ಪ್ರಭಾವಿ ಮುಖಂಡರಿಂದ ಒತ್ತುವರಿಯಾಗಿರುವ ಪಣಸಮಾಕನಹಳ್ಳಿ ಕೆರೆಯನ್ನು ಸರ್ವೆ ಮಾಡಿಸಿ ಒತ್ತುವರಿ ತೆರವುಗೊಳಿಸಿ- ರೈತ ಸಂಘ

ಶ್ರೀನಿವಾಸಪುರ-ಏ-12, ಪ್ರಭಾವಿ ಮುಖಂಡರಿಂದ ಒತ್ತುವರಿಯಾಗಿರುವ ಪಣಸಮಾಕನಹಳ್ಳಿ ಕೆರೆಯನ್ನು ಸರ್ವೆ ಮಾಡಿಸಿ ಒತ್ತುವರಿ ತೆರವುಗೊಳಿಸಿ ಅಭಿವೃದ್ದಿಗೊಳಿಸಬೇಕೆಂದು ರೈತ ಸಂಘದಿಂದ ಉಪ ತಹಸೀಲ್ದಾರ್ ರವರಿಗೆ ಮನವಿ ನೀಡಿ ಒತ್ತಾಯಿಸಲಾಯಿತು.

ಪೂರ್ವಜರು ಬೆವರು ಸುರಿಸಿ ಒಗ್ಗಟ್ಟಾಗಿ ಮಳೆನೀರು ಸಂಗ್ರಹಣೆಗೆ ಕಟ್ಟಿ ಅಭಿವೃದ್ದಿ ಪಡಿಸಿರುವಂತಹ ಕೆರೆಗಳು ಇಂದು ಭೂ ಮಾಪಿಯ ಹಾಗೂ ಕೆಲವು ಪ್ರಭಾವಿ ವ್ಯಕ್ತಿಗಳ ಪಾಲಾಗುತ್ತಿದೆ. ಕೆರೆಯ ಸುತ್ತಮುತ್ತಲಿರುವ ಹತ್ತಾರು ಹಳ್ಳಿಗಳ ರೈತಾಪಿವರ್ಗ ಒತ್ತುವರಿದಾರರ ವಿರುದ್ದ ದ್ವನಿಎತ್ತಲಾರದೆ ಸಂಬಂಧಪಟ್ಟ ಅಧಿಕಾರಿಗಳಿಗೆ ದೂರು ನೀಡಲಾಗದೆ ಕಣ್ಣುಮುಂದೆಯೇ ಕೆರೆ ನಾಶವಾಗುತ್ತಿದ್ದರೆ. ಏನು ಮಾಡಲಾಗದ ಪರಿಸ್ಥಿತಿಯಲ್ಲಿ ಆ ಹಳ್ಳಿಯ ಜನರಿದ್ದಾರೆ. ಅಷ್ಟರ ಮಟ್ಟಿಗೆ ಪ್ರಭಾವಿ ವ್ಯಕ್ತಿಗಳ ಒತ್ತಡ ಜನ ಸಾಮಾನ್ಯರ ಮೇಲೆ ಹಾಕುತ್ತಿದ್ದಾರೆಂದು ಹದಗೆಟ್ಟಿರುವ ಅವ್ಯವಸ್ಥೆ ವಿರುದ್ದ ರೈತ ಸಂಘದ ರಾಜ್ಯ ಉಪಾಧ್ಯಕ್ಷ ಕೆ.ನಾರಾಯಣಗೌಡ ಆಕ್ರೋಷ ವ್ಯಕ್ತಪಡಿಸಿದರು.

12.20ಕೋಟಿ ಲಾಭ, 1.37 % ಎನ್.ಪಿ.ಎ., ಪಂಚ ಜಿಲ್ಲೆಗಳಿಗೆ ಕಾರ್ಯಕ್ಷೇತ್ರ ವಿಸ್ತರಣೆ,ಎಮ್.ಸಿ.ಸಿ. ಬ್ಯಾಂಕ್ 2022–23 ರ ಸಾಧನೆ


