ಶ್ರೀನಿವಾಸಪುರ: ನಗರ ಪ್ರದೇಶದಲ್ಲಿ ಯೋಗ ಶಿಕ್ಷಣ ಆದ್ಯತೆ ವಿಷಯವಾಗಿದೆ. ಗ್ರಾಮೀಣ ಪ್ರದೇಶದಲ್ಲಿ ಯೋಗಾಭ್ಯಾಸದಿಂದ ದೊರೆಯುವ ಪ್ರಯೋಜನ ಕುರಿತು ಪ್ರಚಾರ ಮಾಡಬೇಕಾದ ಅಗತ್ಯವಿದೆ ಎಂದು ತಾಲ್ಲೂಕು ಎಲ್‍ಐಸಿ ವ್ಯವಸ್ಥಾಪಕ ಎಸ್.ವಿ.ಪ್ರಸಾದ್ ಹೇಳಿದರು.
ಪಟ್ಟಣದಲ್ಲಿ ಎಲ್‍ಐಸಿ ಸಿಬ್ಬಂದಿ ವತಿಯಿಂದ ವಿಶ್ವ ಯೋಗ ದಿನಾಚರಣೆ ಅಂಗವಾಗಿ ಏರ್ಪಡಿಸಿದ್ದ ಯೋಗ ಪ್ರಚಾರ ಜಾಥಾಗೆ ಚಾಲನೆ ನೀಡಿ ಮಾತನಾಡಿದ ಅವರು, ಯೋಗಾಭ್ಯಾಸದಿಂದ ದೈಹಿಕ ಹಾಗೂ ಮಾನಸಿಕ ಆರೋಗ್ಯ ವೃದ್ಧಿಯಾಗುತ್ತದೆ ಎಂದು ಹೇಳಿದರು.
ಇಂದು ವಿಶ್ವ ಅಡ್ಡ ಪರಿಣಾಮ ಇಲ್ಲದ ಆರೋಗ್ಯ ರಕ್ಷಣೆಗಾಗಿ ಭಾರತದ ಕಡೆ ನೋಡುತ್ತಿದೆ. ಯೋಗ ಪರ್ಯಾಯ ಆರೋಗ್ಯ ರಕ್ಷಣಾ ಮಾರ್ಗವಾಗಿ ಸ್ವೀಕರಿಸಲ್ಪಡುತ್ತಿದೆ. ಭಾರತದ ಕೊಡುಗೆಯಾದ ಯೋಗ ಈಗ ಗಡಿದಾಟಿ ಹೋಗಿದೆ. ವಿಶ್ವದಾದ್ಯಂತ ಜನರು ಯೋಗ ಕಲಿಯಲು ಹಾತೋರೆಯುತ್ತಿದ್ದಾರೆ ಎಂದು ಹೇಳಿದರು.
ಎಲ್‍ಐಸಿ ಅಭಿವೃದ್ಧಿ ಅಧಿಕಾರಿಗಳಾದ ರವೀಂದ್ರಯ್ಯ ಆರ್.ಕುಲಕರ್ಣಿ, ಬಾಲಚಂದ್ರ, ಶ್ರೀನಿವಾಸ್ ಇದ್ದರು.
Month: June 2023
ಮರೆತ ದಾರಿಗಳ ಹರಿಕಾರ ಶ್ರೀರಾಮರೆಡ್ಡಿ ಕೃತಿ ಬಿಡುಗಡೆ ಹಾಗೂ ಭವಿಷ್ಯದ ಮಕ್ಕಳ ರಂಗಭೂಮಿ, ಸವಾಲುಗಳು, ಸಾಧ್ಯತೆಗಳು ಎಂಬ ವಿಷಯ ಕುರಿತು ವಿಚಾರ ಸಂಕಿರಣ
ಶ್ರೀನಿವಾಸಪುರ: ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದ ಸಭಾಂಗಣದಲ್ಲಿ ಜೂ.23 ರಂದು ಬೆಳಿಗ್ಗೆ 11 ಗಂಟೆಗೆ ಮರೆತ ದಾರಿಗಳ ಹರಿಕಾರ ಶ್ರೀರಾಮರೆಡ್ಡಿ ಕೃತಿ ಬಿಡುಗಡೆ ಹಾಗೂ ಭವಿಷ್ಯದ ಮಕ್ಕಳ ರಂಗಭೂಮಿ, ಸವಾಲುಗಳು, ಸಾಧ್ಯತೆಗಳು ಎಂಬ ವಿಷಯ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ನಾಟಕಕಾರ ಕೋಟಿಗಾನಹಳ್ಳಿ ರಾಮಯ್ಯ ಹೇಳಿದರು.
ಪಟ್ಟಣದ ಭೈರವೇಶ್ವರ ವಿದ್ಯಾನಿಕೇತನದಲ್ಲಿ ಕೋಲಾರದ ಕೃಷಿ ಸಂಸ್ಕøತಿ ಕೇಂದ್ರದ ವತಿಯಿಂದ ಬುಧವಾರ ಏರ್ಪಡಿಸಿದ್ದ ಸುದ್ದಿ ಗೋಷ್ಠಿಯಲ್ಲಿ ಮಾತನಾಡಿದ ಅವರು, ಆದಿಚುಂಚನಗಿರಿ ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ. ಸಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ರಂಗಭೂಮಿ ಕಲಾವಿದೆ ಡಾ. ವಿಜಯ, ಶಿಕ್ಷಣ ತಜ್ಞ ಕೋಡಿ ರಂಗಪ್ಪ ಕೃತಿ ಬಿಡುಗಡೆ ಮಾಡುವರು. ಕೃತಿ ಕುರಿತು ನಾನು ಮಾತನಾಡುತ್ತೇನೆ ಎಂದು ಹೇಳಿದರು.
