ಮಹಿಳೆಯರು ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಪ್ರಯೋಜನ ಪಡೆದುಕೊಳ್ಳಬೇಕು : ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ

ಶ್ರೀನಿವಾಸಪುರ: ಮಹಿಳೆಯರು ಸರ್ಕಾರದ ಗೃಹ ಲಕ್ಷ್ಮಿ ಯೋಜನೆ ಪ್ರಯೋಜನ ಪಡೆದುಕೊಳ್ಳಬೇಕು. ಯೋಜನೆ ಲಾಭ ಪಡೆಯಲು ತಪ್ಪದೆ ಅರ್ಜಿ ಸಲ್ಲಿಸಬೇಕು ಎಂದು ಶಾಸಕ ಜಿ.ಕೆ.ವೆಂಕಟಶಿವಾರೆಡ್ಡಿ ಹೇಳಿದರು.
ಪಟ್ಟಣದ ಪುರಸಭೆ ಕಚೇರಿ ಸಭಾಂಗಣದಲ್ಲಿ ತಾಲ್ಲೂಕು ಆಡಳಿತದ ವತಿಯಿಂದ ಬುಧವಾರ ಏರ್ಪಡಿಸಿದ್ದ ಗೃಹ ಲಕ್ಷ್ಮಿ ಯೋಜನೆ ಜಾರಿ ಸಮಾರಂಭ ಉದ್ಘಾಟಿಸಿ ಮಾತನಾಡಿದ ಅವರು, ಸರ್ಕಾರದ ಈ ಯೋಜನೆಯಿಂದ ಬಡ ಕುಟುಂಗಳಿಗೆ ಸ್ವಲ್ಪ ಮಟ್ಟಿನ ಆರ್ಥಿಕ ನೆರವು ದೊರೆತಂತಾಗಿದೆ ಎಂದು ಹೇಳಿದರು.
ಕ್ಷೇತ್ರದಲ್ಲಿ ಸೂರಿಲ್ಲದೆ ಪರಿತಪಿಸುತ್ತಿರುವ ಎಲ್ಲ ಕುಟುಂಬಗಳಿಗೆ ಮನೆ ನಿರ್ಮಿಸಿ ಕೊಡಲಾಗುವುದು. ಪಟ್ಟಣದ ಸರ್ವತೋಮುಖ ಅಭಿವೃದ್ಧಿಗೆ ಪೂರಕವಾದ ಯೋಜನೆ ರೂಪಿಸಿ ಜಾರಿಗೆ ತರಲಾಗುವುದು. ಅಗತ್ಯ ಇರುವ ಕಡೆ ಒಳಚರಂಡಿ ನಿರ್ಮಿಸಲಾಗುವುದು. ಒಳ ಚರಂಡಿ ನಿರ್ವಹಣೆ ಸರಿಯಿಲ್ಲದೆ ಕೆಲವು ಕಡೆ ದುರ್ನಾತ ಬೀರುತ್ತಿದೆ. ಅದನ್ನು ಸರಿಪಡಿಸಲಾಗುವುದು. ತಾಲ್ಲೂಕಿನಿಂದ ನೆರೆಯ ಆಂಧ್ರಪ್ರದೇಶಕ್ಕೆ ಹರಿದು ಹೋಗುವ ಮಳೆ ನೀರನ್ನು ದಕ್ಷಿಣಾಭಿಮುಖವಾಗಿ ಹರಿಸಿ, ರೋಣೂರು ಕೆರೆ ಸೇರಿದಂತೆ, ಅಮಾನಿಕೆರೆಗೆ ಹರಿಸಲಾಗುವುದು. ಕೆರೆ ಅಭಿವೃದ್ಧಿಪಡಿಸಿ ಬೋಟಿಂಗ್ ವ್ಯವಸ್ಥೆ ಮಾಡಲಾಗುವುದು ಎಂದು ಹೇಳಿದರು.
ತಹಶೀಲ್ದಾರ್ ಶಿರಿನ್ ತಾಜ್ ಮಾತನಾಡಿ, ಗೃಹ ಲಕ್ಷ್ಮಿ ಯೋಜನೆ ಸರ್ಕಾರದ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, ಬಡ ಕುಟುಂಬಗಳ ಪಾಲಿಗೆ ವರದಾನವಾಗಿದೆ. ಯೋಜನೆ ಹಣದಿಂದ ಮಹಿಳೆಯರಿಗೆ ಮಾತ್ರವಲ್ಲದೆ, ಕುಟುಂಬದ ಎಲ್ಲ ಸದಸ್ಯರಿಗೆ ಅನುಕೂಲವಾಗುತ್ತದೆ. ಇನ್ನೂ ಅರ್ಜಿ ಸಲ್ಲಿಸದಿದಿರುವ ಅರ್ಹ ಮಹಿಳೆಯರು ಅರ್ಜಿ ಸಲ್ಲಿಸಿ ಪ್ರಯೋಜನ ಪಡೆದುಕೊಳ್ಳಬೇಕು ಎಂದು ಹೇಳಿದರು.
ಪುರಸಭೆ ಮುಖ್ಯಾಧಿಕಾರಿ ವೈ.ಎನ್.ಸತ್ಯನಾರಾಯಣ, ವಿ.ನಾಗರಾಜು, ಎನ್.ಶಂಕರ್, ನಾಗರಾಜ್, ಸಬ್ಬೀರ್, ಆನಂದ್, ಎಂ.ಶ್ರೀನಿವಾಸನ್, ಕೆ.ಜಿ.ರಮೇಶ್, ಮನು ಇದ್ದರು.

