ಕುಂದಾಪುರ : ಸಂತ ಮೇರಿಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಅಂತರಾಷ್ಟ್ರೀಯ ಯೋಗ ದಿನಾಚರಣೆ


ಕುಂದಾಪುರ
: ಸ್ಥಳೀಯ ಸಂತ ಮೇರೀಸ್ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಜೂನ್ 21 ರಂದು ಅಂತರಾಷ್ಟ್ರೀಯ ಯೋಗ ದಿನಾಚರಣೆ ನಡೆಯಿತು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ಶಾಲೆಯ ಮುಖ್ಯೋಪಾಧ್ಯಾಯಿನಿ ಶ್ರೀಮತಿ ಡೋರಾ ಸುವಾರಿಸ್ ವಹಿಸಿ ’ಯೋಗ ಹಾಗೂ ಪ್ರಾಣಾಯಾಮ ಮಾಡುವುದರಿಂದ ದೇಹದ ಸರ್ವತೋಮುಖ ಬೆಳವಣಿಗೆ ಆಗುತ್ತದೆ, ಆರೋಗ್ಯವಂತರಾಗಿ ಬಾಳಲು ಜೀವನದಲ್ಲಿ ಯೋಗಾಭ್ಯಾಸವನ್ನು ರೂಢಿಸಿಕೊಳ್ಳಬೇಕು’ ಎಂದು ಮಕ್ಕಳಿಗೆ ತಿಳಿಸಿದರು.

ದೈಹಿಕ ಶಿಕ್ಷಣ ಶಿಕ್ಷಕಿ ಶಾಂತಿ ರಾಣಿ ಇವರು ಯೋಗ ತರಬೇತಿಯನ್ನು ನಡೆಸಿಕೊಟ್ಟರು. ಈ ಸಂದರ್ಭದಲ್ಲಿ ವಿದ್ಯಾರ್ಥಿಗಳು ಯೋಗ ಪ್ರದರ್ಶನ ನೀಡಿದರು. ಶಿಕ್ಷಕಿಯರಾದ ಜ್ಯೋತಿ ಡಿಸಿಲ್ವ, ಶ್ರೀಮತಿ, ಆನ್ನಿ ಕ್ರಾಸ್ತಾ, ಗೀತಾ ನೊರೊನ್ಹಾ, ಪ್ರೀತಿ ಹಾಗೂ ಸುರೇಖಾ ಸಹಕರಿಸಿದರು.

ಸಂತ ಮೇರಿ ಮಹಾವಿದ್ಯಾಲಯ, ಶಿರ್ವದಲ್ಲಿ ‘ರಾಷ್ಟ್ರೀಯ ಭೂ-ಯುವಸೇನಾ ‘ಎನ್.ಸಿ.ಸಿಯ ವಿಶ್ವ ಯೋಗ ದಿನಾಚರಣೆ


ಶಿರ್ವ: ಸಂತ ಮೇರಿ ಮಹಾವಿದ್ಯಾಲಯ, ಶಿರ್ವ ಇದರ ರಾಷ್ಟ್ರೀಯ ಭೂ-ಯುವಸೇನಾದಳದ ಎನ್.ಸಿ.ಸಿ. ಘಟಕ ಮತ್ತು 21 ಕರ್ನಾಟಕ ಬೆಟಾಲಿಯನ್ ಎನ್.ಸಿ.ಸಿ. ಉಡುಪಿ ಜಂಟಿಯಾಗಿ ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವ ಪ್ರಯುಕ್ತ “ವಿಶ್ವ ಯೋಗ ದಿನಾಚರಣೆ ಯನ್ನು” ಫಾದರ್ ಹೆನ್ರಿ ಕ್ಯಾಸ್ಟಲಿನೋ ಸಭಾಂಗಣದಲ್ಲಿ ಆಯುಷ್ ಮಂತ್ರಾಲಯ ನೀಡಿದ ಯೋಗ ವಿಡಿಯೋ ಪ್ರಾಯೋಗಿಕ ಪ್ರದರ್ಶನವನ್ನು ಅನುಸರಿಸಿ ಆಚರಿಸಲಾಯಿತು .