ಸಂಸ್ಥೆ ಮಹಾ ಪೋಷಕ ಡಿ.ಎಲ್.ಸದಾಶಿವರೆಡ್ಡಿ, ಆದಿಚುಂಚನಗಿರಿ ಶಿಕ್ಷಣ ಟ್ರಸ್ಟ್ ಮುಖ್ಯ ಆಡಳಿತಾಧಿಕಾರಿ ಡಾ. ಎನ್.ಶಿವರಾಮರೆಡ್ಡಿ, ಚಲನಚಿತ್ರ ನಿರ್ದೇಶಕ ಬಿ.ಸುರೇಶ್, ವಲಯ ಅರಣ್ಯಾಧಿಕಾರಿ ಮಹೇಶ್ ಕಾಡೇಗೌಡ, ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಎನ್.ಬಿ.ಗೋಪಾಲಗೌಡ, ಕರ್ನಾಟಕ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆ ಪ್ರಧಾನ ಕಾರ್ಯದರ್ಶಿ ಅಬ್ಬಣಿ ಶಿವಪ್ಪ, ಪ್ರಗತಿಪರ ಚಿಂತಕ ಡಾ. ಜಿ.ಶಿವಪ್ಪ ಅರಿವು, ಲೇಖಕ ಪನಸಮಾಕನಹಳ್ಳಿ ಆರ್.ಚೌಡರೆಡ್ಡಿ ಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.
ಭೈರವೇಶ್ವರ ವಿದ್ಯಾ ಸಂಸ್ಥೆಗಳ ಸಮೂಹ ಹಾಗೂ ಆಡಳಿತ ಮಂಡಳಿ ನಿರ್ದೇಶಕ ಎ.ವೆಂಕಟರೆಡ್ಡಿ ಮಾತನಾಡಿ, ಮಧ್ಯಾಹ್ನ 2.30ಕ್ಕೆ ಭವಿಷ್ಯದ ಮಕ್ಕಳ ರಂಗಭೂಮಿ, ಸವಾಲುಗಳು ಮತ್ತು ಸಾಧ್ಯತೆಗಳು ಎಂಬ ವಿಷಯ ಕುರಿತು ವಿಚಾರ ಸಂಕಿರಣ ಏರ್ಪಡಿಸಲಾಗಿದೆ ಎಂದು ಹೇಳಿದರು.
ಬಿಜಿಎಸ್ ಶಿಕ್ಷಣ ಸಂಸ್ಥೆಗಳ ಮುಖ್ಯ ಆಡಳಿತಾಧಿಕಾರಿ ಡಾ. ಎನ್.ಶಿವರಾಮರೆಡ್ಡಿ ಅವರ ಅಧ್ಯಕ್ಷತೆಯಲ್ಲಿ ಶಿಕ್ಷಣ ತಜ್ಞ ಸಂತೋಷ್ ಕವಲಗಿ ಕಾರ್ಯಕ್ರಮ ಉದ್ಘಾಟಿಸುವರು. ಸೀತಿ ಬಿಜಿಎಸ್ ಶಾಲೆ ಪ್ರಾಂಶುಪಾಲ ಸಿ.ಬೈರಪ್ಪ, ಸಾಹಿತಿಗಳಾದ ಕೇಶವ ಮಳಗಿ, ಸ.ರಘುನಾಥ, ಕೋಟಿಗಾನಹಳ್ಳಿ ರಾಮಯ್ಯ, ಶ್ರೀಪಾದ ಭಟ್, ಎಚ್.ನರಸಿಂಹಯ್ಯ ಭಾಗವಹಿಸುವರು ಎಂದು ಹೇಳಿದರು.
ಪ್ರಾಂಶುಪಾಲ ಗಂಗಾಧರ ಗೌಡ, ಮುಖ್ಯ ಶಿಕ್ಷಕ ವೆಂಕಟರಮಣಾರೆಡ್ಡಿ, ಕೃಷಿ ಸಂಸ್ಕøತಿ ಕೇಂದ್ರದ ಮುಖ್ಯಸ್ಥ ಬಿಸನಹಳ್ಳಿ ಬೈಚೇಗೌಡ ಇದ್ದರು.
ಕೋಲಾರ ಜಿಲ್ಲೆಯನ್ನು ರಾಜ್ಯದಲ್ಲೇ ಮಾದರಿ ಜಿಲ್ಲೆಯನ್ನಾಗಿಸುವ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ:ನೂತನ ಜಿಲ್ಲಾಧಿಕಾರಿ ಅಕ್ರಂ ಪಾಷಾ
ಕೋಲಾರ, ಜೂನ್22 : ಕೋಲಾರ ಜಿಲ್ಲೆಯನ್ನು ರಾಜ್ಯದಲ್ಲೇ ಮಾದರಿ ಜಿಲ್ಲೆಯನ್ನಾಗಿಸುವ ಗುರಿಯನ್ನು ಹೊಂದಿ ಆ ನಿಟ್ಟಿನಲ್ಲಿ ಕಾರ್ಯನಿರ್ವಹಿಸಿ ಎಂದು ನೂತನ ಜಿಲ್ಲಾಧಿಕಾರಿ ಅಕ್ರಂ ಪಾಷಾರವರು ಎಲ್ಲಾ ಜಿಲ್ಲಾ ಮಟ್ಟದ ಅಧಿಕಾರಿಗಳಿಗೆ ಸೂಚಿಸಿದರು. ಇಂದು ಜಿಲ್ಲಾಧಿಕಾರಿಗಳ ನ್ಯಾಯಾಂಗ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ಅಧಿಕಾರಿಗಳ ಮೊದಲ ಸಭೆಯನ್ನುದ್ದೇಶಿಸಿ ಅವರು ಮಾತನಾಡುತ್ತಿದ್ದರು. ಸರ್ಕಾರ ಬದಲಾಗಿದೆ. ಸರ್ಕಾರದ ಕಾರ್ಯವೈಖರಿಯೂ ಬದಲಾಗಿದೆ ಆದ್ದರಿಂದ ಹೊಸ ಸರ್ಕಾರದ ಆಶಯಗಳಿಗನುಗುಣವಾಗಿ ಅದರ ವೇಗಕ್ಕೆ ತಕ್ಕಂತೆ ಕೆಲಸ ಮಾಡುವುದು ಕಾರ್ಯಾಂಗದ ಮೇಲಿನ ಜವಾಬ್ದಾರಿಯಾಗಿದೆ ಎಂದರು. ಜಿಲ್ಲಾ ಮಟ್ಟದ ಕಚೇರಿಗಳ ಅಂತರ್ಜಾಲ ತಾಣಗಳನ್ನು
ಇಂದೀಕರಿಸುವುದರಿಂದ (uಠಿಜಚಿಣe) ಜನಸಾಮಾನ್ಯರು ಅನಾವಶ್ಯಕವಾಗಿ ಕಚೇರಿಗಳಿಗೆ ಅಲೆದಾಡುವುದನ್ನು ತಪ್ಪಿಸಬಹುದಾಗಿದೆ ಈ ಹಿನ್ನೆಲೆಯಲ್ಲಿ ಇಂದಿನ ತಂತ್ರಜ್ಞಾನಕ್ಕನುಗುಣವಾಗಿ ತಮ್ಮ ತಮ್ಮ ಕಚೇರಿಗಳ ವೆಬ್‍ಸೈಟ್ ಗಳನ್ನು ಅಪ್‍ಡೇಟ್ ಮಾಡುವುದು ಪ್ರಥಮಾದ್ಯತೆಯ ಕೆಲಸವಾಗಿದೆ. ಇದರಿಂದ ಸಾರ್ವಜನಿಕರಿಗೆ ನಿಮ್ಮ ಕಚೇರಿಯಲ್ಲಿ ಲಭ್ಯವಾಗುವ ಸೇವೆಗಳ ಮಾಹಿತಿ ಅವರು ಕುಳಿತಲ್ಲೇ ದೊರೆಯುತ್ತದೆ. ಆಗ ನಿಮ್ಮ ಮೇಲಿನ ಒತ್ತಡವೂ ಕಡಿಮೆಯಾಗುತ್ತದೆ ಎಂದರು. ಅಧಿಕಾರಿಗಳು ಎಲ್ಲಾಸಭೆಗಳಿಗೆ ಖುದ್ದು ಹಾಜರಾಗಬೇಕು. ಸಮಯ ಪಾಲನೆ ಮಾಡಬೇಕು ಹಾಗೂ ಸಬೆಗೆ ಸಂಪೂರ್ಣ ಮಾಹಿತಿಯನ್ನು ಖುದ್ದು ಪರಿಶೀಲಿಸಿ ಮಂಡಿಸಬೇಕು. ಸರ್ಕಾರದ ಯೋಜನೆಗಳು ಜನರಿಗೆ ತಲುಪುವಂತೆ ಖಾತ್ರಿಪಡಿಸಿಕೊಳ್ಳಬೆಕು ಎಂದು ತಿಳಿಸಿದರು. ಈ ಸಭೆಯ ಮೂಲ ಉದ್ದೇಶ ಜಿಲ್ಲೆಯಲ್ಲಿನ ಕುಡಿಯುವ ನೀರಿನ ಸಮಸ್ಯೆಯನ್ನು ಬಗೆಹರಿಸುವುದಾಗಿದೆ. ಪ್ರಸ್ತುತ ಜಿಲ್ಲೆಯಲ್ಲಿ ಮುಂಗಾರು ಮಳೆ ತಡವಾಗಿದ್ದರೂ ಕುಡಿಯುವ ನೀರಿನ ಅಭಾವ ಉಂಟಾಗಿಲ್ಲ. ಸಮಸ್ಯೆ ಕಂಡುಬಂದಿರುವ ಪ್ರದೇಶಗಳಲ್ಲಿ ಈಗಾಗಲೇ ನೀರು ಪೂರೈಕೆಗೆ ಕ್ರಮ ವಹಿಸಲಾಗಿದೆ. ಮೂಲಭೂತ ಸೌಕರ್ಯಗಳಾದ ಕುಡಿಯುವನೀರು , ವಸತಿ ಮುಂತಾದ ಅತೀ ಉಪಯುಕ್ತ ವಿಷಯಗಳಿಗೆ ಪರಮಾದ್ಯತೆ ನೀಡಬೇಕು ಸಂಬಂಧಿಸಿದ ಅಧಿಕಾರಿಗಳು ಇಂತಹ ದೂರುಗಳಿಗೆ
ತಕ್ಷಣವೇ ಸ್ಪಂದಿಸಬೇಕು ಎಂದರು. ಗ್ರಾಮಪಂಚಾಯ್ತಿ, ತಾಲ್ಲೂಕು ಪಂಚಾಯ್ತಿ ಹಾಗೂ ನಗರಸಭೆಯಿಂದ ಘನ ತ್ಯಾಜ್ಯ ವಿಲೇವಾರಿ ಬಗ್ಗೆ ಸೂಕ್ತ ಕ್ರಮ ಕೈಗೊಳ್ಳಬೇಕು ಜನರ ಆರೋಗ್ಯದ ವಿಚಾರದಲ್ಲಿ ವಿಳಂಬ ಧೋರಣೆ ಮಾಡಕೂಡದು. ತ್ಯಾಜ್ಯ ವಿಲೇವಾರಿಗೆ ಹಾಗೂ ಸರ್ಕಾರಿ ಕಟ್ಟಡಗಳಿಗೆ ಸೂಕ್ತ ಸ್ಥಳ ಲಭ್ಯವಿಲ್ಲದಿದ್ದಲ್ಲಿ ಜಿಲ್ಲಾಡಳಿತಕ್ಕೆ ತಿಳಿಸಿದರೆ ಸೂಕ್ತ ಜಾಗ ಗುರುತಿಸಿಕೊಡುವುದಾಗಿ ತಿಳಿಸಿದರು.