ರಾಜಕೀಯ ದಿಗ್ಗಜರಿಂದ ಕ್ರೀಡಾ ಚಟುವಟಿಕೆಗಳಿಗೆ ನೆರವಾಗುವಂತಹ ಪುಸ್ತಕಗಳ, ಕೈಪಿಡಿಗಳ ಬಿಡುಗಡೆ

ಕೋಲಾರ ತಾಲ್ಲೂಕಿನ ಕ್ಯಾಲನೂರು ಕೆಪಿಎಸ್ ಶಾಲೆಯ ದೈಹಿಕ ಶಿಕ್ಷಕ ಡಾ.ಜಿ.ಎಂ.ಶ್ರೀನಿವಾಸ್ ಅವರು ಕ್ರೀಡಾಚಟುವಟಿಕೆಗಳಿಗೆ ನೆರವಾಗಲು ಬರೆದಿರುವ ನಾಲ್ಕು ಪುಸ್ತಕಗಳಾದ ಥ್ರೋಬಾಲ್ ನವೀನ ನಿಯಮಗಳು, ಕಬಡ್ಡಿ ನವೀನ ನಿಯಮಗಳು, ಕರಾಟೆ ಕೈಪಿಡಿ ಮತ್ತು ಸ್ಪರ್ಧಾತ್ಮಕ ಸಾಹಿತ್ಯ ಕೈಪಿಡಿಗಳನ್ನು ಮೂಡಬಿದರೆಯಲ್ಲಿ ನಡೆದ ರಾಜ್ಯಮಟ್ಟದ ದೈಹಿಕ ಶಿಕ್ಷಣ ಶಿಕ್ಷಕರ ಸಮ್ಮೇಳನದಲ್ಲಿ ಸಭಾಪತಿ ಬಸವರಾಜ ಹೊರಟ್ಟಿ ಹಾಗೂ ರಾಜ್ಯ ಶಿಕ್ಷಣ ಸಚಿವ ಮಧು ಬಂಗಾರಪ್ಪ, ಸಭಾಧ್ಯಕ್ಷ ಅಬ್ದುಲ್ ಖಾದರ್, ಎಂಎಲ್‍ಸಿ ಅರುಣ ಷಹಾಪುರ,ಪುಟ್ಟಣ್ಣ, ಬಿಡುಗಡೆ ಮಾಡಿದರು. ಈ ಸಂದರ್ಭದಲ್ಲಿ ದೈಹಿಕ ಶಿಕ್ಷಕರ ಸಂಘದ ರಾಜ್ಯಾಧ್ಯಕ್ಷ ಎಸ್.ಚೌಡಪ್ಪ, ಮುಡಬಿದರೆ ಭಾವನಾ ಮತ್ತಿತರರಿದ್ದರು.

ಕುಂದಾಪುರದಲ್ಲಿ ಎಕಾ ಕಾಲದಲ್ಲಿ ಮೂರು ಕಡೆ ಗೃಹಲಕ್ಷ್ಮೀ ಯೋಜನೆ ಕಾರ್ಯಕ್ರಮ – ತಾಲೂಕು ಮಟ್ಟದಲ್ಲಿ ತಹಶೀಲ್ದಾರ್ ಶೋಭಾಲಕ್ಷ್ಮೀ ಚಾಲನೆ

ಕುಂದಾಪುರ: ಇಲ್ಲಿನ ಮೊಗವೀರ ಭವನದಲ್ಲಿ ತಾಲೂಕು ಆಡಳಿತ, ಮಕ್ಕಳ ಅಭಿವೃದ್ದಿ ಇಲಾಖೆ ಕುಂದಾಪುರ ತಾಲೂಕು, ಕುಂದಾಪುರ ಪುರಸಭೆ ವತಿಯಿಂದ ನಡೆದ ಗೃಹಲಕ್ಷ್ಮೀ ಯೋಜನೆಯ ಉದ್ಘಾಟನೆಯನ್ನು ಕುಂದಾಪುರದ ತಹಶೀಲ್ದಾರ್ ಶೋಭಾಲಕ್ಷ್ಮೀ ಉದ್ಘಾಟಿಸಿದರು.

   ಉದ್ಘಾಟನೆ ಮಾಡಿದ ಅವರು ಮಹಿಳೆಯರಿಗೆ ನಾ- ನಾಯಕಿ ಎಂದು ಪುನರುಚ್ಚಸಿ ಹೇಳಿ ಎಂದು ಹೇಳಿದರು. ಒಂದು ಕುಟುಂಬದಲ್ಲಿ ಹಾಲಿಗೆ ದಿನ ಒಂದರಂತೆ ರೂ.೫೦ ಬೇಕು ಅದಕ್ಕೆ ನೀವು ಯಾರ ಹತ್ತಿರವೂ ಕೇಳಬೇಕಾಗಿಲ್ಲ. ನಾರಿಯರಿಗೆ ಇದರಿಂದ ಆರ್ಥಿಕ ಸಹಾಯವಾಗುತ್ತೆ, ನಾರಿ ಅಂದರೆ ಲಕ್ಷ್ಮಿ, ನಾರೀಯರ ಸಬಲೀಕರಣವಾಗ ಬೇಕು” ಎಂದು ಹೇಳಿದರು.

    ಈ ಸಂದರ್ಭದಲ್ಲಿ ಮಾತನಾಡಿದ ಅವರು ಜಿಲ್ಲೆಯ 155 ಗ್ರಾಮ ಪಂಚಾಯಿತಿಯ ಕೇಂದ್ರ ಸ್ಥಾನದಲ್ಲಿ ಹಾಗೂ ಪ್ರತಿ ನಗರ ಸ್ಥಳೀಯ ಸಂಸ್ಥೆಯ 52 ವಾರ್ಡ್‌ಗಳಲ್ಲಿ ಹಾಗೂ 6 ತಾಲೂಕು ಕೇಂದ್ರಗಳಲ್ಲಿ ಮತ್ತು 1 ಜಿಲ್ಲಾ ಕೇಂದ್ರದಲ್ಲಿ ಸೇರಿದಂತೆ ಒಟ್ಟು 114 ಸ್ಥಳಗಳಲ್ಲಿ ಏಕ ಕಾಲದಲ್ಲಿ ಉದ್ಘಾಟನಾ ಕಾರ್ಯಕ್ರಮ ಆಯೋಜಿಸಲಾಗಿದೆ. 2.48 ಸಾವಿರ ಫಲಾನುಭವಿಗಳು ಈಗಾಲೇ ನೋಂದಾಯಿಸಿಕೊಂಡಿದ್ದಾರೆ. ನೀವು ಈಗ ನೊಂದಾಯಿಸಿ ಕೊಂಡವರಿಗೆ ಈ ಯೋಜನೇಯನ್ನು ತಿಳಿಸಬೇಕು ಎಂದು ಅವಾಗ ಗೃಹಲಕ್ಷ್ಮೀ ಯೋಜನೆಯ ಮೂಲಕ ಮಹಿಳಾ ಸಬಲೀಕರಣಕ್ಕೆ ಪೂರಕವಾಗುತ್ತದೆ’ ಎಂದರು.

