ಗಡಿನಾಡಿನ ಕನ್ನಡ ಪತ್ರಕರ್ತರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಂದನೆ

ಬೆಂಗಳೂರು: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ ಕೆಯುಡಬ್ಲ್ಯೂಜೆ ರಾಜ್ಯಾಧ್ಯಕ್ಷ ಶಿವಾನಂದ ತಗಡೂರು, ಐಎಫ್ ಡಬ್ಲ್ಯೂಜೆ ಅಧ್ಯಕ್ಷ ಬಿ.ವಿ. ಮಲ್ಲಿಕಾರ್ಜುನಯ್ಯ, ಕೇರಳ ರಾಜ್ಯ ಕಾಸರಗೋಡು ಘಟಕದ ಅಧ್ಯಕ್ಷ ಅಬ್ದುಲ್ ರೆಹಮಾನ್ ಸುಬ್ಬಯ್ಯಕಟ್ಟಿ ಅವರ ನೇತೃತ್ವದ ನಿಯೋಗ ಹೊರನಾಡಿನ ಕನ್ನಡ ಪತ್ರಕರ್ತರ ಸಮಸ್ಯೆ ಬಗ್ಗೆ ಗಮನಸೆಳೆಯಿತು.

ಮಾಧ್ಯಮ ಅಕಾಡೆಮಿ ಸೇರಿದಂತೆ ಎಲ್ಲಾ ಅಕಾಡೆಮಿ ಮತ್ತು ಪ್ರಾಧಿಕಾರಗಳಲ್ಲಿ ಗಡಿನಾಡಿನ ಕನ್ನಡಿಗರಿಗೆ ಆದ್ಯತೆ ನೀಡಬೇಕು ಎಂದು ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿಗಳಿಗೆ ಮನವಿ ಸಲ್ಲಿಸಲಾಯಿತು.

ಕೇರಳ ಘಟಕದ ವತಿಯಿಂದ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಕನ್ನಡ ಪುಸ್ತಕ ನೀಡಿ ಅಭಿನಂದಿಸಲಾಯಿತು.
ಹೊರನಾಡಿನ ಕನ್ನಡಿಗರ ಬೇಡಿಕೆಗಳ ಬಗ್ಗೆ ಗಮನ‌ಹರಿಸುವುದಾಗಿ ಇದೇ ಸಂದರ್ಭದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಭರವಸೆ ನೀಡಿದರು.

ಮುಸ್ಲಿಮ್ಸ್ ಎಂಪ್ಲಾಯೇಸ್ ಅಸೋಸಿಯೇಷನ್ ವತಿಯಿಂದ ನೂತನ ಜಿಲ್ಲಾಧಿಕಾರಿಗಳಾದ ಅಭಿನಂದನೆ

ಶ್ರೀನಿವಾಸಪುರ: ತಾಲೂಕಿನ ಮುಸ್ಲಿಮ್ಸ್ ಎಂಪ್ಲಾಯೇಸ್ ಅಸೋಸಿಯೇಷನ್ ವತಿಯಿಂದ ಕೋಲಾರದ ನೂತನ ಜಿಲ್ಲಾಧಿಕಾರಿಗಳಾದ ಅಕ್ರಂ ಪಾಷ ಅವರನ್ನು ಭೇಟಿ ಮಾಡಿ ಅಭಿನಂದಿಸಿದರು. ನಿಯೋಗದಲ್ಲಿ ಮುಸ್ಲಿಮ್ಸ್ ಎಂಪ್ಲಾಯೇಸ್ ಅಸೋಸಿಯೇಷನ್ ಸಲೀಂ ಅಹ್ಮದ್ ಅಬ್ದುಲ್ ವಾಜಿದ್, ಮೊಹಮ್ಮದ್ ಅಲಿ, ಮೊಹಮ್ಮದ್ ಸಾದಿಕ್, ಅಕ್ಮಲ್ ಪಾಷಾ, ತಾಜ್ ಪಾಷಾ, ಸೈಯದ್ ಗೌಸ್, ನಾಸೀರ್ ಪಾಷ ಉಪಸ್ಥಿತರಿದ್ದರು.

ಸಂತ ಮೇರಿ ಪ.ಪೂ ಕಾಲೇಜಿನಲ್ಲಿ ನಶಾ ಮುಕ್ತ ಭಾರತ ಅಭಿಯಾನ ಕಾರ್ಯಕ್ರಮ

ಕುಂದಾಪುರದ ಸಂತ ಮೇರಿ ಪದವಿ ಪೂರ್ವ ಕಾಲೇಜಿನಲ್ಲಿ ದಿನಾಂಕ 26.06.2023 ರಂದು ಕುಂದಾಪುರದ ಶ್ರೀ ಮಾತಾ ಆಸ್ಪತ್ರೆಯ ಖ್ಯಾತ ಮನೋರೋಗ ವೈದ್ಯರಾದ ಶ್ರೀ ಪ್ರಕಾಶ ತೋಳಾರ್ ರವರ ಘನ ಉಪಸ್ಥಿತಿಯಲ್ಲಿ “ನಶಾ ಮುಕ್ತ ಭಾರತ ಅಭಿಯಾನ” ಕಾರ್ಯಕ್ರಮ ಜರುಗಿತು.

