಇಂಜಿನಿಯರಿಂಗ್ ಕಾಲೇಜಿನಲ್ಲಿ ರಾಷ್ಟ್ರೀಯ ಮಹಿಳಾ ದಿನಾಚರಣೆಯ ಪ್ರಯುಕ್ತ ವಿಶೇಷ ಉಪನ್ಯಾಸ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು. ಸಂಪನ್ಮೂಲ ವ್ಯಕ್ತಿಯಾಗಿ ಆಗಮಿಸಿದ ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಪ್ರಾಂಶುಪಾಲರಾದ ಪ್ರೊಫ಼ೆಸರ್ ಜೆನಿಫರ್ ಮಿನೆಜೆಸ್ ಲಿಂಗ ಸಮಾನತೆ ಎಂಬ ವಿಷಯದ ಬಗ್ಗೆ ಉಪನ್ಯಾಸ ನೀಡಿದರು. ಮಧ್ಯಾಹ್ನ ವಿವಿಧ ಮನರಂಜನಾ ಸ್ಪರ್ದೆಗಳನ್ನು ಆಯೋಜಿಸಲಾಗಿದ್ದು ಕಾಲೇಜಿನ ಎಲ್ಲ ಮಹಿಳೆಯರು ಉತ್ಸಾಹದಿಂದ ಪಾಲ್ಗೊಂಡರು.
ಎರಡನೇ ದಿನದಂದು ಶ್ರೀಮತಿ ಜುಡಿತ್ ಮೆಂಡೋನ್ಸಾ ಲಿಂಗ ಸಮಾನತೆಯ ಕುರಿತು ಮಾತನಾಡಿ “ಎಲ್ಲಾ ಕೆಲಸಗಳನ್ನು ಪುರುಷರು ಮತ್ತು ಮಹಿಳೆಯರು ಇಬ್ಬರೂ ಸಮಾನವಾಗಿ ಮಾಡಬಹುದು’ ಎಂದು ಹೇಳಿದರು. ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ, ಉಪ ಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿಸೋಜಾ, ಜೇಸಿಐ ಕುಂದಾಪುರದ ಸಂಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ, ಜೆಸಿಐ ಕುಂದಾಪುರ ಸಿಟಿ ಮಹಿಳಾ ವಿಭಾಗದ ಅಧ್ಯಕ್ಷೆ ಎಂ.ಎಸ್.ಪ್ರೇಮಾ, ಜೆಸಿಐ ಕುಂದಾಪುರ ಸಿಟಿ ಅಧ್ಯಕ್ಷೆ ಡಾ.ಸೋನಿ ಉಪಸ್ಥಿತರಿದ್ದರು. ಕಾರ್ಯಕ್ರಮವನ್ನು ಪ್ರೊ.ಅಕ್ಷತಾ ನಾಯಕ್ ಸಂಯೋಜಿಸಿದರು ಮತ್ತು ಮೇಬಲ್, ಪ್ರೊ.ಜಗದೀಶ್ ಮತ್ತು ಪ್ರೊ.ಪಾವನ ಕಾರ್ಯಕ್ರಮಗಳನ್ನು ನಿರೂಪಿಸಿದರು.
ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೆ ನಾಪತ್ತೆ ಆಗಿರುವ ಸಚಿವ ಮುನಿರತ್ನ, ಶಾಸಕ ಹೆಚ್.ನಾಗೇಶ್ ನಾಪತ್ತೆ, ಹುಡುಕಿ ಕೊಡಿ- ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡರಿಂದ ಮುಖ್ಯ ಮಂತ್ರಿಗಳಿಗೆ ಒತ್ತಾಯ
ಕಾಣೆಯಾದ ಶಾಸಕ ಹೆಚ್.ನಾಗೇಶ್
ಮುಳಬಾಗಿಲು, ಮಾ.11: ಜಿಲ್ಲೆಯ ಜ್ವಲಂತ ಸಮಸ್ಯೆಗಳಿಗೆ ಸ್ಪಂದಿಸದೆ ನಾಪತ್ತೆ ಆಗಿರುವ ಉಸ್ತುವಾರಿ ಸಚಿವರಾದ ಮುನಿರತ್ನ ಹಾಗೂ ಮುಳಬಾಗಿಲು ಕ್ಷೇತ್ರದ ಶಾಸಕರದಾದ ಹೆಚ್.ನಾಗೇಶ್‍ರು ನಾಪತ್ತೆಯಾಗಿದ್ದು ಹುಡುಕಿಕೊಡಬೇಕೆಂದು ರೈತ ಸಂಘದ ರಾಜ್ಯ ಉಪಾದ್ಯಕ್ಷ ಕೆ.ನಾರಾಯಣಗೌಡ ಮಾನ್ಯ ಮುಖ್ಯ ಮಂತ್ರಿಗಳನ್ನು ಪತ್ರಿಕಾ ಹೇಳಿಕೆ ಮುಖಾಂತರ ಒತ್ತಾಯಿಸಿದ್ದಾರೆ.