ಅಂತೆಯೇ ನಿಮ್ಮ ನಿಮ್ಮ ಇಲಾಖೆಗಳಿಗೆ ಸಂಬಂಧಿಸಿದ ಮಾಹಿತಿಗಳನ್ನು ಅಪ್‍ಡೇಟ್ ಮಾಡಿಟ್ಟುಕೊಳ್ಳಬೇಕು ಎಂದರು.
ಮುಂಗಾರು ಮಳೆ ಆರಂಭವಾಗಿರುವ ಹಿನ್ನೆಲೆಯಲ್ಲಿ ಪ್ರಕೃತಿ ವಿಕೋಪಗಳ ನಿರ್ವಹಣೆಗಾಗಿ ಸ್ಥಾಪಿಸಲಾಗಿರುವ ಹೆಲ್ಪ್‍ಲೈನ್
ಸಂಖ್ಯೆಗಳು ಹಾಗೂ ಸಂಬಂಧಿತ ಇಲಾಖೆಗಳು ಹೆಚ್ಚು ನಿಗಾ ವಹಿಸಿ 24*7 ಕಾರ್ಯನಿರ್ವಹಿಸಬೇಕು. ಹೆಲ್ಪ್‍ಲೈನ್‍ನಲ್ಲಿ ಮೂರು ಪಾಳಿಗಳಲ್ಲಿ
ಕಾರ್ಯ ನಿರ್ವಹಿಸಲು ಸೂಕ್ತ ಸಿಬ್ಬಂದಿಯನ್ನು ನಿಯೋಜಿಸಬೇಕು. ಜಿಲ್ಲೆಯಲ್ಲಿ ಯಾವುದೇ ಪ್ರಾಣಹಾನಿ, ಆಸ್ತಿ ಪಾಸ್ತಿ ಹಾಗೂ ಜಾನುವಾರು
ಹಾನಿಯಾಗದಂತೆ ಮುಣಜಾಗ್ರತಾ ಕ್ರಮಗಳನ್ನು ವಹಿಸಬೇಕು ಎಂದರು.
ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿಗಳಾದ ಯುಕೇಶ್ ಕುಮಾರ್ ರವರು ಮಾತನಾಡಿ ಜಿಲ್ಲೆಯ ಅಧಿಕಾರಿಗಳು
ಸವಾಲುಗಳನ್ನು ಎದುರಿಸಲು ಸಮರ್ಥರಿದ್ದಾರೆ. ಆದರೆ ಸಭೆಗಳಲ್ಲಿ ಚರ್ಚಿಸುವ ವಿಷಯಗಳಿಗೆ ಮಾತ್ರ ಸ್ಪಂದಿಸುತ್ತಾರೆ ಹಾಗಲ್ಲದೇ
ತಮ್ಮ ವ್ಯಾಪ್ತಿಗೆ ಬರುವ ಎಲ್ಲ ವಿಷಯಗಳಲ್ಲೂ ಸಹ ಆಸಕ್ತಿ ವಹಿಸಿಕಾರ್ಯ ನಿರ್ವಹಿಸಬೇಕು ಆಗ ಮಾತ್ರ ಜಿಲ್ಲೆಯ ಸಮಗ್ರ
ಅಭಿವೃದ್ದಿ ಆಗಲು ಸಾಧ್ಯ ಎಂದು ತಿಳಿಸಿದರು. ಸಭೆಯಲ್ಲಿ ಜಿಲ್ಲಾ ಅರಣ್ಯಾಧಿಕಾರಿ ಏಡುಕೊಂಡಲು ಉಪವಿಭಾಗಾಧಿಕಾರಿ ವೆಂಕಟಲಕ್ಷ್ಮೀ , ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ ಡಾ. ಜಗದೀಶ್ ಸೇರಿದಂತೆ ಜಿಲ್ಲಾಮಟ್ಟದ ಎಲ್ಲ ಅಧಿಕಾರಿಗಳು ಉಪಸ್ಥಿತರಿದ್ದರು.
Milagres Central School celebrated International Yoga Day
Yoga, an ancient discipline, is one of the best practices you can
adopt for both physical and mental well-being. Milagres Central School
celebrated the 9 th annual International Yoga Day with the theme “One
Earth, One Family , One Future” on 21 st June 2023.
The programme began at 8.a.m. with the Prayer Song. International
Yoga Day 2023 was inaugurated by the School Principal , Rev.Fr.Joseph
Uday Fernandes, Physical Education Trainer Mr.Keshav Naik, and the
student representatives of grade 9 by lighting the lamp which signifies
purity, goodness, prosperity and wisdom.
The Principal Rev. Fr Joseph Uday Fernandes highlighted the
importance of yoga and the benefits it offers to the mind and body. He
expressed that yoga is the best practice for good health and wished all
the students a very happy International Yoga Day.
For students to practice the right way of yoga, the Physical Education
Trainer taught the students various Yoga asanas.
The programme concluded with vote of thanks delivered by Ms.Kavitha.
The programme was taken through by Ms.Priya Rodrigues.