ಕರ್ನಾಟಕದ ಸಹಕಾರಿ ಬ್ಯಾಂಕಿಂಗ್‍ ಕ್ಷೇತ್ರದಲ್ಲಿ 111 ವರ್ಷಗಳ ಇತಿಹಾಸವಿರುವ ಅವಿಭಾಜಿತ ದಕ್ಷಿಣಕನ್ನಡ ಜಿಲ್ಲೆಯ ಹೆಮ್ಮೆಯಎಮ್.ಸಿ.ಸಿ ಬ್ಯಾಂಕ್ ಲಿಮಿಟೆಡ್ 31 ಮಾರ್ಚ್ 2023 ರಂದು ಮುಕ್ತಾಯಗೊಂಡ ವಿತ್ತೀಯ ವರ್ಷದಲ್ಲಿ 12.20ಕೋಟಿ ರೂಪಾಯಿ ಲಾಭಗಳಿಕೆಯನ್ನು ದಾಖಲಿಸಿರುತ್ತಿದೆ. ಸತತವಾಗಿ ಎನ್.ಪಿ.ಎ. ಪ್ರಮಾಣವನ್ನು ಕಡಿಮೆ ಮಾಡಲು ಬ್ಯಾಂಕ್‍ ಶ್ರಮಿಸುತ್ತಿದ್ದು, ಇತ್ತೀಚಿನ ವರ್ಷಗ¼ಲ್ಲಿÀ ಪ್ರಪ್ರಥಮ ಬಾರಿಗೆ 1.37% ಎನ್.ಪಿ.ಎ. ದಾಖಲಿಸಿದೆ.
ದಾಖಲೆಯ ಲಾಭ ಮತ್ತುಕನಿಷ್ಟ ಎನ್.ಪಿ.ಎ. ಜೊತೆಗೆ, 2022–2023ನೇ ವಿತ್ತೀಯ ವರ್ಷದಲ್ಲಿ, ಬ್ಯಾಂಕಿನಅಧ್ಯಕ್ಷ ಅನಿಲ್ ಲೋಬೊ ನೇತೃತ್ವದ ಆಡಳಿತ ಮಂಡಳಿ, ಅಧಿಕಾರಿ ವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದ, ಬ್ಯಾಂಕ್‍ಸ್ಥಾಪನೆಯಾದಂದಿನಿಂದದಕ್ಷಿಣಕನ್ನಡ ಮತ್ತುಉಡುಪಿ ಜಿಲ್ಲೆಗಳಿಗೆ ಮಾತ್ರ ಸೀಮಿತವಾಗಿದ್ದ ಬ್ಯಾಂಕಿನಕಾರ್ಯಕ್ಷೇತ್ರವನ್ನುಉತ್ತರಕನ್ನಡ, ಶಿವಮೊಗ್ಗ, ಚಿಕ್ಕಮಗಳೂರು, ಹಾಸನ ಮತ್ತುಕೊಡಗುಹೀಗೆ 5 ಜಿಲ್ಲೆಗಳಿಗೆ ವಿಸ್ತರಿಸಿ ಮಹತ್ವದ ಸಾಧನೆಯನ್ನು ಮಾಡಿದೆ. ಶೀಘ್ರದಲ್ಲೇ ಈಜಿಲ್ಲೆಗಳಲ್ಲಿ ಬ್ಯಾಂಕಿನಶಾಖೆಗಳನ್ನು ತೆರೆಯಲುಕ್ರಮ ಕೈಗೊಳ್ಳಲಾಗುವುದು.
ದಕ್ಷಿಣಕನ್ನಡ ಮತ್ತುಉಡುಪಿ ಜಿಲ್ಲೆಗಳಲ್ಲಿ 16 ಶಾಖೆಗಳನ್ನು ಹೊಂದಿರುವ ಎಮ್.ಸಿ.ಸಿ. ಬ್ಯಾಂಕ್ 2022–23 ವಿತ್ತೀಯ ವರ್ಷದಲ್ಲಿದಾಖಲೆಯ ರೂ.12.20ಕೋಟಿ ಲಾಭವನ್ನು ಗಳಿಸಿರುತ್ತದೆ. 2022–23 ವಿತ್ತೀಯ ವರ್ಷದಲ್ಲಿಗಣನೀಯ ಪ್ರಮಾಣದಲ್ಲಿ ಬ್ಯಾಂಕಿನ ವ್ಯವಹಾರ ಪ್ರಗತಿಯನ್ನು ದಾಖಲಿಸಿದ್ದು,ಬ್ಯಾಂಕಿನ ನಿವ್ವಳ ಮೌಲ್ಯ (Net Worth) ರೂ. 46 ಕೋಟಿಯಿಂದರೂ.59ಕೋಟಿಗೆತಲುಪಿದೆ. ಬ್ಯಾಂಕಿನವ್ಯವಹಾರರೂ. 933.21 ಕೋಟಿತಲುಪಿದೆ.
