ತಲ್ಲೂರು:ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಬಾಲಕ ಕುಸಿದು ಬಿದ್ದು ಮೃತ್ಯು- ಕಳೆದ ವರ್ಷ ಅಕ್ಕ ಕೂಡ ಕುಸಿದು ಬಿದ್ದು ಮೃತ ಪಟ್ಟಿದ್ದಳು

ಕುಂದಾಪುರ/ತಲ್ಲೂರು: ಶಾಲೆಗೆ ತೆರಳಲು ಬಸ್ಸಿಗಾಗಿ ಕಾಯುತ್ತಿದ್ದ ವೇಳೆ  7ನೇ ತರಗತಿಯ ವಿದ್ಯಾರ್ಥಿ ಪೃಥ್ವಿರಾಜ್ ಶೆಟ್ಟಿ (13) ಮೃತ ಪಟ್ಟ ದಾರುಣ ಘಟನೆ ಕುಂದಾಪುರದ ತಲ್ಲೂರಿನಲ್ಲಿ ನಡೆದಿದೆ.  ದುರ್ದೈವಿ ಪೃಥ್ವಿರಾಜ್ ಶೆಟ್ಟಿಯ ಅಕ್ಕ ಕೂಡ ಕಳೆದ ವರ್ಷ ಪೃಥ್ವಿರಾಜ್​ ಅವರ ಅಕ್ಕ ಅನುಶ್ರೀ ಕೂಡ ಮನೆಯಲ್ಲಿ ಕುಸಿದು ಬಿದ್ದು ಹೃದಯಾಘಾತದಿಂದ ಮೃತಪಟ್ಟಿದ್ದಳು. ಅಕ್ಕನ ಸಾವಿನ ನೋವು ಮಾಸುವ ಮೊದಲೇ ಪೋಷಕರಿಗೆ ಮಗನ ಸಾವು ಮತ್ತಷ್ಟು ಆಘಾತ ಜೊತೆ ಬಹಳ ಸಂಗತಿಯಾಗಿದೆ.

ಅಕ್ಷರ ದಾಸೋಹ ಯೋಜನೆ ಕುಂದಾಪುರದ ಸಹಾಯಕ ನಿರ್ದೇಶಕ ಅರುಣ್​ಕುಮಾರ ಶೆಟ್ಟಿ ಹಾಗೂ ಹಕ್ಲಾಡಿ ಪ್ರೌಢ ಶಾಲಾ ಶಿಕ್ಷಕಿ ಭಾರತಿ ದಂಪತಿ ಪುತ್ರ ಪೃಥ್ವಿರಾಜ್ ಶನಿವಾರ ಬೆಳಗ್ಗೆ ಮನೆಯ ಬಳಿ ಶಾಲೆಯ ಬಸ್ಸಿಗಾಗಿ ಕಾಯುತ್ತಿದ್ದ ವೇಳೆ ಆಕಸ್ಮಿಕವಾಗಿ ಕುಸಿದು ಬಿದ್ದಿದ್ದಾರೆ. ಇದನ್ನು ಗಮನಿಸಿದ ಪೃಥ್ವಿರಾಜ್​ ಪೋಷಕರು ಕೂಡಲೇ ಆತನನ್ನು ಆಸ್ಪತ್ರೆಗೆ ಸಾಗಿಸಿ, ಅಲ್ಲಿಂದ ಹೆಚ್ಚಿನ ಚಿಕಿತ್ಸೆಗೆ ಮಣಿಪಾಲ ಆಸ್ಪತ್ರೆಗೆ ದಾಖಲಿಸಿದ್ದರು ಆದರೆ ಚಿಕಿತ್ಸೆ ಫಲಿಸಲಿಲ್ಲ. ಪೃಥ್ವಿರಾಜ್ ಹಟ್ಟಿಯಂಗಡಿ ಸಿದ್ದಿವಿನಾಯಕ ವಸತಿ ಶಾಲೆಯ ೭ ನೇ ತರಗತಿಯ ವಿದ್ಯಾರ್ಥಿಯಾಗಿದ್ದು, ಕಲಿಕೆ ಹಾಗೂ ಪಠ್ಯೇತರ ಚಟುವಟಿಕೆಗಳಲ್ಲಿ ಚುರುಕಾಗಿದ್ದ.

