ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ಕುರಿತು ಕಾರ್ಯಗಾರ

ದೀಕ್ಷಾರಂಭ 2023 ಪ್ರಥಮ ವರ್ಷದ ಪದವಿ ವಿದ್ಯಾರ್ಥಿಗಳಿಗೆ ನಡೆಯುತ್ತಿರುವ ಕಾರ್ಯಕ್ರಮದ ನಾಲ್ಕನೇ ದಿನವಾದ 26 ಆಗಸ್ಟ್ 2023 ರಂದು ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ಕುರಿತು ಕಾರ್ಯಗಾರ ನಡೆಯಿತು. ಸಂಪನ್ಮೂಲ ವ್ಯಕ್ತಿಯಾಗಿ ಫಿನ್ ಕ್ಯೂರಿಯಸ್ ಸಂಸ್ಥೆ ಬೆಂಗಳೂರು ಇದರ ಸಂಸ್ಥಾಪಕರಾದ ಸಿಎ ಗಣೇಶ್ ಶೆಟ್ಟಿ ಆಗಮಿಸಿ ವಿಷಯದ ಕುರಿತು ಮಾತನಾಡಿದರು ಸ್ಪರ್ಧಾತ್ಮಕ ಜಗತ್ತಿನಲ್ಲಿ ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ವಿಷಯಕ್ಕೆ ಸಂಬಂಧಿಸಿದಂತೆ ಇರುವ ವಿಪ್ರಲ ಅವಕಾಶವನ್ನು ತೆರೆದಿಟ್ಟರು. ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟಾಕ್ಸಿಶನ್ ಕೋರ್ಸ್ ವಾಣಿಜ್ಯ ಮತ್ತು ನಿರ್ವಹಣೆ ವಿಭಾಗದ ವಿದ್ಯಾರ್ಥಿಗಳಿಗೆ ಸೀಮಿತವಾಗಿರದೆ ಕಂಪ್ಯೂಟರ್ ಸೈನ್ಸ್ ಪದವೀಧರರು ತೆಗೆದುಕೊಳ್ಳಬಹುದು ಎನ್ನುವುದರ ಬಗ್ಗೆ ಸ್ಪಷ್ಟ ವಿವರಣೆ ನೀಡಿದರು ಇದಕ್ಕೆ ಸಂಬಂಧಿಸಿದಂತೆ ಟೆಕ್ನೋ ಫಂಕ್ಷನ್ ವಿಭಾಗದಲ್ಲಿ ಕಂಪ್ಯೂಟರ್ ಸೈನ್ಸ್ ಮತ್ತು ವಾಣಿಜ್ಯ ಜೊತೆ ಜೊತೆಯಲ್ಲಿ ಹೇಗೆ ಕಾರ್ಯಚರಿಸುತ್ತದೆ ಎನ್ನುವುದರ ಕುರಿತು ವಿಸ್ತಾರವಾಗಿ ವಿವರಿಸಿದರು. ಐ ಎಂ ಜೆ ವಿದ್ಯಾಸಂಸ್ಥೆ ಮತ್ತು ಫಿನ್ ಕ್ಯೂರಿಯಸ್ ಸಂಸ್ಥೆಯ ನಡುವೆ ಶೈಕ್ಷಣಿಕ ಒಡಂಬಡಿಕೆ ಇದ್ದು ಕುಂದಾಪುರದಲ್ಲಿ ಪ್ರಾಕ್ಟಿಕಲ್ ಅಕೌಂಟಿಂಗ್ ಅಂಡ್ ಟ್ಯಾಕ್ಸೇಶನ್ ಕೋರ್ಸ್ ನೀಡುತ್ತಿರುವ ಏಕೈಕ ಪದವಿ ಕಾಲೇಜು ಆಗಿದೆ. ಈ ಕೋರ್ಸ್ ಪದವಿ ಮುಗಿಸಿದ ವಿದ್ಯಾರ್ಥಿಗಳಿಗೂ ಲಭ್ಯವಿದ್ದು ಇದರ ಪ್ರಯೋಜನ ಪಡೆದುಕೊಳ್ಳಬಹುದಾಗಿದೆ ಪ್ರತಿ ವಿದ್ಯಾರ್ಥಿಗಳು ಉದ್ಯೋಗ ಖಾತರಿ ನೆರವನ್ನು ಸಂಸ್ಥೆ ನೀಡುತಿದೆ ಕಾರ್ಯಕ್ರಮದಲ್ಲಿ ಪ್ರಾಂಶುಪಾಲರಾದ ಡಾ. ಪ್ರತಿಭಾ ಎಂ ಪಟೇಲ್, ಉಪ ಪ್ರಾಂಶುಪಾಲರಾದ ಪ್ರೊ. ಜಯಶೀಲ್ ಕುಮಾರ್ ಹಾಗೂ ಉಪನ್ಯಾಸಕರು ಉಪಸಿತರಿದ್ದರು ಪಾವನ ಎಂ ರವರು ಗಣ್ಯರನ್ನು ಉಪಚರಿಸಿದರು.

ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯುತ್ಸವ ಏರ್ಪಾಡು

ಶ್ರೀನಿವಾಸಪುರ: ಪಟ್ಟಣದಲ್ಲಿ ತಾಲ್ಲೂಕು ಒಕ್ಕಲಿಗರ ಕ್ಷೇಮಾಭಿವೃದ್ಧಿ ಟ್ರಸ್ಟ್ ಮತ್ತು ತಾಲ್ಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮತಿ ವತಿಯಿಂದ ಸೆ.2 ರಂದು ಬೆಳಿಗ್ಗೆ 10 ಗಂಟೆಗೆ ನಾಡಪ್ರಭು ಕೆಂಪೇಗೌಡರ 514ನೇ ಜಯಂತ್ಯುತ್ಸವ ಏರ್ಪಡಿಸಲಗಿದೆ ಎಂದು ಟ್ರಸ್ಟ್ ಅಧ್ಯಕ್ಷ ವೇಣುಗೋಪಾಲರೆಡ್ಡಿ ತಿಳಿಸಿದರು.
ಪಟ್ಟಣದ ಭೈರವೇಶ್ವರ ವಿದ್ಯಾ ನಿಕೇತನದ ಆವರಣದಲ್ಲಿ ಗುರುವಾರ ಏರ್ಪಡಿಸಿದ್ದ ಸಮಾರಂಭದಲ್ಲಿ ಕೆಂಪೇಗೌಡರ ಜಯಂತ್ಯುತ್ಸವದ ಆಹ್ವಾನ ಪತ್ರಿಕೆ ಬಿಡುಗಡೆ ಮಾಡಿ ಮಾತನಾಡಿದ ಅವರು, ಬೆಳಿಗ್ಗೆ 10 ಗಂಟೆಯಿಂದ ಮುಳಬಾಗಿಲು ವೃತ್ತದಿಂದ ಮೆರವಣಿಗೆ ಹಾಗೂ ಮಧ್ಯಾಹ್ನ 12 ಗಂಟೆಗೆ ಸರ್ಕಾರಿ ಬಾಲಕಿಯರ ಪದವಿ ಪೂರ್ವ ಕಾಲೇಜು ಮೈದಾನದಲ್ಲಿ ವೇದಿಕೆ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ ಎಂದು ಹೇಳಿದರು.
ಆದಿಚುಂಚನಗಿರಿ ಮಹಾ ಸಂಸ್ಥಾನ ಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥ ಸ್ವಾಮೀಜಿ ದಿವ್ಯ ಸಾನಿಧ್ಯ ವಹಿಸಿ ಆಶೀರ್ವಚನ ನೀಡಲಿದ್ದಾರೆ. ಚಿಕ್ಕಬಳ್ಳಾಪುರ ಶಾಖಾ ಮಠದ ಮಂಗಳನಾಥ ಸ್ವಾಮೀಜಿ ಉಪಸ್ಥಿತಿಯಲ್ಲಿ, ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಸಮಾರಂಭದ ಅಧ್ಯಕ್ಷತೆ ವಹಿಸಲಿದ್ದಾರೆ. ವಿಧಾನ ಪರಿಷತ್ ಸದಸ್ಯರಾದ ವೈ.ಎ.ನಾರಾಯಣಸ್ವಾಮಿ, ಎಂ.ಎಲ್.ಅನಿಲ್ ಕುಮಾರ್, ಮಾಜಿ ಸದಸ್ಯ ತೂಪಲ್ಲಿ ಆರ್.ಚೌಡರೆಡ್ಡಿ, ರಾಜ್ಯ ಮಾವು ಮಹಾ ಮಂಡಳಿ ಮಾಜಿ ಅಧ್ಯಕ್ಷ ಎಲ್.ಗೋಪಾಲಕೃಷ್ಣ, ರಾಜ್ಯ ಒಕ್ಕಲಿಗರ ಸಂಘದ ನಿರ್ದೇಶಕರಾದ ಡಾ. ಡಿ.ಕೆ.ರಮೇಶ್, ಯಲವಹಳ್ಳಿ ರಮೇಶ್, ಟಿ.ಕೋನಪ್ಪರೆಡ್ಡಿ ಮುಖ್ಯ ಅತಿಥಿಗಳಾಗಿ ಭಾಗವಹಿಸುವರು ಎಂದು ಹೇಳಿದರು.
ಟ್ರಸ್ಟ್‍ನ ಮಾಜಿ ಅಧ್ಯಕ್ಷ ನೀಲಟೂರು ಚಿನ್ನಪ್ಪರೆಡ್ಡಿ ಮಾತನಾಡಿ, ಒಕ್ಕಲಿಗ ಸಮುದಾಯದ ಸಾಧಕರಾದ ಎಂ.ಶ್ರೀರಾಮರೆಡ್ಡಿ, ಬಿ.ಎನ್.ರಮೇಶ್, ಡಿ.ದೇವರಾಜ್, ಎಂ.ಎನ್.ಅನುಚೇತ್, ಬಿ.ಎಲ್.ನಾಗೇಶ್, ಸುಭಾಷ್, ವಸಂತ ಕುಮಾರ್, ಎ.ಎನ್.ಕೃಷ್ಣಾರೆಡ್ಡಿ, ಕೆ.ಎಸ್.ನಾಗರಾಜ್ ಅವರನ್ನು ಸನ್ಮಾನಿಸಲಾಗುವುದು ಎಂದು ಹೇಳಿದರು.
ಭೈರವೇಶ್ವರ ವಿದ್ಯಾ ನಿಕೇತನದ ನಿರ್ದೇಶಕ ಎ.ವೆಂಕಟರೆಡ್ಡಿ ಮಾತನಾಡಿ, ತಾಲ್ಲೂಕಿನ ಪ್ರತಿ ಗ್ರಾಮ ಪಂಚಾಯಿತಿಯಿಂದ ಆಗಮಿಸುವ ಕೆಂಪೇಗೌಡರ ಭಾವ ಚಿತ್ರ ಹೊತ್ತ ಪಲ್ಲಕಿಗಳು ಮೆರವಣಿಗೆಯಲ್ಲಿ ಭಾಗವಹಿಸಲಿವೆ. ಈ ಸಂದರ್ಭದಲ್ಲಿ ಕಲಾವಿದರಿಗೆ ಅವಕಾಶ ಕಲ್ಪಿಸುವ ಉದ್ದೇಶದಿಂದ ಜಿಲ್ಲೆಯ ವಿವಿಧ ಕಲಾ ಕ್ಷೇತ್ರಗಳಲ್ಲಿನ ಕಲಾವಿದರು ಮೆರವಣಿಗೆಯಲ್ಲಿ ಭಾಗವಹಿಸುವಂತೆ ಆಹ್ವಾನ ನೀಡಲಾಗಿದೆ. ಜಯಂತ್ಯುತ್ಸವ ಪಕ್ಷಾತೀತ ಹಾಗೂ ಜಾತ್ಯಾತೀತವಾಗಿದ್ದು, ಸಮಾಜದ ಎಲ್ಲ ಸಮುದಾಯದ ಜನರೂ ಭಾಗವಹಿಸುವಂತೆ ಕೋರಲಾಗಿದೆ ಎಂದು ಹೇಳಿದರು.