ಬ್ಯಾಂಕಿನಇತಿಹಾಸದಲ್ಲೆ 2002-23ನೇ ವಿತ್ತೀಯ ವರ್ಷದಲ್ಲಿ ಮೊದಲ ಬಾರಿಗೆ ಸ್ಥಾಪಕರ ದಿನಾಚರಣೆಯನ್ನು ಬ್ಯಾಂಕಿನಲ್ಲಿ ಸಂಭ್ರಮೋಲ್ಲಾಸದಿಂದಆಚರಿಸುವುದರಜೊತೆಗೆ, ನವೀಕೃತ ಸಭಾಭವನಕ್ಕೆ ಸ್ಥಾಪಕರ ಹೆಸರುಇಡಲಾಯಿತು. ಎಲ್ಲಾ 16 ಶಾಖೆಗಳಲ್ಲಿ ಗ್ರಾಹಕರ ಸಮಾವೇಶಗಳನ್ನು ಏರ್ಪಡಿಸಿ, ಬ್ಯಾಂಕಿನ ಸೇವೆಯ ಬಗ್ಗೆ ಗ್ರಾಹಕರ ಸಲಹೆ ಸೂಚನೆಗಳನ್ನು ಸ್ವೀಕರಿಸಿ, ಶಾಖಾವಾರುಅನುಷ್ಠಾನಗೊಳಿಸಲಾಯಿತು. ಇದರಿಂದ ಬ್ಯಾಂಕಿನಲ್ಲಿಗ್ರಾಹಕರ ಸಂಖ್ಯೆಯು ಹೆಚ್ಚಾಗಲು ಕಾರಣವಾಯಿತು. ಬ್ಯಾಂಕಿನ ಶತಮಾನೋತ್ತರದಶಮಾನೋತ್ಸವವನ್ನುಸಾಮಾಜಿಕ ಕಾಳಜಿಯೊಂದಿಗೆ, ಸಮಾಜದ ಅಶಕ್ತ ವರ್ಗದಜನರಚಿಕಿತ್ಸೆಗೆ, ವಸತಿ ನಿವೇಶನ ದುರಸ್ತಿಗೆ, ಮಕ್ಕಳ ವಿದ್ಯಾಭ್ಯಾಸಕ್ಕೆ ಹಾಗೂ ಹೆಣ್ಣು ಮಕ್ಕಳ ವಿವಾಹದ ವೆಚ್ಚಕ್ಕೆ ನೆರವು ನೀಡುವುದರ ಮೂಲಕ ಅರ್ಥಪೂರ್ಣವಾಗಿಆಚರಿಸಲಾಯಿತು.
ಬ್ಯಾಂಕಿನ ಸದಸ್ಯರು ಬ್ಯಾಂಕಿನ ಪ್ರಸಕ್ತ ಆಡಳಿತ ಮಂಡಳಿಗೆ ನೀಡಿದ ಬೆಂಬಲ, ಗ್ರಾಹಕರ ವಿಶ್ವಾಸ ಮತ್ತುಅಧಿಕಾರಿವರ್ಗ ಮತ್ತು ಸಿಬ್ಬಂದಿಯ ಶ್ರಮದಿಂದಇದು ಸಾಧ್ಯವಾಗಿದೆ. ಜೊತೆಗೆ ಸಾಕಷ್ಟು ಅನಿವಾಸಿ ಭಾರತೀಯರು ಬ್ಯಾಂಕಿನಲ್ಲಿ ವ್ಯವಹಾರ ಮತ್ತು ಹೂಡಿಕೆಯನ್ನು ಮಾಡಿರುತ್ತಾರೆ.
: ಪತ್ರಿಕಾ ಗೋಷ್ಠಿಯಲ್ಲಿ ಹಾಜರಿರುವವರು :
ಅನಿಲ್ ಲೋಬೊ –ಅಧ್ಯಕ್ಷರು, ಜೆರಾಲ್ಡ್‍ಜೂಡ್ ಡಿಸಿಲ್ವ –ಉಪಾಧ್ಯಕ್ಷರು, ಸದಸ್ಯರಾದ – ಆಂಡ್ರ್ಯೂಡಿಸೊಜಾ, ಡಾ| ಜೆರಾಲ್ಡ್ ಪಿಂಟೊ, ಅನಿಲ್ ಪತ್ರಾವೊ, ಜೆ.ಪಿ. ರೊಡ್ರಿಗಸ್, ಡೇವಿಡ್‍ಡಿಸೊಜಾ, ಎಲ್ರೊಯ್‍ಕಿರಣ್‍ಕ್ರಾಸ್ಟೊ, ಹೆರಾಲ್ಡ್ ಮೊಂತೆರೊ, ರೋಶನ್‍ಡಿಸೊಜಾ, ಮಾರ್ಸೆಲ್‍ಡಿಸೊಜಾ, ಸಿ.ಜಿ. ಪಿಂಟೊ, ಸುಶಾಂತ್ ಸಲ್ಡಾನ್ಹಾ, ಐರಿನ್‍ರೆಬೆಲ್ಲೊ, ಡಾ| ಫ್ರೀಡಾಡಿಸೊಜಾ, ಆಲ್ವಿನ್ ಪಿ. ಮೊಂತೆರೊ, ಫೆಲಿಕ್ಸ್ ಡಿ ಕ್ರೂಜ್, ಶರ್ಮಿಳಾ ಮಿನೇಜಸ್‍ಹಾಗೂ ಮಹಾ ಪ್ರಬಂದಕರು – ಸುನಿಲ್ ಮಿನೇಜಸ್