ಮೂಡ್ಲಕಟ್ಟೆ ಎಂ ಐ ಟಿ ಕೆ ಯಲ್ಲಿ ವಿಶ್ವಯೋಗ ದಿನಾಚರಣೆ
ಎಂ ಐ ಟಿ ಮೂಡ್ಲಕಟ್ಟೆ, ಕುಂದಾಪುರ ಇಲ್ಲಿ ವಿಶ್ವಯೋಗ ದಿನದಂದು ಒಂದು ಗಿನ್ನಿಸ್ ದಾಖಲೆ ಸಹಿತ ಎಂಟು ಜಾಗತಿಕ ದಾಖಲೆ ಮಾಡಿರುವ “ಯೋಗರತ್ನ”, “ನಾಟ್ಯಮಯೂರಿ” ಬಿರುದಾಂಕಿತ ತನುಶ್ರೀ ಪಿತ್ರೋಡಿಯವರನ್ನು ಸನ್ಮಾನಿಸಲಾಯಿತು. ಸಭಾಕಾರ್ಯಕ್ರಮದ ನಂತರ ತನುಶ್ರೀಯವರು ಆಸಕ್ತ ವಿದ್ಯಾರ್ಥಿಗಳಿಗೆ ವಿವಿಧ ಯೋಗಾಸನಗಳನ್ನು ಮಾಡುವ ಬಗೆಯನ್ನು ತಿಳಿಸಿದರು. ಈ ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಯಾಗಿ ಆಗಮಿಸಿದ ಹಿರಿಯ ಯೋಗ ಗುರುಗಳಾದ ಮಂಜುನಾಥ ಎಸ್ ರವರು ಯೋಗದ ಹಿರಿಮೆ ಮತ್ತು ಉಪಯೋಗದ ಕುರಿತು ವಿದ್ಯಾರ್ಥಿಗಳಿಗೆ ವಿವರವಾಗಿ ತಿಳಿಸಿದರು.
ಕೋಲಾರ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಮ್ ಪಾಷಾ ಅಧಿಕಾರ ಸ್ವೀಕಾರ
ಕೋಲಾರ : ಕೋಲಾರ ಜಿಲ್ಲೆಯ ನೂತನ ಜಿಲ್ಲಾಧಿಕಾರಿಯಾಗಿ ಅಕ್ರಮ್ ಪಾಷಾ ಅವರು ಇಂದು ಜಿಲ್ಲಾಡಳಿತ ಭವನದ ಜಿಲ್ಲಾಧಿಕಾರಿ ಕಚೇರಿಯಲ್ಲಿ ಅಧಿಕಾರ ಸ್ವೀಕಾರ ಮಾಡಿದರು .
ಕೋಲಾರ ಜಿಲ್ಲಾಧಿಕಾರಿಯಾಗಿ ಅಕ್ರಮ್ ಪಾಷಾ ರವರನ್ನು ನೇಮಕ ಮಾಡಿ ಸರ್ಕಾರ ಆದೇಶ ಹೊರಡಿಸಿತ್ತು .
ಈ ವೇಳೆ ಅಪರ ಜಿಲ್ಲಾಧಿಕಾರಿಯವರಿಗೆ ಹೂಗುಚ್ಚು ನೀಡಿ ಶುಭ ಕೋರಿದರು. ಈ ಸಂಧರ್ಭದಲ್ಲಿ ಉಪವಿಭಗಾಧಿಕಾರಿ ವೆಂಕಟಲಕ್ಷ್ಮಿ ಜಿಲ್ಲೆಯ ಎಲ್ಲ ತಹಸೀಲ್ದಾರ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರುಗಳು ಹಾಜರಿದ್ದರು.
ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‍ನಿಂದ ವಿದ್ಯಾರ್ಥಿಗಳಿಗೆ ಸಹಾಯಧನ ವಿತರಣೆ-ವಿಮರ್ಶಾತ್ಮಕ ಚಿಂತನಾ ಶಕ್ತಿ ವಿದ್ಯಾರ್ಥಿಗಳಲ್ಲಿರಬೇಕು:ಡಾ| ಎಂ. ಮಹಾಬಲೇಶ್ವರ ರಾವ್
ವಿದ್ಯಾರ್ಥಿಗಳಿಗಿಂದು ಪ್ರೇರಣೆ ನೀಡುವ ಉತ್ತಮವಾದ ಸೌಲಭ್ಯಗಳು ದೊರಕುತ್ತಿವೆ. ಗಿಳಿಯಾರು ಕುಶಲ ಹೆಗ್ಡೆ ಸ್ಮಾರಕ ಚಾರಿಟೆಬಲ್ ಟ್ರಸ್ಟ್‍ನವರು ಎರಡು ದಶಕಗಳಿಂದ ವಿದ್ಯಾರ್ಥಿಗಳಲ್ಲಿ ಪ್ರೇರಣೆ ತುಂಬುತ್ತಿದ್ದಾರೆ. ವಿದ್ಯಾರ್ಥಿಗಳು ಮುಂದೆ ಉತ್ತಮ ಗೌರವದ ಸ್ಥಾನ ಪಡೆದು ಸಂಪಾದನೆ ಮಾಡಿದಾಗ ಇದೇ ರೀತಿ ಅರ್ಹರಿಗೆ ಸಹಾಯ ನೀಡಬೇಕು. ವಿದ್ಯಾರ್ಥಿಗಳು ಶೈಕ್ಷಣಿಕ ವಾತಾವರಣದಲ್ಲಿ ವಿಮರ್ಶಾತ್ಮಕವಾದ ಚಿಂತನಾ ಶಕ್ತಿ ಬೆಳೆಸಿಕೊಳ್ಳಬೇಕು. ಯಾರು ಹೆಚ್ಚು ಪ್ರಶ್ನೆ ಕೇಳುವ ಪ್ರಯತ್ನ ಮಾಡುತ್ತಾರೋ ಅವರು ಅಧ್ಯಯನ ಮಾಡುತ್ತಿದ್ದಾರೆ ಎಂದು ಅರ್ಥ. ಏನು, ಏಕೆ, ಯಾವುದು, ಎಲ್ಲಿ, ಹೇಗೆ… ಹೀಗೆ ವಿಷಯದ ಬಗ್ಗೆ ನಮ್ಮ ಚಿಂತನೆ ಜೀವನದಲ್ಲಿ ರೂಢಿಯಾದರೆ ಯಾವುದೇ ಸಿದ್ಧ ಚೌಕಟ್ಟನ್ನು ಮುರಿದು ಬೆಳೆಯಬಹುದು. ಸೃಜನಾತ್ಮಕ ಚಿಂತನೆ ವಿದ್ಯಾರ್ಥಿಗಳಿಗೆ ಅಗತ್ಯ” ಎಂದು ಶಿಕ್ಷಣ ತಜ್ಞ, ನಿವೃತ್ತ ಪ್ರಾಂಶುಪಾಲ ಡಾ| ಎಂ. ಮಹಾಬಲೇಶ್ವರ ರಾವ್ ಹೇಳಿದರು.