ಶ್ರೀನಿವಾಸಪುರ ತಾಲ್ಲೂಕಿನ ಸ್ಥಿರಾಸ್ತಿಗಳ ಮಾರ್ಗಸೂಚಿ ಬೆಲೆ ಪರಿಷ್ಕರಣೆ 

ಶ್ರೀನಿವಾಸಪುರ : ಶ್ರೀನಿವಾಸಪುರ ತಾಲ್ಲೂಕಿನ ಸ್ಥಿರಾಸ್ತಿಗಳ ಮಾರುಕಟ್ಟೆ ದರಗಳನ್ನು 2023-24ನೇ ಸಾಲಿನ ತಾಲೂಕು ಮಾರುಕಟ್ಟೆ ಮೌಲ್ಯಮಾಪನ ಉಪ ಸಮಿತಿ ಸಭೆಯಲ್ಲಿ ಪರಿಷ್ಕರಿಸಲಾಗಿದೆ. ಪರಿಷ್ಕರಿಸಿದ ಸ್ಥಿರಾಸ್ತಿಗಳ ಮಾರುಕಟ್ಟೆ ಮಾರ್ಗಸೂಚಿ ದರಗಳ ಕರಡು ಪ್ರತಿಯನ್ನು ಸಾರ್ವಜನಿಕ ಸಲಹೆ ಸೂಚನೆ ಮತ್ತು ಆಕ್ಷೇಪಣೆಗಳಿಗಾಗಿ ಶ್ರೀನಿವಾಸಪುರ ಉಪ ನೊಂದಣಿ ಕಚೇರಿಯಲ್ಲಿ ಕಚೇರಿಯ ಸೂಚನಾ ಫಲಕದಲ್ಲಿ ಪ್ರಕಟಿಸಲಾಗಿದೆ. ಸಾರ್ವಜನಿಕರು ಸಲಹೆ ಸೂಚನೆ ಆಕ್ಷೇಪಣೆ ಇದ್ದರೆ ಸೆಪ್ಟೆಂಬರ್ 14ರ ಒಳಗೆ ಶ್ರೀನಿವಾಸಪುರ ಉಪ ನೊಂದಣಾ ಅಧಿಕಾರಿ ಮತ್ತು ಸದಸ್ಯ ಕಾರ್ಯದರ್ಶಿ, ಆಸ್ತಿ ಮೌಲ್ಯ ಮಾಪನ ಸಮಿತಿಗೆ ಲಿಖಿತ ರೂಪದಲ್ಲಿ ಸೂಕ್ತ ದಾಖಲೆಗಳೊಂದಿಗೆ ಸಲ್ಲಿಸಬಹುದು ಎಂದು ಶ್ರೀನಿವಾಸಪುರ ಉಪ ನೊಂದಣಾ ಧಿಕಾರಿಗಳು  ಪ್ರಕಟಣೆಯಲ್ಲಿ ತಿಳಿಸಿದ್ದಾರೆ