PASSED AWAY MRS. LENNY LEWIS (86) PIUS NAGAR- THE FUNERAL WILL BE HELD ON 12 APRIL

PASSED AWAY MRS. LENNY LEWIS (86) PIUS NAGAR

BORN 8-6-1937      PASSED AWAY 11-4-23

WIFE OF : LATE PETER LEWIS

MOTHER OF LEDIYA, PAULINE/MACHEAI, GALDYS/RICHARD, JOHN/ROOPA LEWIS,

GRAND MOTHER OF JENNNIFER, JOSHNA, ROOPA, MELISHA BARETTO, RESHMA DSOUZA, ROHAN CHRISTAN, LATHIKA CARMELITA,  AND GREAT GRAND CHILDREN

PASSED AWAY ON 11 THE APRIL 2023

Funeral cortege leaves residence bankers Colony, Near Sheniyavar Temple, Vinayaka Road On Wednesday 12th April at 3:30 PM to Pius Nagar Church, followed by Holy Mass at 4 PM.

CONTACT : JOHN LEWIS – 97420 98876

ರಾಯಲ್ಪಾಡು ಸಮೀಪದ ಕೆ.ಗೊಲ್ಲಪಲ್ಲಿ ಬೆಟ್ಟಗುಡ್ಡಗಳಲ್ಲಿ ಚಿರತೆ ಮತ್ತು ಚಿರತೆ ಮರಿಯು ಕಾಣಿಸಿರುವ ಬಗ್ಗೆ ಮಾಹಿತಿ

ರಾಯಲ್ಪಾಡು 1 : ಸಮೀಪದ ಕೆ.ಗೊಲ್ಲಪಲ್ಲಿ ಬೆಟ್ಟಗುಡ್ಡಗಳಲ್ಲಿ ಭಾನುವಾರ ಚಿರತೆ ಮತ್ತು ಚಿರತೆ ಮರಿಯು ಕಾಣಿಸಿರುವ ಬಗ್ಗೆ ಸ್ಥಳಿಯ ಗ್ರಾಮಸ್ಥರು ಅರಣ್ಯ ಇಲಾಖೆಗೆ ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ . ಸೋಮವಾರ ಅರಣ್ಯ ಇಲಾಖೆಯ ಉಪವಲಯ ಅರಣ್ಯ ಅಧಿಕಾರಿ ಶ್ರೀನಾಥ್ ಪತ್ರಿಕೆಯೊಂದಿಗೆ ಮಾತನಾಡಿ ಭಾನುವಾರ ಗ್ರಾಮಸ್ಥರು ಮಾಹಿತಿ ನೀಡಿರುವ ಹಿನ್ನೆಲೆಯಲ್ಲಿ ಸ್ಥಳಕ್ಕೆ ಬೇಟಿ ನೀಡಲಾಗಿದ್ದು, ಇದುವೆರಗೂ ನಮಗೆ ಅದರ ಚಲವಲನಗಳ ಬಗ್ಗೆ ಮಾಹಿತಿ ಲಭ್ಯವಾಗುತಿಲ್ಲ ಎಂದರು.
ಕೆ.ಗೊಲ್ಲಪಲ್ಲಿ ಗ್ರಾಮದ ಬೆಟ್ಟಗುಡ್ಡಗಳು ನೆರೆಯ ಆಂದ್ರಕ್ಕೆ ಹೊಂದಿಕೊಂಡಿದ್ದು, ಸ್ಥಳೀಯರ ಮಾತಿನಂತೆ ನಾವು ಇದೇ ಮೊದಲ ಭಾರಿಗೆ ಈ ಭಾಗದಲ್ಲಿ ಚಿರತೆಯನ್ನು ನೋಡಿದ್ದೇವೆ ಎನ್ನುತ್ತಾರೆ . ಈ ಚಿರತೆಯೊಂದಿಗೆ ಮರಿ ಚಿರತೆ ಇದ್ದ ಬಗ್ಗೆ ಮಾಹಿತಿ ನೀಡಿದರು. ದಾರಿ ತಪ್ಪಿ ಬಂದಿರಬಹುದು ಬಂದ ದಾರಿಯಲ್ಲಿ ಪುನಃ ಹೊರಟು ಹೋಗಬಹುದು ಎನ್ನುತ್ತಾರೆ. ಸ್ಥಳೀಯರು
ಯಾವುದೇ ಏನು ಆಗಲಿ ನಾವು ನಮ್ಮ ಇಲಾಖೆ ಹಿರಿಯ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದೇವೆ. ಅವರ ಮಾರ್ಗದರ್ಶನದಂತೆ ಚಿರತೆಯನ್ನು ಹಿಡಿಯಲಾಗುವುದು ಎಂದು ಮಾಹಿತಿ ನೀಡಿದರು.

ನಮ್ಮ ಮತ ನಮ್ಮ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಮತದಾನದ ಬಗ್ಗೆ ನಿರ್ಲಕ್ಷ್ಯತೆ ತೊರದೆ ಎಲ್ಲರೂ ಕಡ್ಡಾಯ ಮತದಾನ ಮಾಡಿ ; ವಿ.ಕೃಷ್ಣಪ್ಪ