ಕುಂದಾಪುರದಲ್ಲಿ ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‍ನಿಂದ ಸರಕಾರಿ ಪದವಿ ಪೂರ್ವ ಕಾಲೇಜಿನ ರೋಟರಿ ಲಕ್ಷ್ಮೀ ನರಸಿಂಹ ಕಲಾ ಮಂದಿರದಲ್ಲಿ ನಡೆದ ವಿದ್ಯಾರ್ಥಿ ಸಹಾಯಧನ ವಿತರಣೆ, ಸಾಧಕ ವಿದ್ಯಾರ್ಥಿಗಳಿಗೆ ಸನ್ಮಾನ ಹಾಗೂ ವಿದ್ಯಾರ್ಥಿಗಳಿಗೆ ಮಾರ್ಗದರ್ಶನ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಿದ್ದರು.
ಎಸ್.ಎಸ್.ಎಲ್.ಸಿ.ಯಲ್ಲಿ ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಗೌರವಿಸಿದ ಅವರು “ಕಷ್ಟಗಳು ಬಂದಾಗ ಎದುರಿಸುವ ತಾಳ್ಮೆ ವಿದ್ಯಾರ್ಥಿಗಳು ರೂಢಿಸಿಕೊಳ್ಳಬೇಕು. ಪರೀಕ್ಷೆಯಲ್ಲಿ ಕಡಿಮೆ ಅಂಕ, ಫೈಲಾಗುವುದು ಜೀವನದ ಸಂಕಷ್ಟ ಅಲ್ಲ, ಇನ್ನೂ ಅವಕಾಶವಿದೆ. ಜೀವನ ಧೀರ್ಘವಾಗಿದೆ. ಬದುಕು ಬದುಕಲು ಯೋಗ್ಯವಾಗಿದೆ ಎಂದು ತಿಳಿಯಬೇಕು. ನಾವು ತಂತ್ರಜ್ಞಾನದ ಗುಲಾಮರಾಗಬಾರದು. ಅಂತರ್ಜಾಲ ಬಳಕೆಯ ಮೌಲ್ಯ ಅರಿತಿರಬೇಕು. ಪೌರಪ್ರಜ್ಞೆ ಬೆಳೆಸಿಕೊಳ್ಳಬೇಕು ಎಂದು ಹೇಳಿದ ಅವರು ಹೆತ್ತವರು ಮಕ್ಕಳು ನಮ್ಮಂತೆ ಕಷ್ಟ ಪಡಬಾರದು ಎಂಬ ಕಾರಣಕ್ಕೆ ಅವರನ್ನು “ಪರಪುಟ್ಟ”ರನ್ನಾಗಿ ಮಾಡಬಾರದು ಎಂದರು.
ಶಾಸಕ ಕಿರಣ್ ಕುಮಾರ್ ಕೊಡ್ಗಿ ಸಮಾರಂಭವನ್ನು ಉದ್ಘಾಟಿಸಿ, ಪಿಯುಸಿ ರ್ಯಾಂಕ್ ವಿಜೇತರನ್ನು ಗೌರವಿಸಿದರು.
“ಗಿಳಿಯಾರು ಕುಶಲ ಹೆಗ್ಡೆ ಓರ್ವ ಸರಳ, ಸಜ್ಜನ ವ್ಯಕ್ತಿ. ಅವರು ಜೀವನದಲ್ಲಿ ಧಾರ್ಮಿಕ, ಶೈಕ್ಷಣಿಕ, ಸಹಕಾರ, ಸೇವಾ ಕ್ಷೇತ್ರಗಳಲ್ಲಿ ಕ್ರಿಯಾಶೀಲರಾಗಿದ್ದವರು. ಅವರ ಹೆಸರಲ್ಲಿ ಕುಟುಂಬದವರು, ಹಿತೈಷಿಗಳು ದತ್ತಿ ಸಂಸ್ಥೆ ಸ್ಥಾಪಿಸಿ ವಿದ್ಯಾರ್ಥಿಗಳಿಗೆ ಪ್ರೋತ್ಸಾಹ ನೀಡುವುದರೊಂದಿಗೆ ಹಲವು ಸಮಾಜ ಅಭಿವೃದ್ಧಿ ಕಾರ್ಯಗಳಿಗೆ ನೆರವು ನೀಡುತ್ತಿರುವುದು ಶ್ಲಾಘನೀಯ. ಕೋವಿಡ್ ಸಮಸ್ಯೆಯ ಕಾಲದಲ್ಲೂ ಉತ್ತಮವಾಗಿ ಸ್ಪಂದಿಸಿ ಜನರಿಗೆ ನೆರವಾದವರು. ಇಂತಹ ಸೇವೆ ನಿರಂತರವಾಗಿ ಮುಂದುವರೆಯಲಿ” ಎಂದರು.
ಗಿಳಿಯಾರು ಕುಶಲ ಹೆಗ್ಡೆ ಮೆಮೋರಿಯಲ್ ಚಾರಿಟೆಬಲ್ ಟ್ರಸ್ಟ್‍ನ ಅಧ್ಯಕ್ಷ ಬಿ. ಪ್ರಕಾಶ್ಚಂದ್ರ ಶೆಟ್ಟಿ ಅಧ್ಯಕ್ಷತೆ ವಹಿಸಿ, ಗಿಳಿಯಾರು ಕುಶಲ ಹೆಗ್ಡೆಯವರ ಸಾಧನೆ ವಿವರಿಸಿದರು.