ಕಾರ್ಯಕ್ರಮದಲ್ಲಿ ಪ್ರಖ್ಯಾತ ವೈದ್ಯರಾದ ಗೌರವಾನ್ವಿತ ಶ್ರೀ ಪ್ರಕಾಶ್ ತೋಳಾರ್ ರವರು ಮುಖ್ಯ ಅತಿಥಿಗಳಾಗಿ ದೀಪವನ್ನು ಬೆಳಗುವದರ ಮೂಲಕ ಉದ್ಘಾಟಿಸಿ, ವಿದ್ಯಾರ್ಥಿಗಳಿಗೆ ಹದಿ ಹರೆಯದ ವಯಸ್ಸು ತುಂಬಾ ಪ್ರಾಮುಖ್ಯವಾದುದು. ಈ ಮಾದಕ ಸೇವನೆ ತಕ್ಷಣಕ್ಕೆ ಮಾನಸಿಕ ನೆಮ್ಮದಿಯನ್ನು ನೀಡುವುದಾಗಿದ್ದರೂ ನಮ್ಮನ್ನು ಸಮಸ್ಯೆಯ ಸುಳಿಯಲ್ಲಿ ಸಿಲುಕಿಸುತ್ತದೆ ಎನ್ನುತ್ತಾ, ಮಾದಕ ಸೇವನೆಯಿಂದ ನಮ್ಮ ಅಂಗಾಂಗಗಳಿಗೆ ಸಮಸ್ಯೆಯಾಗುತ್ತದೆ ಎಂದು ಹೇಳಿದರು.ಅಲ್ಲದೆ ವಿದ್ಯಾರ್ಥಿಗಳು ಅರಿವು ಮೂಡಿಸಿಕೊಳ್ಳಬೇಕು ಎನ್ನುತ್ತಾ ಅನೇಕ ಎಚ್ಚರಿಕೆಯ,ಕಿವಿ ಮಾತುಗಳನ್ನಾಡುತ್ತಾ,ವಿದ್ಯಾರ್ಥಿಗಳ ಕೆಲವು ಪ್ರಶ್ನೆಗಳಿಗೆ ಉತ್ತರಿಸಿದರು.
ಕಾರ್ಯಕ್ರಮದಲ್ಲಿ ಕಾಲೇಜಿನ ಪ್ರಾಂಶುಪಾಲರಾದ ಶ್ರೀಮತಿ ರೇಷ್ಮಾ ಫೆರ್ನಾಂಡಿಸ್ ರವರು ಅಧ್ಯಕ್ಷ ಸ್ಥಾನ ವಹಿಸಿ ವಿದ್ಯಾರ್ಥಿಗಳಿಗೆ ಸಲಹೆ ಸೂಚನೆಗಳನ್ನು ನೀಡಿ, ಮಾದಕ ವ್ಯಸನದ ದುಷ್ಪರಿಣಾಮದ ಕುರಿತು ತಿಳಿಸಿದರು. ಉಪ ಪ್ರಾಂಶುಪಾಲರಾದ ಶ್ರೀಮತಿ ಮಂಜುಳಾ ನಾಯರ್ ರವರು ಸಭೆಯಲ್ಲಿ ಉಪಸ್ಥಿತರಿದ್ದರು.
ವಿದ್ಯಾರ್ಥಿಗಳಿಂದ ಪ್ರತಿಜ್ಞೆ ಸ್ವೀಕಾರ ಮಾಡಿಸಲಾಯಿತು.

ಕಾರ್ಯಕ್ರಮ ಪ್ರಾರ್ಥನೆಯಿಂದ ಪ್ರಾರಂಭವಾಗಿ, ವಿದ್ಯಾರ್ಥಿಗಳಾದ ಕುಮಾರಿ ಅಮೃತಾ ಹಾಗೂ ಪ್ರಗತಿ ಕ್ರಮವಾಗಿ ಸ್ವಾಗತಿಸಿ,ವಂದಿಸಿದರು. ಕುಮಾರಿ ನಂದಿತಾ ಹಾಗೂ ಕುಮಾರಿ ಕೀರ್ತನಾ ಕಾರ್ಯಕ್ರಮ ನಿರೂಪಿಸಿದರು.