ಶ್ರೀನಿವಾಸಪುರ 1 : ನಮ್ಮ ಮತವು ನಮ್ಮ ದೇಶದ ಭವಿಷ್ಯವನ್ನು ನಿರ್ಧರಿಸುತ್ತದೆ. ಮತದಾನದ ಬಗ್ಗೆ ನಿರ್ಲಕ್ಷ್ಯತೆ ತೊರದೆ ಎಲ್ಲರೂ ಕಡ್ಡಾಯ ಮತದಾನ ಮಾಡಿ ಎಂದು ತಾಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ವಿ.ಕೃಷ್ಣಪ್ಪ ಹೇಳಿದರು.
ತಾಲೂಕಿನ ಗೌನಿಪಲ್ಲಿ ಗ್ರಾಮದಲ್ಲಿ ಮಂಗಳವಾರ ನಡೆದ ವನಿತಾ ವೈಭವ ಕಾರ್ಯಕ್ರಮದ ಅಂಗವಾಗಿ ನಡೆದ ಜಾಥ ಕಾರ್ಯಕ್ರಮಕ್ಕೆ ಚಾಲನೆ ನೀಡಿ ಮಾತನಾಡಿದರು.
ಕೇಂದ್ರ ಚುನಾವಣಾ ಆಯೋಗವು ಮತದಾನ ಪ್ರಮಾಣ ಹೆಚ್ಚಿಸಲು ಸಾಕಷ್ಟು ಹೊಸ ಯೋಜನೆಗಳನ್ನು ಜಾರಿಗೆ ತರುತ್ತಿದೆ, ಈ ಬಾರಿ 80 ವರ್ಷಕಿಂತ ಹೆಚ್ಚಿನ ವಯೋವೃದ್ಧರು ಮತಗಟ್ಟೆಗೆ ಬಂದು ಮತ ಚಲಾಯಿಸಲು ಆಗದಿದ್ದವರ ಮನೆಗೆ ಮತಗಟ್ಟೆ ಅಧಿಕಾರಿಗಳು ತೆರಳಿ ಮತದಾನ ಪಡೆಯುವ ಯೋಜನೆ ಜಾರಿಗೆ ತಂದಿದೆ ಎಂದರು. ಈ ಒಂದು ಉದ್ದೇಶದಿಂದ ಪ್ರತಿಯೊಬ್ಬ ಪ್ರಜೆಯು ತಮ್ಮ ದೇಶದ ಭವಿಷ್ಯಕ್ಕಾಗಿ ತಮ್ಮ ಅಮೂಲ್ಯವಾದ ಮತವನ್ನು ಕಡ್ಡಾಯವಾಗಿ ಚಲಾಯಿಸುವಂತೆ ಕರೆ ನೀಡಿದರು.
ಗೌನಿಪಲ್ಲಿ ಪಿಡಿಒ ಗೌಸ್‍ಸಾಬ್, ತಾಲೂಕಿನ ಎಲ್ಲಾ ಪಿಡಿಒಗಳು, ಜಲಗಾರರು, ಸ್ವಸಹಾಯ ಸಂಘಗಳ ಸಹಕಾರದೊಂದಿಗೆ ಕಾರ್ಯಕ್ರಮವು ನಡೆಯಿತು.

ಪಟ್ಟಣದ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (KIIT) 17 ಡಿಸ್ಟಿಂಗ್‍ಷನ್ಸ್ ನೊಂದಿಗೆ ಶೇಕಡ100 ರಷ್ಟು ಫಲಿತಾಂಶ