ಸಮಾಜ ಕಲ್ಯಾಣ ಇಲಾಖೆ ಅಧಿಕಾರಿ ರಾಘವೇಂದ್ರ ವರ್ಣೆಕರ್, ಪುರಸಭಾ ಮುಖ್ಯಾಧಿಕಾರಿ ಮಂಜುನಾಥ, ಪುರಸಭಾ ಸದಸ್ಯ ಶ್ರೀಧರ ಶೇರೆಗಾರ್, ದೇವಕಿ ಸಣ್ಣಯ ಕುಂದಾಪುರ ಬ್ಲಾಕ್ ಕಾಂಗ್ರೆಸ್ ಕಾರ್ಯದರ್ಶಿ ವಿನೋದ್ ಕ್ರಾಸ್ಟೊ, ಕಲಾವತಿ ಮತ್ತು ಇನ್ನಿತರ ಕಾಂಗ್ರೆಸ್ ನಾಯಕರುನ್ಉಪಸ್ಥಿತರಿದ್ದರು.ಕಾಂಗ್ರೆಸ್ ಕಾರ್ಯಕರ್ತರು ಮಹಿಳೆಯರಿಗೆ ಸಂತೋಷವನ್ನು ಇಮ್ಮಡಿಕೊಳಿಸಲು ಸಿಹಿ ಹಂಚಿ ಸಂತೋಷವನ್ನು ವ್ಯಕ್ತಪಡಿಸಿದರು. ಮಹಿಳಾ ಮತ್ತು ಮಕ್ಕಳ ಅಭಿವೃದ್ದಿ ಇಲಾಖೆ ಯೋಜನಾಧಿಕಾರಿ ಅನುರಾಧ ಹಾದಿಮನೆ ಸ್ವಾಗತಿಸಿದರು. ಕುಂದಾಪುರ ಪುರಸಭೆಯ ಮುಖ್ಯಾಧಿಕಾರಿ ಮಂಜುನಾಥ್ ಆರ್ ವಂದಿಸಿದರು. ಶಿಕ್ಷಕ ಚಂದ್ರಶೇಖರ ಬೀಜಾಡಿ ಕಾರ್ಯಕ್ರಮ ನಿರೂಪಿಸಿದರು.

ಕುಂದಾಪುರ ಪುರಸಭಾ ವ್ಯಾಪ್ತಿಯಲ್ಲಿ ಒಂದೇ ಕಾಲದಲ್ಲಿ ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ಮತ್ತು ಕಲಾಮಂದಿರದಲ್ಲಿ ಒಟ್ಟಾರೆ ಮೂರು ಕಡೆ ಗೃಹಲಕ್ಷ್ಮೀ ಯೋಜನೆ ಉದ್ಘಾಟನ ಕಾರ್ಯಕ್ರಮ ನದೆಯಿತು.

ಕಲಾಮಂದಿರದಲ್ಲಿ ನಡೆದ ಕಾರ್ಯಕ್ರಮದ ಛಾಯಚಿತ್ರಗಳು

ರಾಘವೇಂದ್ರ ಕಲ್ಯಾಣ ಮಂಟಪದಲ್ಲಿ ನಡೆದ ಕಾರ್ಯಕ್ರಮದ ಛಾಯಚಿತ್ರಗಳು

MITK, Moodlakatte Tuberculosis & AIDs Awareness Program/ಎಂಐಟಿ ಕುಂದಾಪುರ : ಏಡ್ಸ್ ಮತ್ತು ಟಿಬಿ ನಿಯಂತ್ರಣ ಜಾಗೃತಿ ಕಾರ್ಯಕ್ರಮ

NSS & YRC unit of MIT Kundapura in association with Rotary club Kundapura district AIDs  and TB Control  division Udupi, organized Tuberculosis  and AID’s awareness program at MIT Kundapura.

President of the Rotary Mr. Nagaraj Naik spoke the occasion. Senior Treatment Supervisor Sri Gurudas of General Hospital Kundapura spoke on the control of TB and for AID’s control Personnel Counselor Smt. Nalinakshi of general Hospital Kundapura gave the awareness to the students. Principal of the collage Dr. Abdul Kareem, Vice Principal Prof. Melwin D’Souza Brand Building Director Dr. Ramkrishna Hegde, Institute NSS Co-ordinator Prof. Balnageshwar S and YRC Co-Ordinator and coordinator of the programme Prof Varun Kumar Ex. Rotary Secretary Naveen D’Souza ,  Secretary Prashanth Hawaldar  member Geetha Mukundan, Staff & students were present the occasion. Prof. Akshatha Naik hosted the programme.  