ಮಾನವನ ಜೀವಿತದಲ್ಲಿ ಕೆಲವೊಂದು ಸಲ ಅಸಮಾನ್ಯ ಮಾನವನಿಗೆ ನುಲುಕದ ಘಟನೆಗಳು ಸಂಭವಿಸುತ್ತವೆ:ಕಳೆದ ವರ್ಷ ಮಗಳನ್ನು ಕಳೆದುಕೊಂಡ ದಂಪತಿ

ಅರುಣ್​ಕುಮಾರ ಶೆಟ್ಟಿ ಹಾಗೂ ಭಾರತಿ ಶೆಟ್ಟಿ ದಂಪತಿಗೆ ಓರ್ವ ಪುತ್ರಿ ಹಾಗೂ ಪುತ್ರ ಇದ್ದು ಮಗಳು ಕಳೆದ ವರ್ಷ,ಕುಸಿದು ಬಿದ್ದು ಮೃತ ಪಟ್ಟಾಗ ಎನೋ ತಿಂದಿದ್ದರಿಂದ ಎಂದು ಸುದ್ದಿ ಹಬ್ಬಿತ್ತು. ನಂತರ ಹ್ರದಯದ ತೊಂದರೆಯಿಂದ  ಹೃದಯಾಘಾತದಿಂದ ಮೃತಪಟ್ಟಿದ್ದು ಎಂದು ತಿಳಿದು ಬಂದಿತ್ತು. ಈಗ ಇವರ ಮನೆಯಲ್ಲಿ ಸಂಭವಿಸಿದ ಎರಡನೇ ದುರಂತ ಇದಾಗಿದೆ. ಪೃಥ್ವಿರಾಜ್ ನ ಸಾವು ಹೇಗಾಗಿದೆಯೆಂದು ಇನ್ನು ವೈಧ್ಯಕೀಯ ವರದಿಯಿಂದ ತಿಳಿಯಬೇಕಿದೆ.

ಅ.20 ಪೃಥ್ವಿರಾಜ್ ಶೆಟ್ಟಿ ತನ್ನ ಸಾವಿನ ಹಿಂದಿನ ದಿನ ತಮ್ಮ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು. ಕಳೆದ ವರ್ಷ ತಮ್ಮನ ಹುಟ್ಟುಹಬ್ಬವನ್ನು ಸಂಭ್ರಮದಿಂದ ಆಚರಿಸಿದ ಅಕ್ಕ ಅನುಶ್ರೀ ತಮ್ಮನ ಹುಟ್ಟುಹಬ್ಬದ ಸಂಭ್ರಮ ಮುಗಿದ ಒಂದು ವಾರದ ಒಳಗೆ ಇಹಲೋಕ ತ್ಯಜಿಸಿದ್ದರು. ಅಕ್ಕನ ನೆನಪಿನಲ್ಲೇ ದುಖಃದಿಂದ ಹುಟ್ಟುಹಬ್ಬ ಆಚರಿಸಿದ್ದ ಪ್ರಥ್ವಿರಾಜ್, ಮನುಷ್ಯನ ಉಹೆಗೂ ನಿಲುಕದಂತೆ ಸಾವಿಗೆ ಓ ಕೊಟ್ಟಿದ್ದು ವಿಸ್ಮಿತವೇ ಸರಿ. ಈಗ ಪ್ರಥ್ವಿರಾಜ್ ಬಾರದ ಲೋಕಕ್ಕೆ ಪ್ರಯಾಣ ಬೆಳೆಸಿರುವುದು ತಂದೆ ತಾಯಿ ಸಂಬಂಧಿಕರಿಗೆ ತೀವ್ರವಾದ ಅಘಾತ ಮತ್ತು ದುಖವನ್ನುಂಟು ಮಾಡಿದೆ.