ಶ್ರೀನಿವಾಸಪುರ: ಫೆಬ್ರವರಿ ಮಾಹೆಯಲ್ಲಿ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ನಡೆಸಿದ ಕಂಪ್ಯೂಟರ್‍ OFFICE AUTOMATION ಪರೀಕ್ಷೆಗಳಲ್ಲಿ ಪಟ್ಟಣದ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (KIIT) 17 ಡಿಸ್ಟಿಂಗ್‍ಷನ್ಸ್ ನೊಂದಿಗೆ (DISTINCTIONS) ಶೇಕಡ100ರಷ್ಟು ಫಲಿತಾಂಶ ದೊರೆತಿದೆ ಎಂದು ಸಂಸ್ಥೆಯ ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ತಿಳಿಸಿದ್ದಾರೆ.
ಪಟ್ಟಣದ ಎಂ.ಜಿ.ರಸ್ತೆಯಲ್ಲಿರುವ ಕರ್ನಾಟಕ ವಾಣಿಜ್ಯ ಮತ್ತು ಕಂಪ್ಯೂಟರ್ ಶಿಕ್ಷಣ ಸಂಸ್ಥೆಗೆ (KIIT) ಕಳೆದ ಆಗಸ್ಟ್‍ ಮಾಹೆಯಲ್ಲಿರಾಜ್ಯ ಮಟ್ಟದಲ್ಲಿ ಕರ್ನಾಟಕ ಪ್ರೌಡಶಿಕ್ಷಣ ಪರೀಕ್ಷ ಮಂಡಳಿಯು ನಡೆಸಿದ ಕಂಪ್ಯೂಟರ್ OFFICE AUTOMATION ಪರೀಕ್ಷೆಗೆ ಶಾಲೆಯಿಂದ ಒಟ್ಟು 55 ಅಭ್ಯರ್ಥಿಗಳು ಹಾಜರಾಗಿದ್ದು, ಇವರಲ್ಲಿ17 ಡಿಸ್ಟಿಂಗ್‍ಷನ್ಸ್, ಪ್ರಥಮ ದರ್ಜೆಯಲ್ಲಿ-26, ದ್ವಿತೀಯ ದರ್ಜೆಯಲ್ಲಿ 10, ತೃತೀಯ ದರ್ಜೆಯಲ್ಲಿ 02 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, ಶಾಲೆಗೆ ಶೇಕಡ100ರಷ್ಟು ಫಲಿತಾಂಶದೊರೆತಿದೆ.
ಹಾಗೆಯೆ ಕನ್ನಡ ಮತ್ತು ಆಂಗ್ಲ ಬೆರಳಚ್ಚು ಪರೀಕ್ಷೆಯಲ್ಲಿಒಟ್ಟು 13 ಅಭ್ಯರ್ಥಿಗಳು ಪರೀಕ್ಷೆಗೆ ಹಾಜರಾಗಿದ್ದು, ಇವರಲ್ಲಿ 05 ಡಿಸ್ಟಿಂಗ್‍ಷನ್ಸ್, ಪ್ರಥಮ ದರ್ಜೆಯಲ್ಲಿ-02, ದ್ವಿತೀಯ ದರ್ಜೆಯಲ್ಲಿ 03 ಅಭ್ಯರ್ಥಿಗಳು ತೇರ್ಗಡೆ ಹೊಂದಿದ್ದು, ಶಾಲೆಗೆ ಶೇಕಡ77ರಷ್ಟು ಫಲಿತಾಂಶ ದೊರೆತಿದೆ. ತೇರ್ಗಡೆ ಹೊಂದಿದ ಎಲ್ಲಾ ವಿದ್ಯಾರ್ಥಿ-ವಿದ್ಯಾರ್ಥಿನಿಯರಿಗೆ ಅಭಿನಂದನೆಗಳನ್ನು ಸಲ್ಲಿಸುತ್ತಾ, ಶಾಲೆಗೆ ದೊರೆತಿರುವ ಉತ್ತಮ ಫಲಿತಾಂಶಕ್ಕೆ ಕಾರಣರಾದ ಬೋಧಕರನ್ನು ಪ್ರಾಂಶುಪಾಲರಾದ ಎನ್. ಕೃಷ್ಣಮೂರ್ತಿ ಮತ್ತುಕೇಂದ್ರ ವ್ಯವಸ್ಥಾಪಕರಾದ ಆರ್. ರಾಧ ಇವರು ಅಭಿನಂದಿಸಿದ್ದಾರೆ.

ಮೂಡ್ಲಕಟ್ಟೆ ಐ.ಎಂ.ಜೆ. ವಿದ್ಯಾರ್ಥಿಗಳಿಂದ “ಮೈತ್ರಿ” ಕಾರ್ಯಕ್ರಮ

ಮೂಡ್ಲಕಟ್ಟೆ ಐಎಂಜೆ ವಿದ್ಯಾಸಂಸ್ಥೆಯಲ್ಲಿ ಸಂಸ್ಥಾಪಕರ ದಿನಾಚರಣೆಯ ಅದರ ಅಂಗವಾಗಿ ಕುಂದಾಪುರದ ಚೈತನ್ಯ ವೃದ್ಧಾಶ್ರಮದಲ್ಲಿ ಐ.ಎಂ.ಜೆ ವಿದ್ಯಾ ಸಂಸ್ಥೆಗಳ ಭೋಧಕ – ವಿದ್ಯಾರ್ಥಿವೃಂದವರು “ಮೈತ್ರಿ” ಕಾರ್ಯಕ್ರಮದಡಿ ವಿವಿಧ ಪ್ರದರ್ಶನದಿಂದ ಹಿರಿಯರನ್ನು ರಂಜಿಸಿದರು. ಚೈತನ್ಯ ವೃದ್ಧಾಶ್ರಮದ ಅಧ್ಯಕ್ಷರಾದ ಸಿಸಿಲಿ ಕೋಟ್ಯಾನ್ ಅವರು ಸಂಸ್ಥೆಯ ಕಾರ್ಯವೈಖರಿಯನ್ನು ಸೇವಾ ಮನೋಭಾವವನ್ನು ವಿದ್ಯಾರ್ಥಿಗಳಿಗೆ ವಿವರಿಸಿದರು. ಮೂಡ್ಲಕಟ್ಟೆ ನರ್ಸಿಂಗ್ ಕಾಲೇಜಿನ ಉಪನ್ಯಾಸಕಿಯವರಾದ ಶ್ರೀಮತಿ ದಿವ್ಯರವರು ಕಾರ್ಯಕ್ರಮವನ್ನು ನಿರೂಪಿಸಿದರು. ಈ ಕಾರ್ಯಕ್ರಮದಲ್ಲಿ ಐಎಂಜೆ ವಿದ್ಯಾ ಸಂಸ್ಥೆಗಳ ಭೋದಕರಾದ ಶ್ರೀಮತಿ ಅಮೃತಮಾಲ (ಎಂಐಟಿ), ಶ್ರೀಮತಿ ಅಕ್ಷತಾ ನಾಯಕ್(ಎಂಐಟಿ), ಶ್ರೀಮತಿ ಶಬೀನಾ (ಐಎಂಜೆಐಎಸ್‍ಸಿ), ಶ್ರೀಮತಿ ದಿವ್ಯ (ಎಂಸಿಎನ್), ಶ್ರೀಮತಿ ಚೈತ್ರಾ ಯಾಧವ್(ಎಂಐಟಿ), ಶ್ರೀ ಪ್ರವೀಣ್ ಖಾರ್ವಿ (ಐಎಂಜೆ) ಮತ್ತು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ಗೆ ಕರ್ನಾಟಕ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ

ಭಾರತ ಸರಕಾರದ ಯುವಕಾರ್ಯ ಹಾಗೂ ಕ್ರೀಡಾ ಸಚಿವಾಲಯದ ನೆಹರೂ ಯುವ ಕೇಂದ್ರ ಸಂಘÀಟನೆ ನೀಡಲ್ಪಡುವ ಕರ್ನಾಟಕ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿಗೆ ಈ ಬಾರಿ ಸಾಮಾಜಿಕ, ಸಾಂಸ್ಕøತಿಕ, ಕ್ರೀಡಾ, ಧಾರ್ಮಿಕ, ಸಾಹಿತ್ಯ, ಶೈಕ್ಷಣಿಕ ಕ್ಷೇತ್ರದಲ್ಲಿ ಕಳೆದ 23 ವರ್ಷಗಳಿಂದ ತನ್ನದೇ ವೈಶಿಷ್ಟ್ಯಪೂರ್ಣ ಶೈಲಿಯ ಮೂಲಕ ಗುರುತಿಸಿಕೊಂಡಿರುವ ಉಡುಪಿ ಜಿಲ್ಲೆಯ ಕಾರ್ಕಳ ತಾಲೂಕಿನ ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್ ಸಂಸ್ಥೆಗೆ ಕರ್ನಾಟಕ ರಾಜ್ಯ ಅತ್ಯುತ್ತಮ ಯುವ ಮಂಡಳಿ ಪ್ರಶಸ್ತಿ ಹಾಗೂ 75 ಸಾವಿರ ರೂ. ನಗದು ಮತ್ತು ಪ್ರಶಂಸಾ ಪತ್ರವನ್ನು ನೀಡಿ ಸಂಘದ ಅಧ್ಯಕ್ಷರಾದ ಪ್ರಶಾಂತ್ ಪೂಜಾರಿ, ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ ಮತ್ತು ಸದಸ್ಯರನ್ನು ಸನ್ಮಾನಿಸಿ ಗೌರವಿಸಲಾಯಿತು.
ಉಡುಪಿಯಲ್ಲಿ ಜರಗಿದ ಕಾರ್ಯಕ್ರಮದಲ್ಲಿ ನೆಹರು ಯುವ ಕೇಂದ್ರದ ರಾಜ್ಯ ನಿರ್ದೇಶಕರಾದ ನಟರಾಜ್ ಅವರು ಪ್ರಶಸ್ತಿ ಪ್ರದಾನ ಮಾಡಿ ಗೌರವಿಸಿದರು.
ಈ ಸಂಧರ್ಭದಲ್ಲಿ ಉಡುಪಿ ನೆಹರೂ ಯುವ ಕೇಂದ್ರ ಸಂಘಟನೆಯ ಜಿಲ್ಲಾ ಯುವ ಸಮಾನ್ವಯಾಧಿಕಾರಿ ವಿಲ್ಪ್ರೆಡ್ ಡಿ’ಸೋಜಾ, ಉಡುಪಿ ನೆಹರೂ ಯುವ ಕೇಂದ್ರ ಸಂಘಟನೆಯ ಉಭಯ ಜಿಲ್ಲೆಗಳ ಲೆಕ್ಕಾಧಿಖಾರಿ ವಿಷ್ಣು ಮೂರ್ತಿ, ಉಡುಪಿ ನೆಹರೂ ಯುವ ಕೇಂದ್ರ ಸಂಘಟನೆಯ ನೂತನ ಅಧಿಕಾರಿ ಯಶವಂತ್ ಯಾಧವ್, ಉಡುಪಿ ಯುವಜನ ಕ್ರೀಡಾ ಮತ್ತು ಸಬಲೀಕರಣ ಇಲಾಖೆಯ ಸಹಾಯಕ ನಿರ್ದೇಶಕರಾದ ಡಾ. ರೋಶನ್ ಶೆಟ್ಟಿ, ರಾಜ್ಯ ಸಂಪನ್ಮೂಲ ವ್ಯಕ್ತಿ ಜೋಸೆಫ್ ರೆಬೆಲ್ಲೊ, ಸಾಣುರು ಯುವಕ ಮಂಡಳದ ಅಧ್ಯಕ್ಷ ಪ್ರಸಾದ್ ಪೂಜಾರಿ, ಕುಡಿಬೈಲು – ಕುಚ್ಚೂರು ಶಾಂತಿನಿಕೇತನ ಯುವ ವೃಂದದ ಅಧ್ಯಕ್ಷ ದೀಕ್ಷೀತ್, ಚೇರ್ಕಾಡಿ - ಪೇತ್ರಿ ಸಮೃದ್ಧಿ ಮಹಿಳಾ ಮಂಡಳಿಯ ಅಧ್ಯಕ್ಷೆ ಪ್ರಸನ್ನಾ ಭಟ್, ಉಡುಪಿ ಸ್ವಚ್ಛ ಭಾರತ್ ಫ್ರೆಂಡ್ಸ್‍ನ ಅಧ್ಯಕ್ಷರಾದ ಗಣೇಶ್ ಪ್ರಸಾದ್ ನಾಯಕ್, ಸಂಯೋಜಕರಾದ ರಾಘವೇಂದ್ರ ಪ್ರಭು ಕರ್ವಾಲು, ಶಿರ್ವ ಮಹಿಳಾ ಮಂಡಳಿಯ ಅಧ್ಯಕ್ಷೆ ಗೀತಾ ವಾಗ್ಳೆ, ಹೆಜಮಾಡಿ ಕರಾವಳಿ ಯುವಕ ಹಾಗೂ ಯುವತಿ ಮಂಡಳಿಯ ಶರಣ್ ಮಟ್ಟು, ನಂದಳಿಕೆ-ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ದಿನೇಶ್ ಪೂಜಾರಿ ಬೀರೊಟ್ಟು, ಪೂರ್ವಾಧ್ಯಕ್ಷರಾದ ರಘುವೀರ್ ಶೆಟ್ಟಿ, ಸುರೇಶ್ ಕಾಸರಬೈಲು, ಸತೀಶ್ ಅಬ್ಬನಡ್ಕ, ಉಪಾಧ್ಯಕ್ಷೆ ಲೀಲಾ ಪೂಜಾರಿ, ಕಾರ್ಯದರ್ಶಿ ಲಲಿತಾ ಆಚಾರ್ಯ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಮಹಿಳಾ ಸಂಘಟನಾ ಕಾರ್ಯದರ್ಶಿ ಪದ್ಮಶ್ರೀ ಪೂಜಾರಿ, ಸದಸ್ಯರಾದ ಸುರೇಶ್ ಅಬ್ಬನಡ್ಕ, ಹರೀಶ್ ಪೂಜಾರಿ, ಬಾಲಕೃಷ್ಣ ಮಡಿವಾಳ, ಮಂಜುನಾಥ ಆಚಾರ್ಯ, ಕೀರ್ತನ್ ಪೂಜಾರಿ, ಆರತಿ ಕುಮಾರಿ, ವೀಣಾ ಪೂಜಾರಿ, ಪುಷ್ಪ ಕುಲಾಲ್, ಸುಲೋಚನಾ ಕೋಟ್ಯಾನ್, ಹರಿಣಾಕ್ಷಿ ಪೂಜಾರಿ, ಅಶ್ವಿನಿ ಪೂಜಾರಿ ಮೊದಲಾದವರು ಉಪಸ್ಥಿತಿತರಿದ್ದರು.