ಇಂದಿನ ಬಿಡುವಿಲ್ಲದ ಜೀವನದಲ್ಲಿ ಯುವಕರು ಯೋಗದತ್ತ ಗಮನಹರಿಸಬೇಕು, ಆರೋಗ್ಯಕರ ಮನಸ್ಸು ಮತ್ತು ದೇಹವನ್ನು ಕಾಪಾಡಿಕೊಳ್ಳಲು ಯೋಗ ಮುಖ್ಯವಾಗಿದೆ ಎಂದು ಕಾಲೇಜಿನ ಪ್ರಾಂಶುಪಾಲ ಡಾ! ಹೆರಾಲ್ಡ್ ಐವನ್ ಮೋನಿಸ್ ರವರು ಅಧ್ಯಕ್ಷ ನೆಲೆಯಲ್ಲಿ ಮಾತನಾಡಿ ಇಂತಹ ಕಾರ್ಯಕ್ರಮ ಹಮ್ಮಿಕೊಂಡ ಕಾಲೇಜಿನ ಎನ್.ಸಿ.ಸಿ ಘಟಕವನ್ನು ಪ್ರಶಂಸಿದರು ಮತ್ತು ಶುಭ ಹಾರೈಸಿದರು.ಕಾಲೇಜಿನ ಎನ್.ಸಿ.ಸಿ ಅಧಿಕಾರಿ ಲೆಫ್ಟಿನೆಂಟ್ ಕೆ ಪ್ರವೀಣ್ ಕುಮಾರ್ ಅವರು ಕಾರ್ಯಕ್ರಮಕ್ಕೆ ಮಾರ್ಗದರ್ಶನ ನೀಡಿದರು.

ಯೋಗವು ಮೂಲಭೂತವಾಗಿ ಭಾರತದ ಉಪಖಂಡದಲ್ಲಿ ಹುಟ್ಟಿಕೊಂಡಿತು. ಪ್ರಾಚೀನ ಕಾಲದಿಂದಲೂ ಯೋಗವನ್ನು ಯೋಗಿಗಳು ನಿರ್ವಹಿಸುತ್ತಾರೆ. ಯೋಗದ ಪದದ ಅರ್ಥ ಒಕ್ಕೂಟ ಮತ್ತು ಶಿಸ್ತು ಎಂದು ಸಂಸ್ಕೃತದಿಂದ ಅನುವಾದಿಸುತ್ತದೆ. ಯೋಗವು ಜೀವನದಲ್ಲಿ ಹೊಸ ಶಕ್ತಿಯನ್ನು ತುಂಬುತ್ತದೆ. ಹೀಗಾಗಿ ಸಾಮಾನ್ಯ ಜನರಿಂದ ಹಿಡಿದು ಸೆಲೆಬ್ರಿಟಿಗಳವರೆಗೆ ಯೋಗದ ಬಗ್ಗೆ ತಮ್ಮ ಆಸಕ್ತಿಯನ್ನು ವ್ಯಕ್ತಪಡಿಸುತ್ತಾರೆ ಎಂದು ಕ್ಯಾಡೆಟ್ ಆಶಿಕಾ ತಿಳಿಸಿ, ವಿಶ್ವ ಯೋಗ ದಿನಾಚರಣೆಯ ಪ್ರಾಮುಖ್ಯತೆಯನ್ನು ಮತ್ತು ಉದ್ದೇಶವನ್ನು ಪ್ರಾಸ್ತವಿಕವಾಗಿ ಮಾತನಾಡಿದರು.
ಈ ಕಾರ್ಯಕ್ರಮದಲ್ಲಿ ಲ್ಲ್ಯಾನ್ಸ್ ಕಾರ್ಪೊರಲ್ ಅನೀಶ್ ಭಟ್ ಮತ್ತು ಕೆಡೆಟ್ಗಳು ಉಪಸ್ಥಿತರಿದ್ದರು.ಕ್ಯಾಡೆಟ್ಗಳಾದ ಅನುಪ್ ನಾಯಕ ಹಾಗೂ ಅಲಿಸ್ಟರ್ ಸುಜಾಯ್ ಡಿಸೋಜಾ ಸಹಕರಿಸಿದರು. ಲ್ಲ್ಯಾನ್ಸ್ ಕಾರ್ಪೊರಲ್ ಶೆಟ್ಟಿಗಾರ್ ಹೇಮಾಶ್ರೀ ಸುದರ್ಶನ್ ಸ್ವಾಗತಿಸಿ , ಕೆಡೆಟ್ ಕೃತಿಕಾ ವಂದಿಸಿದರು. ಕೆಡೆಟ್ ಸೋನಾಲಿ ಕುಲಾಲ್ ಕಾರ್ಯಕ್ರಮವನ್ನು ನಿರೂಪಿಸಿದರು.