ಚಿಕ್ಕಹಸಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಏರ್ಪಡಿಸಿದ್ದ ಶೈಕ್ಷಣಿಕ ಸೌಲಭ್ಯ ವಿತರಣಾ ಸಮಾರಂಭವನ್ನು ದಾನಿ,ಮುಖ್ಯ ಶಿಕ್ಷಕ ಎಸ್.ಆರ್.ಧರ್ಮೇಶ್ ಉದ್ಘಾಟಿಸಿದರು

ಶ್ರೀನಿವಾಸಪುರ: ಸರ್ಕಾರಿ ಶಾಲಾ ವಿದ್ಯಾರ್ಥಿಗಳು ಸರ್ಕಾರದ ಸೌಲಭ್ಯಗಳ ಜೊತೆಗ ದಾನಿಗಳು ನೀಡುವ ಶೈಕ್ಷಣಿಕ ನೆರವು ಪಡೆದು ಶೈಕ್ಷಣಿಕ ಅಭಿವೃದ್ಧಿ ಸಾಧಿಸಬೇಕು ಎಂದು ಚಿಕ್ಕಹಸಾಳ ಗ್ರಾಮದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ ಮುಖ್ಯ ಶಿಕ್ಷಕ ಕೆ.ಎಸ್.ಮುನಿರಾಜು ಹೇಳಿದರು.
ಶಾಲೆಯಲ್ಲಿ ಶನಿವಾರ ಏರ್ಪಡಿಸಿದ್ದ ಥ್ಯಾಂಕ್ಸ್ ಟು ಧಮೇರ್ಶ್ ಕಾರ್ಯಕ್ರಮದಲ್ಲಿ, ಶಾಲಾ ವಿದ್ಯಾರ್ಥಿಗಳಿಗೆ ದಾನಿ ಧರ್ಮೇಶ್ ನೀಡಿದ ಲೇಖನ ಸಾಮಗ್ರಿ, ಕುಡಿಯುವ ನೀರಿನ ಬಾಟೆಲ್ ಮತ್ತಿತರ ವಸ್ತುಗಳನ್ನು ವಿತರಿಸಿ ಮಾತನಾಡಿದ ಅವರು, ಸರ್ಕಾರಿ ಶಾಲೆಯೊಂದರ ಮುಖ್ಯ ಶಿಕ್ಷಕರಾಗಿ ಸೇವೆ ಸಲ್ಲಿಸುತ್ತಿರುವ ಎಸ್.ಆರ್.ಧರ್ಮೇಶ್ ತಮ್ಮ ಸಂಬಳದಲ್ಲಿ ಪ್ರತಿ ತಿಂಗಳು ರೂ.10 ಸಾವಿರ ಸರ್ಕಾರಿ ಶಾಲಾ ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಸಮೇಜ ಸೇವಾ ಕಾರ್ಯಗಳಿಗೆ ಮೀಸಲಿಟ್ಟು ಮಾನವೀಯತೆ ಮೆರೆದಿದ್ದಾರೆ ಎಂದು ಹೇಳಿದರು.
ಜಿಲ್ಲೆಯಾದ್ಯಂತ ಸರ್ಕಾರಿ ಶಾಲೆ ಮಕ್ಕಳು ಧರ್ಮೇಶ್ ಅವರ ಶೈಕ್ಷಣಿಕ ನೆರವು ಪಡೆದಿದ್ದಾರೆ. ಪರಿಸರ ರಕ್ಷಣೆ, ಮಾನವೀಯ ನೆರವು ನೀಡುವುದರಲ್ಲೂ ಅವರು ಮುಂಚೂಣಿಯಲ್ಲಿದ್ದಾರೆ. ಸರಳ ವ್ಯಕ್ತಿತ್ವದ ಶಿಕ್ಷಕ ಎಸ್.ಆರ್.ಧರ್ಮೇಶ್ ಮಕ್ಕಳಲ್ಲಿ ದೇವರನ್ನು ಕಾಣುತ್ತಾರೆ. ಅಂಥ ಕೊಡಗೈ ದಾನಿಗಳ ಸಂಖ್ಯೆ ಹೆಚ್ಚಬೇಕು. ಬಡ ವಿದ್ಯಾರ್ಥಿಗಳಿಗೆ ಆಸರೆಯಾಗಿ ನಿಲ್ಲುವಂಥ ವ್ಯಕ್ತಿಗಳು, ಮಕ್ಕಳ ಹೃದಯದಲ್ಲಿ ಶಾಶ್ವತವಾಗಿ ನೆಲೆಸುತ್ತಾರೆ ಎಂದು ಹೇಳಿದರು.