ಎಂಐಟಿ ಕುಂದಾಪುರ : ಏಡ್ಸ್ ಮತ್ತು ಟಿಬಿ ನಿಯಂತ್ರಣ ಜಾಗೃತಿ ಕಾರ್ಯಕ್ರಮ

ಎಂಐಟಿ ಕುಂದಾಪುರದ ಎನ್‌ಎಸ್‌ಎಸ್ ಮತ್ತು ವೈಆರ್‌ಸಿ ಘಟಕವು ರೋಟರಿ ಕ್ಲಬ್ ಕುಂದಾಪುರ ಜಿಲ್ಲಾ ಏಡ್ಸ್ ಮತ್ತು ಟಿಬಿ ನಿಯಂತ್ರಣ ವಿಭಾಗ ಉಡುಪಿಯ ಸಹಯೋಗದಲ್ಲಿ ಕ್ಷಯ ಮತ್ತು ಏಡ್ಸ್ ಜಾಗೃತಿ ಕಾರ್ಯಕ್ರಮವನ್ನು ಎಂಐಟಿ ಕುಂದಾಪುರದಲ್ಲಿ ಆಯೋಜಿಸಿತು.

ಕಾರ್ಯಕ್ರಮದಲ್ಲಿ ರೋಟರಿ ಅಧ್ಯಕ್ಷ ನಾಗರಾಜ ನಾಯ್ಕ ಮಾತನಾಡಿದರು. ಜನರಲ್ ಆಸ್ಪತ್ರೆ ಕುಂದಾಪುರದ ಹಿರಿಯ ಚಿಕಿತ್ಸಾ ಮೇಲ್ವಿಚಾರಕ ಶ್ರೀ ಗುರುದಾಸ್ ಅವರು ಟಿಬಿ ನಿಯಂತ್ರಣದ ಕುರಿತು ಮಾತನಾಡಿದರು ಮತ್ತು ಸಿಬ್ಬಂದಿ ಸಲಹೆಗಾರರಾದ ಕುಂದಾಪುರ ಜನರಲ್ ಆಸ್ಪತ್ರೆಯ ಶ್ರೀಮತಿ. ನಳಿನಾಕ್ಷಿ ಅವರು ವಿದ್ಯಾರ್ಥಿಗಳಿಗೆ ಏಡ್ಸ್/ಎಚ್‌ಐವಿ ಕುರಿತು ಜಾಗೃತಿ ಮೂಡಿಸಿದರು. ಕಾಲೇಜಿನ ಪ್ರಾಂಶುಪಾಲ ಡಾ.ಅಬ್ದುಲ್ ಕರೀಂ, ಉಪಪ್ರಾಂಶುಪಾಲ ಪ್ರೊ.ಮೆಲ್ವಿನ್ ಡಿ’ಸೋಜಾ ಬ್ರಾಂಡ್ ಬಿಲ್ಡಿಂಗ್ ನಿರ್ದೇಶಕ ಡಾ.ರಾಮಕೃಷ್ಣ ಹೆಗಡೆ, ಸಂಸ್ಥೆಯ ಎನ್‌ಎಸ್‌ಎಸ್ ಸಂಯೋಜಕ ಪ್ರೊ.ಬಾಲನಾಗೇಶ್ವರ್ ಎಸ್ ಮತ್ತು ವೈಆರ್‌ಸಿ ಸಂಯೋಜಕ ಹಾಗೂ ಕಾರ್ಯಕ್ರಮದ ಸಂಯೋಜಕ ಪ್ರೊ.ವರುಣ್ ಕುಮಾರ್, ಮಾಜಿ ರೋಟರಿ ಕಾರ್ಯದರ್ಶಿ ನವೀನ್ ಡಿಸೋಜ, ಹಾಲಿ ಕಾರ್ಯದರ್ಶಿ ಪ್ರಶಾಂತ್ ಹವಾಲ್ದಾರ್, ಸದಸ್ಯೆ ಗೀತಾ ಮುಕುಂದನ್, ಸಿಬ್ಬಂದಿ ಹಾಗೂ ವಿದ್ಯಾರ್ಥಿಗಳು ಉಪಸ್ಥಿತರಿದ್ದರು. ಪ್ರೊ.ಅಕ್ಷತಾ ನಾಯ್ಕ್ ಕಾರ್ಯಕ್ರಮ ನಿರ್ವಹಿಸಿದರು.

ಸ. ಬಾ. ಪ. ಪೂರ್ವ ಕಾಲೇಜ್, ಪ್ರೌಢ ಶಾಲೆಗೆ ಲೋಕಾಯುಕ್ತ ಡಿವೈಎಸ್‍ಪಿ ಸೂರ್ಯನಾರಾಯಣ ರಾವ್ ಭೇಟಿ -ನೀಡಿ ಕಡತಗಳ ಪರಿಶೀಲನೆ

ಶ್ರೀನಿವಾಸಪುರ: ಇಲ್ಲಿನ ಸರ್ಕಾರಿ ಬಾಲಕರ ಪದವಿ ಪೂರ್ವ ಕಾಲೇಜಿನ ಪ್ರೌಢ ಶಾಲಾ ವಿಭಾಗದ ಕಚೇರಿಗೆ ಮಂಗಳವಾರ ಲೋಕಾಯುಕ್ತ ಡಿವೈಎಸ್‍ಪಿ ಸೂರ್ಯನಾರಾಯಣ ರಾವ್ ಭೇಟಿ ನೀಡಿ ಕಡತಗಳನ್ನು ಪರಿಶೀಲಿಸಿದರು.
ಎರಡನೇ ವರ್ಗಾವಣೆ ಪತ್ರ ಹಾಗೂ ಅಂಕಪಟ್ಟಿಗಾಗಿ ಅರ್ಜಿ ಸಲ್ಲಿಸಿದ ಹಳೆ ವಿದ್ಯಾರ್ಥಿಗಳಿಂದ ಹೆಚ್ಚಿನ ಹಣ ಪಡೆಯಲಾಗುತ್ತಿದೆ ಎಂದು ದೂರು ಬಂದ ಹಿನ್ನೆಲೆಯಲ್ಲಿ, ಶಾಲಾ ಕಚೇರಿಗೆ ಭೇಟಿ ನೀಡಿ ಕಡತಗಳ ಪರಿಶೀಲನೆ ನಡೆಸಲಾಯಿತು ಎಂದು ಲೋಕಾಯುಕ್ತ ಡಿವೈಎಸ್‍ಪಿ ಸೂರ್ಯನಾರಾಯಣ ರಾವ್ ತಿಳಿಸಿದರು.
ವಿಷಯಕ್ಕೆ ಸಂಬಂಧಿಸಿದಂತೆ ಶುಲ್ಕ ವಿವರ ಮತ್ತು ಎರಡನೆ ಸಲ ವರ್ಗಾವಣೆ ಪತ್ರ ಹಾಗೂ ಅಂಕಪಟ್ಟಿ ಪಡೆದುಕೊಳ್ಳಬೇಕಾದಾಗ ಅನುಸರಿಸಬೇಕಾದ ವಿಧಿ ವಿಧಾನ ಕುರಿತು ಕ್ಷೇತ್ರ ಶಿಕ್ಷಣಾಧಿಕಾರಿಗಳಿಂದ ವರದಿ ಕೇಳಲಾಗುವುದು ಎಂದು ಹೇಳಿದರು.
ಕಾಲೇಜಿನ ಉಪ ಪ್ರಾಂಶುಪಾಲೆ ರಾಧಾಮಣಿ ಹಾಗೂ ಕಚೇರಿ ಸಿಬ್ಬಂದಿ ಇದ್ದರು.

