ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‍ರವರ 132ನೇ ಜನ್ಮದಿನಾಚರಣೆ


ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಮತ್ತು ನೆಹರು ಯುವ ಕೇಂದ್ರ ಉಡುಪಿ ವತಿಯಿಂದ ಅಬ್ಬನಡ್ಕದ ಕುಂಟಲಗುಂಡಿಯಲ್ಲಿರುವ ಸಂಘದ ರಂಗಮಂದಿರದಲ್ಲಿ ಭಾರತ ರತ್ನ, ಸಂವಿಧಾನ ಶಿಲ್ಪಿ, ಸಮಾನತೆಯ ಹರಿಕಾರ, ದೇಶದ ಮೊದಲ ಕಾನೂನು ಸಚಿವರು, ದೇಶ ಕಂಡ ಮಹಾನ್ ವ್ಯಕ್ತಿ ಡಾ. ಬಿ.ಆರ್. ಅಂಬೇಡ್ಕರ್‍ರವರ 132ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ಡಾ. ಬಿ.ಆರ್. ಅಂಬೇಡ್ಕರ್‍ರವರ ಭಾವಚಿತ್ರಕ್ಕೆ ಸಂಘದ ಅಧ್ಯಕ್ಷ ಪ್ರಶಾಂತ್ ಪೂಜಾರಿ ಪುಷ್ಪಾರ್ಚನೆ ಸಲ್ಲಿಸಿ ಮಾಲಾರ್ಪಣೆ ಮಾಡಿ ದೀಪ ಬೆಳಗಿಸುವ ಮೂಲಕ ಭಾರತ ರತ್ನ, ಸಂವಿಧಾನ ಶಿಲ್ಪಿ ಡಾ. ಬಿ.ಆರ್. ಅಂಬೇಡ್ಕರ್‍ರವರ 132ನೇ ಜನ್ಮದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು ನಂತರ ಮಾತನಾಡಿವರು ಭಾರತದ ಕಾನೂನು ಸುವ್ಯವಸ್ಥೆ, ಅಸ್ಪøಶ್ಯತೆ ನಿವಾರಣೆ, ಪ್ರಜೆಗಳ ಮೂಲಭೂತ ಕರ್ತವ್ಯ, ಸಮಾನತೆ, ಶಿಕ್ಷಣ ಕ್ಷೇತ್ರ ಸೇರಿದಂತೆ ಹಲವು ಕ್ಷೇತ್ರಗಳಿಗೆ ಅಂಬೇಡ್ಕರ್ ನೀಡಿದ ಕೊಡುಗೆಯನ್ನು ನಾವೆಲ್ಲರೂ ಸ್ಮರಿಸಲೇ ಬೇಕೆಂದರು.
ಈ ಸಂದರ್ಭದಲ್ಲಿ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಸಂಚಾಲಕ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಸಂಘದ ಪೂರ್ವಾಧ್ಯಕ್ಷರಾದ ರಘುವೀರ್ ಶೆಟ್ಟಿ, ದಿನೇಶ್ ಬೀರೊಟ್ಟು, ರಾಜೇಶ್ ಕೊಟ್ಯಾನ್, ಸತೀಶ್ ಅಬ್ಬನಡ್ಕ, ಉಪಾಧ್ಯಕ್ಷೆ ಲೀಲಾ ಪೂಜಾರಿ, ಕಾರ್ಯದರ್ಶಿ ಲಲಿತಾ ಆಚಾರ್ಯ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ-ಸಹಾಯ ಮಂಡಳಿ ಅಧ್ಯಕ್ಷೆ ವೀಣಾ ಪೂಜಾರಿ, ಕಾರ್ಯದರ್ಶಿ ಪುಷ್ಪ ಕುಲಾಲ್, ಅಬ್ಬನಡ್ಕ ಭಜನಾ ಮಂಡಳಿಯ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಕಾರ್ಯದರ್ಶಿ ಕೀರ್ತನ್ ಕುಮಾರ್, ಸದಸ್ಯರಾದ ಬಾಲಕೃಷ್ಣ ಮಡಿವಾಳ, ಮಂಜುನಾಥ ಆಚಾರ್ಯ, ಸುರೇಶ್ ಅಬ್ಬನಡ್ಕ, ಹರೀಶ್ ಪೂಜಾರಿ, ಹರಿಣಾಕ್ಷಿ ಪೂಜಾರಿ, ಅಶ್ವಿನಿ ಪೂಜಾರಿ ಮೊದಲಾದವರಿದ್ದರು.