ಶಿಕ್ಷಕ ಆರ್.ಹರಿನಾಥ್ ಮಾತನಾಡಿ, ಸರಳ ಜೀವನ ನಡೆಸುವ ದಾನಿ ಧರ್ಮೇಶ್ ಅವರು, ಮಕ್ಕಳ ಶೈಕ್ಷಣಿಕ ಅಭಿವೃದ್ಧಿ ಹಾಗೂ ಅಶಕ್ತರ ಸೇವೆಯಲ್ಲಿ ತೃಪ್ತಿ ಕಂಡುಕೊಂಡಿದ್ದಾರೆ. ಅವರ ಸೇವೆ ಇನ್ನಷ್ಟು ಜನರಿಗೆ ಸಿಗುವಂತಾಗಲಿ ಎಂದು ಆಶಿಸಿದರು.
ಈ ಸಂದರ್ಭದಲ್ಲಿ ಮಕ್ಕಳಿಗೆ ಲೇಖನ ಸಾಮಗ್ರಿ ನೀಡುವುದರ ಜೊತೆಗೆ, ಶಾಲೆ ಬಳಕೆಗೆ ಮೈಕ್ ಸೆಟ್ ನೀಡಲಾಯಿತು.
ಎಸ್‍ಡಿಎಂಸಿ ಅಧ್ಯಕ್ಷೆ ಸವಿತ, ಉಮಾದೇವಿ, ಪೂರ್ಣಿಮಾ ರಾಣಿ, ಯಶೋಧಮ್ಮ, ಪ್ರಿಯಾಂಕ ಇದ್ದರು.

ಶ್ರೀನಿವಾಸಪುರ ತಾಲ್ಲೂಕಿನ ಎಲ್ಲ ಗ್ರಾಮಗಳಿಗೆ ರೂ.350 ಕೋಟಿ ವೆಚ್ಚದಲ್ಲಿ ಜಲ್ ಜೀವನ್ ಮಿಷನ್ ಯೋಜನೆ ಅನುಷ್ಠಾನಗೊಳಿಸಲಾಗುವುದು:ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ತಾಲ್ಲೂಕಿನ ಎಲ್ಲ ಗ್ರಾಮಗಳಿಗೆ ರೂ.350 ಕೋಟಿ ವೆಚ್ಚದಲ್ಲಿ ಜಲ್ ಜೀವನ್ ಮಿಷನ್ ಯೋಜನೆ ಅನುಷ್ಠಾನಗೊಳಿಸಲಾಗುವುದು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲ್ಲೂಕಿನ ರೋಣೂರು ಹಾಗೂ ಕೊಳತೂರು ಗ್ರಾಮದಲ್ಲಿ ಶನಿವಾರ ಜಲ್ ಜೀವನ್ ಮಿಷನ್ ಕಾಮಗಾರಿಗೆ ಗುದ್ದಲಿ ಪೂಜೆ ನೆರವೇರಿಸಿ ಮಾತನಾಡಿದ ಅವರು, ರೋಣೂರಿಗೆ ರೂ. 5.50 ಕೋಟಿ ಹಾಗೂ ಕೊಳತೂರಿಗೆ ರೂ.1 ಕೋಟಿ ವೆಚ್ಚದಲ್ಲಿ ಮನೆ ಮನೆಗೆ ನಲ್ಲಿ ಮೂಲಕ ನೀರು ಪೂರೈಸಲಾಗುವುದು. ಮೂರು ತಂಗಳ ಅವಧಿಯಲ್ಲಿ ಕಾಮಗಾರಿ ಪೂರ್ಣಗೊಳಿಸಲಾಗುವುದು ಎಂದು ಹೇಳಿದರು.