ಹೊಸದಾದ ಭಿನ್ನ ಲೋಕಕ್ಕೆ ಪ್ರವೇಶ ಕೊಡುವ ಶಕ್ತಿ ಮತ್ತು ಸಾಮರ್ಥ್ಯ ಸಾಹಿತ್ಯಕ್ಕೆ ಇದೆ : ಹೆಚ್.ಬಿ ಇಂದ್ರಕುಮಾರ್

ಕುಂದಾಪುರ : ಹೊಸದಾದ ಭಿನ್ನ ಲೋಕಕ್ಕೆ ಪ್ರವೇಶ ಕೊಡುವ ಶಕ್ತಿ ಮತ್ತು ಸಾಮರ್ಥ್ಯ ಸಾಹಿತ್ಯಕ್ಕೆ ಇದೆ ಎಂದು ಹೆಚ್.ಬಿ ಇಂದ್ರಕುಮಾರ್ ಹೇಳಿದರು .
ಅವರು ಆಗಸ್ಟ್ 30ರಂದು ಇಲ್ಲಿನ ಭಂಡಾರ್ಕಾರ್ಸ್ ಪದವಿ ಕಾಲೇಜಿನಲ್ಲಿ ನಡೆದ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಪ್ರದಾನ ಸಮಾರಂಭ ಮತ್ತು ತಳಿಕಂಡಿ ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶ ಪುಸ್ತಕ ಲೋಕಾರ್ಪಣೆ ಕಾರ್ಯಕ್ರಮದಲ್ಲಿ ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಸ್ವೀಕರಿಸಿ ಮಾತನಾಡಿದರು.
ಅವರು ಸಾಹಿತ್ಯ ನಮ್ಮನ್ನು ಭಿನ್ನ ನೆಲೆಗಳ ಹುಡುಕಾಟಕ್ಕೆ ಅನುವು ಮಾಡಿಕೊಡುತ್ತದೆ . ಸಾಹಿತ್ಯ ದ ಕಥೆ ಕಾದಂಬರಿ ಕವನ ಸಂಕಲನಗಳನ್ನು ಬೇರೆ ಬೇರೆ ನೆಲೆಗಳಲ್ಲಿ ಅರ್ಥೈಸಬಹುದು. ಕೆಲವು ಸಂದರ್ಭಗಳಲ್ಲಿ ಸಾಹಿತ್ಯ ರಚನೆಗಳ ವಸ್ತು ತುಂಬಾ ಚೆನ್ನಾಗಿರುತ್ತದೆ ಮತ್ತು ಓದುಗರನ್ನು ಚಿಂತನೆಗೆ ಒಳಪಡಿಸಿ ಓದುವಂತೆ ಮಾಡುತ್ತದೆ. ಅಲ್ಲದೆ ಓದುಗರನ್ನು ಇನ್ನೂ ಹೆಚ್ಚು ಆಕರ್ಷಿಸುವಂತೆ ಮತ್ತು ಓದುವಂತೆ ಸಾಹಿತ್ಯದ ರಚನೆಯಾಗಬೇಕು. ಯಾವುದೇ ಸಾಹಿತ್ಯ ರಚನೆಯಲ್ಲಿ ಭಾಷೆ, ಸಮೃದ್ಧ, ನಿಗೂಢತೆ ಮತ್ತು ಮನಸಿಗೆ ಹಿತವೆನಿಸುವ ವಿಸ್ಮಯಗಳ ಹೂರಣವನ್ನು ಸಾಹಿತ್ಯವು ಒಳಗೊಂಡಿದ್ದರೆ ಓದುಗರನ್ನು ಹೆಚ್ಚು ಆಕರ್ಷಿಸುತ್ತದೆ. ಮನುಷ್ಯನ ಸಂವೇದನೆಯಲ್ಲಿಯೇ ಸಾಹಿತ್ಯ ಅಡಗಿದೆ. ಸಮಯದ ಪರಿವೆಯೇ ಇಲ್ಲದೆ ನಮ್ಮನ್ನು ಯಾವುದೋ ಲೋಕಕ್ಕೆ ಪ್ರವೇಶ ಮಾಡಿಸುವ ಶಕ್ತಿ ಸಾಹಿತ್ಯಕ್ಕೆ ಇದೆ. ಹಾಗೆ ಈ ಪ್ರಶಸ್ತಿಯು ನನ್ನ ಬರವಣಿಗೆಯ ಜವಾಬ್ದಾರಿಯನ್ನು ಇಮ್ಮಡಿಗೊಳಿಸಿದೆ ಎಂದು ಅಭಿಪ್ರಾಯಪಟ್ಟರು. ಭಂಡಾರ್ಕಾರ್ಸ್ ಕಾಲೇಜಿನ ಆಡಳಿತ ಮಂಡಳಿಯ ಅಧ್ಯಕ್ಷ ಡಾ.ಹೆಚ್.ಶಾಂತಾರಾಮ್ ಅವರು ಮಾತನಾಡಿ ಸಾಹಿತ್ಯ ಸೇವೆ ಮುಂದುವರಿಯಲಿ ಎಂದು ಶುಭಹಾರೈಸಿದರು.
ಕಾರ್ಯಕ್ರಮದ ಅಧ್ಯಕ್ಷತೆಯನ್ನು ವಹಿಸಿದ್ದ ಕಾಲೇಜಿನ ವಿಶ್ವಸ್ಥ ಮಂಡಳಿಯ ಹಿರಿಯ ಸದಸ್ಯರಾದ ಕೆ.ಶಾಂತಾರಾಮ ಪ್ರಭು ಮಾತನಾಡಿ ವಿದ್ಯಾರ್ಥಿಗಳು ಹೆಚ್ಚಿನ ಸಂಖ್ಯೆಯಲ್ಲಿ ಸಾಹಿತ್ಯ, ಸಂಗೀತ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ತೊಡಗಿಸಿಕೊಳ್ಳಿ ಮತ್ತು ಓದುವ ಹವ್ಯಾಸವನ್ನು ಬೆಳೆಸಿಕೊಳ್ಳಿ. ಈ ಪ್ರಶಸ್ತಿ ತುಂಬಾ ಶ್ರೇಷ್ಠವಾದದ್ದು. ಎಂದು ಹೇಳಿದರು.
ತಳಿಕಂಡಿ – ಕುಂದಾಪ್ರ ಕನ್ನಡ ಸಾಂಸ್ಕೃತಿಕ ಕೋಶವನ್ನು ಲೋಕಾರ್ಪಣೆಗೊಳಿಸಿ ಮಾತನಾಡಿದ ಕುಂದಾಪುರ ತಾಲೂಕಾ ತಹಶೀಲ್ದಾರ್ ಶೋಭಲಕ್ಷ್ಮಿ ಅವರು ಭಾಷೆ ಎಂದರೆ ಬದುಕು. ಭಾಷೆ ಎಂದರೆ ಸಂಸ್ಕೃತಿ ಎಂದು ಹೇಳಿದರು.
ಈ ಸಂದರ್ಭದಲ್ಲಿ
ವೇದಿಕೆಯಲ್ಲಿ ವಿಶ್ವಸ್ಥ ಮಂಡಳಿಯ ಸದಸ್ಯರಾದ ದೇವದಾಸ್ ಕಾಮತ್ ಮತ್ತು ರಾಜೇಂದ್ರ ತೋಳಾರ್ ಉಪಸ್ಥಿತರಿದ್ದರು.
ಡಾ.ಹೆಚ್.ಶಾಂತಾರಾಮ್ ಸಾಹಿತ್ಯ ಪ್ರಶಸ್ತಿ ಆಯ್ಕೆ ಸಮಿತಿಯ ಸಂಚಾಲಕರಾದ ಡಿ.ರೇಖಾ ಬನ್ನಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.
ಭಂಡಾರ್ಕಾರ್ಸ್ ಪದವಿ ಕಾಲೇಜಿನ ಪ್ರಾಂಶುಪಾಲರಾದ ಡಾ.ಶುಭಕರಾಚಾರಿ ಸ್ವಾಗತಿಸಿದರು. ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾದ ಡಾ.ಜಿ.ಎಂ.ಗೊಂಡ ವಂದಿಸಿದರು. ಕನ್ನಡ ಉಪನ್ಯಾಸಕರಾದ ಮೈತ್ರಿ “ತಳಿಕಂಡಿ” ಪುಸ್ತಕದ ಕುರಿತು ಮಾತನಾಡಿದರು.
ಆಂಗ್ಲ ಭಾಷಾ ಉಪನ್ಯಾಸಕಿ ರೋಹಿಣಿ ಹೆಚ್.ಬಿ ಕಾರ್ಯಕ್ರಮ ನಿರೂಪಿಸಿದರು.

