

ಕುಂದಾಪುರ (ಜ. 17) : ಕುಂದಾಪುರದ ಪ್ರತಿಷ್ಠಿತ ಶಿಕ್ಷಣ ಸಂಸ್ಥೆ ಕುಂದಾಪುರ ಎಜ್ಯುಕೇಶನ್ ಸೊಸೈಟಿ ಪ್ರವರ್ತಿತ ಎಚ್ ಎಮ್ ಎಮ್ ಆಂಗ್ಲ ಮಾಧ್ಯಮ ಪ್ರಾಥಮಿಕ ಮತ್ತು ವಿ ಕೆ ಆರ್ ಸ್ಮಾರಕ ಆಂಗ್ಲ ಮಾಧ್ಯಮ ಪ್ರೌಢಶಾಲೆಗಳ ವಾರ್ಷಿಕ ಕ್ರೀಡಾಕೂಟವು ಕುಂದಾಪುರದ ಗಾಂಧಿ ಮೈದಾನದಲ್ಲಿ ಜರುಗಿತು.
ಉದ್ಘಾಟನಾ ಸಮಾರಂಭದ ಅಧ್ಯಕ್ಷತೆಯನ್ನು ವಹಿಸಿದ, ಸಂಸ್ಥೆಯ ಸಂಚಾಲಕರಾದ ಶ್ರೀ ಬಿ. ಎಂ ಸುಕುಮಾರ ಶೆಟ್ಟಿಯವರು ಕ್ರೀಡಾರ್ಥಿಗಳಿಗೆ ಶುಭ ಹಾರೈಸಿದರು. ಕುಂದಾಪುರ ಎಜ್ಯುಕೇಶನ್ ಸೊಸೈಟಿಯ ಕಾರ್ಯದರ್ಶಿ ಶ್ರೀ ಸೀತಾರಾಮ ನಕ್ಕತ್ತಾಯ ಬಲೂನನ್ನು ನಭದೆಡೆಗೆ ಹಾರಿ ಬಿಡುವ ಮೂಲಕ ಕಾರ್ಯಕ್ರಮವನ್ನು ಉದ್ಘಾಟಿಸಿದರು. ಕ್ರೀಡಾಕೂಟದ ಮುಖ್ಯ ಅತಿಥಿಯಾಗಿ, ಕೆನರಾ ಬ್ಯಾಂಕ್ ಪ್ರಾದೇಶಿಕ ಕಚೇರಿ ಉಡುಪಿಯ ಸೀನಿಯರ್ ಮ್ಯಾನೇಜರ್ ಶ್ರೀ ಪ್ರಭಾಕರ ಶೆಟ್ಟಿ ಆಗಮಿಸಿ ವಿದ್ಯಾರ್ಥಿಗಳಿಗೆ ಕ್ರೀಡಾ ಸ್ಪೂರ್ತಿಯನ್ನು ನೀಡಿದರು. ರಾಷ್ಟ್ರಮಟ್ಟದ ಅನೇಕ ಕ್ರೀಡೆಗಳನ್ನು ಪ್ರತಿನಿಧಿಸಿರುವ ವಿದ್ಯಾರ್ಥಿಗಳು ಕ್ರೀಡಾಜ್ಯೋತಿ ಬೆಳಗಿದರು. ವಿದ್ಯಾರ್ಥಿಗಳ ಶಿಸ್ತಿನ ಪಥಸಂಚಲನ ಆಕರ್ಷಣೀಯವಾಗಿತ್ತು. ಎಲ್ಲಾ ವಿದ್ಯಾರ್ಥಿಗಳು ಬಹಳ ಉತ್ಸಾಹದಿಂದ ಕ್ರೀಡಾಕೂಟ 2024ರಲ್ಲಿ ಭಾಗವಹಿಸಿದರು.
ಸಂಸ್ಥೆಯ ಪ್ರಾಂಶುಪಾಲರಾದ ಡಾ. ಚಿಂತನಾ ರಾಜೇಶ್, ಪ್ರೌಢಶಾಲೆಯ ಮುಖ್ಯ ಶಿಕ್ಷಕಿ ಶುಭಾ ಕೆ ಎನ್, ಸಹಾಯಕ ಮುಖ್ಯ ಶಿಕ್ಷಕ ಚಂದ್ರಶೇಖರ್ ಶೆಟ್ಟಿ, ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕ ಜಗದೀಶ ಆಚಾರ್ ಸಾಸ್ತಾನ, ಸಹಾಯಕ ಮುಖ್ಯ ಶಿಕ್ಷಕಿ ಕವಿತಾ ಭಟ್, ಪೂರ್ವ ಪ್ರಾಥಮಿಕ ವಿಭಾಗದ ಮುಖ್ಯ ಶಿಕ್ಷಕಿ ಲತಾ ಜಿ ಭಟ್, ಸಹಾಯಕ ಮುಖ್ಯ ಶಿಕ್ಷಕಿ ಆರತಿ ಶೆಟ್ಟಿ ಹಾಗೂ ಅಕಾಡೆಮಿಕ್ ಕೋ ಆರ್ಡಿನೇಟರ್ ವಿಲ್ಮಾ ಡಿ ಸಿಲ್ವಾ ಇನ್ನಿತರರು ಉಪಸ್ಥಿತರಿದ್ದರು.
ಶಿಕ್ಷಕಿಯರಾದ ಭಾವನಾ, ಶ್ವೇತಾ, ದಿವ್ಯ ಎನ್ ಮತ್ತು ಶಿಕ್ಷಕ ರವಿಚಂದ್ರ ಕಾರ್ಯಕ್ರಮ ನಿರೂಪಿಸಿದರು. ಸಂಸ್ಥೆಯ ದೈಹಿಕ ಶಿಕ್ಷಣ ಶಿಕ್ಷಕರಾದ ರಾಜೇಂದ್ರ ಶೆಟ್ಟಿ, ನಾಗೇಶ್ ಪ್ರಭು ಮತ್ತು ವೀರೇಂದ್ರ ನಾಯಕ್ರ ಸಹಯೋಗದೊಂದಿಗೆ ಕ್ರೀಡಾಕೂಟ ಸಂಪನ್ನಗೊಂಡಿತು.