ನಂದಳಿಕೆ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್ : 9ನೇ ವಿಶ್ವ ಯೋಗ ದಿನಾಚರಣೆ


ನಂದಳಿಕೆ: ರಾಜ್ಯ ಮತ್ತು ಜಿಲ್ಲಾ ಪ್ರಶಸ್ತಿ ಪುರಸ್ಕøತ ಸಂಸ್ಥೆ ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್, ನೆಹರು ಯುವ ಕೇಂದ್ರ ಉಡುಪಿ, ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಭಜನಾ ಮಂಡಳಿ, ಜೇಸಿಐ ಬೆಳ್ಮಣ್ಣು, ಯುವ ಜೇಸಿ ವಿಭಾಗ ಮತ್ತು ಮಹಿಳಾ ಜೇಸಿ ವಿಭಾಗ ಇವರ ಸಂಯಕ್ತ ಆಶ್ರಯದಲ್ಲಿ ಅಬ್ಬನಡ್ಕ ಫ್ರೆಂಡ್ಸ್ ಕ್ಲಬ್‍ನ ರಂಗಮಂದಿರದಲ್ಲಿ ಬುಧವಾರ 9ನೇ ವಿಶ್ವ ಯೋಗ ದಿನಾಚರಣೆ ಕಾರ್ಯಕ್ರಮ ನಡೆಸಲಾಯಿತು.
ನಂದಳಿಕೆ ಅಬ್ಬನಡ್ಕ ಶ್ರೀ ದುರ್ಗಾಪರಮೇಶ್ವರೀ ಫ್ರೆಂಡ್ಸ್ ಕ್ಲಬ್‍ನ ಅಧ್ಯಕ್ಷ ಪ್ರಶಾಂತ್ ಪೂಜಾರಿ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಯೋಗ ಶಿಬಿರದಲ್ಲಿ ಆರತಿ ಕುಮಾರಿ ಅವರು ಯೋಗ ತರಬೇತಿ ನೀಡಿದರು.
ಈ ಸಂದರ್ಭದಲ್ಲಿ ಸಂಘದ ಸಂಚಾಲಕರಾದ ಅಬ್ಬನಡ್ಕ ಸಂದೀಪ್ ವಿ. ಪೂಜಾರಿ, ಬೆಳ್ಮಣ್ಣು ಜೇಸಿಐ ಘಟಕದ ಅಧ್ಯಕ್ಷ ಅಬ್ಬನಡ್ಕ ಸತೀಶ್ ಪೂಜಾರಿ, ಬೆಳ್ಮಣ್ಣು ಯುವ ಜೇಸಿ ವಿಭಾಗದ ಅಧ್ಯಕ್ಷ ಕೀರ್ತನ್ ಪೂಜಾರಿ, ಪೂರ್ವಾಧ್ಯಕ್ಷರಾದ ಸುರೇಶ್ ಕಾಸ್ರಬೈಲು, ರಾಜೇಶ್ ಕೋಟ್ಯಾನ್, ಉಪಾಧ್ಯಕ್ಷೆ ಲೀಲಾ ಪೂಜಾರಿ, ಕಾರ್ಯದರ್ಶಿ ಲಲಿತಾ ಆಚಾರ್ಯ, ಜೊತೆ ಕಾರ್ಯದರ್ಶಿ ಸುದರ್ಶನ್ ಕುಂದರ್, ಮಹಿಳಾ ಸಂಘಟನಾ ಕಾರ್ಯದರ್ಶಿ ಅಬ್ಬನಡ್ಕ ಪದ್ಮಶ್ರೀ ಪೂಜಾರಿ, ಅಬ್ಬನಡ್ಕ ಭಜನಾ ಮಂಡಳಿ ಅಧ್ಯಕ್ಷೆ ಸುಲೋಚನಾ ಕೋಟ್ಯಾನ್, ಅಬ್ಬನಡ್ಕ ಶ್ರೀ ವನದುರ್ಗಾ ಸ್ವ-ಸಹಾಯ ಸಂಘದ ಅಧ್ಯಕ್ಷೆ ವೀಣಾ ಪೂಜಾರಿ, ಕಾರ್ಯದರ್ಶಿ ಪುಷ್ಪ ಕುಲಾಲ್, ಸದಸ್ಯರಾದ ಸುರೇಶ್ ಅಬ್ಬನಡ್ಕ, ಹರೀಶ್ ಪೂಜಾರಿ, ಬಾಲಕೃಷ್ಣ ಮಡಿವಾಳ, ಹರಿಣಾಕ್ಷಿ ಪೂಜಾರಿ ಮೊದಲಾದವರಿದ್ದರು.