ಗಿಳಿಯಾರು ಕುಶಲ ಹೆಗ್ಡೆ ಟ್ರಸ್ಟ್‍ನ ವಿಶ್ವಸ್ಥರಾದ ಹಿರಿಯ ಗುತ್ತಿಗೆದಾರ, ಇಂಜಿನಿಯರ್ ಉದಯ ಹೆಗ್ಡೆ, ಗಿಳಿಯಾರು ಕುಶಲ ಹೆಗ್ಡೆ ದತ್ತಿನಿಧಿ ಯೋಜನೆ, ಸಾಧನೆ ವಿವರಿಸಿದರು.
ಟ್ರಸ್ಟ್‍ನ ವಿಶ್ವಸ್ಥ ಹಿರಿಯ ವಕೀಲ ಸಂತೋಷ್ ಕುಮಾರ್ ಶೆಟ್ಟಿ, ಹಂದಕುಂದ ಸೋಮಶೇಖರ ಶೆಟ್ಟಿ, ರ್ಯಾಂಕ್ ಪಡೆದ ವಿದ್ಯಾರ್ಥಿಗಳನ್ನು ಪರಿಚಯಿಸಿದರು.
ವಿಶ್ವಸ್ಥ ಕೆ. ನಾರಾಯಣ ಸಹಾಯಧನ ಪಡೆದ ವಿದ್ಯಾರ್ಥಿಗಳ ವಿವರ ನೀಡಿದರು.
ಖಜಾಂಚಿ ಸ್ನೇಹಾ ರೈ, ವಿಶ್ವಸ್ಥರಾದ ಕಿಶೋರ್ ಹೆಗ್ಡೆ, ಸ್ವರೂಪ್ ಹೆಗ್ಡೆ ಅತಿಥಿಗಳನ್ನು ಗೌರವಿಸಿದರು.
ಯು.ಎಸ್.ಶೆಣೈ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ: ವಿಶ್ವ ಯೋಗ ದಿನಾಚರಣೆ
ಕುಂದಾಪುರ: ಯೋಗಕ್ಕೆ ಸಮಯ ಮತ್ತು ಗಮನ ಕೊಟ್ಟರೇ ಅದು ನಮಗೆ ಆರೋಗ್ಯವನ್ನು ನೀಡುತ್ತದೆ. ಮಾನಸಿಕವಾಗಿ, ದೈಹಿಕವಾಗಿ ದೇಹ ಸದೃಢವಾಗುತ್ತದೆ. ಪ್ರತಿ ನಿತ್ಯ ಯೋಗ ಮಾಡುವುದರಿಂದ ಸದಾ ಕಾಲ ಉತ್ಸಾಹದಿಂದ ಇರಬಹುದು ಎಂದು ಕುಂದಾಪುರ ಸೈಂಟ್ ಮೇರಿಸ್ ಪ್ರೌಡಶಾಲೆಯ ಎನ್‍ಸಿಸಿ ಅಧಿಕಾರಿ ಭಾಸ್ಕರ್ ಗಾಣಿಗ ಹೇಳಿದರು.
ಅವರು ಬುಧವಾರ ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆಯ 21 ಕರ್ನಾಟಕ ಬೆಟಾಲಿಯನ್ ಎನ್‍ಸಿಸಿ ಆಶ್ರಯದಲ್ಲಿ ನಡೆದ ವಿಶ್ವಯೋಗ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದರು.
ಸಮಾರಂಭದ ಅಧ್ಯಕ್ಷತೆಯನ್ನು ಶಾಲಾ ಮುಖ್ಯೋಪಾಧ್ಯಾಯಿ ಅಸುಂತಾ ಲೋಬೋ ವಹಿಸಿದ್ದರು. ಇದೇ ಸಂದರ್ಭದಲ್ಲಿ ವಿದ್ಯಾರ್ಥಿಗಳಿಂದ ಯೋಗ ಪ್ರದರ್ಶನ ನಡೆಯಿತು. ಶಿಕ್ಷಕಿಯರಾದ ಪ್ರೀತಿ ಪಾಯಸ್, ಸುಶೀಲ ಖಾರ್ವಿ, ಡೀನಾ ಪಾಯಸ್ ಸಹಕರಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.