ಗ್ರಾಮ ಹಾಗೂ ಪಟ್ಟಣ ಪ್ರದೇಶದ ನಾಗರಿಕರಿಗೆ ಕುಡಿಯುವ ನೀರು ಪೂರೈಸುವುದು ಮೊದಲ ಆದ್ಯತೆಯಾಗಿದೆ. ಯಾವುದೇ ಸಂದರ್ಭದಲ್ಲಿ ಕುಡಿಯುವ ನೀರು ಪೂರೈಕೆಗೆ ತೊಂದರೆ ಆಗದಂತೆ ಸಂಬಂಧಪಟ್ಟ ಅಧಿಕಾರಿಗಳು ಕ್ರಮ ಕೈಗೊಳ್ಳಬೇಕು. ಜಲ್ ಜೀವನ್ ಮಿಷನ್ ಯೋಜನೆ ಜಾರಿಗೆ ಬಂದ ಮೇಲೆ ಗ್ರಾಮೀಣ ಮಹಿಳೆಯರಿಗೆ ದೂರ ಪ್ರದೇಶದಿಂದ ನೀರು ಹೊರುವುದು ತಪ್ಪುತ್ತದೆ. ಮನೆ ಬಾಗಿಲಿಗೇ ನೀರು ಸರಬರಾಜು ಮಾಡಲಾಗುತ್ತದೆ ಎಂದು ಹೇಳಿದರು.
ಅಭಿವೃದ್ಧಿ ಕಾಮಗಾರಿ ಗುಣಮಟ್ಟ ಸರಿ ಇರುವಂತೆ ನೋಡಿಕೊಳ್ಳಬೇಕು. ಗ್ರಾಮ ಪಂಚಾಯಿತಿ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲಿಸಬೇಕು. ನಾಗರಿಕರು ಕಾಮಗಾರಿ ಕೈಗೊಳ್ಳಲು ಸಹಕರಿಸಬೇಕು. ವ್ಯವಸ್ಥೆ ಹಾಳಾಗದಂತೆ ನೋಡಿಕೊಳ್ಳಬೇಕು ಎಂದು ಹೇಳಿದರು
ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಮೆಹರ್ ತಾಜ್, ಮಣಿ, ಎಸ್.ಎಂ.ಶ್ರೀನಿವಾಸ್, ನಾರಾಯಣಗೌಡ, ಚಂದ್ರಪ್ಪ, ಆಂಜಿ, ಜಯರಾಮ್, ಜಯರಾಮೇಗೌಡ, ನಂಜುಂಡಗೌಡ ಇದ್ದರು.

ರೇಷ್ಮೆ ಕೃಷಿಯಲ್ಲಿ ರೈತರು ವೈಜ್ಞಾನಿಕ ಪದ್ಧತಿ ಅನುಸರಿಸಬೇಕು: ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ರೇಷ್ಮೆ ಕೃಷಿಯಲ್ಲಿ ರೈತರು ವೈಜ್ಞಾನಿಕ ಪದ್ಧತಿ ಅನುಸರಿಸಬೇಕು. ಅಧಿಕ ಬೇಡಿಕೆ ತಳಿ ಬೆಳೆಯಲು ಆದ್ಯತೆ ನೀಡಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ರೇಷ್ಮೆ ಇಲಾಖೆ ಕಚೇರಿ ಆವರಣದಲ್ಲಿ ಶನಿವಾರ ಏರ್ಪಡಿಸಿದ್ದ ರೇಷ್ಮೆ ಇಲಾಖೆ ಕಚೇರಿ ಕಟ್ಟಡ ನಿರ್ಮಾಣ ಕಾಮಗಾರಿಗೆ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ರೂ.60 ಲಕ್ಷ ವೆಚ್ಚದಲ್ಲಿ ತಾಲ್ಲೂಕು ರೇಷ್ಮೆ ಇಲಾಖೆ ಸಹಾಯಕ ನಿರ್ದೇಶಕರ ಕಚೇರಿ, ತಾಂತ್ರಿಕ ಸೇವಾ ಕೇಂದ್ರ, ರೇಷ್ಮೆ ಗೂಡು ಮಾರುಕಟ್ಟೆ ಕಟ್ಟಡ ನಿರ್ಮಿಸಲಾಗುವುದು ಎಂದು ಹೇಳಿದರು.