ಹೆಚ್ಚುವರಿ ಶಿಕ್ಷಕರ ತಾಲ್ಲೂಕು ಮಟ್ಟದ ಸ್ಥಳ ಆಯ್ಕೆ ಪ್ರಕ್ರಿಯೆ ಯಶಸ್ವಿ : ಸರ್ವರ್ ಅಡಚಣೆ ನಡುವೆಯೂ ಗೊಂದಲರಹಿತ ಕೌನ್ಸಿಲಿಂಗ್-ಕೃಷ್ಣಮೂರ್ತಿ

ಕೋಲಾರ:- ಪ್ರಾಥಮಿಕ, ಪ್ರೌಢಶಾಲಾ ಶಿಕ್ಷಕರ ಹೆಚ್ಚುವರಿ ಕೌನ್ಸಿಲಿಂಗ್ ಸರ್ವರ್ ಸಮಸ್ಯೆ ನಡುವೆಯೂ ಯಶಸ್ವಿಯಾಗಿ ನಡೆದಿದ್ದು, ಗೊಂದಲಗಳಿಗೆ ಅವಕಾಶವಿಲ್ಲದಂತೆ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಉಪನಿರ್ದೇಶಕ ಕೃಷ್ಣಮೂರ್ತಿ ಖುದ್ದು ನೇತೃತ್ವ ವಹಿಸಿದ್ದರು.
ನಗರದ ಡಿಡಿಪಿಐ ಕಚೇರಿಯ ಎಸ್‍ಎಸ್‍ಎ ಸಭಾಂಗಣದಲ್ಲಿ ಮಂಗಳವಾರ ಬೆಳಗ್ಗೆ 10 ಗಂಟೆಗೆ ಆರಂಭಗೊಳ್ಳಬೇಕಾಗಿದ್ದ ಪ್ರಾಥಮಿಕ ಶಾಲಾ ಹೆಚ್ವುವರಿ ಶಿಕ್ಷಕರು,ಮುಖ್ಯಶಿಕ್ಷಕರ ಕೌನ್ಸಿಲಿಂಗ್‍ಗೆ ಸರ್ವರ್ ಸಮಸ್ಯೆ ಎದುರಾದ ಕಾರಣ ಸುಮಾರು 2 ಗಂಟೆಗಳ ಕಾಲ ವಿಳಂಬವಾಯಿತು.
12 ಗಂಟೆ ಸುಮಾರಿಗೆ ಸರ್ವರ್ ಸಮಸ್ಯೆ ಸರಿಹೋಗುತ್ತಿದ್ದಂತೆ ಮೊದಲಿಗೆ ಪ್ರಾಥಮಿಕ ಶಾಲೆಗಳ ಮುಖ್ಯಶಿಕ್ಷಕರ ಕೌನ್ಸಿಲಿಂಗ್ ಮುಗಿಸಲಾಗಿದ್ದು, ನಂತರ ದೈಹಿಕ ಶಿಕ್ಷಕರ ಕೌನ್ಸಿಲಿಂಗ್ ನಡೆಯಿತು.
ಈ ವೇಳೆಗಾಗಲೇ 2 ಗಂಟೆ ಮುಗಿದಿದ್ದು, ನಂತರ ಪ್ರಾಥಮಿಕ ಶಾಲಾ ಸಹಶಿಕ್ಷಕರ ಕೌನ್ಸಿಲಿಂಗ್ ಪ್ರಕ್ರಿಯೆಗೆ ಚಾಲನೆ ನೀಡಲಾಯಿತು. ಸರ್ವರ್ ಸಮಸ್ಯೆ ಕಾಡಿದ್ದರಿಂದಾಗಿ ಕೌನ್ಸಿಲಿಂಗ್ ಕುಂಟುತ್ತಾ ಸಾಗಿತು.
ಸಂಜೆ 4 ಗಂಟೆಯಾದರೂ 250 ಮಂದಿ ಪ್ರಾಥಮಿಕ ಶಿಕ್ಷಕರಲ್ಲಿ ಕೇವಲ 50 ಮಂದಿಯ ಕೌನ್ಸಿಲಿಂಗ್ ಹಾಗೂ ಸ್ಥಳ ಆಯ್ಕೆ ಪ್ರಕ್ರಿಯೆ ಮಾತ್ರವೇ ಮುಗಿದಿದ್ದು, ಎಲ್ಲಾ ಶಿಕ್ಷಕರ ಕೌನ್ಸಿಲಿಂಗ್ ಪ್ರಕ್ರಿಯೆ ಮುಗಿಯಲು ಸಂಜೆ 6 ಗಂಟೆಯಾದರೂ ಬೇಕು ಎಂಬ ಮಾತುಗಳ ಶಿಕ್ಷಕ ವಲಯದಲ್ಲಿ ಕೇಳಿ ಬರುತ್ತಿತ್ತು.