ಈ ಕುರಿತು ಪತ್ರಿಕಾ ಹೇಳಿಕೆ ನೀಡಿರುವ ರವರು ಚುನಾವಣೆ ಇನ್ನೂ 2 ತಿಂಗಳು ಬಾಕಿ ಇರುವಾಗಲೇ ಮುಳುಬಾಗಿಲು ಕ್ಷೇತ್ರದ ಶಾಸಕರಾದ ಹೆಚ್.ನಾಗೇಶ್‍ರವರು ಜನ ಸಾಮಾನ್ಯರ ಕೈಗೆ ಸಿಗದೆ ನಾಪತ್ತೆ ಆಗಿದ್ದಾರೆ. ತಾಲ್ಲೂಕಿನಾದ್ಯಾಂದ ಹೆಜ್ಜೆ ಹೆಜ್ಜೆಗೂ ಸರ್ಕಾರಿ ಕಚೇರಿಗಳಲ್ಲಿ ಭ್ರಷ್ಟಚಾರ ನೂರಾರು ಕೋಟಿ ವೆಚ್ಚದಲ್ಲಿ ಅಭಿವೃದ್ದಿಪಡಿಸುತ್ತಿರುವ ಕಾಮಗಾರಿಗಳ ಗುದ್ದಲಿ ಪೂಜೆಗೆ ಮಾತ್ರ ಸೀಮಿತವಾಗಿರುವ ಜೊತೆಗೆ ಹದಗೆಟ್ಟಿರುವ ರಸ್ತೆಗಳು ನಿಯಂತ್ರಣಕ್ಕೆ ಬಾರದ ಬೆಳೆಯ ರೋಗಗಳು ಇಷ್ಟೆಲ್ಲಾ ಅವ್ಯವಸ್ಥೆ ಇದ್ದರೂ ಜನರ ಮದ್ಯೆ ಇದ್ದು, ಜನ ನಾಯಕನಾಗಬೇಕಾದ ಶಾಸಕರು ನಾಪತ್ತೆಯಾಗಿ ಕಚೇರಿಗೂ ಬೀಗ ಹಾಕುವ ಮೂಲಕ ಜನ ವಿರೋದಿ ನೀತಿಯನ್ನು ಅನುಸರಿಸುತ್ತಿದ್ದಾರೆ.
ಕಷ್ಟ ಹೇಳಿಕೊಳ್ಳಲು ಬರುವ ಜನ ಸಾಮಾನ್ಯರು ಕಚೇರಿಯ ಬೀಗ ನೋಡಿ ವಾಪಸ್ಸು ಹೋಗುವ ಜೊತೆಗೆ ಕಷ್ಟಕ್ಕೆ ಸ್ಪಂದಿಸದ ಶಾಸಕರ ವಿರುದ್ದ ಆಕ್ರೋಶ ವ್ಯಕ್ತಪಡಿಸುತ್ತಿದ್ದಾರೆ.
ಇದು ಮುಳಬಾಗಿಲು ಕ್ಷೇತ್ರದ ಸಮಸ್ಯೆಯಾದರೆ ಇನ್ನೂ ತೋಟಗಾರಿಕಾ ಸಚಿವರು ಜಿಲ್ಲಾ ಉಸ್ತುವಾರಿ ಸಚಿವರಾದ ಮುನಿರತ್ನಂ ರವರು ಸಹ ಜನರ ಕಷ್ಟಕ್ಕೆ ಸ್ಪಂದಿಸುತ್ತಿಲ್ಲ ತಮ್ಮ ಪಕ್ಷದ ಆಭ್ಯರ್ಥಿಗಳಿಗೆ ಚುನಾವಣೆ ಖರ್ಚಿಗೆ ಕೋಟಿ ಕೋಟಿ ಹಣ ನೀಡುವ ಇವರು ಜಿಲ್ಲೆಯ ಜ್ವಲಂತ ಸಮಸ್ಯೆಗಳಾದ ಮಾರುಕಟ್ಟೆಯ ಜಾಗದ ಸಮಸ್ಯೆ, ರಸ್ತೆ, ಕುಡಿಯುವ ನೀರು, ಗ್ರಾಮೀಣ ಪ್ರದೇಶಗಳ ಜನರ ಕಷ್ಟಕ್ಕೆ ಸ್ಪಂದಿಸದೇ ನಾಪತ್ತೆ ಆಗಿರುವುದು ದುರಾದೃಷ್ಟಕರ ಇನ್ನೂ ನೆಪ ಮಾತ್ರಕ್ಕೆ ಜಿಲ್ಲೆಯಲ್ಲಿ ಜಿಲ್ಲಾ ಉಸ್ತುವಾರಿ ಕಚೇರಿಯಿದ್ದು, ಪ್ರತಿ ದಿನ ಕಚೇರಿಗೆ ಬೀಗ ಹಾಕಿರುತ್ತಾರೆ ಹೊರತು ಯಾವುದೇ ಪ್ರಯೋಜನವಿಲ್ಲ,
ಇಷ್ಟವಿಲ್ಲದ ಉಸ್ತುವಾರಿ ಸಚಿವರ ಸ್ಥಾನ ಪಡೆದು ಹೋದ ಪುಟ್ಟ ಬಂದಾ ಪುಟ್ಟ ಎಂಬ ಗಾದೆಯಂತೆ ಜಿಲ್ಲೆಯ ಜಲ್ವಂತ ಸಮಸ್ಯೆಗಳಿಗೆ ಸ್ಪಂದಿಸದ ಉಸ್ತುವಾರಿ ಸಚಿವರು ಹಾಗೂ ಮುಳಬಾಗಿಲು ಕ್ಷೇತ್ರದ ಶಾಸಕರಾದ ಹೆಚ್.ನಾಗೇಶ್‍ರವರನ್ನು ಹುಡುಕಿಕೊಡುವಂತೆ ಸರ್ಕಾರವನ್ನು ಒತ್ತಾಯಿಸಿದ್ದಾರೆ.