ಕುಂದಾಪುರ ಸೈಂಟ್ ಮೇರಿಸ್ ಪ್ರೌಢಶಾಲೆ: ಮತದಾನ ಮಾಡಿ ಸಂಭ್ರಮಿಸಿದ ವಿದ್ಯಾರ್ಥಿಗಳು
ಕುಂದಾಪುರ: ನಾಮಪತ್ರ ಸಲ್ಲಿಕೆ, ಚುನಾವಣೆ ಪ್ರಚಾರ, 13 ರಿಂದ 15 ವರ್ಷದ ವಿದ್ಯಾರ್ಥಿಗಳಿದ ಮತದಾನ, ಮುಖ್ಯಮಂತ್ರಿ, ಉಪಮುಖ್ಯಮಂತ್ರಿಯ ಆಯ್ಕೆ. ಇದು ಕುಂದಾಪುರದ ಪ್ರತಿಷ್ಠಿತ ಸೈಂಟ್ ಮೇರಿಸ್ ಪ್ರೌಢಶಾಲೆಯಲ್ಲಿ ನಡೆದ ಶಾಲಾ ಮಕ್ಕಳ ವಿದ್ಯಾರ್ಥಿ ಸರಕಾರದ ಚುನಾವಣೆಯಲ್ಲಿ ಕಂಡು ಬಂದ ದೃಶ್ಯ. ಶಾಲೆಯ ವಿವಿಧ ಚಟುವಟಿಕೆಗಳಾದ ಶೈಕ್ಷಣಿಕ ಕಾರ್ಯಕ್ರಮದ ಜತೆಗೆ ಸಾಂಸ್ಕೃತಿಕ, ಕ್ರೀಡೆ, ಶಾಲೆ ಸ್ವಚ್ಛತೆ, ಊಟ ಇನ್ನಿತರ ಚಟುವಟಿಕೆಗಳಲ್ಲಿ ಜವಾಬ್ದಾರಿ ತೆಗೆದುಕೊಂಡು ಚಟುವಟಿಕೆಗಳನ್ನು ಇನ್ನಷ್ಟು ಪರಿಣಾಮಕಾರಿಯಾಗಿ ಮಾಡಲು ಈ ಚುನಾವಣೆ ನಡೆಸಲಾಗಿಯಿತು. ಅಲ್ಲದೇ ಪಠ್ಯದಲ್ಲಿದ್ದನ್ನು ಪ್ರಾತ್ಯಕ್ಷಿಕವಾಗಿ ತೋರಿಸಿ ಪ್ರಜಾಪ್ರಭುತ್ವದ ಬಗ್ಗೆ ಅರಿವು ಮೂಡಿಸುವುದು ಚುನಾವಣೆಯ ಉದ್ದೇಶವಾಗಿದೆ. ಜತೆಗೆ ಮಕ್ಕಳಿಗೆ ಜವಾಬ್ದಾರಿ, ಮುಂದಾಳತ್ವ, ಎಲ್ಲರನ್ನು ಮುನ್ನಡೆಸುವ ಶಕ್ತಿಯ ವೃದ್ದಿಸುವುದು ಶಾಲಾ ಸಂಸತ್ ಚುನಾವಣೆ ಪ್ರಮುಖ ಭಾಗವಾಗಿದೆ.
ವಿದ್ಯಾರ್ಥಿಗಳು ಮೊದಲ ಬಾರಿಗೆ ಚುನಾವಣೆ ಅನುಭವ ಪಡೆದರು. ವಿಧಾನ ಸಭೆ, ಲೋಕಸಭೆ ಚುನಾವಣೆಗಳ ಮಾದರಿಯಲ್ಲೇ ಅಭ್ಯರ್ಥಿಗಳಿಂದ ನಾಮಪತ್ರ ಸಲ್ಲಿಕೆ, ಹಿಂತೆಗೆದು ಕೊಳ್ಳುವಿಕೆ, ಪ್ರಚಾರ, ಮತದಾನ ಎಲ್ಲವೂ ವ್ಯವಸ್ಥಿತವಾಗಿ ಏರ್ಪಟ್ಟಿತ್ತು. ಪ್ರಜಾ ಪ್ರಭುತ್ವ ಎಂದರೆ ಏನು? ಮತದಾನದ ರೀತಿ ನೀತಿಗಳೇನು, ಮತದಾನ ಹೇಗೆ ಮಾಡಬೇಕು, ಮುಖ್ಯಮಂತ್ರಿಗಳ,ಉಪಮುಖ್ಯಮಂತ್ರಿಗಳ ಕೆಲಸ ಕಾರ್ಯಗಳ ಕುರಿತು ವಿದ್ಯಾರ್ಥಿಗಳಿಗೆ ಮಾಹಿತಿ ನೀಡಲಾಯಿತು. ಸೋಮವಾರ ಮಕ್ಕಳಿಂದ ಮತದಾನ ನಡೆಯಿತು. ಮತಪತ್ರ ನೀಡುವಿಕೆ, ಶಾಯಿ ಹಚ್ಚುವಿಕೆ, ಮತ ಹಾಕುವುದು, ಸಹಿ ಮಾಡುವುದು ನಿಜವಾದ ಚುನಾವಣೆಯನ್ನೇ ನೆನೆಪಿಸಿದವು. ವಿದ್ಯಾರ್ಥಿಗಳು ಸರತಿ ಸಾಲಿನಲ್ಲಿ ನಿಂತು ಮತದಾನ ಮಾಡಿದರು. ನಂತರ ಫಲಿತಾಂಶವೂ ಪ್ರಕಟಗೊಳಿಸಲಾಯಿತು. ಮತಗಟ್ಟೆಗೆ ಪೆÇೀಲಿಸ್ (ಎನ್‍ಸಿಸಿ ವಿದ್ಯಾರ್ಥಿ)ಬಿಗಿ ಭದ್ರತೆ ಮಾಡಲಾಯಿತು. ಮುಖ್ಯ ಶಿಕ್ಷಕಿ ಅಸುಂತಾ ಲೋಬೋ ಅವರ ಮಾರ್ಗದರ್ಶನದಲ್ಲಿ ಚುನಾವಣಾ ಅಧಿಕಾರಿ ಸುಶೀಲಾ ಖಾರ್ವಿ ನೇತೃತ್ವದಲ್ಲಿ ಶಿಕ್ಷಕರಾದ ಭಾಸ್ಕರ್ ಗಾಣಿಗ, ಸಿಸ್ಟರ್ ಚೇತನಾ, ಪ್ರೀತಿ ಪಾಯಸ್, ಚಂದ್ರಶೇಖರ್ ಬೀಜಾಡಿ, ಸ್ಮಿತಾ ಡಿ.ಸೋಜಾ, ಡೀನಾ ಪಾಯಸ್ ಅಧಿಕಾರಿಗಳಾಗಿ ವಿದ್ಯಾರ್ಥಿಗಳ ಚುನಾವಣೆಯನ್ನು ನಿಭಾಯಿಸಿದ್ದರು. 10 ನೇ ತರಗತಿಯ ಮನ್ವಿತಾ ಮುಖ್ಯಮಂತ್ರಿಯಾಗಿ, 9ನೇ ತರಗತಿಯ ಕಾರ್ತೀಕ್ ಉಪಮುಖ್ಯಮಂತ್ರಿಯಾಗಿ ಆಯ್ಕೆಯಾದರು.