ಪ್ರೌಢಶಾಲಾ ಶಿಕ್ಷಕರ ಕೌನ್ಸಿಲಿಂಗ್ ವಿಳಂಬ


ಈ ನಡುವೆ ಮಧ್ಯಾಹ್ನ 2 ಗಂಟೆಗೆ ಆರಂಭಗೊಳ್ಳಬೇಕಿದ್ದ ಪ್ರೌಢಶಾಲಾ ಹೆಚ್ಚುವರಿ ಶಿಕ್ಷಕರ ಕೌನ್ಸಿಲಿಂಗ್ ವಿಳಂಬವಾಗಿದ್ದು, ಶಿಕ್ಷಕರು ತಮ್ಮ ಸ್ಥಳ ಆಯ್ಕೆಯಾಗಿ ಕಾತರದಿಂದ ಕಾದಿದ್ದುದು ಕಂಡು ಬಂತು.
ಇದು ರಾಜ್ಯಮಟ್ಟದ ಪ್ರಕ್ರಿಯೆಯಾಗಿದ್ದು, ಇಂದು ತಾಲ್ಲೂಕುಮಟ್ಟದಲ್ಲಿ ಸ್ಥಳ ಆಯ್ಕೆ ಕೌನ್ಸಿಲಿಂಗ್ ಪ್ರಕ್ರಿಯೆ ಮುಗಿಸಲೇಬೇಕಾಗಿದೆ ಎಂಬುದು ಇಲಾಖೆಯ ಅಧಿಕಾರಿಗಳ ಮಾತಾಗಿದೆ.
ನಾಳೆಯೇ ಜಿಲ್ಲಾಮಟ್ಟದ ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರ ಹೆಚ್ಚುವರಿ ಕೌನ್ಸಿಲಿಂಗ್ ಜಿಲ್ಲಾಮಟ್ಟದ ಪ್ರಕ್ರಿಯೆಗೆ ವೇಳಾಪಟ್ಟಿ ನಿಗಧಿಯಾಗಿರುವುದರಿಂದ ಇಂದು ನಿಗಧಿಯಾಗಿರುವ ಕೌನ್ಸಿಲಿಂಗ್ ಅನ್ನು ಇಂದು ಎಷ್ಟೇ ಸಮಯವಾದರೂ ಮುಗಿಸುವುದಾಗಿ ಡಿಡಿಪಿಐ ಕೃಷ್ಣಮೂರ್ತಿ ಮಾಧ್ಯಮಗಳಿಗೆ ತಿಳಿಸಿದರು.