ರೇಷ್ಮೆ ಗೂಡು ಬೆಲೆಯಲ್ಲಿ ಏರುಪೇರು ಸಾಮಾನ್ಯ. ಬೆಳೆಗಾರರು ತಾಳ್ಮೆಯಿಂದ ಬೆಳೆ ನಿರ್ವಹಣೆ ಮಾಡಬೇಕು. ಯಾವುದೇ ಕಾರಣಕ್ಕೂ ಆತುರದ ನಿರ್ಧಾರ ಕೈಗೊಂಡು ಮಲಬರಿ ಬುಡ ತೆಗೆಯುವ ಕೆಲಸಕ್ಕೆ ಕೈ ಹಾಕಬಾರದು. ಈ ಹಿಂದೆ ಹೀಗೆಯೇ ಮಾಡಿ, ಗೂಡಿಗೆ ಲಾಭದಾಯಕ ಬೆಲೆ ಬಂದಾಗ ಬೆಳೆಗಾರರು ಪರಿತಪಿಸಬೇಕಾಯಿತು. ಈ ಪರಿಸ್ಥಿತಿ ಮರುಕಳಿಸದಂತೆ ಎಚ್ಚರವಹಿಸಬೇಕು ಎಂದು ಹೇಳಿದರು.
ಅಧಿಕಾರಿಗಳು ಗೂಡಿನ ಮಾರುಕಟ್ಟೆಯಲ್ಲಿ ಯಾವುದೇ ಸಮಸ್ಯೆ ಬರದಂತೆ ನೋಡಿಕೊಳ್ಳಬೇಕು. ಸಮಸ್ಯೆ ಇದ್ದಲ್ಲಿ ನನ್ನ ಗಮನಕ್ಕೆ ತಂದಲ್ಲಿ ಸಮಸ್ಯೆ ಪರಿಹರಿಸಲಾಗುವುದು. ಅಧಿಕಾರಿಗಳು ರೇಷ್ಮೆ ಬೆಳೆ ವಿಸ್ತರಣೆಗೆ ಪ್ರಯತ್ನಿಸಬೇಕು. ಟೊಮೆಟೊ ಬೆಳೆದು ಅದೃಷ್ಟ ಪರೀಕ್ಷೆ ಮಾಡುವ ರೈತರು ರೇಷ್ಮೆ ಕೃಷಿಯನ್ನು ಕೈಗೊಳ್ಳಬೇಕು. ಬದಲಾದ ಪರಿಸ್ಥಿತಿಯಲ್ಲಿ ಯಾವುದೇ ಒಂದು ಬೆಳೆಯನ್ನು ಆಶ್ರಯಿಸುವುದು ಅಪಾಯಕಾರಿ ಎಂದು ಹೇಳಿದರು.
ಜಿಲ್ಲಾ ಪಂಚಾಯಿತಿ ಮಾಜಿ ಸದಸ್ಯ ತೂಪಲ್ಲಿ ಆರ್.ನಾರಾಯಣಸ್ವಾಮಿ, ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ತಾಲ್ಲೂಕು ಪಂಚಾಯಿತಿ ಮಾಜಿ ಸದಸ್ಯ ಮಂಜುನಾಥರೆಡ್ಡಿ, ಪ್ರಸನ್ನ, ಮಂಜುನಾಥರೆಡ್ಡಿ, ರೇಷ್ಮೆ ಇಲಾಖೆ ಉಪ ನಿರ್ದೇಶಕ ಎಸ್.ಎಂ.ಶ್ರೀನಿವಾಸ್, ಅಧಿಕಾರಿ ಎಂ.ನಾಗರಾಜು, ಸಹಾಯಕ ನಿರ್ದೇಶಕ ವಿ.ಕೃಷ್ಣಪ್ಪ, ಚೌಡರೆಡ್ಡಿ ಇದ್ದರು.