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ : ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ತಾಲ್ಲೂಕು ಘಟಕ – ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಶ್ರೀನಿವಾಸಪುರದಲ್ಲಿ ಶುಕ್ರವಾರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ರಾಜ್ಯ ಸರ್ಕಾರಿ ಎಸ್ಸಿ, ಎಸ್ಟಿ ನೌಕರರ ಸಂಘದ ತಾಲ್ಲೂಕು ಘಟಕದ ವತಿಯಿಂದ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಲಾಯಿತು. ಸಂಘದ ಅಧ್ಯಕ್ಷ ಎಸ್.ಮುನಿವೆಂಕಟಪ್ಪ, ಗೌರವಾಧ್ಯಕ್ಷ ವಿ.ಹನುಮಪ್ಪ, ಪ್ರಧಾನ ಕಾರ್ಯದರ್ಶಿ ಎಚ್.ಆಂಜಪ್ಪ, ಉಪಾಧ್ಯಕ್ಷ ಟಿ.ರಮೇಶ್ ಇದ್ದರು.

ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಗುಂಜೂರು ಶ್ರೀನಿವಾಸರೆಡ್ಡಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ

ಶ್ರೀನಿವಾಸಪುರದಲ್ಲಿ ಶುಕ್ರವಾರ ಡಾ.ಬಿ.ಆರ್.ಅಂಬೇಡ್ಕರ್ ಜಯಂತಿ ಪ್ರಯುಕ್ತ ಬಿಜೆಪಿ ಅಭ್ಯರ್ಥಿ ಗುಂಜೂರು ಶ್ರೀನಿವಾಸರೆಡ್ಡಿ ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು.
ಮುಖಂಡರಾದ ಎನ್.ರಾಜೇಂದ್ರ ಪ್ರಸಾದ್, ರಾಜಶೇಖರರೆಡ್ಡಿ, ಎ.ಅಶೋಕರೆಡ್ಡಿ, ಬೈರಪ್ಪ, ವೆಂಕಟೇಗೌಡ ಇದ್ದರು.

ಶ್ರೀನಿವಾಸಪುರ: ಸಾಮಾಜಿಕ ಸಹಬಾಳ್ವೆ ಹಾಗೂ ಅಭಿವೃದ್ದಿಗೆ ಸಂವಿಧಾನ ಪೂರಕವಾಗಿದೆ :ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಸಾಮಾಜಿಕ ಸಹಬಾಳ್ವೆ ಹಾಗೂ ಅಭಿವೃದ್ದಿಗೆ ಸಂವಿಧಾನ ಪೂರಕವಾಗಿದೆ ಎಂದು ಮಾಜಿ ಶಾಸಕ ಹಾಗೂ ಜೆಡಿಎಸ್ ಅಭ್ಯರ್ಥಿ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ಶುಕ್ರವಾರ ಅಂಬೇಡ್ಕರ್ ಜಯಂತಿ ಅಂಗವಾಗಿ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಅಂಬೇಡ್ಕರ್ ಅವರು ಮೌಲ್ಯಯುತವಾದ ಸಂವಿಧಾನ ನೀಡುವುದರ ಮೂಲಕ ಸಮಾಜದ ಎಲ್ಲ ಸಮುದಾಯಗಳ ಗೌರವಕ್ಕೆ ಪಾತ್ರರಾಗಿದ್ದಾರೆ ಎಂದು ಹೇಳಿದರು.
ಸಮಾಜದಲ್ಲಿ ಶಾಂತಿ ಹಾಗೂ ಸುವ್ಯವಸ್ಥೆ ನೆಲೆಸಬೇಕಾದರೆ ಸಂವಿಧಾನ ಪಾಲಿಸಬೇಕು. ಹಕ್ಕುಗಳು ಹಾಗೂ ಕರ್ತವ್ಯಗಳು ಒಂದೇ ನಾಣ್ಯದ ಎರಡು ಮುಖ ಇದ್ದಂತೆ. ಹಕ್ಕುಗಳಿಗೆ ಮಾತ್ರ ಹಾತೊರೆದರೆ ಸಾಲದು. ಕರ್ತವ್ಯ ಪಾಲನೆ ಮಾಡಬೇಕು ಎಂದು ಹೇಳಿದರು.
ಮುಖಂಡರಾದ ಬಿ.ವೆಂಕಟರೆಡ್ಡಿ, ಸಿ.ರವಿ, ಪೂಲ ಶಿವಾರೆಡ್ಡಿ, ಮಂಜುನಾಥ್, ಸದಾಶಿವ, ಮನು, ಗನೇಶ್, ಸಂತೋಷ್, ಗಾಯಿತ್ರಿ ಮುತ್ತಪ್ಪ, ಶ್ರೀನಾಥ್, ಶ್ರೀನಿವಾಸ್, ಜಿ.ರಾಜಣ್ಣ, ಎಸ್.ಆರ್.ಅಮರನಾಥ್, ವೇಣುಗೋಪಾಲರೆಡ್ಡಿ ಇದ್ದರು.