ಪ್ರಕ್ರಿಯೆಯಲ್ಲಿ ಇಲಾಖೆಯ ಶಿಕ್ಷಣಾಧಿಕಾರಿ ಮುನಿವೆಂಕಟರಾಮಾಚಾರಿ, ಬಿಇಒಗಳಾದ ಕನ್ನಯ್ಯ ಉಮಾದೇವಿ, ಗಂಗರಾಮಯ್ಯ, ಸುಕನ್ಯಾ,ಚಂದ್ರಶೇಖರ್, ಚಂದ್ರಕಲಾ, ವಿಷಯ ಪರಿವೀಕ್ಷಕರಾದ ಕೃಷ್ಣಪ್ಪ, ಶಶಿವಧನ, ಗಾಯತ್ರಿ,ಶಂಕರೇಗೌಡ, ವೆಂಕಟೇಶಪ್ಪ, ಎಪಿಸಿಒ ಮೋಹನ್ ಬಾಬು, ಇಲಾಖೆಯ ವ್ಯವಸ್ಥಾಪಕ ಗೋವಿಂದಗೌಡ, ಅಧೀಕ್ಷಕ ಮಂಜುನಾಥರೆಡ್ಡಿ, ಕೇಶವರೆಡ್ಡಿ, ಸಿಬ್ಬಂದಿ ಲಕ್ಷ್ಮಣ್, ಚಿರಂಜೀವಿ, ವೇಣುಗೋಪಾಲ್ ದೇವರಾಜ್ ಮತ್ತಿತರರು ಕಾರ್ಯ ನಿರ್ವಹಿಸಿದ್ದು, ಶಿಕ್ಷಕ ಮುಖಂಡರಾದ ಚೌಡಪ್ಪ, ಅಪ್ಪಿಗೌಡ,ನಾಗರಾಜ್,ಶಿವಕುಮಾರ್,ಮುರಳಿಮೋಹನ್, ಮುನಿಯಪ್ಪ, ವಿನೋದ್‍ಬಾಬು, ಕೆಜಿಎಫ್ ತಾಲ್ಲೂಕು ನೌಕರರ ಸಂಘದ ಅಧ್ಯಕ್ಷ ನರಸಿಂಹಮೂರ್ತಿ ಸೇರಿದಂತೆ ವಿವಿಧ ಶಿಕ್ಷಕ ಸಂಘಟನೆಗಳ ಮುಖಂಡರು ಹಾಜರಿದ್ದರು.