ಫಾದರ್ ಮುಲ್ಲರ್ ಹೋಮಿಯೋಪಥಿ :38 ನೇ ಬ್ಯಾಚ್ ಬಿ.ಎಚ್.ಎಮ್.ಎಸ್ ಕೋರ್ಸ್ ಉದ್ಘಾಟನಾ ಸಮಾರಂಭ
ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಕಾಲೇಜಿನ 38ನೇ ಬ್ಯಾಚ್ ಬಿ.ಎಚ್.ಎಮ್.ಎಸ್ ಕೋರ್ಸ್‍ನ್ನು ದಿನಾಂಕ10.03.2023ರಂದು ಬೆಳಿಗ್ಗೆ 10.30ಗಂಟೆಗೆ ಕಾಲೇಜಿನ ಸಭಾಂಗಣದಲ್ಲಿ ದೀಪ ಬೆಳಗಿಸುವ ಮೂಲಕ ಉದ್ಘಾಟಿಸಲಾಯಿತು. ಮುಖ್ಯ ಅತಿಥಿಗಳಾಗಿ ಶಾರದಕೃಷ್ಣ ಹೋಮಿಯೋಪಥಿ ಮೆಡಿಕಲ್ ಕಾಲೇಜ್, ಕುಲಸೇಕರ, ಕನ್ಯಕುಮಾರಿ ಇಲ್ಲಿನ ಮೆಟಿರಿಯಾ ಮೆಡಿಕಾ ವಿಭಾಗದ ಪ್ರಾಧ್ಯಾಪಕರು ಹಾಗೂ ಸ್ನಾತಕೋತ್ತರ ಕೋರ್ಸ್‍ಗಳ ಸಂಯೋಜಕರಾದ ಡಾ. ವಿನ್‍ಸ್ಟನ್ ವರ್ಗೀಸ್ ವಿ.,ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂ ದನೀಯರಿಚರ್ಡ್ ಅಲೋಶಿಯಸ್ ಕುವೆಲ್ಲೊ, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯ ಮತ್ತುಆಸ್ಪತ್ರೆಯ ಆಡಳಿತಾಧಿಕಾರಿಗಳಾದ ವಂದನೀಯ ರೋಶನ್‍ಕ್ರಾಸ್ತಾ, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಮಹಾವಿದ್ಯಾಲಯದ ಉಪಪ್ರಾಂಶುಪಾಲರಾದ ಡಾ. ವಿಲ್ಮಾ ಮೀರಾ ಡಿ’ಸೋಜ, ಫಾದರ್ ಮುಲ್ಲರ್ ಹೋಮಿಯೋಪಥಿ ವೈದ್ಯಕೀಯ ಆಸ್ಪತ್ರೆಯ ವೈದ್ಯಕೀಯ ಅಧೀಕ್ಷಕರಾದ ಡಾ.ಗಿರೀಶ್ ನಾವಡಯು.ಕೆ, ಯು.ಜಿ.ಶೈಕ್ಷಣಿಕ ಉಸ್ತುವಾರಿ ಡಾ.ಜಸಿಂತಾ ಮೊಂತೆರೋ ಹಾಗೂ ಹೊಸ ಬ್ಯಾಚ್‍ನ ವಿದ್ಯಾರ್ಥಿ ಪ್ರತಿನಿದಿ üಉದ್ಘಾಟನಾ ಸಮಾರಂಭದಲ್ಲಿಭಾಗವಹಿಸಿದರು.
ಕಾಲೇಜಿನ ಉಪಪ್ರಾಂಶುಪಾಲರಾದ ಡಾ.ವಿಲ್ಮಾ ಮೀರಾ ಡಿ’ಸೋಜರವರು ಸ್ವಾಗತಿಸಿ ಮುಖ್ಯ ಅತಿಥಿಗಳನ್ನು ಸಭೆಗೆ ಪರಿಚಯಿಸಿದರು. ಮುಖ್ಯ ಅತಿಥಿಗಳಾದ ಡಾ.ವಿನ್‍ಸ್ಟನ್ ವರ್ಗೀ¸ ಸಂದೇಶದಲ್ಲಿ ಮಾನವರ ದು:ಖವನ್ನು ನಿವಾರಿಸುವ ಗುರಿಯನ್ನು ಹೊಂದಿರುವ ಸುರಕ್ಷಿತ, ವಿಶ್ವಾಸಾರ್ಹ, ಪರಿಣಾಮಕಾರಿ ಮತ್ತುಕಡಿಮೆ ವೆಚ್ಚದಾಯಕವಾದ ಸಮಗ್ರ ವೈದ್ಯಕೀಯ ವೃತ್ತಿಯನ್ನು ಆಯ್ಕೆ ಮಾಡಿರುವುದು ವಿದ್ಯಾರ್ಥಿಗಳ ಅದ್ರಷ್ಟವೆಂದು ಹೇಳಿದರು. ತಮ್ಮ ವೃತ್ತಿಜೀವನದಲ್ಲಿ ಮುನ್ನಡೆಯಲು ಹಾಗೂ ವೈಯುಕ್ತಿಕ ಬೆಳವಣಿಗೆಗೆ ಫಾದರ್ ಮುಲ್ಲರ್ ಹೋಮಿಯೋಪಥಿ ಸಂಸ್ಥೆಯಿಂದ ದೊರೆತ ಪೆÇ್ರೀತ್ಸಾಹವನ್ನು ವಿವರಿಸುತ್ತಾ ಫಾದರ್ ಅಗಸ್ಟಸ್ ಮುಲ್ಲರ್, ಡಾ. ಸ್ಯಾಮುವೆಲ್ ಹಾನ್ನಿಮನ್ ಮತ್ತು ಹೋಮಿಯೋಪಥಿಯ ಇತರ ದಿಗ್ಗಜರೊಂದಿಗೆ ಸಂಬಂಧ ಹೊಂದಿದ್ದು ಮಹತ್ವದ ಇತಿಹಾಸ ಮತ್ತು ಪರಂಪರೆ ಇರುವ ಫಾದರ್ ಮುಲ್ಲರ್ ಸಂಸ್ಥೆಯನ್ನು ತಮ್ಮ ವೈದ್ಯಕೀಯ ಶಿಕ್ಷಣಕ್ಕೆ ಆರಿಸಿಕೊಂಡಿದಕ್ಕಾಗಿ ವಿದ್ಯಾರ್ಥಿಗಳನ್ನು ಅಭಿನಂದಿಸಿದರು.