ಕುಂದಾಪುರ ಹೋಲಿ ರೋಜರಿ ಚರ್ಚಿನಲ್ಲಿ ಮೇರಿ ಮಾತೆಯ ಹುಟ್ಟು ಹಬ್ಬದ (ತೇನೆ ಹಬ್ಬ) ಪ್ರಯುಕ್ತ ನೊವೆನಾ ಆರಂಭ

ಕುಂದಾಪುರ, ಆ.30: ಉಡುಪಿ ಧರ್ಮಪ್ರಾಂತ್ಯದಲ್ಲೆ ಹಿರಿಯ ಇಗರ್ಜಿಯಾದ 453 ವರ್ಷದ ಇತಿಹಾಸ ಇರುವ ಹೋಲಿ ರೋಜರಿ ಚರ್ಚಿನಲ್ಲಿ ತೆನೆ ಹಬ್ಬ ಮೇರಿ ಮಾತೆಯ ಹುಟ್ಟು ಹಬ್ಬದ  ಪ್ರಯುಕ್ತ (ಸೆ.8) ತಯಾರಿಗಾಗಿ 9 ದಿನಗಳ ನೊವೆನಾ ಇಂದು ಅಗೋಸ್ತ್ 30 ರಂದು ಆರಂಭವಾಯಿತು. ಇಗರ್ಜಿಯ ಪ್ರಧಾನ ಧರ್ಮಗುರು ಅ|ವಂ| ಸ್ಟ್ಯಾನಿ ತಾವ್ರೊ ಪವಿತ್ರ ಬಲಿದಾನ ಅರ್ಪಿಸಿದ ತರುವಾಯ ಇಗರ್ಜಿಗಾಗಿ ನೂತನವಾಗಿ ತಂದ ಬಾಲ ಮೇರಿಯ ಪ್ರತಿಮೆಯನ್ನು ಆಏಶಿರ್ವದಿಸಿ ನೊವೆನಾ ಪ್ರಾರ್ಥನೆ ನಡೆಸಿಕೊಟ್ಟು ನೊವೆನಾಕ್ಕೆ ಚಾಲನೆ ನೀಡಿದರು.ಮಕ್ಕಳು ಮತ್ತು ದೊಡ್ಡವರು ಭಕ್ತಿ ಗಾಯನದೊಂದಿಗೆ ಹೂ ಗಳನ್ನು ಬಾಲ ಮೇರಿ ಮಾತೆಗೆ ಅರ್ಪಿಸಿದರು. 