ಮಂಗಳೂರು ಕಥೊಲಿಕ್ ಕ್ರೈಸ್ತ ಧರ್ಮಪ್ರಾಂತ್ಯದ ನಿಯೋಗವು ಇಂದು ನೂತನ ಜಿಲ್ಲಾಧಿಕಾರಿಯವರನ್ನು ಭೇಟಿ ನೀಡಿ ಶುಭ ಹಾರೈಸಿದರು

ಮಂಗಳೂರು, ಜೂನ್ 20: ಕಥೊಲಿಕ್ ಕ್ರೈಸ್ತ ಧರ್ಮಪ್ರಾಂತ್ಯದ ನಿಯೋಗವು ಇಂದು ನೂತನ ಜಿಲ್ಲಾಧಿಕಾರಿಯವರನ್ನು ಭೇಟಿ ನೀಡಿ ಶುಭ ಹಾರೈಸಿದರು.

ಮಂಗಳೂರಿನ ಬಿಷಪ್ ಅತೀ ಪೂಜ್ಯ ಡಾ. ಪೀಟರ್ ಪಾವ್ಲ್ ಸಲ್ಡಾನ್ಹಾ ಇವರ ಪರವಾಗಿ ನೂತನ ಜಿಲ್ಲಾಧಿಕಾರಿಯವರಾದ ಶ್ರೀ ಮುಳ್ಳಯಿ ಮುಗಿಲನ್ ಇವರಿಗೆ ಕ್ರೈಸ್ತ ಸಮುದಾಯದ ಪರವಾಗಿ ಸ್ವಾಗತಿಸಿ ಶುಭ ಹಾರೈಕೆಗಳನ್ನು ತಲುಪಿಸಿದರು. ನಿಯೋಗದಲ್ಲಿ ಸದಸ್ಯರಾದ, ಧರ್ಮಪ್ರಾಂತ್ಯದ ಸಾರ್ವಜನಿಕ ಸಂಪರ್ಕ ಅಧಿಕಾರಿ ಶ್ರೀ ರಾಯ್ ಕ್ಯಾಸ್ತೆಲಿನೊ, ರಾಕ್ಣೊ ವಾರ ಪತ್ರಿಕೆಯ ಸಂಪಾದಕರಾದ ಫಾ. ರೂಪೇಶ್ ಮಾಡ್ತಾ, ಫಾದರ್ ಮುಲ್ಲರ್ ಸಂಸ್ಥೆಯ ನಿರ್ದೇಶಕರಾದ ಫಾ. ರಿಚರ್ಡ್ ಕುವೆಲ್ಹೊ, ಸೈಂಟ್ ಜೋಸೆಫ್ ಇಂಜಿನಿಯರಿಂಗ್ ಕಾಲೇಜು ಸಂಸ್ಥೆಯ ನಿರ್ದೇಶಕರಾದ ಫಾ. ಪ್ರಕಾಶ್ ಡಿಸೋಜಾ, ಕಥೊಲಿಕ್ ಸಭಾ ಮಂಗಳೂರು ಇದರ ಪ್ರಸ್ತುತ ಅಧ್ಯಕ್ಷರಾದ ಶ್ರೀ ಸ್ಟ್ಯಾನಿ ಲೋಬೊ ಹಾಗು ನೂತನ ಅಧ್ಯಕ್ಷರಾದ ಶ್ರೀ ಆಲ್ವಿನ್ ಡಿಸೋಜಾ ಇವರು ಹಾಜರಿದ್ದು ಪುಸ್ತಕವನ್ನು ಉಡುಗೊರೆಯಾಗಿ ನೀಡುವುದರೊಂದಿಗೆ ಬಿಷಪ್‍ರವರ ವತಿಯಿಂದ ಹಾರೈಕೆ ಪತ್ರವನ್ನು ನೀಡಿ ಶುಭಕೋರಿದರು.