ಸಂವಿಧಾನ ರಕ್ಷಣೆ ಎಲ್ಲರ ಹೊಣೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್

ಶ್ರೀನಿವಾಸಪುರ: ಸಂವಿಧಾನ ರಕ್ಷಣೆ ಎಲ್ಲರ ಹೊಣೆ ಎಂದು ಶಾಸಕ ಕೆ.ಆರ್.ರಮೇಶ್ ಕುಮಾರ್ ಹೇಳಿದರು.
ಪಟ್ಟಣದ ಡಾ. ಬಿ.ಆರ್.ಅಂಬೇಡ್ಕರ್ ಉದ್ಯಾನದಲ್ಲಿ ಕಾಂಗ್ರೆಸ್ ಪಕ್ಷದ ವತಿಯಿಂದ ಶುಕ್ರವಾರ ಏರ್ಪಡಿಸಿದ್ದ ಅಂಬೇಡ್ಕರ್ ಜಯಂತಿ ಸಮಾರಂಭದಲ್ಲಿ, ಅಂಬೇಡ್ಕರ್ ಪ್ರತಿಮೆಗೆ ಮಾಲಾರ್ಪಣೆ ಮಾಡಿ ಮಾತನಾಡಿದ ಅವರು, ಡಾ. ಬಿ.ಆರ್.ಅಂಬೇಡ್ಕರ್ ಅವರನ್ನು ಹೊರತುಪಡಿಸಿ ಭಾರತ ಅಥವಾ ಜಗತ್ತಿನ ಇತಿಹಾಸ ಬರೆಯಲಾಗದು ಎಂದು ಹೇಳಿದರು.
ಆರ್‍ಎಸ್‍ಎಸ್, ಮನುವಾದಿಗಳು, ಪ್ರಧಾನಿ ಮೋದಿ, ಅಮಿತ್ ಷಾ ಸಮುದ್ರದ ಅಲೆಗಳನ್ನು ಹಿಂದಿರುಗಿಸಲು ಪ್ರಯತ್ನಿಸುತ್ತಿದ್ದಾರೆ. ಆದರೆ ಹಾಗೆ ಮಾಡುವುದು ಅವರಿಂದ ಸಾಧ್ಯವಿಲ್ಲ. ಅಲೆಗಳ ರಭಸಕ್ಕೆ ಕೊಚ್ಚಿಕೊಂಡು ಹೋಗುತ್ತಾರೆ. ಇದು ಬಹುಜನ, ಬಹು ಧರ್ಮೀಯರ ಸಮಾಜ, ಇಲ್ಲಿ ಅವರ ಆಟ ನಡೆಯುವುದಿಲ್ಲ. ಗೋಮುಖ ವ್ಯಘ್ರರಂತೆ ಬಂದು ಅಲ್ಪ ಸಂಖ್ಯಾತರನ್ನು ಹೆದರಿಸುವುದು ಬೇಡ. ಹೆಣ್ಣು ಮಕ್ಕಳಿಗೆ ತೊಂದರೆ ಕೊಡುವುದು ಬೇಡ. ಬಿಜೆಪಿ ಆಡಳಿತದಲ್ಲಿ ಬಡವರ ಆದಾಯ ಹೆಚ್ಚಲಿಲ್ಲ. ಅದಾನಿ ಆದಾಯ ಹೆಚ್ಚಿದೆ. ಡಾ. ಬಿ.ಆರ್. ಅಂಬೇಡ್ಕರ್ ಅದನ್ನು ಬಯಸಿರಲಿಲ್ಲ. ಎಲ್ಲರ ಅಭಿವೃದ್ಧಿ ಬಯಸಿದ್ದರು. ಆದರೆ ಪರಿಸ್ಥಿತಿ ಬದಲಾಗಿದೆ ಎಂದು ಹೇಳಿದರು.
ಮುಖಂಡರಾದ ಎಂ.ಶ್ರೀನಿವಾಸನ್, ಆರ್.ಎನ್.ನರಸಿಂಹಯ್ಯ, ದಿಂಬಾಲ ಅಶೋಕ್, ಕೆ.ಕೆ.ಮಂಜು, ಸಿ.ಎಂ.ಮುನಿಯಪ್ಪ, ಎನ್.ಮುನಿಸ್ವಾಮಿ, ವೈ.ವಿ.ನರಸಿಂಹಮೂರ್ತಿ, ಮುನಿವೆಂಕಟಪ್ಪ, ಈರಪ್ಪ, ವಿ.ಮುನಿಯಪ್ಪ, ಬಿ.ಎಂ.ಪ್ರಕಾಶ್, ವಿ.ಮುನಿರಾಜು, ನಾಗರಾಜ್, ರಾಮಾಂಜಮ್ಮ, ಉಮಾದೇವಿ, ಭದ್ರಿ ನರಸಿಂಹಮೂರ್ತಿ, ಬಕ್ಷುಸಾಬ್, ವೆಂಕಟೇಶ್, ವೆಂಕಟರೆಡ್ಡಿ, ಶಿವಮೂರ್ತಿ ರಾಮಮೂರ್ತಿ ಇದ್ದರು.