ಶ್ರೀನಿವಾಸಪುರ:ತಾಲ್ಲೂಕಿನ ಆವಲಕುಪ್ಪ ಗ್ರಾಮದ ಸಮೀಪ ಅಕ್ರಮವಾಗಿ ಸಾಗಿಸುತ್ತಿದ್ದ ರೂ.1.70 ಲಕ್ಷ ಮೌಲ್ಯದ ಮದ್ಯ ವಶ

ಶ್ರೀನಿವಾಸಪುರ: ತಾಲ್ಲೂಕಿನ ಆವಲಕುಪ್ಪ ಗ್ರಾಮದ ಸಮೀಪ ಭಾನುವಾರ ಕಾರಿನಲ್ಲಿ ಅಕ್ರಮವಾಗಿ ಸಾಗಿಸುತ್ತಿದ್ದ ರೂ.1.70 ಲಕ್ಷ ಮೌಲ್ಯದ ಮದ್ಯವನ್ನು ಅಬಕಾರಿ ಇಲಾಖೆ ಅಧಿಕಾರಿಗಳು ವಶಪಡಿಸಿಕೊಂಡು, ವ್ಯಕ್ತಿಯೊಬ್ಬನನ್ನು ಬಂಧಿಸಿದ್ದಾರೆ.
ವಲಯ ಅಬಕಾರಿ ಇನ್ಸ್‍ಪೆಕ್ಟರ್ ಬಿ.ಎಸ್.ರೋಹಿತ್ ಮತ್ತು ಸಿಬ್ಬಂದಿ ಚುನಾವಣೆ ಪ್ರಯುಕ್ತ ಗಸ್ತು ತಿರುಗುತ್ತಿದ್ದಾಗ, ಅವಲುಕುಪ್ಪ ಗ್ರಾಮದ ಸಮೀಪ 46.8 ಲೀಟರ್ ಬಿಯರ್ ಮತ್ತು 17.28 ಲೀಟರ್ ಮದ್ಯವನ್ನು ಕಾರಿನಲ್ಲಿ ಅಕ್ರಮವಾಗಿ ಸಾಗಾಣಿಕೆ ಮಾಡುತ್ತಿದ್ದುದನ್ನು ಪತ್ತೆಹಚ್ಚಲಾಯಿತು. ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಲಾಗಿದೆ.