ಸಾರ್ವಜನಿಕರು ಪರಿಸರಕ್ಕೆ ಹಾನಿ ಉಂಟುಮಾಡುವ ಕೃತ್ಯಗಳಿಗೆ ಕಡಿವಾಣ ಹಾಕಬೇಕು : ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು

ಶ್ರೀನಿವಾಸಪುರ: ಸಾರ್ವಜನಿಕರು ಪರಿಸರಕ್ಕೆ ಹಾನಿ ಉಂಟುಮಾಡುವ ಕೃತ್ಯಗಳಿಗೆ ಕಡಿವಾಣ ಹಾಕಬೇಕು ಎಂದು ತಹಶೀಲ್ದಾರ್ ಶಿರಿನ್ ತಾಜ್ ಹೇಳಿದರು.
ಪಟ್ಟಣದ ಪುರಸಭೆ ವತಿಯಿಂದ ಸೋಮವಾರ ಏರ್ಪಡಿಸಿದ್ದ ವಿಶ್ವ ಪರಿಸರ ದಿನಾಚರಣೆ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಜನ, ಜಾನುವಾರು ಆರೋಗ್ಯ ಹಾಗೂ ಸ್ವಚ್ಛತೆಗೆ ಸವಾಲಾಗಿರುವ ಪ್ಲಾಸ್ಟಿಕ್ ಬಳಕೆ ನಿಲ್ಲಿಸಬೇಕು. ವೈಜ್ಞಾನಿಕ ವಿಧಾನದಲ್ಲಿ ಕಸದ ನಿರ್ವಹಣೆ ಮಾಡಬೇಕು ಎಂದು ಹೇಳಿದರು.
ಪರಿಸರ ದಿನಾಚರಣೆ ಅಂಗವಾಗಿ ಪಟ್ಟಣದ ನಾಗರಿಕರಿಗೆ 2000 ಸಸಿ ವಿತರಣೆ ಮಾಡಲಾಗಿದೆ. ಸಾಧ್ಯವಿರು ಸಾರ್ವಜನಿಕ ಸ್ಥಳಗಳಲ್ಲಿ ಗಿಡ ನೆಡಲಾಗಿದೆ. ಸಾರ್ವಜನಿಕರ ಕಾಳಜಿ ಇದ್ದಲ್ಲಿ ಮಾತ್ರ ನೆಟ್ಟ ಗಿಡ ಮರವಾಗಿ ಬೆಳೆಯಬಲ್ಲದು. ಈ ಕಾರ್ಯದಲ್ಲಿ ಎಲ್ಲರೂ ಭಾಗವಹಿಸಬೇಕು. ಪುರಸಭೆ ಮನೆಯಲ್ಲಿ ವಸ್ತುಗಳ ಬಳಕೆ ಕಡಿಮೆ ಮಾಡುವ ಬಗ್ಗೆ, ಪುನರ್ ಬಳಕೆ ಹಾಗೂ ಪುನರ್ ಸೃಷ್ಟಿ ಬಗ್ಗೆ ಜನರಲ್ಲಿ ಜಾಗೃತಿ ಮೂಡಿಸುತ್ತಿದೆ. ಬಟ್ಟೆ ಚೀಲ ಬಳಕೆ ಬಗ್ಗೆ ಸಾಕಷ್ಟು ಪ್ರಚಾರ ಮಾಡುತ್ತಿದೆ. ಪರಿಸರ ಕಾಳಜಿ ಒಂದು ದಿನಕ್ಕೆ ಸೀಮಿತವಾಗದೆ, ನಿರಂತರವಾಗಿ ಇರಬೇಕು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ವ್ಯವಸ್ಥಾಪಕ ನವೀನ್ ಚಂದ್ರ, ಪರಿಸರ ರಾಯಭಾರಿ ಮಾಂiÀi ಬಾಲಚಂದ್ರ, ಕಂದಾಯ ಅಧಿಕಾರಿ ವಿ.ನಾಗರಾಜ್, ಕಂದಾಯ ನಿರೀಕ್ಷಕ ಎಸ್.ಶಂಕರ್, ಹಿರಿಯ ಆರೋಗ್ಯ ನಿರೀಕ್ಷ ಕೆ.ಜಿ.ರಮೇಶ್, ಎಂಜಿನಿಯರ್ ಶಾಸ್ತ್ರಿ, ಬಿ.ವೆಂಕಟರೆಡ್ಡಿ ಇದ್ದರು.

ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಬೇಕು : ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳು ಮೂಲ ಸೌಕರ್ಯ ಕಲ್ಪಿಸಲು ಮೊದಲ ಆದ್ಯತೆ ನೀಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲ್ಲೂಕಿನ ಹೊಗಳಗೆರೆ ಮಾವು ಅಭಿವೃದ್ಧಿ ಕೇಂದ್ರದ ಸಭಾಂಗಣದಲ್ಲಿ ಸೋಮವಾರ ಏರ್ಪಡಿಸಿದ್ದ, ತಾಲ್ಲೂಕು ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿಗಳ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿದ ಅವರು, ಯಾವುದೇ ಗ್ರಾಮದಲ್ಲಿ ಕುಡಿಯುವ ನೀರಿನ ಸಮಸ್ಯೆ ತಲೆದೋರದಂತೆ ಎಚ್ಚರ ವಹಿಸಬೇಕು. ಶುದ್ಧ ಕುಡಿಯುವ ನೀರು ಘಟಕಗಳ ನಿರ್ವಹಣೆಗೆ ಹೆಚ್ಚು ಗಮನ ನೀಡಬೇಕು. ಅಗತ್ಯ ಇರುವ ಕಡೆ ಹೊಸ ಘಟಕ ಸ್ಥಾಪಿಸಬೇಕು ಎಂದು ಹೇಳಿದರು.
ಪ್ರತಿ ಗ್ರಾಮ ಪಂಚಾಯಿತಿ ಮಟ್ಟದಲ್ಲಿ ಮನೆ ಅಗತ್ಯವಿರುವ ಕುಟುಂಬಗಳ ಪಟ್ಟಿ ಸಿದ್ಧಪಡಿಸಬೇಕು. ನರೇಗಾ ಯೋಜನೆ ಕಾಮಗಾರಿ ಕೈಗೊಳ್ಳುವ ಮುನ್ನ ಗ್ರಾಮ ಪಂಚಾಯಿತಿ ಸದಸ್ಯರು ಹಾಗೂ ಗ್ರಾಮಸ್ಥರೊಂದಿಗೆ ಚರ್ಚಿಸಬೇಕು. ಕಾಮಗಾರಿ ಗುಣಮಟ್ಟದ ಬಗ್ಗೆ ರಾಜಿ ಮಾಡಿಕೊಳ್ಳಬಾರದು ಎಂದು ಹೇಳಿದರು.
ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಹಣಾಧಿಕಾರಿ ಕೃಷ್ಣಪ್ಪ, ವ್ಯವಸ್ಥಾಪಕ ರಾಮಪ್ಪ, ಜಿಲ್ಲಾ ಪಂಚಾಯಿತಿ ನೀರಾವರಿ ವಿಭಾಗದ ಸಹಾಯಕ ಕಾರ್ಯಪಾಲಕ ಎಂಜಿನಿಯರ್ ನಾರಾಯಣಸ್ವಾಮಿ, ಎಂಜಿನಿಯರ್‍ಗಳಾದ ಕೃಷ್ಣಪ್ಪ, ಸಂತೋಷ್ ಹಾಗೂ ಪಿಡಿಒಗಳು ಇದ್ದರು.

ಜಿ.ಕೆ.ವೆಂಕಟಶಿವಾರೆಡ್ಡಿಗೆ ಕೋಲಾರ ಜಿಲ್ಲೆಯ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ವತಿಯಿಂದ ಸನ್ಮಾನ

ಕೋಲಾರ,ಜೂ,5: ಕೋಲಾರ ಜಿಲ್ಲೆಯ ವಾಲ್ಮೀಕಿ ನಾಯಕ ಸಂಘಟನೆಗಳ ಒಕ್ಕೂಟದ ವತಿಯಿಂದ ಶ್ರೀನಿವಾಸಪುರ ವಿಧಾನಸಭಾ ಕ್ಷೇತ್ರದ ಶಾಸಕರಾದ ಜಿ.ಕೆ.ವೆಂಕಟಶಿವಾರಡ್ಡಿ ರವನ್ನು ಅವರ ನಿವಾಸದಲ್ಲಿ ಭೇಟಿ ಮಾಡಿ ಅಭಿನಂದಿಸಲಾಯಿತು.
ಈ ಸಂದರ್ಭದಲ್ಲಿ ಸಮುದಾಯದ ಮುಖಂಡರುಗಳು ತಮ್ಮ ಜನಾಂಗವನ್ನು ರಾಜಕೀಯವಾಗಿ ಗುರ್ತಿಸುವುದರ ಜೊತೆಗೆ ಸೂಕ್ತ ಸ್ಥಾನಮಾನಗಳನ್ನು ಒದಗಿಸಿಕೊಡಬೇಕು. ಸಮುದಾಯಕ್ಕೆ ಮೂಲಭೂತ ಸೌಕರ್ಯಗಳನ್ನು ಒದಗಿಸಿಕೊಟ್ಟು, ಸಮುದಾಯವನ್ನು ಸಮಾಜದ ಮುಖ್ಯವಾಹಿನಿಗೆ ತರಲು ಮನವಿ ಮಾಡಿದರು.
ಶಾಸಕರಾದ ಜಿ.ಕೆ.ವೆಂಕಟಶಿವಾರಡ್ಡಿ ಅಭಿನಂದನೆ ಸ್ವೀಕರಿಸಿ ಮಾತನಾಡಿ, ಮೊದಲಿಗೆ ಸಮುದಾಯ ತಮ್ಮನ್ನು ಬೆಂಬಲಿಸಿದ್ದಕ್ಕೆ ಧನ್ಯವಾದಗಳನ್ನು ತಿಳಿಸಿ, ಸಮುದಾಯಕ್ಕೆ ತನ್ನ ಕೈಲಾದ ಸಹಾಯ ಮತ್ತು ಸರ್ಕಾರದಿಂದ ಸಿಗುವ ಸೌಲತ್ತುಗಳನ್ನು ಪ್ರಾಮಾಣಿಕವಾಗಿ ದೊರಕೊಸಿಕೊಡುವುದಾಗಿ ಭರವಸೆ ನೀಡಿದರು.
ಈ ಸಂದರ್ಭದಲ್ಲಿ ಕೋಲಾರ ಜಿಲ್ಲಾ ಪ್ರಜ್ಞಾವಂತ ದಲಿತ ಸಂಘಟನೆಗಳ ಒಕ್ಕೂಟದ ಅಧ್ಯಕ್ಷರಾದ ಎಂ.ಬಾಲಗೋವಿಂದ್, ಐತರಾಸನನಹಳ್ಳಿ ನರಸಿಂಹಪ್ಪ, ಗರುಡನಹಳ್ಳಿ ಬಾಬು, ವಕ್ಕಲೇರಿ ಬಾಬು, ಅಖಿಲ ಕರ್ನಾಟಕ ವಾಲ್ಮೀಕಿ ನಾಯಕ ಮಹಾಸಭಾ ರಾಜ್ಯ ಯುವ ಸಂಘಟನಾ ಕಾರ್ಯದರ್ಶಿ ಬೆಳ್ಳೂರು ತಿರುಮಲೇಶ್, ಜಿಲ್ಲಾಧ್ಯಕ್ಷ ಕೋಟೆ ಮಧು, ತಾಲೂಕು ಅಧ್ಯಕ್ಷ ಬೆಳ್ಳೂರು ಅಂಬರೀಶ್, ಸುಗುಟೂರು ವೇಣು, ಜೆ.ಡಿ.ಎಸ್ ಪಕ್ಷದ ಎಸ್.ಟಿ.ವಿಭಾಗದ ಕೋಲಾರ ತಾಲೂಕು ಅಧ್ಯಕ್ಷ ಕುರುಗಲ್ ಗಿರೀಶ್, ಮೇಡಿಹಾಳ ಮುನಿರಾಜು, ಮಂಜು, ಕುಡುವನಹಳ್ಳಿ ಆಂಜಿ, ರಂಗನಾಥ್, ಶ್ಯಾಮ್‍ನಾಯಕ್, ಗಲ್‍ಪೇಟೆ ಲಕ್ಷ್ಮಣ್, ಗುಟ್ಟಹಳ್ಳಿ ಚಿದಾನಂದ, ಅಮ್ಮೇರಹಳ್ಳಿ ಚಲಪತಿ ಮತ್ತು ಕಲ್ಲಂಡೂರು ನಾಗರಾಜ್ ಉಪಸ್ಥಿತರಿದ್ದರು.