ಪಥಸಂಚಲನ ಟ್ರೋಫಿ ಗೆದ್ದ ಸೇವಾದಳ ತಂಡಕ್ಕೆ ಅಭಿನಂದನೆ

ಕೋಲಾರ:- ಜಿಲ್ಲೆಯಲ್ಲಿ ನಡೆದ 77 ನೇ ಸ್ವಾತಂತ್ರ್ಯೋತ್ಸವ ದಿನಾಚರಣೆ ಅಂಗವಾಗಿ ಕೋಲಾರದ ಜೂನಿಯರ್ ಕಾಲೇಜು ಮೈದಾನದಲ್ಲಿ ಜಿಲ್ಲಾಡಳಿತ ನಡೆಸಿದ ಪಥಸಂಚಲನದ ಶಾಲಾ ಹಂತದ ಸಮವಸ್ತ್ರ ವಿಭಾಗದಲ್ಲಿ ಪ್ರಥಮ ಬಹುಮಾನ ಗೆದ್ದುಕೊಂಡಿರುವ ಎಇಎಸ್ ಭಾರತಸೇವಾದಳ ತಂಡವನ್ನು ಸೇವಾದಳ ಜಿಲ್ಲಾ ಮತ್ತು ತಾಲೂಕು ಸಮಿತಿಗಳಿಂದ ಅಭಿನಂದಿಸಲಾಯಿತು.
ಶಾಲಾ ಆವರಣದಲ್ಲಿ ಸೋಮವಾರ ಬೆಳಿಗ್ಗೆ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಭಾರತಸೇವಾದಳ ತಂಡದ ಎಲ್ಲಾ ಸದಸ್ಯ ವಿದ್ಯಾರ್ಥಿಗಳಿಗೆ ಭಾರತ ಸೇವಾದಳವತಿಯಿಂದ ಪ್ರಮಾಣ ಪತ್ರಗಳನ್ನು ವಿತರಿಸಿ ಶಾಲೆಯ ಎಲ್ಲಾ ಮಕ್ಕಳಿಗೂ ಸಿಹಿ ಹಂಚಿಕೆಮಾಡಲಾಯಿತು.
ಭಾರತ ಸೇವಾದಳ ಜಿಲ್ಲಾಧ್ಯಕ್ಷ ಕೆ.ಎಸ್.ಗಣೇಶ್ ತಂಡವನ್ನು ಅಭಿನಂದಿಸಿ ಮಾತನಾಡಿ, ಸೇವೆಗಾಗಿ ಬಾಳು ಧ್ಯೇಯದೊಂದಿಗೆ ರಾಷ್ಟ್ರಧ್ವಜ, ಗೀತೆಗಳ ಕುರಿತು ಅರಿವು ತರಬೇತಿ ನೀಡುತ್ತಿರುವ ಭಾರತ ಸೇವಾದಳದ ಶಿಸ್ತಿನ ಸಿಪಾಯಿಗಳಾಗಿ ಪಥಸಂಚಲನದಲ್ಲಿ ಪ್ರಥಮ ಬಹುಮಾನ ಗೆದ್ದಿರುವುದು ಶ್ಲಾಘನೀಯ ಇದು ಇತರೇ ವಿದ್ಯಾರ್ಥಿಗಳಿಗೂ ಸ್ಪೂರ್ತಿ ಪ್ರೇರಣೆಯಾಗಲಿ ಎಂದರು.
ಭಾರತಸೇವಾದಳ ಜಿಲ್ಲಾ ಸಮಿತಿ ಸದಸ್ಯ ಆರ್.ಶ್ರೀನಿವಾಸನ್ ಮಾತನಾಡಿ, ಸೇವಾದಳವು ಶಿಸ್ತನ್ನು ಮೂಡಿಸುತ್ತಿದ್ದು, ವಿದ್ಯಾರ್ಥಿಗಳು ಶಿಸ್ತಿನ ಬದುಕು ರೂಪಿಸಿಕೊಳ್ಳಲು ಸಹಕಾರಿ ಯಾಗಿದೆ ಎಂದರು.
ಎಇಎಸ್ ಶಾಲೆಯ ಸಂಸ್ಥಾಪಕ ಫಲ್ಗುಣ ಮಾತನಾಡಿ, ತಮ್ಮ ಶಾಲೆಯು ಭಾರತ ಸೇವಾದಳ ಚಟುವಟಿಕೆಗಳಲ್ಲಿ ಮಕ್ಕಳು ಸಕ್ರಿಯವಾಗಿ ತೊಡಗುವಂತೆ ಮಾಡುತ್ತಿದ್ದು, ಪಥಸಂಚಲನದಲ್ಲಿ ಮೊದಲ ಬಹುಮಾನ ಪಡೆದುಕೊಳ್ಳಲು ಸಾಧ್ಯವಾಯಿತೆಂದರು.
ಖೋಖೋ ಪ್ರಶಸ್ತಿ
ಇದೇ ಸಂದರ್ಭದಲ್ಲಿ ಹೋಬಳಿ ಮಟ್ಟದ ಕ್ರೀಡಾಕೂಟಗಳಲ್ಲಿ ಎಇಎಸ್ ಶಾಲೆಯ ಪ್ರಾಥಮಿಕ ಹಾಗೂ ಪ್ರೌಢಶಾಲೆಯ ಬಾಲಕ ಮತ್ತು ಬಾಲಕಿಯರ ನಾಲ್ಕು ತಂಡಗಳು ತಾಲೂಕು ಮಟ್ಟಕ್ಕೆ ಆಯ್ಕೆಯಾಗಿರುವುದಕ್ಕೆ ಕೇಕ್ ಕತ್ತರಿಸುವ ಮೂಲಕ ಸಂಭ್ರಮಿಸಿ, ವಿಜೇತ ತಂಡಗಳ ನಾಯಕರನ್ನು ತಾಲೂಕು ಹಾಗೂ ಜಿಲ್ಲಾ ಮಟ್ಟದಲ್ಲಿ ವಿಜೇತರಾಗಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗುವಂತೆ ಶುಭ ಕೋರಲಾಯಿತು.
ಈ ಸಂದರ್ಭದಲ್ಲಿ ಭಾರತ ಸೇವಾದಳ ಜಿಲ್ಲಾ ಕಾರ್ಯದರ್ಶಿ ಎಸ್.ಸುಧಾಕರ್, ಖಜಾಂಚಿ ನಾಗರಾಜ್, ತಾಲೂಕು ಅಧ್ಯಕ್ಷ ಶ್ರೀರಾಮ್, ಪದಾಕಾರಿಗಳಾದ ಅಪ್ಪಿ ನಾರಾಯಣಸ್ವಾಮಿ, ವಿ.ಪಿ.ಸೋಮಶೇಖರ್, ಚಾಮುಂಡೇಶ್ವರಿದೇವಿ, ರಾಜೇಶ್‍ಸಿಂಗ್, ಎಇಎಸ್ ಪ್ರೌಢಶಾಲಾ ಮುಖ್ಯೋಪಾಧ್ಯಾಯ ಮಂಜುನಾಥ್, ಪ್ರಾಥಮಿಕ ಶಾಲಾ ಮುಖ್ಯ ಶಿಕ್ಷಕಿ ಸಂಧ್ಯಾ, ದೈಹಿಕತ ಶಿಕ್ಷಕ ರವಿಕುಮಾರ್ ಮತ್ತು ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.
ಭಾರತ ಸೇವಾದಳ ಜಿಲ್ಲಾ ಸಂಘಟಕ ಎಂ.ಬಿ.ದಾನೇಶ್ ಕಾರ್ಯಕ್ರಮ ನಿರ್ವಹಿಸಿದರು.

ಬೈಂದೂರು : ಶಿರೂರು ಅಳ್ವೆಗದ್ದೆ ದೋಣಿ ಅವಘಡ ಇಬ್ಬರ ಶವ ಪತ್ತೆ

ಬೈಂದೂರು:29; ಬೈಂದೂರು ಸಮಿಪದ ಶಿರೂರು ಅಳ್ವೆಗದ್ದೆ ಎಂಬಲ್ಲಿ ಆ.27ರಂದು ಸಂಜೆ ನಡೆದ ಅವಘಡದಲ್ಲಿ ನೀರಲ್ಲಿ ಮುಳುಗಿದದವರು ನಾ ಪತ್ತೆಯಾಗಿದ್ದರು. ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ದೋಣಿಯಿಂದ ನೀರಿಗೆ ಬಿದ್ದು ನಾಪತ್ತೆಯಾಗಿದ್ದ ಇಬ್ಬರು ಮೀನುಗಾರರ ಮೃತದೇಹವು ಇಂದು ಪತ್ತೆಯಾಗಿದೆ.

   ಅವರ ಮ್ರತ ದೇಹಗಳು ದೋಣಿ ಮಗುಚಿ ಬಿದ್ದ 300 ಮೀಟರ್ ವ್ಯಾಪ್ತಿಯಲ್ಲಿ ಗಂಗೊಳ್ಳಿಯ ಮುಸ್ತಾಫಾ ಅವರ ಮಗ ಮುಹಮ್ಮದ್ ಮುಸಾಬ್(22) ಅವರ ಮೃತದೇಹವು ನಸುಕಿನ ವೇಳೆ 1.30ಕ್ಕೆ ಮತ್ತು ಬಾವು ನೂರುಲ್ ಅಮೀನ್ ಅವರ ಮಗ ನಝಾನ್ (24) ಅವರ ಮೃತದೇಹವು ನಸುಕಿನ ವೇಳೆ 2.45ರ ಸುಮಾರಿಗೆ ದೊರೆತಿದೆ.

    ಮುಹಮ್ಮದ್ ಯಾಸೀನ್, ಸಾರಾಂಗ್ ಮುಸ್ತಾಕ್ ಎಂಬವರೊಂದಿಗೆ ಕೈರಂಪಣಿ ಬಲೆಯನ್ನು ಹಾಕಿ ಮೀನುಗಾರಿಕೆ ಮಾಡಲು ಶಿರೂರು ಗ್ರಾಮದ ಅಳಿವೆಗದ್ದೆ ಕಿರು ಬಂದರಿಗೆ ತೆರಳಿದ್ದು, ಅಲ್ಲಿ ಮುಸಾಬ್ ಹಾಗೂ ನಝಾನ್, ಕುರ್ಡಿ ಸಾಧಿಕ್ ಎಂಬವರ ಸೈಫಾ ಎಂಬ ದೋಣಿಯಲ್ಲಿ ಬಲೆಯನ್ನು ಬಿಡುತ್ತಾ ತೀರದಿಂದ ಸುಮಾರು 100 ಮೀಟರ್ ದೂರ ಹೋಗಿದ್ದರು. ಬಲೆಯನ್ನು ಬಿಡುತ್ತಿರುವಾಗ ದೋಣಿಯು ಸಮುದ್ರದ ಅಲೆಗಳ ಹೊಡೆತಕ್ಕೆ ಸಿಲುಕಿ ಮಗುಚಿ ಬಿದ್ದು ನಾಪತ್ತೆಯಾಗಿದ್ದರು.