ಕ್ಷೇತ್ರಕ್ಕೆ ಸಂಬಂಧಿಸಿದಂತೆ ಜಲ ಜೀವನ್ ಯೋಜನೆಗೆ ಇದುವರೆಗೂ 350 ಕೋಟಿ ಅನುದಾನ ಬಿಡುಗಡೆಯಾಗಿದೆ:ಜಿ.ಕೆ.ವೆಂಕಟಶಿವಾರೆಡ್ಡಿ

ಕ್ಷೇತ್ರಕ್ಕೆ ಸಂಬಂಧಿಸಿದಂತೆ (ಜೆಜೆಎಂ)ಜಲ ಜೀವನ್ ಯೋಜನೆಗೆ ಇದುವರೆಗೂ 350 ಕೋಟಿ ಅನುದಾನ ಬಿಡುಗಡೆಯಾಗಿದೆ. ಕ್ಷೇತ್ರದಲ್ಲಿ ಯೋಜನೆಯು ಪ್ರಗತಿಯಲ್ಲಿದ್ದು, ಮುಂದಿನ ವರ್ಷ ಮಾರ್ಚ್ ಒಳಗಾಗಿ ಪೂರ್ಣಗೊಳಿಸಲು ಇಂಜನೀಯರ್‍ರವರಿಗೆ ಸೂಚನೆ ನೀಡಿದ್ದೇನೆ ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ತಾಲೂಕಿನ ಕೊಳತೂರು ಗ್ರಾ.ಪಂ. ವ್ಯಾಪ್ತಿಯ ವೆಂಕಟೇಶ ನಗರ ಗ್ರಾಮದಲ್ಲಿ ಶನಿವಾರ ಜಲಜೀವನ್ ಮಿಷನ್ ಯೋಜನೆ ಅಡಿಯಲ್ಲಿನ ಕಾಮಗಾರಿಗೆ ಚಾಲನೆ ನೀಡಿ ಮಾತನಾಡಿದರು.
ಕೊಳತೂರು ಗ್ರಾಮಪಂಚಾಯಿತಿಗೆ ಸಂಬಂದಿಸಿದಂತೆ ಅಂದಾಜು ಒಟ್ಟು 6.5 ಕೋಟಿ ವೆಚ್ಚದಲ್ಲಿನ ಜಲಜೀವನ್ ಮಿಷನ್ ಕಾಮಗಾರಿ ಹಮ್ಮಿಕೊಂಡಿದ್ದು , ಕೊಳತೂರು ಗ್ರಾಮಕ್ಕೆ 1 ಕೋಟಿ ವೆಚ್ಚದಲ್ಲಿ ಜೆಜೆಎಂ ಕಾಮಗಾರಿ ನಡೆಯಲಿದೆ ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಮಾಹಿತಿ ನೀಡಿದರು.
ಇದೇ ಸಮಯದಲ್ಲಿ ಶೆಟ್ಟಿಹಳ್ಳಿ, ಉಪ್ಪುಕಂಟೆ, ರಮೇಶ್‍ನಗರ , ಆಚಂಪಲ್ಲಿ, ಹರಳಕುಂಟೆ, ಸೀತರೆಡ್ಡಪಲ್ಲಿ ಗ್ರಾಮದಲ್ಲಿಯೂ ಜಲಜೀವನ್ ಮಿಷನ್ ಯೋಜನೆಗೆ ಚಾಲನೆ ನೀಡಿದರು. ಗ್ರಾ.ಪಂ. ಅಧ್ಯಕ್ಷೆ ನಾಗಮಣಿ ಮುಖಂಡರಾದ ಮಣಿ, ಆಂಜಿ, ಜಯರಾಮ್, ನಾರಾಯಣಗೌಡ, ನಂಜುಂಡಗೌಡ, ಚಂಗಪ್ಪ, ಗ್ರಾಮೀಣ ಕುಡಿಯುವ ನೀರು ಮತ್ತು ನೈರ್ಮಲ್ಯ ಇಲಾಖೆಯ ಇಂಜಿನೀಯರ್ ಎಇಇ ನಾರಾಯಣಸ್ವಾಮಿ, ಪಿಡಿಒ ಮೆಹರ್‍ತಾಜ್, ನರೇಗಾ ಇಂಜಿನೀಯರ್ ರುದ್ರಪ್ಪ ಇದ್ದರು.