ಆಡಳಿತಾದಿಕಾರಿಯಾದ ವಂದನೀಯ ರೋಶನ್‍ಕ್ರಾಸ್ತಾರವರು ಗುಣಮಟ್ಟದ ಮತ್ತು ಸಂಶೋಧನೆಯ ಕ್ಷೇತ್ರದಲ್ಲಿ ಪ್ರವರ್ತಕ ಸಂಸ್ಥೆಯಾಗಿರುವ ಫಾದರ್ ಮುಲ್ಲರ್ ಸಂಸ್ಥೆಯನ್ನು ಆಯ್ಕೆ ಮಾಡಿರುವವಿದ್ಯಾರ್ಥಿಗಳನ್ನು ಅಭಿನಂದಿಸಿ, ವಿದ್ಯಾರ್ಥಿಗಳು ನಿರಂತರವಾಗಿ ಬದಲಾಗುತ್ತಿರುವ ಆಧುನಿಕ ಜಗತ್ತಿಗೆ ಹೊಂದಿಕೆಯಾಗಬೇಕು, ಜ್ಞಾನದಿಂದ ನವೀಕರಿಸಬೇಕು ಮತ್ತು ಗುಣಮಟ್ಟದ ಶಿಕ್ಷಣ ಹಾಗೂ ಕ್ಲಿನಿಕಲ್ ಅನುಭವದ ಮೂಲಕ ಸಮರ್ಥ ಹೋಮಿಯೋಪಥಿಗಳಾಗಬೇಕೆಂದು ವಿದ್ಯಾರ್ಥಿಗಳನ್ನು ಪೆÇ್ರೀತ್ಸಾಹಿಸಿದರು.
ಫಾದರ್ ಮುಲ್ಲರ್ ಸೇವಾ ಸಂಸ್ಥೆಗಳ ನಿರ್ದೇಶಕರಾದ ವಂದನೀಯ ರಿಚರ್ಡ್ ಅಲೋಶಿಯಸ್ ಕುವೆಲ್ಲೊರವರು ತಮ್ಮ ಅಧ್ಯಕ್ಷೀಯ ಭಾಷಣದಲ್ಲಿ ಹೊಸ ವಿದ್ಯಾರ್ಥಿಗಳನ್ನು ಫಾದರ್ ಮುಲ್ಲರ್ ಸಂಸ್ಥೆಗೆ ಸ್ವಾಗತಿಸಿ ವಿದ್ಯಾರ್ಥಿಗಳು ಏಕಾಗ್ರತೆ ಹಾಗೂ ಸ್ವಯಂ ಶಿಸ್ತಿನ ಮೂಲಕ ಯಶಸ್ವಿ ಹೋಮಿಯೋಪಥಿ ವೈದ್ಯರಾಗಬೇಕೆಂದು ಒತ್ತಾಯಿಸಿದರು.
ಶೈಕ್ಷಣಿಕ ಉಸ್ತುವಾರಿ ಡಾ.ಜಸಿಂತಾ ಮೊಂತೆರೋರವರು ಧನ್ಯವಾದ ಸಮರ್ಪಿಸಿದರು. ಸಂಸ್ಥೆಯ ಗೀತೆಯೊಂದಿಗೆ ಕಾರ್ಯಕ್ರಮವನ್ನು ಮುಕ್ತಾಯ ಗೊಳಿಸಲಾಯಿತು.ಡಾ. ಅನುಷ ಜಿ. ಸನಿಲ್ ಕಾರ್ಯಕ್ರಮವನ್ನು ನಿರೂಪಿಸಿದರು.
ಬೀಜಾಡಿ: ನಾಗಮಂಡಲೋತ್ಸವ ಧಾಮಿ೯ಕ ಕಾರ್ಯಕ್ರಮ ನೇರವೆರಿತು – ಮಾ.13 ಇಂದು ನಾಗಮಂಡಲೋತ್ಸವ
ಕುಂದಾಪುರ: ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀವಾ೯ದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನದಲ್ಲಿ ಮಾ.13ರಂದು ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಕೆಳಬನದಲ್ಲಿ ಜರುಗಲಿರುವ ಏಕಪವಿತ್ರ ನಾಗಮಂಡಲೋತ್ಸವದ ಧಾಮಿ೯ಕ ಕಾರ್ಯಕ್ರಮಗಳು ಭಾನುವಾರದಿಂದ ಆರಂಭಗೊಂಡವು.
ವೇದಮೂತಿ೯ ಶ್ರೀ ಮಧುಸೂಧನ ಬಾಯಿರಿ ಮಣೂರು ಇವರ ನೇತೃತ್ವದಲ್ಲಿ ಪ್ರಾರ್ಥನಾ ಫಲನ್ಯಾಸ ಪೂರ್ವಕ ಸಾಮೂಹಿಕ ಪ್ರಾರ್ಥನೆ, ಗಣೇಶ ಪೂಜೆ, ಸ್ವಸ್ತಿ ಪುಣ್ಯಾಹ ವಾಚನ, ಋತ್ವಿಗ್ವರಣೀ ಗಣಯಾಗ, ಪವಮಾನ ಹೋಮ, ಆಯುತ ಸಂಖ್ಯಾತಿಲ ಹೋಮ, ಸಂಜೆ ಶ್ರೀ ದೇವರ ಸನ್ನಿಧಿಯಲ್ಲಿ ಆಶ್ಲೇಷ ಬಲಿ, ವಾಸ್ತು ರಾಕ್ಷೊಘ್ನ ಹೋಮ, ದಿಗ್ಬಲಿ ಕಾರ್ಯಕ್ರಮಗಳು ನಡೆಯಿತು.
ಸೇವಾಕರ್ತರಾದ ರಾಮಚಂದ್ರ ಮತ್ತು ಕುಟುಂಬಿಕರು, ನಾಗಮಂಡಲೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು, ಸದಸ್ಯರು, ಮತ್ತಿತರರು ಉಪಸ್ಥಿತರಿದ್ದರು.
ಮಾ.13 ಇಂದು ನಾಗಮಂಡಲೋತ್ಸವ
ಮಾ.13ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಮಹಾ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಧಾಮಿ೯ಕ ಸಭಾ ಕಾರ್ಯಕ್ರಮ, ರಾತ್ರಿ 7ಕ್ಕೆ ನಾಗನಿಗೆ ಹಾಲಿಟ್ಟು ಸೇವೆ, ಮಂಡಲ ಪೂಜೆ, ಏಕಪವಿತ್ರ ನಾಗಮಂಡಲೋತ್ಸವ ನಂತರ ಮಹಾಪ್ರಸಾದದೊಂದಿಗೆ ಮಹಾಮಂತ್ರಾಕ್ಷತೆ ವಿತರಣೆಯಾಗಲಿದೆ. ಸಾಂಸ್ಕತಿಕ ಕಾರ್ಯಕ್ರಮದ ಅಂಗವಾಗಿ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ಕಲಾಬಳಗದ ವತಿಯಿಂದ ಮಕ್ಕಳ ಯಕ್ಷಗಾನ ಕಂಸ ದಿಗ್ವಿಜಯ ಪ್ರದರ್ಶನಗೊಳ್ಳಲಿದೆ.
ಕುಂದಾಪುರ ರೋಜರಿ ಚರ್ಚ್ ಸ್ತ್ರೀ ಸಂಘಟನೇಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆ
ಕುಂದಾಪುರ,ಮಾ.13:ಕುಂದಾಪುರ ರೋಜರಿ ಚರ್ಚಿನ ಕೆಥೊಲಿಕ್ ಸ್ತ್ರೀ ಸಂಘಟನೇಯ ಮುಂದಾಳತ್ವದಲ್ಲಿ ಸ್ವಸಹಾಯ ಗುಂಪುಗಳ ಜೊತೆ ಭಾನುವಾರ ಮಾ.12 ರಂದು ಚರ್ಚ್ ಸಭಾಭವನದಲ್ಲಿ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು ಆಚರಿಸಲಾಯಿತು. ಮಹಿಳಾ ದಿನಾಚರಣೆಯ ಪ್ರಯುಕ್ತ ಮೊದಲಿಗೆ ಹೋಲಿ ರೋಜರಿ ಚರ್ಚಿನಲ್ಲಿ ಪ್ರಧಾನ ಧರ್ಮಗುರುಗಳಾದ ಸ್ತ್ರೀ ಸಂಘನೇಯ ಅಧ್ಯಾತ್ಮಿಕ ನಿರ್ದೇಶಕ ಅ| ವಂ| ಸ್ಟ್ಯಾನಿ ತಾವ್ರೊ ನೇತ್ರತ್ವದಲ್ಲಿ ಪವಿತ್ರ ಬಲಿದಾನವನ್ನು ಅರ್ಪಿಸಲಾಯಿತು.
ನಂತರ ನಡೆದ ಕಾರ್ಯಕ್ರಮದಲ್ಲಿ ಫಾ|ಸ್ಟ್ಯಾನಿ ತಾವ್ರೊ “ಮಹಿಳೆ ಕುಟುಂಬದ ಎಲ್ಲಾ ಸದಸ್ಯರ ಕಾಳಜಿ ವಹಿಸಿ, ತಮ್ಮ ಗ್ರಹ ಕೆಲಸವನ್ನು ನಿಶ್ಟೆಯಿಂದ ಮಾಡುತ್ತಾಳೆ. ಅವಳೆನಾದರೂ ಅನಾರೋಗ್ಯಭರಿತಳಾದರೆ, ಇಡೀ ಕುಟುಂಬ ಸಂಕಷ್ಟಕ್ಕೆ ಒಳಗಾಗುತ್ತೆ. ಮಹಿಳೆ ಸಂತೋಷದಿಂದ ಇದ್ದರೆ ಕುಟುಂಬ ಸಂತೋಷದಲ್ಲಿರುತ್ತೆ. ಸಮಾಜದಲ್ಲಿ ಮಹಿಳೆಯ ಪಾತ್ರ ಮಹತ್ತರವಾದುದು, ಆದರಿಂದ ಮಹಿಳೆಯರಿಗೆ ಗೌರವ ನೀಡಬೇಕು. ನಮ್ಮ ಚರ್ಚಿನ ಸ್ತ್ರೀ ಸಂಘನೇಯವರು ಉತ್ತಮವಾದ ಕೆಲಸಕಾರ್ಯಗಳನ್ನು ಮಾಡುತ್ತಾರೆ” ಎಂದು ಶ್ಲಾಘಿಸಿದರು.
ಈ ಸಂದರ್ಭದಲ್ಲಿ ಮನೀಶ್ ಆಸ್ಪತ್ರೆಯ ಆಡಳಿತಾಧಿಕಾರಿ ಖ್ಯಾತ ಪ್ರಸೂತಿ ತಜ್ಞೆ ಡಾ|ಪ್ರಮೀಳಾ ನಾಯಕ್ ಮಹಿಳೆಯರ ಆರೋಗ್ಯ ಕಾಪಾಡಿಕೊಳ್ಳುವ ಬಗ್ಗೆ ಉತ್ತಮವಾದ ಮಾಹಿತಿಯನ್ನು ನೀಡಿದರು. ಸ್ತ್ರೀ ಸಂಘಟನೇಯ ಸಚೇತಕಿ ಸಿಸ್ಟರ್ ಆಶಾ “ಸ್ತ್ರೀ ದೈವಿಕ ಶಕ್ತಿ, ಅವಳು ಕೆಲವು ವಿಷಯಗಳಲ್ಲಿ ಬಹಳ ಶಕ್ತಿವಂತಳು, ಮಹಿಳೆಯರು ಎಲ್ಲ ರಂಗಗಳಲ್ಲಿ ಯಶ್ವಸಿಯಾಗಿದ್ದಾರೆ. ಮಹಿಳೆ ಹಲವಾರು ರೀತಿಯ ಉದ್ಯೋಗಗಳಲ್ಲಿ ತಮ್ಮನ್ನು ತೊಡಗಿಸಿಕೊಂಡರೂ, ಬೆಳಿಗ್ಗ್ಗೆ ಬೇಗನೆ ಎಳುವುದು ಉತ್ತಮ ಆರೋಗ್ಯಕ್ಕೆ ಒಳಿತು ಹಾಗೇ ನಮ್ಮ ಮನೆ ಕೆಲಸವನ್ನು ಪ್ರೀತಿಯಿಂದ ಮಾಡಿದರೆ ಮಹಿಳೆ ಯಶಸ್ವಿ ಮಹಿಳೆಯಾಗುತ್ತಾಳೆ” ಎಂದು ತಿಳಿಸಿದರು. ಪಾಲನ ಮಂಡಳಿ ಉಪಾಧ್ಯಕ್ಷೆ ಶಾಲೆಟ್ ರೆಬೆಲ್ಲೊ ಮಾತನಾಡಿ “ನಾವು ಮಹಿಳೆಯರು ಇತರ ಮಹಿಳೆಯವರಿಗೆ ಗೌರವವನ್ನು ನೀಡಬೇಕು, ಇತರ ಮಹಿಳೆಗೆ ಅವಳಿಂದ ಎನೂ ಆಗುವುದಿಲ್ಲ ಎಂದು ಹಿಂದಕ್ಕೆ ಬಿಟ್ಟು ಬಿಡಬಾರದು, ಅಸಬಲೆಯರನ್ನು ಸಬಲೆ ಮಾಡುವ ಕೆಲಸವಾಗಬೇಕೆಂದು” ಹೇಳಿದರು. ಸಹಾಯಕ ಧರ್ಮಗುರು ವಂ|ಅಶ್ವಿನ್ ಆರಾನ್ಹಾ ಭೋಜನದ ಮೇಲೆ ಆಶಿರ್ವದಿಸಿದರು. ವೇದಿಕೆಯಲ್ಲಿ ಪಾಲನ ಮಂಡಳಿ ಕಾರ್ಯದರ್ಶಿ ಆಶಾ ಕರ್ವಾಲ್ಲೊ, ಕಾರ್ಯದರ್ಶಿ ಜೂಲಿಯೆಟ್ ಪಾಯ್ಸ್, ಖಜಾಂಚಿ ವಿಕ್ಟೋರಿಯಾ ಡಿಸೋಜಾ ಉಪಸ್ಥಿರಿದ್ದರು
ಕಿರು ಆಡೋಟಗಳಲ್ಲಿ ವಿಜೇತರಾದವರಿಗೆ ಬಹುಮಾನಗಳನ್ನು ವಿತರಿಸಲಾಯಿತು. ಸಾಂಸಕ್ರತಿಕ ಕಾರ್ಯಕ್ರಮದಲ್ಲಿ ಸ್ತ್ರೀಯರಿಂದ ನ್ರತ್ಯಗಳು ಪ್ರದರ್ಶನಗೊಂಡವು, ಸ್ತ್ರೀ ಸಂಘಟನೇಯ ಅಧ್ಯಕ್ಷೆ ವಿನಯಾ ಡಿಕೋಸ್ತಾ ಸ್ವಾಗತಿಸಿದರು, ಶಾಂತಿ ಬರೆಟ್ಟೊ ಕಾರ್ಯಕ್ರಮ ನಿರೂಪಿಸಿ, ಉಪಾಧ್ಯಕ್ಷೆ ಜೂಲಿಯಾನ ಮಿನೆಜೆಸ್ ವಂದಿಸಿದರು.
ಕೊಂಕಣಿ ಕವಿ ಮೆಲ್ವಿನ್ ರೊಡ್ರಿಗಸ್ ನವದೆಹಲಿಯ ಸಾಹಿತ್ಯ ಅಕಾಡೆಮಿಯ ಕೊಂಕಣಿ ಸಲಹಾ ಮಂಡಳಿಯ ಸಂಚಾಲಕರಾಗಿ ಆಯ್ಕೆ
ಮಂಗಳೂರು: ಕೊಂಕಣಿ ಕವಿ ಮೆಲ್ವಿನ್ ರೊಡ್ರಿಗಸ್ ನವದೆಹಲಿಯ ಸಾಹಿತ್ಯ ಅಕಾಡೆಮಿಯ ಕೊಂಕಣಿ ಸಲಹಾ ಮಂಡಳಿಯ ಸಂಚಾಲಕರಾಗಿ ಆಯ್ಕೆಯಾಗಿದ್ದಾರೆ. ಇನ್ನು ಮುಂದೆ ಇವರು ಈ ಹುದ್ದೆಯಲ್ಲಿ ಐದು ವರ್ಷಗಳ ತನಕ ಇರುತ್ತಾರೆ.
ಕೊಂಕಣಿ ಕಾವ್ಯ ಕ್ಷೇತ್ರದ ಅಭಿವೃದ್ಧಿಯಲ್ಲಿ ಸಕ್ರಿಯ ಪಾತ್ರ ನಿರ್ವಹಿಸುತ್ತಿರುವ ಕವಿತಾ ಟ್ರಸ್ಟ್‌ನ ಸ್ಥಾಪಕರೂ ಆಗಿರುವ ಮೆಲ್ವಿನ್ ರಾಡ್ರಿಗಸ್ ಈ ವರೆಗೆ ಕೊಂಕಣಿ ಕಾವ್ಯಕ್ಕೆ ಸಂಬಂಧಿಸಿ ಸುಮಾರು 220 ಕಾರ್ಯಕ್ರಮಗಳನ್ನು ನಡೆಸಿದ್ದಾರೆ. ಆರು ಕವನ ಸಂಕಲನಗಳು, ಎರಡು ಪ್ರಬಂಧ ಸಂಕಲನಗಳು, ಕೊಂಕಣಿ ಹಾಡುಗಳ ಧ್ವನಿಸುರುಳಿ,ಭಾಷಾಂತರಗೊಂಡ ಮೂರು ಕೃತಿಗಳು, ಆರು ಸಂಪಾದಿತ ಕೃತಿಗಳು, ಒಂದು ನೀಳ್ಗತೆ ಸೇರಿ ಒಟ್ಟು 34 ಕೃತಿಗಳನ್ನು ಪ್ರಕಟಿಸಿದ್ದಾರೆ. ಅವರ ಸಾಹಿತ್ಯ ಕೃತಿಗಳಿಗೆ ಸಾಹಿತ್ಯ ಅಕಾಡೆಮಿ ಪ್ರಶಸ್ತಿ, ವಿಮಲಾ ವಿ. ಪೈ ವಿಶ್ವ ಕೊಂಕಣಿ ಕವಿತಾ ಕೃತಿ ಪುರಸ್ಕಾರ, ಮಣಿಪಾಲದ ಡಾ.ಟಿ.ಎಂ.ಎ. ಪೈ ಪುಸ್ತಕ ಪುರಸ್ಕಾರಗಳು ಒಲಿದಿವೆ. ಕೊಂಕಣಿ ಕವಿತೆ ಬರೆಯುವಲ್ಲಿ ಕರ್ನಾಟಕದಲ್ಲಿ ಯುವಜನರಿಗೆ ಅವರು ಸದಾ ಪ್ರೋತ್ಸಾಹ ನೀಡುವರಾಗಿದ್ದಾರೆ. ಅವರು ಕೊಂಕಣಿ ಕವಿಗಳಿಗೆ ಪ್ರೇರಣಾಸ್ಪೂರ್ತಿಯಾಗಿದ್ದಾರೆ.
ಗೋವಾದ ಕಾಣಕೋಣದಲ್ಲಿ 2019ರಲ್ಲಿ ನಡೆದ 24 ನೇ ಅಖಿಲ ಭಾರತ ಕೊಂಕಣಿ ಸಾಹಿತ್ಯ ಸಮ್ಮೇಳನದ ಅಧ್ಯಕ್ಷ್ಯತೆ ವಹಿಸಿದ್ದರು. ನಗರದ ವಿಶ್ವ ಕೊಂಕಣಿ ಕೇಂದ್ರದ ಕೊಂಕಣಿ ಭಾಷೆ ಮತ್ತು ಸಾಂಸ್ಕೃತಿಕ ಕೇಂದ್ರದ ವಿಶ್ವಸ್ಥರಾಗಿಯೂ ಸೇವೆ ಸಲ್ಲಿಸುತ್ತಿದ್ದಾರೆ. ಉದ್ಯಮ ನಿರ್ವಹಣೆಯಲ್ಲಿ ಸ್ನಾತಕ ಮತ್ತು ಸಮಾಜಶಾಸ್ತ್ರದಲ್ಲಿ ಸ್ನಾತಕೋತ್ತರ ಪದವಿ ಪಡೆದ ಅವರು ಯು.ಏ,ಯಿ. ಯಲ್ಲಿ ಹಲವಾರು ವರ್ಷ ಉದ್ಯೋಗದಲಿದ್ದು, ಕೊಂಕಣಿ ಲೇಖಕರ ಸಂಘ “ದಾಯ್ಜಿ” ಸಂಘಟನೆಯನ್ನು ಕಟ್ಟಿ ಬೆಳೆಸಿದವರಲ್ಲಿ ಮೆಲ್ವಿನ್ ಕೂಡ ಒಬ್ಬರು. ಮೆಲ್ವಿನ್, ದೈಜಿವಲ್ಡ್ ಸಂಸ್ಥೆಯ ಒರ್ವ ನಿರ್ದೇಶಕರಾಗಿದ್ದಾರೆ.
ಬೀಜಾಡಿ: ನಾಗಮಂಡಲೋತ್ಸವ ಹಸಿರು ಹೊರೆಕಾಣಿಕೆ ಮೆರವಣಿಗೆ
ಕುಂದಾಪುರ: ಶ್ರೀ ವೆಂಕಟಾಚಲಯ್ಯ ಅವಧೂತರ ಆಶೀವಾ೯ದದೊಂದಿಗೆ ಬೀಜಾಡಿ ಶ್ರೀಮತಿ ಜಾನಕಿ ಮತ್ತು ರಾಮಚಂದ್ರ ಹಾಗೂ ಕುಟುಂಬಿಕರ ಮೂಲನಾಗಬನದಲ್ಲಿ ಮಾ.13ರಂದು ಕುಂದಾಪುರ ತಾಲೂಕು ಬೀಜಾಡಿ ಗ್ರಾಮದ ಮೂಡು ಸರಕಾರಿ ಹಿರಿಯ ಪ್ರಾಥಮಿಕ ಶಾಲೆಯ ಸಮೀಪದ ಕೆಳಬನದಲ್ಲಿ ಜರುಗಲಿರುವ ಏಕಪವಿತ್ರ ನಾಗಮಂಡಲೋತ್ಸವದ ಅಂಗವಾಗಿ ಶನಿವಾರ ಹಸಿರು ಹೊರೆಕಾಣಿಕೆ ಪುರ ಮೆರವಣಿಗೆ ನಡೆಯಿತು.
ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದಿಂದ ಹೊರಟ ಹಸಿರು ಹೊರೆಕಾಣಿಕೆ ಪುರ ಮೆರವಣಿಗೆಗೆ ಶ್ರೀ ಕೋಟಿಲಿಂಗೇಶ್ವರ ದೇವಸ್ಥಾನದ ವ್ಯವಸ್ಥಾಪನಾ ಸಮಿತಿ ಹಿರಿಯ ಸದಸ್ಯ ಸುರೇಶ್ ಬೆಟ್ಟಿನ್ ಚಾಲನೆ ನೀಡಿ ಶುಭ ಹಾರೈಸಿದರು. ಸೇವಾಕರ್ತರಾದ ರಾಮಚಂದ್ರ ಮತ್ತು ಕುಟುಂಬಿಕರು, ಬೀಜಾಡಿ ಗ್ರಾಮ ಪಂಚಾಯತ್ ಅಧ್ಯಕ್ಷೆ ಸುಮತಿ ನಾಗರಾಜ್, ಸದಸ್ಯರಾದ ವಾದಿರಾಜ್ ಹೆಬ್ಬಾರ್, ಚಂದ್ರ ಬಿ.ಎನ್, ಪುರಮೆರವಣಿಗೆ ಸಂಚಾಲಕ ರಾಮನಾಯ್ಕ್, ನಾಗಮಂಡಲೋತ್ಸವದ ವಿವಿಧ ಸಮಿತಿ ಪದಾಧಿಕಾರಿಗಳು, ಸ್ಥಳೀಯ ಸಂಘ ಸಂಸ್ಥೆಗಳ ಪದಾಧಿಕಾರಿಗಳು ಮತ್ತಿತರರು ಉಪಸ್ಥಿತರಿದ್ದರು.
ತಟ್ಟಿರಾಯ, ಕೀಲು ಕುದುರೆ, ಪಂಚವಾದ್ಯಗಳು, ಚಂಡೆವಾದನ, ಬ್ಯಾಂಡ್, ಭಜನೆ, ನಾಮಸಂಕೀರ್ತನೆ ಸೇರಿದಂತೆ ಕಳಸ ಹಿಡಿದ ಮಹಿಳೆಯರು ಇನ್ನಿತರ ಟ್ಯಾಬ್ಲೋಗಳು ಮೆರವಣಿಗೆಯ ವೈಭವನ್ನು ಹೆಚ್ಚಿಸಿದವು.
ಮಾ.12ರಂದು ಬೆಳಿಗ್ಗೆ ಪ್ರಾರ್ಥನಾ ಫಲನ್ಯಾಸ ಪೂರ್ವಕ ಸಾಮೂಹಿಕ ಪ್ರಾರ್ಥನೆಯೊಂದಿಗೆ ವಿವಿಧ ಧಾಮಿ೯ಕ ಕಾರ್ಯಕ್ರಮಗಳು ಜರುಗಲಿದೆ. ಮಾ.13ರಂದು ಮಧ್ಯಾಹ್ನ ಗಂಟೆ 12.30ಕ್ಕೆ ಮಹಾ ಅನ್ನಸಂತರ್ಪಣೆ, ಸಂಜೆ 4 ಗಂಟೆಗೆ ಧಾಮಿ೯ಕ ಸಭಾ ಕಾರ್ಯಕ್ರಮ, ರಾತ್ರಿ 7ಕ್ಕೆ ನಾಗನಿಗೆ ಹಾಲಿಟ್ಟು ಸೇವೆ, ಮಂಡಲ ಪೂಜೆ, ಏಕಪವಿತ್ರ ನಾಗಮಂಡಲೋತ್ಸವ ನಂತರ ಮಹಾಪ್ರಸಾದದೊಂದಿಗೆ ಮಹಾಮಂತ್ರಾಕ್ಷತೆ ವಿತರಣೆಯಾಗಲಿದೆ. ಸಾಂಸ್ಕತಿಕ ಕಾರ್ಯಕ್ರಮದ ಅಂಗವಾಗಿ ಕೋಟೇಶ್ವರದ ಶ್ರೀ ಕೋಟಿಲಿಂಗೇಶ್ವರ ಕಲಾಬಳಗದ ವತಿಯಿಂದ ಮಕ್ಕಳ ಯಕ್ಷಗಾನ ಕಂಸ ದಿಗ್ವಿಜಯ ಪ್ರದರ್ಶನಗೊಳ್ಳಲಿದೆ.
ಜೆಸಿಐ ಕುಂದಾಪುರ ಸಿಟಿಯ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗು ಮಾಹಿತಿ ಕಾರ್ಯಕ್ರಮ ಕುಂದಾಪುರ ಚೈತನ್ಯ ವ್ರದ್ಧಾಶ್ರಮ ಸಭಾಗಂಣದಲ್ಲಿ ಜರುಗಿತು
ಕುಂದಾಪುರ: ಜೆಸಿಐ ಕುಂದಾಪುರ ಸಿಟಿಯ ಆಶ್ರಯದಲ್ಲಿ ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗು ಮಾಹಿತಿ ಕಾರ್ಯಕ್ರಮ ಕುಂದಾಪುರ ದ ಚೈತನ್ಯ ವ್ರಶಾಶ್ರಮ ಸಭಾಗಂಣದಲ್ಲಿ ಜರುಗಿತು
ಕೌಶಲ್ಯ ಅಭಿವೃದ್ಧಿ ತರಬೇತಿ ಹಾಗು ಮಾಹಿತಿ ಕಾರ್ಯಕ್ರಮ ವನ್ನು ಕುಂದಾಪುರ ದ ಪುರಸಭೆ ಮಾಜಿ ಸದ್ಯಸೆ ಸಿಸಿಲಿ ಕೋಟ್ಯಾನ್ ಉದ್ಘಾಟನೆ ನೆರೆವೇರಿಸಿದರು ಜೆಸಿಐ ಕುಂದಾಪುರ ಸಿಟಿ ಯಾ ಅಧ್ಯಕ್ಷೆ ಡಾ ಸೋನಿ ಅಧ್ಯಕ್ಷತೆ ವಹಿಸಿದರು ಈ ಸಂದರ್ಭದಲ್ಲಿ ಜೆಸಿಐ ಕುಂದಾಪುರ ಸಿಟಿ ಯಾ ಸ್ಥಾಪಕ ಅಧ್ಯಕ್ಷ ಹುಸೇನ್ ಹೈಕಾಡಿ ಪೂರ್ವ ಅಧ್ಯಕ್ಷ ಗಿರೀಶ್ ಹೆಬ್ಬಾರ್ ಕಾರ್ಯಕ್ರಮ ದ ನಿಯೋಜಕರಾದ ರೇಷ್ಮಾ ಕೋಟ್ಯಾನ್ ಉಪಸ್ಥಿತರಿದ್ದರು
ಕೌಶಲ್ಯ ಅಭಿವೃದ್ಧಿ ಹಾಗು ಮಾಹಿತಿ ಕಾರ್ಯಕ್ರಮ ವನ್ನು ವಲಯ ತರಬೇತಿ ಹಾಗು ಜೆಸಿಐ ಕಲ್ಯಾಣಪುರ ದ ಅಧ್ಯಕ್ಷ ರಾದ ಅನಿತಾ ನರೇಂದ್ರ ತರಬೇತಿ ನೀಡಿದರು
ಜೆಸಿಐ ಕುಂದಾಪುರ ಸಿಟಿ ಯಾ ಮಹ್ಹಿಳಾ ಅಧ್ಯಕ್ಷೆ ಪ್ರೇಮ ಸ್ವಾಗತಿಸಿ ಪೂರ್ವ ಅಧ್ಯಕ್ಷ ಪ್ರಶಾಂತ್ ಹವಾಲ್ದಾರ್ ವಂದಿಸಿದರು